Author: kannadanewsnow09

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗೆ ಈ ನಿರ್ಧಾರವನ್ನು ಪ್ರಕಟಿಸಿದರು. ಏತನ್ಮಧ್ಯೆ, ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಏಪ್ರಿಲ್ 24 ರೊಳಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡಿದೆ. ಈ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ನ ಏಪ್ರಿಲ್ 9 ರ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದ್ದಾರೆ. ಏಪ್ರಿಲ್ 29ರಂದು ಈ ಪ್ರಕರಣ ಕುರಿತಂತೆ ನ್ಯಾಯಾಲಯವು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ. ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ…

Read More

ಬೆಂಗಳೂರು: ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯಗಳ ಬಗ್ಗೆ ಒಂದಕ್ಕೂ ಉತ್ತರ ಕೊಡಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು,ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತನಾಡಲು ಮೋದಿಯವರ ಬಳಿ ಏನೂ ಇಲ್ಲ.. ಹೀಗಾಗಿ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಬಗ್ಗೆ ಮಾತಾಡ್ತಾರೆ. ದೇಶದ ಪ್ರಧಾನಿಯವರಿಂದ ಈ ರೀತಿಯ ಭಾಷಣವನ್ನ ಕರ್ನಾಟಕದ ಜನರು ನಿರೀಕ್ಷಿಸಿರಲಿಲ್ಲ. ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು. ಕರ್ನಾಟಕದಿಂದ ಪ್ರತಿ ವರ್ಷ ನಾಲ್ಕು ಲಕ್ಷ ಕೋಟಿ ಆದಾಯ ಪಡೆದು ವಾಪಸ್ ಕರ್ನಾಟಕಕ್ಕೆ ತಾವು ಕೊಟ್ಡಿದ್ದೇನು ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿಡಲಿ ಎಂದರು. ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಮಾತಾಡುವ…

Read More

ಶಿವಮೊಗ್ಗ: ಏಪ್ರಿಲ್ 17 ರಂದು ಶ್ರೀ ರಾಮ ನವಮಿ ಹಬ್ಬ ಹಾಗೂ ಏಪ್ರಿಲ್ 21 ರಂದು ಮಹಾವೀರ ಜಯಂತಿ ಇರುವ ಪ್ರಯುಕ್ತ ಈ ದಿನಾಂಕಗಳಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ-24: ಇಂದು 05 ನಾಮಪತ್ರ ಸಲ್ಲಿಕೆ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ. https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/ https://kannadanewsnow.com/kannada/congress-files-complaint-with-election-commission-against-mp-tejasvi-surya/

Read More

ಮೊದಲಿಗೇ ಸ್ಪಷ್ಟಪಡಿಸುತ್ತಿದ್ದೇನೆ. ಇದು ಯಾರನ್ನೂ ಹೆದರಿಸುವ ಬೆದರಿಸುವ ಪ್ರಯತ್ನವಲ್ಲ. ಬದಲಿಗೆ ಹಲವು ಜ್ಯೋತಿಷ್ಯಕಾರರ 45 ವರ್ಷಗಳಿಗೂ ಹೆಚ್ಚು ಕಾಲ ಕ್ರಮಬದ್ಧವಾಗಿ , ವೈಜ್ಞಾನಿಕವಾಗಿ ಒಂದು ಲಕ್ಷಕ್ಕೂ ಮೀರಿದ ಜಾತಕಗಳ ಪರಿಶೀಲನೆ, ವಿಶ್ಲೇಷಣೆ, 10000 ಕ್ಕೂ ಹೆಚ್ಚು ದೋಷ ನಿವಾರಣಾ ಹೋಮಗಳನ್ನು ಮಾಡಿಸಿದ ಹಾಗೂ ಜ್ಯೋತಿಷ್ಯಶಾಸ್ತ್ರದ ಅಭ್ಯಾಸ , ಅನುಭವ, ಜ್ಞಾನಾಧಾರಿತ ಬರಹವಿದು. ಕರ್ಮ ಸಿದ್ಧಾಂತ, ಪುನರ್ಜನ್ಮ ಸಿದ್ಧಾಂತಗಳ ಪ್ರತ್ಯಕ್ಷಾನುಭವದ ಹಿನ್ನೆಲೆ ಈ ಬರಹಗಳಿಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ,…

