Author: kannadanewsnow09

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವಂತ ಹಾಸನಾಂಬೆಯ ಭಾಗಿಲು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯೋದು. ಇದೀಗ ಭಾಗಿಲು ತೆಗೆದಿದ್ದು, ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀವು ಹಾಸನಾಂಬೆ ತಾಯಿಯ ದರ್ಶನಕ್ಕೆ ತೆರಳುತ್ತಿದ್ದರೇ ದರ್ಶನದ ಸಮಯವನ್ನು ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಹಾಸನ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-10-2025, ದಿನಾಂಕ 18-10-2025 ಮತ್ತು ದಿನಾಂಕ 21-10-2025ರಂದು ಮೂರು ದಿನಗಳ ಕಾಲ ರಾತ್ರಿ 12 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ತಾಯಿ ಹಾಸನಾಂಬ ದೇವಿಯ ಅಲಂಕಾರ ಬದಲಾವಣೆ, ಧಾರ್ಮಿಕ ವಿಧಿ ವಿಧಾನ ಕಾರ್ಯ ಪ್ರಯುಕ್ತ ದೇವಿಯ ದರ್ಶನದ ಸಮಯ ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ 5 ಗಂಟೆಗಳ ದೀರ್ಘ ಕಾಲಾವಧಿಯಲ್ಲಿ ದೇವಾಲಯದ ಪ್ರವೇಶ ಬಾಗಿಲು ಮುಚ್ಚಲಾಗುವ ಬಗ್ಗೆ ಭಕ್ತಾದಿಗಳು ದರ್ಶನಕ್ಕೆ ಬರುವ ಸಮಯ ಯೋಜನೆ ರೂಪಿಸಿಕೊಳ್ಳಲು ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ವಿಶೇಷ ಸೂಚನೆಯಲ್ಲಿ ಈ ಮೂರು ದಿನಗಳಲ್ಲಿ 2 ಗಂಟೆ ಮುಂಚಿತವಾಗಿ ರಾತ್ರಿ 10…

Read More

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾಗಲು ನಿಗದಿ ಪಡಿಸಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. 1.ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಶಾಲೆಯನ್ನು ₹4.00ಕೋಟಿ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಸದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು. ಮೊದಲ ಹಂತದಲ್ಲಿ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ ರಾಜ್ಯ ಸರ್ಕಾರದ…

Read More

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ನೂತನ ನಂದಿನಿ ಸಿಹಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿಯು ಕಳೆದ 5 ದಶಕಗಳಿಂದ “ನಂದಿನಿ” ಬ್ಯಾಂಡ್‌ನಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಗ್ರಾಹಕರಿಗೆ ಕೈಗೆಟುಕುವ ಬೆಲೆಗಳಲ್ಲಿ ಪರಿಶುದ್ಧ ಮತ್ತು ರುಚಿಕರವಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವ ಮೂಲಕ ಗ್ರಾಹಕರ ನೆಚ್ಚಿನ ಬ್ರಾಂಡ್ ಆಗಿದೆ. ನಂದಿನಿ ಬ್ರಾಂಡ್‌ನಲ್ಲಿ 175 ಕ್ಕೂ ಅಧಿಕ ಮಾದರಿಯ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ. 2025 ರ ದಸರಾ ಹಬ್ಬದ ಸಂದರ್ಭದಲ್ಲಿ ನಂದಿನಿ ಸಿಹಿಗಳ ಮಾರಾಟವು 750 ಮೆ.ಟನ್‌ಗಳನ್ನು ದಾಟಿದ್ದು ಈ ಯಶಸ್ಸು ನಂದಿನಿ ಬ್ಯಾಂಡ್ ಶುದ್ಧತೆ, ಗುಣಮಟ್ಟ ಮತ್ತು ವಿಶ್ವಾಸದ ಪ್ರತೀಕವಾಗಿದ್ದು, ಗ್ರಾಹಕರ ನಂಬಿಕೆಯ ಪ್ರತಿಫಲವಾಗಿದೆ ಎಂದು ಹೇಳಿದ್ದಾರೆ. ಇಂದಿನ ಆರೋಗ್ಯ ಜಾಗೃತ ಯುಗದಲ್ಲಿ ಗ್ರಾಹಕರು…

