Author: kannadanewsnow09

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು. ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿ ಕೊಡವ ಸಮುದಾಯದ ಎಲ್ಲಾ…

Read More

ಬಳ್ಳಾರಿ: ರಾಜ್ಯಾಧ್ಯಂತ ನಿನ್ನೆ ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದ 316 ಕೇಂದ್ರಗಳಲ್ಲಿ ನಿನ್ನೆ ಕೆ-ಸೆಟ್ ಪರೀಕ್ಷೆ ನಡೆಯಿತು.ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಕೆ-ಸೆಟ್ ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಬಿಡದೇ ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಕೆ-ಸೆಟ್ ಪರೀಕ್ಷೆಯ ವೇಳೆಯಲ್ಲಿ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದರಿಂದ ಕೆಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಬಳಿಯಲ್ಲೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.…

Read More

ಬೆಂಗಳೂರು: “ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯವಾದುದು” ಎಂದರು. “ಈ ಮೊದಲಿನಂತೆ ನಿತೀಶ್ ಕುಮಾರ್ ಅವರ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಬಿಹಾರದ‌ ಅಭಿವೃದ್ಧಿಗೆ ಲಾಲುಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ” ಎಂದರು.…

Read More

ಬೆಂಗಳೂರು: ಸೈಬರ್ ವಂಚನೆಗೆ ( Syber Crime ) ಒಳಗಾದವರ ನೆರವಿಗಾಗಿ ರಾಷ್ಟ್ರೀಯ ಸೈಬರ್ ಸಹಾಯವಾಣಿ ಆರಂಭಿಸಲಾಗಿದೆ. ನೀವು ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ ಗೋಲ್ಡನ್ ಅವರ್ ( Golden Hour ) ಎಂಬುದಾಗಿ ವಂಚನೆಗೆ ಒಳಗಾದ ಕೂಡಲೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ರೆ ನಿಮ್ಮ ಹಣ ಮರಳಿ ಬರಲಿದೆ. ಅದು ಹೇಗೆ ಅಂತ ಮುಂದೆ ಓದಿ. ದೇಶದಲ್ಲಿ ಸೈಬರ್ ವಂಚನೆಗೆ ಒಳಗಾದವರ ನೆರವಿಗೆಂದು ರಾಷ್ಟ್ರೀಯ ಸೈಬರ್ ಸಹಾಯವಾಣಿ ಸ್ಥಾಪಿಸಲಾಗಿದೆ. ಇದನ್ನು ಸ್ಥಾಪಿಸಿ ನಾಲ್ಕು ವರ್ಷ ಕಳೆದಿದ್ದರೂ ಗೋಲ್ಡನ್ ಅವರ್ ನಲ್ಲಿ ಅಂದರೆ ಕೃತ್ಯ ನಡೆದ ಒಂದು ತಾಸಿನ ಒಳಗಾಗಿ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಿಂದ ಕದ್ದ ಹಣವನ್ನು ಮರಳಿ ಪಡೆಯಬಹುದಾಗಿದೆ. ಇದು ತಿಳಿಯದಂತ ಅನೇಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವುದೇ ವಿರಳವಾಗಿದೆ. ಎನ್ ಸಿ ಆರ್ ಪಿ ಸಹಾಯವಾಣಿ ಸಂಖ್ಯೆಗೆ ಸೈಬರ್ ವಂಚನೆಗೆ ಒಳಗಾದವರು ಈವರೆಗೆ ನೆರವು ಕೋರಿರೋದು…

