Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕನ್ನಡದ ಖ್ಯಾತ ಬರಹಗಾರ-ನಿರ್ದೇಶಕ ಎಸ್.ಎಸ್. ಡೇವಿಡ್ ನಿಧನರಾಗಿದ್ದಾರೆ. ಜೈ ಹಿಂದ್ (1998) ಮತ್ತು ಸುಪಾರಿ (2001) ಚಿತ್ರಗಳನ್ನು ನಿರ್ದೇಶಿಸಿದ್ದಕ್ಕಾಗಿ ಹೆಸರುವಾಸಿಯಾಗಿದ್ದ ಅವರು, ಭಾನುವಾರ ಸಂಜೆ ಬೆಂಗಳೂರಿನ ಆರ್.ಆರ್. ನಗರದ ಎಸ್.ಎಸ್. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಒನ್ ಇಂಡಿಯಾ ವರದಿಯ ಪ್ರಕಾರ, ಡೇವಿಡ್ ಔಷಧಾಲಯಕ್ಕೆ ಹೋಗುವ ದಾರಿಯಲ್ಲಿ ಹಠಾತ್ತನೆ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ವೈದ್ಯರು ಅವರ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಜೈ ಹಿಂದ್ ಮತ್ತು ಸುಪಾರಿ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ, ಎಸ್.ಎಸ್. ಡೇವಿಡ್ ಅನೇಕ ಚಿತ್ರಗಳಿಗೆ ಚಿತ್ರಕಥೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬರಹಗಾರರಾಗಿ ಅವರ ಅತ್ಯಂತ ಗಮನಾರ್ಹ ಕೃತಿಗಳಲ್ಲಿ ಪೊಲೀಸ್ ಸ್ಟೋರಿ (1996), ಅಗ್ನಿ ಐಪಿಎಸ್ (1997), ಧೈರ್ಯ (1997), ಸಿಂಹದ ಮಾರಿ (1997), ಹೈ ಬೆಂಗಳೂರು (1997), ಸ್ವಾತಂತ್ರ್ಯ ದಿನ (2000), ಮಂಡ್ಯ (2006), ತಿರುಪತಿ (2006), ಮತ್ತು ಪೊಲೀಸ್ ಸ್ಟೋರಿ 2 (2007) ಸೇರಿವೆ. ಪ್ರಸಿದ್ಧ ಚಲನಚಿತ್ರ ನಿರ್ಮಾಪಕರಾಗಿದ್ದರೂ, ಎಸ್.ಎಸ್. ಡೇವಿಡ್ ಅವರ ದೇಹವನ್ನು ಪಡೆಯಲು ಯಾರೂ…

Read More

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 ವರ್ಷದ ಬಾಲಕನ ಮೇಲೆ ದಾಳಿ ನಡೆಸಿರುವಂತ ಬೀದಿ ನಾಯಿಗಳು, ಮುಖ ಸೇರಿದಂತೆ ಹಲವೆಡೆ ಕಚ್ಚಿ ಗಾಯಗೊಳಿಸಿದೆ. ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ 3 ವರ್ಷದ ಬಾಲಕನನ್ನು ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತಂದೆ ರಶೀದ್ ಕರೆದೊಯ್ದಿದ್ದಾರೆ. ಬಾಲಕನಿಗೆ ಕಚ್ಚಿದ ಬಳಿಕ ಮತ್ತೊಬ್ಬ ಮಹಿಳೆ ಮೇಲೂ ನಾಯಿ ದಾಳಿ ನಡೆಸಿದೆ. ಬೀದಿ ನಾಯಿಗಳನ್ನು ನಿಯಂತ್ರಿಸದಂತ ಸಾಗರ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಬೀದಿ ನಾಯಿ ನಿಯಂತ್ರಿಸುವಂತೆ ಒತ್ತಾಯಿಸಿದ್ದಾರೆ. https://kannadanewsnow.com/kannada/cet-extension-of-date-for-choice-selection-and-fee-payment/ https://kannadanewsnow.com/kannada/bbmp-shocks-those-who-have-outstanding-taxes-in-bangalore-notice-issued-to-2-75-lakh-property-defaulters/

