Author: kannadanewsnow09

ಬೆಂಗಳೂರು: ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಮಂಗಳವಾರದಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ. ರಾಜ್ಯದ 19 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ…

Read More

ನವದೆಹಲಿ: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ತಿಳಿಸಿದ್ದಾರೆ. ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಮಂಗಳವಾರ ಸಭೆ ನಡೆಸಿ ಚರ್ಚಿಸಿದರು. ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯುಐಡಿಎಐ ಮತ್ತು ಇಸಿಐ ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ. ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ…

Read More

ಬಳ್ಳಾರಿ : ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆಯಾಗಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ. ಪ್ರವೇಶ ಪತ್ರಗಳನ್ನು WWW.schooleducation.kar.nic.in ಅಥವಾ WWW.vidyavahini.karnataka.gov.in ಅಂತರ್ ಜಾಲದ (ಆನ್‌ಲೈನ್) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮಾ.15 ಕೊನೆಯ ದಿನ ಆಗಿದೆ. ಕಡ್ಡಾಯವಾಗಿ ದೃಢೀಕರಿಸಿದ ಪ್ರವೇಶ ಪತ್ರವನ್ನು ಪ್ರವೇಶ ಪರೀಕ್ಷೆಗೆ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/nagpur-violence-main-accused-fahim-khan-arrested/ https://kannadanewsnow.com/kannada/pakistani-woman-caught-in-india-to-escape-harassment-by-husband-do-you-know-why-she-came/

Read More

ನಾಗಪುರ: ಸೋಮವಾರ ನಡೆದ ಮಹಲ್ ಗಲಭೆಯ ಪ್ರಮುಖ ಪ್ರಚೋದಕರಲ್ಲಿ ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಪಕ್ಷದ (ಎಂಡಿಪಿ) ಅಧ್ಯಕ್ಷ ಫಾಹೀಮ್ ಖಾನ್ ಒಬ್ಬರು ಎಂದು ನಂಬಲಾಗಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶಪೇಟೆ ಪೊಲೀಸರಿಂದ ಒಂದು ದಿನದ ಹಿಂದೆ ಬಂಧಿಸಲ್ಪಟ್ಟ ಖಾನ್, ಮಹಲ್‌ನ ಗಾಂಧಿ ಗೇಟ್ ಬಳಿಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯಲ್ಲಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೋಳಿ ಚಾದರ್ ಮತ್ತು ಔರಂಗಜೇಬನ ಪ್ರತಿಮೆಯನ್ನು ಸುಟ್ಟ ಆರೋಪದ ಮೇಲೆ ದೂರು ದಾಖಲಿಸಲು ಗಣೇಶಪೇಟೆ ಪೊಲೀಸ್ ಠಾಣೆಗೆ ಗುಂಪೊಂದು ಕರೆದೊಯ್ದಿದ್ದರು. ನ್ಯಾಯಾಲಯವು ಖಾನ್ ಮತ್ತು ಇತರ 26 ಜನರನ್ನು ಮಾರ್ಚ್ 21 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಅವರು ಯಶೋಧರ ನಗರ ಪ್ರದೇಶದ ನಿವಾಸಿ. ದೂರು ದಾಖಲಿಸಿದ ನಂತರ, ಖಾನ್ ಗಣೇಶಪೇಟೆ ಪೊಲೀಸ್ ಠಾಣೆಯ ಹೊರಗೆ ಪೊಲೀಸರು ಮತ್ತು ಅಲ್ಪಸಂಖ್ಯಾತ ಆಯೋಗವನ್ನು ಟೀಕಿಸುವ ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದಾರೆ. ಈ ವೀಡಿಯೊವನ್ನು ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಪ್ರಸಾರ ಮಾಡಲಾಯಿತು. ಹಿರಿಯ ಅಧಿಕಾರಿಯೊಬ್ಬರ…

