Author: kannadanewsnow09

ಶಿವಮೊಗ್ಗ : ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಆಯ್ಕೆಗೊಂಡಿರುವ ಚುನಾವಣಾ ಐಕಾನ್‍ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್‍ರವರು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಅಭಿನಂದನಾ ಪತ್ರ ವಿತರಣೆ ಮಾಡಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಅವರಲ್ಲಿ ಮನವಿ ಮಾಡಿದರು. ಚುನಾವಣಾ ಐಕಾನ್ ವಿವರ ದೀಕ್ಷಿತ್ – ಪಿ ಡಬ್ಲ್ಯೂ ಡಿ(ಅಂಧ) ಮತದಾರ – 2021 ರ ಶೈಕ್ಷಣಿಕ ವರ್ಷದಲ್ಲಿ ಕುವೆಂಪು ವಿಶ್ವ ವಿದ್ಯಾಲಯ ದ ಇಂಗ್ಲಿμï ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದಿರುವುದಕ್ಕೆ ಸ್ವರ್ಣ ಪದಕ ಪಡೆದಿರುತ್ತಾರೆ. ಪ್ರಸ್ತುತ ಪಿ ಹೆಚ್‍ಡಿ ವ್ಯಾಸಂಗ ಮಾಡುತ್ತಿರುತ್ತಾರೆ. ಜ್ಯೋತಿ – ಅಂತರ್ ರಾಷ್ಟ್ರೀಯ ಕ್ರೀಡಾಪಟು ( ತ್ರೋ ಬಾಲ್ ) ಒಲಂಪಿಯಾಡ್. 2022ರಲ್ಲಿ ರಾಜ್ಯ ಪ್ರಶಸ್ತಿ, 2024 ರಲ್ಲಿ ಕ್ರೀಡಾ ರತ್ನ ಪ್ರಶಸ್ತಿ, 2024 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಕಿದೆ. ಡಾ.…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ಎನ್ಐಎ ಬಂಧಿಸಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಕಾರಣ ಎನ್ನುವಂತೆ ಬೊಬ್ಬೆ ಹೊಡೆದಂತ ಬಿಜೆಪಿಯವರು ಈಗ ಏನು ಹೇಳ್ತಾರೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ ಎಂದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಕಾರ್ಯಕರ್ತನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಕೇಳಿದ್ದಾರೆ.…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಮಾಜಿ ಸಚಿವ ಆರ್.ಶಂಕರ್ ಅವರು ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಮಲ ಬಿಟ್ಟು, ಕೈ ಹಿಡಿದರು. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಣೇಬೆನ್ನೂರಿನ ಮಾಜಿ ಶಾಸಕರಾದ ಶ್ರೀ ಆರ್‌. ಶಂಕರ್‌ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ನಮ್ಮ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ ಎಂದಿದ್ದಾರೆ. ಹೆಚ್ಚುತ್ತಿದೆ ಕಾಂಗ್ರೆಸ್‌ ಶಕ್ತಿ, ನಮ್ಮ ಕನಸು ರಾಜ್ಯದ ಪ್ರಗತಿ ಎಂದು ತಿಳಿಸಿದ್ದಾರೆ. https://twitter.com/DKShivakumar/status/1776163936129478840?ref_src=twsrc%5Etfw%7Ctwcamp%5Etweetembed%7Ctwterm%5E1776163936129478840%7Ctwgr%5Ebedf25e8db5b2718bc3c8331c33628fc4b98ffa8%7Ctwcon%5Es1_&ref_url=https%3A%2F%2Fkannadadunia.com%2Flive-news%2Fa-former-minister-who-left-the-bjp-and-joined-the-congress-r-shankar%2F https://kannadanewsnow.com/kannada/the-first-phase-of-lok-sabha-elections-will-begin-today-with-house-to-house-voting/ https://kannadanewsnow.com/kannada/modi-once-again-atmosphere-in-all-28-constituencies-in-karnataka-by-vijayendra/

Read More

ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿಜೀ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್‍ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು. ಅದು ಜನಸಾಮಾನ್ಯರ ಅಭಿಪ್ರಾಯ ಕೂಡ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂಸದರಾದ ಶ್ರೀಮತಿ ಸುಮಲತಾ ಅಂಬರೀಷ್, ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಎಸ್.ಶಿವರಾಮೇಗೌಡ, ವಿಜಯಪುರ ಜಿಲ್ಲೆ ಯುವ ನಾಯಕ, ಸಚಿವ ಶಿವಾನಂದ ಪಾಟೀಲರ ಕುಟುಂಬದವರಾದ ಹರ್ಷ ಗೌಡ ಶಿವಶರಣ ಪಾಟೀಲ್, ಮಾಜಿ ಕ್ರಿಕೆಟ್ ಪಟು ದೊಡ್ಡಗಣೇಶ್, ಗಾಯತ್ರಿ ತಿಮ್ಮಾರೆಡ್ಡಿ, ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಶ್ರೀನಿವಾಸ್, ತುಕಾರಾಂಗೌಡ ಪಾಟೀಲ, ಕಾಂಗ್ರೆಸ್ ಮುಖಂಡ ಪ್ರಭುರಾಜ ಎಸ್ ಪಾಟೀಲ, ಗಂಗಾವತಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೀರಭದ್ರಗೌಡ ಮೊದಲಾದವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಮೋದಿ ಮತ್ತೊಮ್ಮೆ ಎಂಬ ವಾತಾವರಣವಿದೆ.…