Read More

ಬೆಂಗಳೂರು: ಎಂಜಿನಿಯರಿಂಗ್, ಆಯುಷ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಸೂಕ್ತ ಛಾಯ್ಸ್ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.4ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಛಾಯ್ಸ್-1 ಮತ್ತು ಛಾಯ್ಸ್-2 ಆಯ್ಕೆ ಮಾಡಿದವರು ಶುಲ್ಕ ಹಾಗೂ ಛಾಯ್ಸ್-3 ಆಯ್ಕೆ ಮಾಡಿದವರು ಕಾಷನ್ ಡೆಪಾಸಿಟ್ ಪಾವತಿಗೆ ಸೆ.3 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿ ಕುರಿತು ಸದ್ಯದಲ್ಲೇ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. https://kannadanewsnow.com/kannada/from-now-on-the-sea-these-places-in-soraba-taluk-are-tourist-spots-state-government-announcement/ https://kannadanewsnow.com/kannada/untouchability-still-being-alive-is-not-a-good-thing-for-civil-society-mandya-dc-dr-kumar/

Read More

ಬೆಂಗಳೂರು: ಸ್ನಾತಕೋತ್ತರ ಅಲೈಡ್ ಹೆಲ್ತ್ ಸೈನ್ಸ್ ಸ್ನಾತಕೋತ್ತರ ಕೋರ್ಸುಗಳು ಸೇರಿದಂತೆ ವಿವಿಧ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ತೆಗೆದುಕೊಳ್ಳಲು ಬಯಸುವವರಿಗೆ ಸೆ.3ರಿಂದ 14ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಸೂಚಿಸಿದೆ. ಎಂ.ಎಸ್.ಸಿ ನರ್ಸಿಂಗ್, ಎಂ.ಪಿ.ಟಿ, ಎಂ.ಎಸ್.ಸಿ, ಅಲೈಡ್ ಹೆಲ್ತ್ ಸೈನ್ಸ್ ಸ್ನಾತಕೋತ್ತರ ಕೋರ್ಸ್ ಗಳು ಮತ್ತು ಎಂ.ಫಾರ್ಮ ಮತ್ತು ಫಾರ್ಮ-ಡಿ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea ಮೂಲಕ ಸೆ. 3ರಿಂದ (ಬೆಳಿಗ್ಗೆ 11) 14ರೊಳಗೆ (ರಾತ್ರಿ 11.59) ನೋಂದಾಯಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬಹುದು ಎಂದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಅಭ್ಯರ್ಥಿಗಳು ಕರ್ನಾಟಕ ಸಂಜಾತರಾಗಿದ್ದು, ಆಯಾ ಕೋರ್ಸುಗಳಲ್ಲಿ ಪದವಿ ಪಡೆದು ಅರ್ಹರಿದ್ದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ಕೋರ್ಸುಗಳಿಗೆ ವಿವಿಧ ಇಲಾಖೆಯವರು ನಿಗದಿಪಡಿಸಿರುವ ಅರ್ಹತಾ ವಿವರಗಳನ್ನು ಹಾಗೂ ಅಗತ್ಯ ಇರುವ ದಾಖಲೆಗಳು ಇತರೆ ಮಾಹಿತಿಯನ್ನು ಒಳಗೊಂಡ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ…

Read More

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲ್ಲೂಕಿನ 19 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಿಸಿದೆ. ಈ ನೀತಿಯಡಿ ಅಭಿವೃದ್ದಿಗೆ ಅನುದಾನ ಬಳಕೆಗೂ ಸೂಚಿಸಿದೆ. ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳು ಸೇರಿದ್ದರೇ, ಸಾಗರ ತಾಲ್ಲೂಕಿನ 15, ಸೊರಬ ತಾಲ್ಲೂಕಿನ 4 ಸೇರಿದ್ದಾವೆ. ಇವುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಅನುದಾನ ಲಭ್ಯತೆಯ ಅನುಸಾರ ವಿವರವಾದಂತ ಕ್ರಿಯಾಯೋಜನೆಯನ್ನು ರೂಪಿಸೋದಕ್ಕೆ ತಿಳಿಸಿದೆ. ಅಂದಾಜು ಪಟ್ಟಿ, ನಕ್ಷೆಗಳನ್ನು ಸಿದ್ಧಪಡಿಸಿ, ತಾಂತ್ರಿಕ ಪರಿಶೀಲನೆಗೆ ಒಳಪಡಿಸಿ, ಟೆಂಡರ್ ಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವಂತೆಯೂ ಸೂಚಿಸಿದೆ. ಹೀಗಿವೆ ಪ್ರವಾಸಿ ತಾಣಗಳಾಗಿ ಘೋಷಿಸಿದ ಸೊರಬದ ಸ್ಥಳಗಳು ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನ ಬಂಗಾರಧಾಮ ಕೈತಭೇಶ್ವರ ಕೋಟಿಪುರ ದೇವಸ್ಥಾನ ಗುಡವಿ ಪಕ್ಷಿಧಾಮ ಹೀಗಿವೆ ಪ್ರವಾಸಿ ತಾಣಗಳಾಗಿ ಘೋಷಿಸಿದ ಸಾಗರ ತಾಲ್ಲೂಕಿನ ಸ್ಥಳಗಳು ಜೋಗ ಜಲಪಾತ…