Read More

ಚಿಕ್ಕಮಗಳೂರು: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೀರೂರು ರೈಲು ನಿಲ್ದಾಣವನ್ನು ಪರಿಶೀಲಿಸಿ, ಶಿವನಿ ನಿಲ್ದಾಣದಲ್ಲಿ ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲು ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ  ವಿ. ಸೋಮಣ್ಣ ಅವರು ಇಂದು ರೈಲು ಸಂಖ್ಯೆ 17309 ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲು ಶಿವನಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ಅವರು ಬೀರೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 61ಕ್ಕೂ ಹೆಚ್ಚು ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ಇವು ಪ್ರಯಾಣಿಕರ ಸೌಲಭ್ಯಗಳನ್ನು ಹಾಗೂ ಮೂಲಸೌಕರ್ಯವನ್ನು ಪರಿವರ್ತಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು. ಅವರು ಚಿಕ್ಕಜಜೂರು–ಬಳ್ಳಾರಿ ದ್ವಿಪಥ (185 ಕಿ.ಮೀ.) ಕಾಮಗಾರಿ ₹3340 ಕೋಟಿಗಳ ವೆಚ್ಚದಲ್ಲಿ ಕಾರ್ಯಗತಗೊಳ್ಳುತ್ತಿದೆ ಎಂದು…

Read More

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.  ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಿಸಲಾಯಿತು. ಸಂಜೆ 4 ಗಂಟೆಗೆ ಮಂಗಳ ವಾದ್ಯ ಮತ್ತು ಪೂರ್ಣಕುಂಭ ಸಮೇತ ನೂತನ ಬಸವಣ್ಣ ದೇವರ ವಿಗ್ರಹದ ಮೆರವಣಿಗೆ ನಡೆಯಿತು. ಸಂಜೆ 6.30ಕ್ಕೆ ಏಕಾದಶ ರುದ್ರದ ಮೂಲಕ ಪೂಜೆ ಆರಂಭಗೊಂಡು, ಕಂಕಣ ಧಾರಣೆ ನೆರವೇರಿತು ಎಂದು ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ನೂತನ ವಿಗ್ರಹಕ್ಕೆ ಅಷ್ಟಬಂಧ ಕ್ರಿಯೆ ನೆರವೇರಲಿದೆ. ಆಶೀರ್ವಾದ ಪೂರ್ವಕ ನಾಮಕರಣ ಬಲಿಪೂಜೆ, ಅಷ್ಟೋತ್ತರ, ಮಹಾಮಂಗಳಾರತಿ, ಪ್ರಸಾದ ವಿನಿಯೋದ ಬಳಿಕ ಮಧ್ಯಾಹ್ನ 1 ಗಂಟೆಗೆ…

Read More

ರಾಜಸ್ಥಾನ: ಇಲ್ಲಿನ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಿಂತಿದ್ದಂತ ಟ್ರಕ್ ಗೆ ಟೆಂಪೋ ಟ್ರಾವೆಲ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜೋಧ್ ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು ಜೋಧ್ ಪುರದ ಸುರ್ಸಾಗರ್ ನ ಮಾಲಿ ಸಮುದಾಯದವರು ಎಂಬುದಾಗಿ ತಿಳಿದು ಬಂದಿದೆ. ಬಿಕಾನೇರ್ ನ ಕೊಲಾಯತ್ ದೇಗುಲದಿಂದ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. https://twitter.com/PTI_News/status/1985008698637287699 https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/ https://kannadanewsnow.com/kannada/useful-information-for-the-public-these-are-the-duties-of-the-village-accountant/

Read More

ರಾಜಸ್ಥಾನ: ರಾಜಸ್ಥಾನದಲ್ಲಿ ನಿಲ್ಲಿಸಿದ್ದ ಟ್ರೇಲರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಭಕ್ತರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಫಲೋಡಿ ಜಿಲ್ಲೆಯಿಂದ ಈ ಅಪಘಾತ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಬಿಕಾನೇರ್‌ನ ಕೊಲಾಯತ್‌ಗೆ ಭೇಟಿ ನೀಡಿದ ನಂತರ ಭಕ್ತರು ಜೋಧ್‌ಪುರದ ಸುರ್‌ಸಾಗರ್‌ನಿಂದ ಹಿಂತಿರುಗುತ್ತಿದ್ದರು. ಈ ದುಃಖದ ಸಮಯದಲ್ಲಿ ಸರ್ಕಾರ ಸಂತ್ರಸ್ತರೊಂದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/ https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/

