Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಂಡಹಳ್ಳಿ ಕೆರೆಯ ಮೈಸೂರು ರಸ್ತೆಗೆ ಹೊಂದಿಕೊಂಡಿರುವಂತಹ ಮುಖ್ಯದ್ವಾರದ ಬಳಿ 2.25 ಗುಂಟೆ ಪ್ರದೇಶದಲ್ಲಿ ಶೀಟಿನ ಶೆಡ್ ಹಾಕಿಕೊಂಡು ಟಿಂಬರ್ ಶಾಪ್ ನಡೆಸಲಾಗುತ್ತಿರುತ್ತದೆ. ಕೆರೆಗಳ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್ ರವರ ನಿದೇರ್ಶನದ ಮೇರೆಗೆ ಇಂದು ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿಯಾಗಿದ್ದ ಜಾಗವನ್ನು ತೆರವು ಮಾಡಲು ಸೂಚನೆ ನೀಡಿರುತ್ತಾರೆ. ಮುಂದುವರಿದು, ಒತ್ತುವರಿಯಾಗಿರುವ 2.25 ಗುಂಟೆ ಪ್ರದೇಶವನ್ನು ಈಗಾಗಲೇ ಭೂಮಾಪಕರು ಸರ್ವೇ ನಡೆಸಿ ಗಡಿಯನ್ನು ಗುರುತಿಸಿರುತ್ತಾರೆ. ಈ ಸಂಬಂಧ ಒತ್ತುರಿಯಾಗಿರುವ ಜಾಗವನ್ನು ಕೂಡಲೆ ತೆರವು ಮಾಡಲು ಟಿಂಬರ್ ಶಾಪ್ ನವರಿಗೆ ತಿಳಿಸಲಾಗಿದ್ದು, ಸ್ವಯಂಪ್ರೇರಿತವಾಗಿ ಅವರೇ ಶೆಡ್ ಹಾಗೂ ಟಿಂಬರ್ ಗಳನ್ನು ತೆರವುಗೊಳಿಸಿಕೊಂಡಿರುತ್ತಾರೆ. ಟಿಂಬರ್ ಶಾಪ್ ತೆರವುಗೊಳಿಸಿದ ಜಾಗಕ್ಕೆ ಕೂಡಲೆ ಫೆನ್ಸಿಂಗ್ ಹಾಕಲಾಗುತ್ತದೆ. ಈ ವೇಳೆ…
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಾಲಯದ ವಿದ್ಯುನ್ಮಾನ ಮಾಧ್ಯಮ, ಫೀಲ್ಮ್ ಮೇಕಿಂಗ್ ಮತ್ತು ಆ್ಯನಿಮೇಷನ್ ವಿಭಾಗದಲ್ಲಿ ಸೋಮವಾರದಿಂದ 5 ದಿನಗಳ ಕಾಲ ‘ಮೀಡಿಯಾ ಕ್ರಾಫ್ಟ್’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅವರು ಸೋಮವಾರ ಕಾರ್ಯಾಗಾರ ಉದ್ಘಾಟನೆ ಮಾಡಲಿದ್ದು, ಹಿರಿಯ ಪತ್ರಕರ್ತೆ ಶಾಂತಲಾ ಧರ್ಮರಾಜ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಯಕರ್ ಎಸ್.ಎಂ ಅವರು ಮುಖ್ಯ ಅತಿಥಿಯಾಗಿ, ಪಿಎಂ ಉಷಾ ಸಂಯೋಜಕರಾದ ಪ್ರೊ.ಹನುಮಂತಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಂಯೋಜಕರಾದ ಡಾ. ರಾಜೇಶ್ವರಿ ಆರ್, ಅಧ್ಯಕ್ಷತೆ ವಹಿಸಲಿದ್ದು, ಸಹ ಪ್ರಾಧ್ಯಾಪಕರಾದ ಡಾ. ವಾಹಿನಿ, ಡಾ.ಟಿ. ಶ್ರೀಪತಿ, ಸಿಂಡಿಕೇಟ್ ಸದಸ್ಯರು ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಫೆ. 3ರಂದು ಮಧ್ಯಾಹ್ನ 2 ಗಂಟೆಗೆ ರಿಪಬ್ಲಿಕ್ ಕನ್ನಡ ವಾಹಿನಿಯ ನಿರೂಪಕಿ ಸ್ಮಿತಾ ರಂಗನಾಥ್ ಅವರು ‘ಆಂಕರಿಂಗ್ ಟೆಕ್ನಿಕ್ಸ್’ ಕುರಿತು ವಿಷಯ ಮಂಡಿಸಲಿದ್ದಾರೆ. ಫೆ.4 ರಂದು ವಿಜಯ ಕರ್ನಾಟಕ ದಿನಪತ್ರಿಕೆ ಮುಖ್ಯ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ ಅವರು…
ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಆಯ-ವ್ಯಯ, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೇಶದ ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು, ರೈತರ ಆದಾಯ ಹೆಚ್ಚಿಸುವಂಥ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ ಎಂದಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರು, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿನ ಮಹಾನಗರಗಳ ಸುರಕ್ಷತೆಗೆ ಮತ್ತು ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ನೀಡುವ ನಿರೀಕ್ಷೆಯು ಹುಸಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಜನತೆಗೆ ಬಜೆಟ್‌ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ…
ನವದೆಹಲಿ: ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಹೆಚ್ಚಿನ ವೈದ್ಯಕೀಯ ಸೀಟುಗಳು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಸೀತಾರಾಮನ್ ಹೇಳಿದರು. ಈ ಹಿಂದೆ ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಲಾದ ಆದಾಯ ತೆರಿಗೆ ಸರಳೀಕರಣ ಪೂರ್ಣಗೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು, ಇದಕ್ಕೆ ಸಂಬಂಧಿಸಿದ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ತರಲಾಗುವುದು ಎಂದು ಹೇಳಿದರು. ಇಂಧನ ಸುರಕ್ಷತೆಯನ್ನು ಸಾಧಿಸುವ ಉದ್ದೇಶದಿಂದ ಪರಮಾಣು ಶಕ್ತಿ ಕಾಯ್ದೆ ಮತ್ತು ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಗೆ ಎರಡು ತಿದ್ದುಪಡಿಗಳನ್ನು ಮಾಡಲಾಗುವುದು ಎಂದು ಹೇಳಿದರು. ಇಂದು ಮಂಡಿಸಲಾದ ಕೇಂದ್ರ ಬಜೆಟ್ ‘ವಿಕ್ಷಿತ್ ಭಾರತ್’ ಬಗ್ಗೆ ಹಲವಾರು ವಿಷಯಗಳನ್ನು ಹೇಳುತ್ತದೆ, ಆದರೆ ಇದು ಗ್ರಾಮೀಣ ಸಮೃದ್ಧಿ ಮತ್ತು…
ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡಿಸಿದಂತ ನಿರ್ಮಲಾ ಸೀತಾರಾಮನ್ ಅವರು, ಹೊಸ ದಾಖಲೆ ಬರೆದಿದ್ದಾರೆ. ಅದೇ ಸುದೀರ್ಘ 77 ನಿಮಿಷಗಳ ಕಾಲ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2025 ರ ಬಜೆಟ್ ಅನ್ನು ಮಂಡಿಸಿದರು. ಸೀತಾರಾಮನ್ ಸತತ 8 ನೇ ಬಾರಿಗೆ ದೇಶದ ಬಜೆಟ್ ಮಂಡಿಸಿದ್ದಾರೆ. ರೈತರಿಂದ ಮಧ್ಯಮ ವರ್ಗದವರೆಗೆ, ತೆರಿಗೆಗಳು, ಔಷಧಿಗಳು, ಯಾವುದನ್ನು ಅಗ್ಗಗೊಳಿಸಲಾಗುತ್ತದೆ. ಯಾವುದನ್ನು ದುಬಾರಿಯಾಗಿಸಲಾಗುತ್ತದೆ ಎಂಬುದರ ಕುರಿತು ಹಣಕಾಸು ಸಚಿವರು ಮಾಹಿತಿಯನ್ನು ನೀಡಿದರು. ಇದನ್ನು ಗಮನದಲ್ಲಿಟ್ಟುಕೊಂಡು, ನಿರ್ಮಲಾ ಸೀತಾರಾಮನ್ ಅವರು ಇಲ್ಲಿಯವರೆಗೆ ಬಜೆಟ್ ಮಂಡಿಸುವಾಗ ಸಂಸತ್ತಿನಲ್ಲಿ ಎಷ್ಟು ಸಮಯದವರೆಗೆ ಭಾಷಣ ಮಾಡಿದ್ದಾರೆ ಎಂದು ನಮಗೆ ತಿಳಿಸೋಣ. 2025 ರ ಬಜೆಟ್ ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 1 ಗಂಟೆ 17 ನಿಮಿಷಗಳ ಭಾಷಣ ಮಾಡಿದರು, ಅಂದರೆ, ಅವರು 77 ನಿಮಿಷಗಳ ಕಾಲ ಭಾಷಣ ಮಾಡಿದರು. ಹಣಕಾಸು ಸಚಿವರು 2025 ರ ದೇಶದ…