Read More

ಮಂಡ್ಯ: ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಭಿಪ್ರಾಯಪಟ್ಟರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಹೇಳಿದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ ಎಂದರು. ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಭ ಮಾಡದೆ ಸಂಬಂಧ ಪಟ್ಟ ಇಲಾಖೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ…

Read More

ಮಂಡ್ಯ : ಮದ್ದೂರು ಪಟ್ಟಣದಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜಿಗೆ ಮುಂದಿನ ಬಜೆಟ್ ನಲ್ಲಿ ಅನುಮೋದನೆ ದೊರೆಕುವ ಸಂಭವವಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಹೆಚ್ಚುವರಿ ತರಗತಿಗಳ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ಶಾಲಾ ಕಾಲೇಜುಗಳಿಗೆ ದುಬಾರಿ ಶುಲ್ಕ ತೆತ್ತು ವಿದ್ಯಾಭ್ಯಾಸ ಮಾಡುವುದು ಇಂದಿನ ದಿನಗಳಲ್ಲಿ ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ನೀಡುವ ಸೌಲಭ್ಯವನ್ನು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ನೀಡಿದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗಲಿದ್ದು, ಹೀಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. ಕೆಲ ದಿನಗಳ ಹಿಂದೆ ಮದ್ದೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮದ್ದೂರಿನಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜು ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ…

Read More

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪ್ರವಾಸೋದ್ಯ ಇಲಾಖೆಯ ಆಯುಕ್ತರು ಏಕ ಕಡತದಲ್ಲಿ ದಿನಾಂಕ 07-11-2024ರಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಕ್ಕೆ ಅನುಮೋದನೆ ನೀಡಲಾಗಿರುತ್ತದೆ. ಹೀಗಾಗಿ ಹಿಂದಿನ ನೀತಿಗೆ ಸಂಬಂಧಿಸದ ಎಲ್ಲಾ ಸರ್ಕಾರದ ಆದೇಶಗಳು ಅನೂರ್ಜಿತವಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ನೂತನ ಪ್ರವಾಸಿ ತಾಣಗಳನ್ನು ಗುರುತಿಸಲು ರಾಜ್ಯದ ಜಿಲ್ಲೆಗಳಿಗೆ ಸಂಬಂಧಿಸಿದ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳನ್ನು ಆದ್ಯತಾವಾರು ಪಟ್ಟಿ ಮಾಡಿ, ಪ್ರವಾಸಿಗರ ಭೇಟಿಯ ಅಂಕಿ-ಸಂಖ್ಯೆಗಳನ್ನೊಳಗೊಂಡ ಸಂಪೂರ್ಣ ವಿವರ ಹಾಗೂ ಛಾಯಾಚಿತ್ರಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅವರುಗಳಿಂದ ಪಡೆಯಲಾಗಿದೆ ಎಂದಿದೆ. ಈ ಮಾಹಿತಿ ಆಧರಿಸಿ ಒಟ್ಟು 1,275 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ನೀತಿ 2024-29ರಡಿ ಸರ್ಕಾರದ ಅನುಮೋದನೆ ನೀಡುವಂತೆ…

