Author: kannadanewsnow09

ನವದೆಹಲಿ: ಭವಿಷ್ಯಕ್ಕಾಗಿ ಉಳಿತಾಯ ಮಾಡುವುದು ಎಷ್ಟು ಅಗತ್ಯವೋ, ಅನಿರೀಕ್ಷಿತ ಘಟನೆಯ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನ ಒದಗಿಸುವ ಆರೋಗ್ಯ ಮತ್ತು ಅಪಘಾತ ವಿಮೆಯೂ ಅಗತ್ಯವಾಗಿದೆ. ಅನಿರೀಕ್ಷಿತವಾಗಿ ಏನಾದರೂ ಸಂಭವಿಸಿದರೆ ಮತ್ತು ಮನೆಯ ಮುಖ್ಯಸ್ಥರು ಮೃತಪಟ್ಟರೆ, ಕುಟುಂಬವು ರಸ್ತೆಗೆ ಬೀಳಬೇಕಾಗುತ್ತದೆ. ಅಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಅಪಘಾತ ವಿಮೆ ನಿಮಗೆ ಸಹಾಯ ಮಾಡುತ್ತದೆ. ಆದಾಗ್ಯೂ, ಹೆಚ್ಚಿನ ಜನರು ಈ ವಿಮೆಯನ್ನ ತೆಗೆದುಕೊಳ್ಳಲು ಸಿದ್ಧರಿಲ್ಲ. ಪ್ರೀಮಿಯಂ ಹೆಚ್ಚಿರುವ ಕಾರಣದಿಂದ ಹಿಂದೆ ಸರೆಯುತ್ತಾರೆ. ಅಂತಹ ಜನರಿಗಾಗಿ ಅಂಚೆ ಇಲಾಖೆ ಆಫರ್ ನೀಡುತ್ತಿದೆ. ಅತ್ಯಂತ ಕಡಿಮೆ ಪ್ರೀಮಿಯಂನಲ್ಲಿ ವಿಮಾ ಸೌಲಭ್ಯವನ್ನ ನೀಡಲಾಗುತ್ತದೆ. ಅದ್ರಂತೆ, ಖಾಸಗಿ ವಿಮಾ ಕಂಪನಿಗಳ ಸಹಭಾಗಿತ್ವದಲ್ಲಿ ವಿಮಾ ಸೌಲಭ್ಯವನ್ನ ನೀಡಲಾಗುತ್ತದೆ. ವಾರ್ಷಿಕ 520 ರೂ.ಗಳೊಂದಿಗೆ 10 ಲಕ್ಷ ರೂ.ಗಳ ವಿಮಾ ರಕ್ಷಣೆ.! ಅಂಚೆ ಕಚೇರಿ ನೀಡುವ ಅಪಘಾತ ವಿಮೆಯಲ್ಲಿ ಇದು ಅತ್ಯುತ್ತಮ ಯೋಜನೆಯಾಗಿದೆ. ದಿನಕ್ಕೆ ಕೇವಲ 1.5 ರೂ.ಗಳನ್ನ ಪಾವತಿಸುವ ಮೂಲಕ ನೀವು 10 ಲಕ್ಷ ರೂ.ಗಳ ವ್ಯಾಪ್ತಿಯನ್ನು ಪಡೆಯಬಹುದು. ಟಾಟಾ ಎಐಜಿ ಸಹಯೋಗದೊಂದಿಗೆ ಅಂಚೆ…

Read More

ಬೆಂಗಳೂರು: “ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ ಎಂದು ಕೇಳಿದಾಗ, “ಯಾವುದೇ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ವಿವಿಗಳಿಗಾಗಿ ಬಿಜೆಪಿ ಸರ್ಕಾರ ಕೇವಲ 2 ಕೋಟಿ ಹಣವಿಟ್ಟಿತ್ತು. 2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು” ಎಂದು ತಿಳಿಸಿದರು. “ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ.…