Read More

ನವದೆಹಲಿ: ನೆಟ್ಫ್ಲಿಕ್ಸ್ ನಂತರ, ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಡಿಸ್ನಿ + ಬಳಕೆದಾರರನ್ನು ಪಾಸ್ವರ್ಡ್ ಹಂಚಿಕೆಯಿಂದ ನಿರ್ಬಂಧಿಸಲು ಹೊಸ ನೀತಿಗಳನ್ನು ತರುವ ಮೂಲಕ ಸುದ್ದಿಯಲ್ಲಿದೆ. ಈ ನೀತಿಯು ಬಳಕೆದಾರರು ತಮ್ಮ ಪಾಸ್ವರ್ಡ್ಗಳನ್ನು ತಮ್ಮ ಮನೆಯ ಹೊರಗೆ ಹಂಚಿಕೊಳ್ಳುವುದನ್ನು ನಿರ್ಬಂಧಿಸುತ್ತದೆ ಎಂದು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ದೃಢಪಡಿಸಿದ್ದರೂ, ದಮನ ಯಾವಾಗ ಪ್ರಾರಂಭವಾಗುತ್ತದೆ ಎಂಬುದಕ್ಕೆ ಸ್ಪಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ. ಆದಾಗ್ಯೂ, ಈಗ ನಮಗೆ ತಿಳಿದಿದೆ. ಸಿಎನ್ಬಿಸಿಗೆ ನೀಡಿದ ಸಂದರ್ಶನದಲ್ಲಿ, ಡಿಸ್ನಿ ಸಿಇಒ ಬಾಬ್ ಐಗರ್ ಕಂಪನಿಯು ಜೂನ್ 2024 ರಲ್ಲಿ “ಪಾಸ್ವರ್ಡ್ ಹಂಚಿಕೆಗೆ ನಮ್ಮ ಮೊದಲ ನಿಜವಾದ ಪ್ರವೇಶವನ್ನು ಪ್ರಾರಂಭಿಸಲು” ಯೋಜಿಸುತ್ತಿದೆ ಎಂದು ಬಹಿರಂಗಪಡಿಸಿದರು. ಸಿಇಒ ಬಾಬ್ ಐಗರ್ ಘೋಷಿಸಿದ ಈ ಕ್ರಮವು ಡಿಸ್ನಿಯ ಸ್ಟ್ರೀಮಿಂಗ್ ಆದಾಯವನ್ನು ಹೆಚ್ಚಿಸಲು ಮತ್ತು ಲಾಭದಾಯಕತೆಯನ್ನು ಸಾಧಿಸುವ ಕಂಪನಿಯ ಪ್ರಯತ್ನಗಳಿಗೆ ಅನುಗುಣವಾಗಿದೆ. ಡಿಸ್ನಿಯ ಲಾಭದ ಗುರಿಗಳಲ್ಲಿ ಸ್ಟ್ರೀಮಿಂಗ್ ವಹಿಸುವ ಮಹತ್ವದ ಪಾತ್ರವನ್ನು ಐಗರ್ ಒತ್ತಿ ಹೇಳಿದರು. ಇದನ್ನು ಸಾಧಿಸಲು, ಪಾಸ್ ವರ್ಡ್ ಹಂಚಿಕೆಯನ್ನು ತೆಗೆದುಹಾಕುವುದು ನಿರ್ಣಾಯಕ ತಂತ್ರವೆಂದು ಪರಿಗಣಿಸಲಾಗಿದೆ. ಕಂಪನಿಯು ತನ್ನ ಆರಂಭಿಕ…

Read More

ಮಂಡ್ಯ : ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡಿ ನೂರಾರು ಎಕರೆ ಆಸ್ತಿ ಪಾಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಮದ್ದೂರು ಶಾಸಕ ಕೆಂಡಾಮಂಡಲವಾದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆಯಷ್ಟೇ ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಎಲ್ಲೋ ಲೂಟಿ ಮಾಡ್ಕೋಂಡು ಬಂದು ಇಲ್ಲಿ ಜನಸೇವೆ ನಾಟಕ ಮಾಡ್ತಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದರು. ಈ ವಿಚಾರವಾಗಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ದೊಡ್ಡರಸಿನಕೆರೆ ಗ್ರಾಮದಲ್ಲಿ ಯಾರಾದ್ರೂ ರಾಜ ವಂಶಸ್ಥರು ಇದ್ರ, ರಾಜ ಮಹಾರಾಜರು ಮಾಡದಷ್ಟು ಆಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿಯಾಗಿ ಲೂಟಿ ಮಾಡಿ ಬೆಂಗಳೂರು, ಬಿಡದಿ, ಮೈಸೂರು,…