Read More

ನವದೆಹಲಿ: ರಾಜಸ್ಥಾನದ ಗಂಗಾನಗರ ಜಿಲ್ಲೆಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ 30 ವರ್ಷದ ಪಾಕಿಸ್ತಾನಿ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಭಾನುವಾರ ರಾತ್ರಿ ಬಂಧಿಸಿದೆ. ಈಕೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸೋದಕ್ಕೆ ರೂಟ್ ತೋರಿಸಿದ್ದು ಮಾತ್ರ ಗೂಗಲ್ ಮ್ಯಾಪ್. ಅದು ಹೇಗೆ ಅಂತ ಮುಂದೆ ಓದಿ. ಆ ಮಹಿಳೆ ತನ್ನನ್ನು ಅಮೈರಾ ಎಂದು ಗುರುತಿಸಿಕೊಂಡಿದ್ದು, ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದವಳು ಎಂದು ಹೇಳಿಕೊಂಡಿದ್ದಾಳೆ ಎಂದು ಪಿಟಿಐ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಕೌಶಿಕ್ ತಿಳಿಸಿದ್ದಾರೆ. ಬಿಎಸ್‌ಎಫ್ ಮತ್ತು ಗುಪ್ತಚರ ಸಂಸ್ಥೆಗಳು ಇನ್ನೂ ಮಹಿಳೆಯನ್ನು ಪೊಲೀಸರಿಗೆ ಹಸ್ತಾಂತರಿಸಿಲ್ಲ ಎಂದು ಡಿಎಸ್‌ಪಿ ಕೌಶಿಕ್ ದೃಢಪಡಿಸಿದ್ದಾರೆ. ಏಕೆಂದರೆ ಆಕೆಯ ಪ್ರವೇಶದ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಬಿಎಸ್‌ಎಫ್ ಮತ್ತು ಗುಪ್ತಚರ ಸಂಸ್ಥೆಗಳು ಇನ್ನೂ ಅವಳನ್ನು ಪ್ರಶ್ನಿಸುತ್ತಿವೆ. ಬಲೂಚಿಸ್ತಾನದಲ್ಲಿ ಕೌಟುಂಬಿಕ ಹಿಂಸಾಚಾರದಿಂದ ತಪ್ಪಿಸಿಕೊಳ್ಳುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ ಅವರ ಸಂಘರ್ಷದ ಹೇಳಿಕೆಗಳು ಮತ್ತು ಅನುಮಾನಾಸ್ಪದ ಹುಡುಕಾಟ ಇತಿಹಾಸವು ಅಧಿಕಾರಿಗಳನ್ನು ಆಕೆಯ ಹಿನ್ನೆಲೆಯನ್ನು ಆಳವಾಗಿ ಪರಿಶೀಲಿಸಲು ಪ್ರೇರೇಪಿಸಿದೆ. ಬಲೂಚಿಸ್ತಾನದ…

Read More

ಧಾರವಾಡ : ಧಾರವಾಡ ರಂಗಾಯಣ ಚಿಣ್ಣರಮೇಳ-2025 ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಎಪ್ರೀಲ್ 10, 2025 ರಿಂದ ಮೇ 4, 2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಪ್ರವೇಶ ಪಡೆಯುವವರು ಮಕ್ಕಳ 2 ಭಾವಚಿತ್ರ ಹಾಗೂ ವಯಸ್ಸಿನ ದಾಖಲಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ರೂ.20 ಹಾಗೂ ಪ್ರವೇಶ ಶುಲ್ಕ ರೂ. 2,000 ಯನ್ನು ನಿಗದಿಪಡಿಸಲಾಗಿದೆ. ಅರ್ಜಿ ನಮೂನೆಯನ್ನು ರಂಗಾಯಣ ಕಚೇರಿಯಲ್ಲಿ ಪಡೆದು, ಎಪ್ರಿಲ್ 9, 2025 ಸಂಜೆ 4:30 ಗಂಟೆಯ ಒಳಗಾಗಿ ಪ್ರವೇಶ ಶುಲ್ಕದೊಂದಿಗೆ ಪಾಲಕರು ಖುದ್ದಾಗಿ ತಮ್ಮ ಮಗುವಿನೊಂದಿಗೆ ಬಂದು ಪ್ರವೇಶ ನೋಂದಾಯಿಸಬೇಕು. ಎಪ್ರೀಲ್ 9, 2025 ಕ್ಕೆ 7 ವರ್ಷ ಪೂರ್ಣ ತುಂಬಿರುವ 15 ವರ್ಷದ ಒಳಗಿರುವ ಮಕ್ಕಳು ಮಾತ್ರ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ-0836-2441706 ಗೆ ಸಂಪರ್ಕಿಸಬಹುದು ಎಂದು ರಂಗಾಯಣ ಪ್ರಕಟಣೆ ತಿಳಿಸಿದೆ. https://kannadanewsnow.com/kannada/applications-invited-for-tourist-guide-training/ https://kannadanewsnow.com/kannada/actress-ranya-raos-arrest-in-gold-smuggling-case-court-rejects-bail-plea-of-taruna-raju/

Read More

ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ (ರಾಜ್ಯ ಮತ್ತು ಜಿಲ್ಲಾ ಮಟ್ಟ) ಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಎಪ್ರೀಲ್ 05, 2025 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಂಗಾಯಣ ಆವರಣದಲ್ಲಿರುವ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/court-orders-govt-to-pay-fine-along-with-rs-180000-compensation-to-company-for-rejecting-health-insurance/ https://kannadanewsnow.com/kannada/actress-ranya-raos-arrest-in-gold-smuggling-case-court-rejects-bail-plea-of-taruna-raju/