Read More

ಬೆಂಗಳೂರು: ನಮ್ಮ ತಲೆಯ ಮೇಲೆ ಹಿಂದಿನ ಬಿಜೆಪಿ ಸರ್ಕಾರವು ಗುತ್ತಿಗೆದಾರರ 30,000 ಕೋಟಿ ಬಾಕಿ ಬಿಲ್ ಹೊರೆಯನ್ನು ಹೊರಿಸಿ ಹೋಗಿದೆ. ಇದಕ್ಕೆ ಹೊಣೆ ಯಾರು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ಬಜೆಟ್‌ ನಲ್ಲಿ ಅನುದಾದ ಇಡದೆ ಬೇಕಾಬಿಟ್ಟಿ ಟೆಂಡರ್‌ ಕರೆದು, ಕೆಲಸ ಆರಂಭಿಸಿ, ಗುತ್ತಿಗೆದಾರರಿಗೆ ಬಿಲ್‌ ಹಣ ನೀಡದೆ ಸುಮಾರು ರೂ.30,000 ಕೋಟಿ ಬಾಕಿ ಮೊತ್ತವನ್ನು ನಮ್ಮ ಸರ್ಕಾರದ ತಲೆಯ ಮೇಲೆ ಹೊರಿಸಿ ಹೋಗಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ. https://twitter.com/CMofKarnataka/status/1896538610884923590 https://kannadanewsnow.com/kannada/i-cant-speak-with-colour-i-have-spoken-the-word-rudely-in-the-village-language-dk-shivakumar/ https://kannadanewsnow.com/kannada/for-students-belonging-to-backward-classes-the-deadline-for-applying-for-fee-waiver-facility-has-been-extended/

Read More

ಮಡಿಕೇರಿ : 2023-24 ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾದ ಕೋರ್ಸುಗಳು ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ನೀಡದ ಕೋರ್ಸುಗಳ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಶುಲ್ಕವಿನಾಯ್ತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://bcwd.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಗಾಗಿ ಇಲಾಖೆಯ ವೆಬ್‍ಸೈಟ್ postmatrichelp@karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 08272-295628 ಸಂಪರ್ಕಿಸಬಹುದು. ಎಂದು ಹಿಂದುಳಿದ…

Read More

ಬೆಂಗಳೂರು : “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, “ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನಾನು ನೇರವಾಗಿ ಹೇಳುತ್ತೇನೆ. ನೀವು (ಮಾಧ್ಯಮದವರು), ಅವರು ಬಂಡೆ ಎಂದು ಕರೆಯುತ್ತಾರೆ. ಹಾಗಾದರೆ ನಾನು ಬಂಡೆಯೇ? ನಾನು ಬಂಡೆಯಂತೇ ಕಾಣುತ್ತೇನೆಯೇ? ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಇದು ನನ್ನ ಮಾತಿನ ಶೈಲಿ. ಶೈಲಿ ಸರಿ ಇಲ್ಲದಿದ್ದರೆ ಸರಿಪಡಿಸಿಕೊಳ್ಳುತ್ತೇನೆ, ಆದರೆ ಸತ್ಯ ಹೇಳಿದ್ದೇನೆ” ಎಂದರು. ಹುಬ್ಬಳ್ಳಿಗೆ ಏಕೆ ಹೋದರು; ಬೆಂಗಳೂರಿಗೆ ನೀರು ತರುವ ಹೋರಾಟವಿದು…

Read More

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಲಾಗಿದೆ. ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ. ಆ ಸಂದರ್ಭದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮ ಎಂದು ನಾವೂ ಇದನ್ನು ಒಪ್ಪಿಕೊಂಡಿದ್ದೇವೆ. ಇದರಂತೆ…

Read More

ಬೇಲೂರು: ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು, ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲುದ್ದೇಶಿಸಿರುವ ಆನೆ ಧಾಮಕ್ಕೆ ಕಳುಹಿಸಿದಲ್ಲಿ ಈ ಮೂರು ಜಿಲ್ಲೆಗಳ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೇಲೂರು ಪಟ್ಟಣದ ಆರ್.ವಿ. ಕಲ್ಯಾಣ ಮಂಟಪದಲ್ಲಿಂದು ಆನೆ -ಮಾನವ ಸಂಘರ್ಷ ಇರುವ ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ತೋಟದ ಬೆಳೆಗಾರರು, ರೈತರು ಮತ್ತು ಗ್ರಾಮಸ್ಥರ ಮುಕ್ತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಆಯವ್ಯಯದಲ್ಲಿ ಆನೆ ಧಾಮದ ಘೋಷಣೆಯನ್ನು ಮುಖ್ಯಮಂತ್ರಿಯವರು ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ವನ್ಯಜೀವಿಗಳಿಂದ ಅದರಲ್ಲೂ ಆನೆಗಳಿಂದ ಮಾನವರ ಜೀವ ಮತ್ತು ರೈತರ ಬೆಳೆಗೆ ಆಗುತ್ತಿರುವ ಹಾನಿ ತಡೆಗೆ ಅಂತರ ಜಿಲ್ಲಾ ಸಮನ್ವಯತೆ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆ ಅಗತ್ಯವಾಗಿದೆ ಎಂದು ಹೇಳಿದರು. ವನ್ಯಜೀವಿ ದಾಳಿಯಿಂದ ಗಾಯಗೊಂಡು ವಿಕಲಾಂಗರಾಗುವವರಿಗೆ ಹೆಚ್ಚಿನ ಪರಿಹಾರ ನೀಡಬೇಕು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬೋದಕ್ಕೆ ಮುಂದಾಗಿದೆ. ಇದಕ್ಕಾಗಿ ಕೇರಳ ಮಾದರಿಯಲ್ಲಿ ಚಿಟ್ ಫಂಡ್ ವ್ಯವಸ್ಥೆಯನ್ನು ಜಾರಿಗೆ ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ. ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿದ್ದು, ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1896817881754612143 https://kannadanewsnow.com/kannada/good-news-for-annabhagya-scheme-beneficiaries-in-the-state-15-kg-rice-to-be-distributed-this-month/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More

ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ. ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ. https://twitter.com/KarnatakaVarthe/status/1896858483749945458 https://kannadanewsnow.com/kannada/tamannaah-bhatia-vijay-varmas-break-up-plan-to-stay-friends/ https://kannadanewsnow.com/kannada/big-relief-for-olympic-medallist-sushil-kumar-in-murder-case-bail-granted/

Read More

ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಬೇರ್ಪಟ್ಟಿದ್ದಾರೆ. ಮಾರ್ಚ್ 4 ರಂದು ಪಿಂಕ್ವಿಲ್ಲಾ ಮೂಲವನ್ನು ಉಲ್ಲೇಖಿಸಿ, “ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ವಾರಗಳ ಹಿಂದೆ ದಂಪತಿಗಳಾಗಿ ಬೇರ್ಪಟ್ಟರು. ಆದರೆ ಅವರು ಉತ್ತಮ ಸ್ನೇಹಿತರಾಗಿ ಉಳಿಯಲು ಯೋಜಿಸಿದ್ದಾರೆ. ಇಬ್ಬರೂ ತಮ್ಮ ತಮ್ಮ ವೇಳಾಪಟ್ಟಿಯಲ್ಲಿ ಶ್ರಮಿಸುತ್ತಿದ್ದಾರೆ. ಪರಸ್ಪರರ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಿಂದ, ಮುಖ್ಯವಾಗಿ ಇನ್ಸ್ಟಾಗ್ರಾಮ್ನಿಂದ ಅವರ ಜಂಟಿ ಫೋಟೋಗಳ ಅನುಪಸ್ಥಿತಿಯನ್ನು ಅಭಿಮಾನಿಗಳು ಗಮನಿಸಿದ್ದಾರೆ. ಇದು ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತೆ ಆಗಿದೆ. ತಮನ್ನಾ ಮತ್ತು ವಿಜಯ್ ಮೊದಲ ಬಾರಿಗೆ 2023 ರಲ್ಲಿ ಲಸ್ಟ್ ಸ್ಟೋರೀಸ್ 2 ನಲ್ಲಿ ಒಟ್ಟಿಗೆ ಸ್ಕ್ರೀನ್ ಸ್ಪೇಸ್ ಹಂಚಿಕೊಂಡರು. ಇಬ್ಬರೂ ಡೇಟಿಂಗ್ ಪ್ರಾರಂಭಿಸಿದರು ಮತ್ತು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರು. ವೃತ್ತಿಪರವಾಗಿಯೂ ಪರಸ್ಪರ ಬೆಂಬಲಿಸುವುದರ ಹೊರತಾಗಿ ಅವರು ಹಲವಾರು ಸಾರ್ವಜನಿಕ ಮತ್ತು ರೆಡ್ ಕಾರ್ಪೆಟ್ ಪ್ರದರ್ಶನಗಳನ್ನು ಒಟ್ಟಿಗೆ ಮಾಡುವುದನ್ನು ಮುಂದುವರೆಸಿದರು. ತಮನ್ನಾ ಮತ್ತು ವಿಜಯ್ ಕಳೆದ ಕೆಲವು ತಿಂಗಳುಗಳಿಂದ ಅಭಿಮಾನಿಗಳ ನೆಚ್ಚಿನ ಜೋಡಿಯಾಗಿ ಹೊರಹೊಮ್ಮಿದ್ದರು. ಇಂತಹ ಜೋಡಿ ಬೇರೆಯಾಗುತ್ತಿರುವುದರಿಂದ…

Read More