Read More

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮಾಲೀಕ ಮುಖೇಶ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಜಾಲೀಸಾ ಹಾಕಿದ ಕಾರಣ, ಕಿಡಿಗೇಡಿಗಳು ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಲಾಗಿತ್ತು. ಈ ಬಳಿಕ ಕೋರ್ಟ್ ನಿರ್ದೇಶನದ ಮೇರೆಗೆ ಬಂಧನಕ್ಕೆ ಒಳಗಾದ ಸುಲೇಮಾನ್ ತಾಯಿ ಮುಖೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಮುಖೇಶ್ ವಿರುದ್ಧ ಐಪಿಸಿ ಸೆಕ್ಷನ್ 506, 504ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/rameswaram-cafe-bomb-blast-case-nia-arrests-bjp-activist/ https://kannadanewsnow.com/kannada/the-first-phase-of-lok-sabha-elections-will-begin-today-with-house-to-house-voting/

Read More

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಪ್ರದೇಶದಲ್ಲಿ ಗುರುವಾರ ರಾತ್ರಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಹಿಮಾಚಲ ಪ್ರದೇಶದ ಚಂಬಾದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. https://twitter.com/ANI/status/1775923539272757626

Read More

ಬೆಂಗಳೂರು: ಬರದ ವಿಚಾರದಲ್ಲಿ ಕರ್ನಾಟಕಕ್ಕೆ ಒಂದು ರೂಪಾಯಿಯನ್ನು ಕೊಡದ ಕೇಂದ್ರ ಸರ್ಕಾರ ಇಂದು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿದ ಸಚಿವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರಪರಿಹಾರದ ವಿಚಾರದಲ್ಲಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿವಾರ್ಯವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಮಿತ್ ಶಾ ಅವರು ತಾವು ಆಡಿದ ಮಾತುಗಳನ್ನೇ ಸುಪ್ರೀಂ ಕೋರ್ಟ್ ಮುಂದೆ ಅಫಿಡೆವಿಟ್ ರೂಪದಲ್ಲಿ ಸಲ್ಲಿಸಲಿ ಎಂದು ಸವಾಲು ಹಾಕಿದರು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಸ್ಪಷ್ಟ. ಸತ್ಯಾಂಶ ಜನರಿಗೆ ಗೊತ್ತಿದೆ. ಒಂದು ರೂಪಾಯಿ ಕೊಡದೇ ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರು ಕರ್ನಾಟಕದ ಜನರ ಮುಂದೆ ಸುಳ್ಳು ನೆಪಗಳನ್ನ ಹೇಳಿತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಕೇಂದ್ರದ ತೆರಿಗೆ ಪಾಲಿನಲ್ಲಿ…

Read More

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (Reserve Bank of India -RBI) ಹಣಕಾಸು ನೀತಿ ಸಮಿತಿ (Monetary Policy Committee -MPC) ತನ್ನ ಬಹುನಿರೀಕ್ಷಿತ ನೀತಿ ಹೇಳಿಕೆಯನ್ನು ನಾಳೆ (ಏಪ್ರಿಲ್ 5) ಬಿಡುಗಡೆ ಮಾಡಲಿದೆ. ಇದು ಪ್ರಸಕ್ತ ಹಣಕಾಸು ವರ್ಷದ ಮೊದಲ ಘೋಷಣೆಯಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಆರು ಸದಸ್ಯರ ಸಮಿತಿಯು ಏಪ್ರಿಲ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೇಳಿಕೆಯನ್ನು ಪ್ರಕಟಿಸಲಿದೆ. ಸಮಿತಿಯು ರಾಷ್ಟ್ರದ ವಿತ್ತೀಯ ನೀತಿ ಮತ್ತು ಸಾಲದ ದರಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಇದು ಸಮಿತಿಯ ಮೊದಲ ದ್ವೈಮಾಸಿಕ ಪರಿಶೀಲನೆಯಾಗಿದ್ದು, ಇದರ ಪ್ರಕಾರ ಬಡ್ಡಿದರಗಳಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಆರ್ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ ಏಪ್ರಿಲ್ 3 ರಂದು ಮೂರು ದಿನಗಳ ಚರ್ಚೆಯನ್ನು ಪ್ರಾರಂಭಿಸಿತು. ಸಮಿತಿ ಸಭೆ ಸೇರಿದ ನಂತರ ಏನಾಗುತ್ತದೆ? ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿಕೆಯನ್ನು ಪ್ರಕಟಿಸಲಿದ್ದಾರೆ. ನೀತಿ ವಿವರಗಳ ಬಗ್ಗೆ ಮಾತನಾಡಲು…

Read More