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಸೊರಬ ತಾಲ್ಲೂಕಿನ ಉಳವಿಯಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯನ್ನು ಸೇರಿಸಿ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢ ಶಾಲೆಗಳು ಮತ್ತು 1,319 ಪದವಿ ಪೂರ್ವ ಶಾಲೆಗಳಿರುತ್ತವೆ ಎಂದು ತಿಳಿಸಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳು ಗುಣಮಟ್ಟದ ಸಾರ್ವಜನಿಕ ಶಿಕ್ಷಣಕ್ಕಾಗಿ ಒಂದು ಅಭೂತಪೂರ್ವ ಬದಲಾವಣೆಯ ಚೌಕಟ್ಟನ್ನು ಒದಗಿಸುತ್ತವೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಆರಂಭಿಸಿದ ಒಂದು ಸುಧಾರಣಾತ್ಮಕ ಕಾರ್ಯತಂತ್ರವೇ ಕೆಪಿಎಸ್ ಆಗಿದೆ ಎಂದು ಹೇಳಿದ್ದಾರೆ. ಕೆಪಿಎಸ್ ಮಾದರಿಯ ಶಾಲೆಗಳು ಒಂದೇ ಸೂರಿನಡಿಯಲ್ಲಿ ಶಾಲಾ ಪೂರ್ವ ತರಗತಿಗಳಿಂದ ಅಂದರೇ LKGಯಿಂದ 12ನೇ ತರಗತಿಯವರೆಗೆ ಅಂದರೆ ದ್ವಿತೀಯ ಪಿಯುಸಿವರೆಗೆ ಶಿಕ್ಷಣವನ್ನು ಒದಗಿಸುತ್ತದೆ. ಇದು ಕಲಿಕೆಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಶಿಕ್ಷಣ ಕೊಠಡಿಗಳು, ವಸತಿ ಗೃಹಗಳು ಹಾಗೂ ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಾದೇಶವನ್ನು ಮಾಡಿ ಶಿವಮೊಗ್ಗದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಉಪಹಾರ ಕೊಠಡಿಯ ದುರಸ್ಥಿಗಾಗಿ 8.60 ಲಕ್ಷ ಬಿಡುಗಡೆ ಮಾಡಿದ್ದರೇ, ಕ್ಲಾಸ್ ರೂಮ್, ರೂಮ್ ಪಾರ್ಟೀಷನ್ ಗಾಗಿ ರೂ.34.80 ಲಕ್ಷವನ್ನು, ಗೆಸ್ಟ್ ಹಾಸ್ಟೆಲ್ ಬ್ಲಾಕ್-1 ದುರಸ್ಥಿಗೆ 7.80 ಲಕ್ಷ, ಗೆಸ್ಟ್ ಹಾಸ್ಟೆಲ್ ಬ್ಲಾಕ್-2 ದುರಸ್ಥಿಗೆ 7.80 ಲಕ್ಷ ಹಾಗೂ ಗೆಸ್ಟ್ ಹಾಸ್ಟೆಲ್ ಬ್ಲಾಕ್-3 ದುರಸ್ಥಿಗೆ 6.80 ಲಕ್ಷ ಸೇರಿದಂತೆ ಒಟ್ಟು 65.80 ಲಕ್ಷ ಹಣವನ್ನು ಮಂಜೂರು ಮಾಡಲಾಗಿದೆ. ಈ ಕಾಮಗಾರಿಯನ್ನು ಶಿವಮೊಗ್ಗದ ನಿರ್ಮಿತಿ ಕೇಂದ್ರದವರಿಗೆ ರೂ.65.80 ಲಕ್ಷಗಳಿಗೆ ವಹಿಸಲು ತಿಳಿಸಲಾಗಿದೆ. ಸದರಿ ಕಾರ್ಯಾದೇಶದ ಅನ್ವಯ ಅಂದಾಜು ಪಟ್ಟಿಯನ್ನು ನಿಗಮದಿಂದ…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಚಿತ್ರದುರ್ಗ: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲೇ ಎಣ್ಣೆ ಮಿಕ್ಸ್ ಮಾಡಿ, ಪಾರ್ಟಿ ಮಾಡಿದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ನಾಲ್ವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದಂತ ಆರೋಪದ ವೀಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದಂತ ಡಿಡಿಪಿಐ ಎಂ.ಆರ್ ಮಂಜುನಾಥ್ ಅವರು, ತನಿಖೆ ನಡೆಸಿ ನಾಲ್ವರು ಸಿಬ್ಬಂದಿಯ ಅಮಾನತಿಗೆ ಡಿಸಿಗೆ ಪತ್ರದಲ್ಲಿ ಶಿಫಾರಸ್ಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ ದರ್ಜೆಯ ನೌಕರ ತಿಪ್ಪೇಸ್ವಾಮಿ ಹಾಗೂ ವಾಹನ ಚಾಲಕ ರವಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ವೈರಲ್ ಆಗಿದ್ದಂತ ವೀಡಿಯೋದಲ್ಲಿ ಕಚೇರಿಯಲ್ಲೇ ಸುಮಾರು 20 ಲೀಟರ್ ಕ್ಯಾನಿನ ಅರ್ಧದಷ್ಟು ನೀರಿಗೆ ಮದ್ಯವನ್ನು ಸುರಿದು…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ( Dearness Allowance -DA) ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ)…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2024ರ ಕರ್ನಾಟಕ ನಾಗರಿಕ ಸೇವಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಲಾರ, ವಿಜಯನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀನೆ ಮಾಡಲು ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ಕೋಲಾರ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನೂ ವಿಜಯನಗರ ಜಿಲ್ಲೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ ಜಗದೀಶ್ ಅವರನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

Read More