Read More

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಣಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ನೋಟೀಸ್ ಜಾರಿ ಕೆಲವು ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲವು ವಾಹನಗಳನ್ನು ತಪಾಸಣೆ ಮಾಡದೇ ಇರುವುದು ಹಾಗೂ ರಾತ್ರಿ ವೇಳೆ ನಿದ್ದೆ ಮಾಡುತ್ತಿರುವ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರು ಗಮನಿಸಿರುವ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಲೋಪ ಕಂಡು ಬಂದಲ್ಲಿ ಆರ್.ಪಿ ಆಕ್ಟ್ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿ ದಿನ ಸಹಾಯಕ ಚುನಾವಣಾಧಿಕಾರಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸ ಬೇಕು. ಜಿಲ್ಲಾಧಿಕಾರಿ ಗಳ ಕಚೇರಿಯ ದೂರು ನಿರ್ವಾಹಣಾ ಕೇಂದ್ರದಲ್ಲಿ ಚೆಕ್ ಪೋಸ್ಟ್ ಗಳ ಕಾರ್ಯನಿರ್ವಾಹಣೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಕಾರ್ಯನಿರ್ವಹಣೆ ಯಲ್ಲಿ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು. ಏ.16…

Read More

ಬೆಂಗಳೂರು: ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಸುದೀರ್ಘ ಪತ್ರದಲ್ಲಿ ಕಿಡಿಕಾರಿದ್ದಾರೆ. ಸನ್ಮಾನ್ಯ ಹೆಚ್.ಡಿ.ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ…

Read More

ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದ್ರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಅನೇಕ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇಂತಹ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ https://schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದು. ಇದೇ ವೆಬ್ ಲಿಂಕ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುತ್ತದೆ ಎಂದು ಹೇಳಿದ್ದಾರೆ. https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/ https://kannadanewsnow.com/kannada/congress-files-complaint-with-election-commission-against-mp-tejasvi-surya/

Read More

ಬೆಂಗಳೂರು: ಮತದಾರರಿಗೆ ಅನುದಾನ ನೀಡೋದಾಗಿ ಹೇಳಿಕೆ ನೀಡುವ ಮೂಲಕ ಆಮಿಷವೊಡ್ಡಿದಂತ ಸಚಿವ ಡಿ.ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳುಕಿನಲ್ಲಿ ಸಚಿವ ಡಿ.ಸುಧಾಕರ್ ಅವರು 25 ಕೋಟಿ ಅನುದಾನವನ್ನು ಕಾಂಗ್ರೆಸ್ ಅಭ್ಯರ್ಥಿಯನ್ನು ಸಾಕಷ್ಟು ಲೀಡ್ ನಿಂದ ಗೆಲ್ಲಿಸಿದ್ರೆ ನೀಡೋದಾಗಿ ಆಮಿಷ ಒಡ್ಡುವಂತ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. 70 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇ ಆದಲ್ಲಿ ತಳುಕು ಅಭಿವೃದ್ಧಿಗಾಗಿ 20 ಕೋಟಿ ಅನುದಾನವನ್ನು ಸರ್ಕಾರ ನೀಡಲಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಈ ಬಗ್ಗೆ ಮಾತನಾಡಿದ್ದಾಗಿ ಹೇಳಿದ್ದಾರೆ. ಈ ಮೂಲಕ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಹಿನ್ನಲೆಯಲ್ಲಿ ಚುನಾವಣಾ ಆಯೋಗಕ್ಕೆ ಸಚಿವ ಡಿ.ಸುಧಾಕರ್ ವಿರುದ್ಧ ದೂರು ನೀಡಲಾಗಿದೆ. https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/ https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/

Read More

ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಈಡೇರಿಸಿದ್ದೇವೆ ಎಂಬುದಾಗಿ ಕರಪತ್ರ ಹಂಚಿದ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂಬುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಕಾರ್ಯಕರ್ತರು ಕರಪತ್ರವನ್ನು ಹಂಚಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರ ಹಂಚಿದ ಕಾರಣ, ಚುನಾವಣಾಧಿಕಾರಿ ಸಂತೋಷ್ ಎಂಬುವರು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/ https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/

Read More

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆಯೇ ಹಲ್ಲೆ ಮಾಡಿ, ದರ್ಪ ತೋರಿ, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದಂತ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿದಂತ ಕಾಂಗ್ರೆಸ್ ನಾಯಕರ ನಿಯೋಗವು, ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಮೂಲಕ ದರ್ಪ ತೋರಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಾತನಾಡಿದಂತ ಕಾಂಗ್ರೆಸ್ ಎಂಎಲ್ಸಿ ವೆಂಕಟೇಶ್ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ವೀಕ್ಷಕರನ್ನೇ ತಳ್ಳಿದ್ದಾರೆ. ಅವರ ಮೇಲೆ ದರ್ಪ ತೋರಿದ್ದಾರೆ. ಹಣ ಬಲ, ಅಧಿಕಾರದ ಬಲದಿಂದ ಚುನಾವಣೆ ಗೆಲ್ಲೋದಕ್ಕೆ ಹೊರಟಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ನೀಡಲಾಗಿದೆ ಎಂದರು. https://kannadanewsnow.com/kannada/several-injured-in-stabbing-incident-at-church-in-sydney/ https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/

Read More