Read More

ಬೆಂಗಳೂರು: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ತಮ್ಮ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೆ ಎಂದು ಹೇಳಿರುವ ಸಚಿವರು ಈ ಬಗ್ಗೆ ವಿಚಾರಣೆ ನಡೆಸಿದಾಗ ಈ ಪ್ರಕರಣ ಹಲವು ತಿಂಗಳ ಹಿಂದೆ ನಡೆದದ್ದು ಎಂದು ತಿಳಿದು ಬಂದಿರುತ್ತದೆ ಎಂದು ಹೇಳಿದ್ದಾರೆ. ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಸಾರ್ವಜನಿಕ ಸೇವೆಯಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು…

Read More

ಧಾರವಾಡ :  ಹುಬ್ಬಳ್ಳಿಯ ಸುಳ್ಳ ರಸ್ತೆಯ ಶಿಕ್ಷಕರ ಕಾಲನಿಯ ಆದಿತ್ಯ ಪ್ರಭು ಅನ್ನುವವರು ತಮ್ಮ ತಂದೆ ಮಧನ ಪ್ರಭು ಹಾಗೂ ತಾಯಿ ಮಾನಿಶಾ ಪ್ರಭುರವರಿಗೆ ಎದುರುದಾರ ನವಿ ಜನರಲ್ ಇನ್ಸುರೆನ್ಸ್ ಕಂಪನಿಯಿಂದ 2022 ರಿಂದಆರೋಗ್ಯ ವಿಮೆ ಮಾಡಿಸಿದ್ದರು. ಅವರು ಅಗತ್ಯ ಪ್ರಿಮಿಯಮ್‍ಕಟ್ಟಿ ದಿ:16/06/2023 ರಿಂದ ದಿ:15/06/2024 ರವರೆಗೆ ಆ ವಿಮಾ ಪಾಲಸಿಯನ್ನು ನವೀಕರಿಸಿದ್ದರು. ದಿ:09/11/2023ರಂದು ದೂರುದಾರ ತಂದೆ ಮಧನ ಪ್ರಭುರವರಿಗೆ ಮನೆಯಲ್ಲಿ ಜಾರಿ ಬಿದ್ದು ಮೊಣಕಾಲಿನ ಮೂಳೆ ಮುರಿತವಾಗಿತ್ತು. ತಕ್ಷಣ ಅವರನ್ನು ಹುಬ್ಬಳ್ಳಿಯ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಅವರು ರೂ.2,20,000 ಕ್ಯಾಶ್‍ಲೆಶ್ ಕ್ಲೇಮು ಎದುರುದಾರರಿಗೆ ಸಲ್ಲಿಸಿದ್ದರು. ಎದುರುದಾರರು ಅದನ್ನು ತಿರಸ್ಕರಿಸಿದ್ದರು. ಆಸ್ಪತ್ರೆಯಿಂದ ದಿಸ್‍ಚಾರ್ಜ ಆದ ಮೇಲೆ ಎಲ್ಲ ದಾಖಲೆ ಪತ್ರಗಳ ಜೊತೆ ರೂ.1,80,000 ಆಸ್ಪತ್ರೆಯ ಖರ್ಚು ವೆಚ್ಚದ ಕ್ಲೇಮನ್ನು ದೂರುದಾರರು ಎದುರುದಾರ ವಿಮಾ ಕಂಪನಿಗೆ ಸಲ್ಲಿಸಿದ್ದರು. ದೂರುದಾರ ತಂದೆ 10 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಆ ಸಂಗತಿಯನ್ನು ವಿಮೆ ಪಡೆಯುವಾಗ ಅವರು ಮುಚ್ಚಿಟ್ಟಿದ್ದಾರೆ ಅಂತಾ ಕಾರಣ…

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಆಕೆಗೆ ನ್ಯಾಯಾಂಗ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಜಾಮೀನು ಕೋರಿ 2ನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದಂತ ಕೇಸಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಬಂಧನವಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿ ಆದೇಶಿಸಿದೆ. ಹೀಗಾಗಿ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ. ಇನ್ನೂ ಇದೇ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಾಯ್ ಫ್ರೆಂಡ್ ಎಂದೇ ಹೇಳಲಾಗುತ್ತಿದ್ದಂತ ತರುಣ್ ರಾಜು ಎಂಬುವರ ವಿರುದ್ಧವೂ ಡಿಆರ್ ಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯ ಮೊರೆ ಹೋಗಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ 2ನೇ ಆರೋಪಿಯಾಗಿರುವಂತ ತರುಣ್ ರಾಜು ಜಾಮೀನು…

Read More