Read More

ಬೆಂಗಳೂರು: ಬಿಜೆಪಿ ನಾಯಕರು ‘ಲಾಲ್‌ಬಾಗ್‌ ಉಳಿಸಿ’ ಎಂದು ನಾಟಕವಾಡುತ್ತಿದ್ದಾರೆ. ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಿಮಗೆ ಲಾಲ್‌ಬಾಗ್‌ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಇಡೀ ಯೋಜನೆಯನ್ನು ರದ್ದುಪಡಿಸಲು ಹಠ ಹಿಡಿಯುವ ಬದಲು, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಪರ್ಯಾಯ ಜಾಗವನ್ನು ಸೂಚಿಸುವ ಧೈರ್ಯ ತೋರಿ. ಅದನ್ನು ಬಿಟ್ಟು, ಜನರ ದಾರಿ ತಪ್ಪಿಸುವ ರಾಜಕೀಯ ಗಿಮಿಕ್ ಏಕೆ? ಎಂದು ಕೇಳಿದ್ದಾರೆ. ನಿಮ್ಮ ದ್ವಂದ್ವ ನೀತಿಗೆ ಇದಕ್ಕಿಂತ ಸಾಕ್ಷಿ ಬೇಕೇ? ಎಂಬುದಾಗಿ ಈ ಕೆಳಗಿನಂತೆ ಪಟ್ಟಿ ನೀಡಿದ್ದಾರೆ. ಡಾ. ಎಂ.ಎಚ್. ಮರಿಗೌಡರು ಲಾಲ್‌ಬಾಗ್ ಅನ್ನು 240 ಎಕರೆಗೆ ವಿಸ್ತರಿಸಿ, ತೋಟಗಾರಿಕಾ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದರು. 2003ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶ್ರೀ ಎಸ್‌ಎಂ ಕೃಷ್ಣ ಅವರು ಲಾಲ್‌ಬಾಗ್‌ನ ಪುನರುಜ್ಜೀವನಕ್ಕಾಗಿ ₹17 ಕೋಟಿ ಮಂಜೂರು ಮಾಡಿದ್ದರು. ಎರಡು ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಲಾಲ್‌ಬಾಗ್‌ಗೆ ಏನು ಕೊಡುಗೆ…

Read More

ವಿಜಯಪುರ: ಜನಪ್ರತಿನಿಧಿ ಅಂದ್ರೆ ತಮ್ಮನ್ನು ಅರಸಿ ಬರುವಂತ ಜನರ ಕಷ್ಟವನ್ನು ಕೇಳಿ, ಅದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸೋದು. ಹೀಗೆ ಪ್ರತಿಸ್ಪಂದಿಸಿದಾಗಲೇ ಜನಪ್ರತಿನಿಧಿ ಅಂದ್ರೆ ಹೀಗೆ ಇರಬೇಕು ಎಂಬುದಾಗೇ ಅನೇಕರು ಹೇಳುತ್ತಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಎಂ.ಬಿ ಪಾಟೀಲ್ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಶಿಕ್ಷಣ ನೆರವೇರಿಸಲು ಲಕ್ಷ ಲಕ್ಷ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಜಯಪುರ ಜಿಲ್ಲೆಯ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ MBBS ಶಿಕ್ಷಣಕ್ಕೆ ನೆರವಾಗಿದ್ದೇನೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದರೂ, ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸಿನ ಶಿಕ್ಷಣವನ್ನು ಮುಂದುವರಿಸಲಾಗದೆ ಕಷ್ಟಪಡುತ್ತಿದ್ದ 6 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂತಸ ನನ್ನದು ಎಂದಿದ್ದಾರೆ. ಈ ಕೆಳಕಂಡ ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮುಗಿಸಲು ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು ಬಾಬಾನಗರದ ಕೃಷಿ ಕಾರ್ಮಿಕ ಗಣಪತಿ ಶಿಂಧೆ ಅವರ ಪುತ್ರಿ…

Read More