Read More

ಚೆನ್ನೈ : ಮುಂಬೈನ 14 ವರ್ಷದ ಕಿಯಾನ್ ಶಾ ಅವರು ಮೆಕೊ FMSCI ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನಲ್ಲಿ ಜಯಗಳಿಸಿದ್ದಾರೆ. ಇದು ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಅವರ ಮೊದಲ ಗೆಲುವು. ಮದ್ರಾಸ್ ಇಂಟರ್ನ್ಯಾಷನಲ್ ಕಾರ್ಟಿಂಗ್ ಅರೆನಾ (MIKA)ದಲ್ಲಿ ನಡೆದ ಸ್ಪರ್ಧೆಯಲ್ಲಿ ಟೀಮ್ ರಾಯೊ ರೇಸಿಂಗ್‌ನ ಪರ ಸ್ಪರ್ಧಿಸಿದ ಕಿಯಾನ್ ಅವರು ರೇಸ್‌ನುದ್ದಕ್ಕೂ ಪ್ರಾಬಲ್ಯ ಮೆರೆದು ಜೂನಿಯರ್‌ ರೊಟಾಕ್ಸ್‌ ವಿಭಾಗದ ಫೈನಲ್‌ನಲ್ಲಿ ಗೆಲುವು ಸಾಧಿಸಿದರು. ಕಿಯಾನ್‌ ರೇಸ್‌ ವಾರವನ್ನು ಉತ್ತಮವಾಗಿ ಆರಂಭಿಸಿದರು. ಅವರು ಎರಡೂ ಅಧಿಕೃತ ಅಭ್ಯಾಸ ಅವಧಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಲ್ಲೇ, ಅತಿವೇಗದ ರೇಸರ್ ಆಗಿ ಹೊರಹೊಮ್ಮಿ ಪೋಲ್‌ ಪೊಸಿಷನ್‌ ಸಹ ಗಳಿಸಿದರು. ಅರ್ಹತಾ ಲ್ಯಾಪ್‌ ಅನ್ನು 50.530 ಸೆಕೆಂಡ್‌ಗಳಲ್ಲಿ ಮುಕ್ತಾಯಗೊಳಿಸಿದರು. 18 ರೇಸರ್‌ಗಳ ಪೈಕಿ 8 ಮಂದಿಯನ್ನು ಕಿಯಾನ್‌ ಕೇವಲ ಅರ್ಧ ಸೆಕೆಂಡ್‌ ಕಡಿಮೆ ಸಮಯದಲ್ಲಿ ಹಿಂದಿಕ್ಕಿದರು. ಕಿಯಾನ್‌ಗೆ ಭಾರೀ ಪೈಪೋಟಿ ನೀಡಿದ ಚೆನ್ನೈನ ಶಿವಾನ್‌ ಕಾರ್ತಿಕ್‌ (50.672 ಸಕೆಂಡ್‌) ಹಾಗೂ ಎಶಾಂತ್‌ ವೆಂಕಟೇಶನ್‌ (50.731 ಸೆಕೆಂಡ್‌) ಕ್ರಮವಾಗಿ 2 ಹಾಗೂ…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಸಕ್ರೀಯವಾಗಿರುವ ಪ್ರಸ್ತುತ ದಿನಗಳಲ್ಲಿ, ವಿಶ್ವಾಸಾರ್ಹಕ್ಕೆ ಪಾತ್ರವಾಗಿರುವ ಪತ್ರಿಕೋದ್ಯಮವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ವತಿಯಿಂದ ಪತ್ರಿಕೋದ್ಯಮ ಸೇವೆಗಾಗಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾದ ’ಪ್ರಜಾಪ್ರಗತಿ’ ದಿನಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮದಿಂದ ಸಮಾಜ ಬದಲಾವಣೆ ಸಾಧ್ಯವಿದೆ. ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾಯಕವನ್ನು ಪತ್ರಿಕೆಗಳು ಉತ್ತಮ ಸೇವೆ ಸಲ್ಲಿಸಿಕೊಂಡು ಬಂದಿವೆ. ಮುದ್ರಣ ಮಾಧ್ಯಮಕ್ಕೀಗ ಭಾರೀ ಸವಾಲಿನ ದಿನಗಳು ಎದುರಾಗಿವೆ ಎಂದರು. ಹಿರಿಯ ಪತ್ರಕರ್ತ ಎಸ್.ನಾಗಣ್ಣ ಅವರಿಗೆ ಸಂದಿರುವ ಈ ಗೌರವವು ಕನ್ನಡ ಪತ್ರಿಕೋದ್ಯಮಕ್ಕೆ ಸಂದ ಹಿರಿಮೆ ಎಂದೂ ಅವರು ವಿಶ್ಲೇಷಿಸಿದರು. ನಾಗಣ್ಣ ಸೇವೆ ಅನನ್ಯ: ಮದನಗೌಡ ಅಭಿನಂದನಾ ಮಾತುಗಳನ್ನಾಡಿದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ. ಮದನಗೌಡ ಮಾತನಾಡಿ, ಪತ್ರಿಕೋದ್ಯಮವು ಇಂದು ಸಮಾಜ ಸೇವಾ ಮನೋಭಾವದಿಂದ…

Read More