ಮಂಡ್ಯ : ಸಿಎಂ ಸಿದ್ಧರಾಮಯ್ಯ ಅವರ ವಾರ್ನಿಂಗ್ ನಡುವೆಯೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಈಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಾಯಿಯ ಸಾವಿನ ಸುದ್ದಿಯನ್ನು ಕೇಳಿದಂತ ಪುತ್ರ ರಂಜಿತ್ ಎಂಬುವರು ಹಲಗೂರು ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದಹಾಗೇ ಪ್ರೇಮಾ ಅವರು ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲದ ಕಂತು ಕಟ್ಟದ ಕಾರಣಕ್ಕೆ ಬ್ಯಾಂಕ್ ಸಿಬ್ಬಂದಿ ಪ್ರೇಮಾ ಅವರ ಮನೆ ಸೀಜ್ ಮಾಡಿದ್ದರಂತೆ. ಈ ಕಾರಣಕ್ಕೆ ಮನನೊಂದು ಪ್ರೇಮಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಪುತ್ರನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಂಡ್ಯದಲ್ಲಿ ತಾಯಿ-ಮಗ…
ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು. https://kannadanewsnow.com/kannada/the-government-has-taken-this-important-decision-to-curb-the-harassment-of-microfinance-in-the-state/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. 1. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. 2. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. 3. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು. 4. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. 5. ಯಾವುದೇ…
ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟ್ 2025 ಅನ್ನು “ಗುಂಡು ಗಾಯಗಳಿಗೆ ಬ್ಯಾಂಡ್-ಏಡ್” ಎಂದು ಕರೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಬಜೆಟ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ” ಎಂದು ಅವರು ಹೇಳಿದರು. https://twitter.com/RahulGandhi/status/1885625128450658337 fಇಂದಿನ ಕೇಂದ್ರ ಬಜೆಟ್ ಗುಂಡು ಗಾಯಗಳಿಗೆ ಬ್ಯಾಂಡ್-ಏಡ್! ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/this-is-a-very-disappointing-short-sighted-budget-siddaramaiah/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/
ಮೈಸೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಆದರೇ ಇಂದು ಬಹಳ ನಿರಾಶಾದಾಯಕ, ದೂರದೃಷ್ಠಿಯಿಲ್ಲದ ಬಜೆಟ್ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನೀರಾವರಿ ಯೋಜನಗೆಳಇಗೆ ಅನುದಾನ ನೀಡಿಲ್ಲ. ರಾಜ್ಯದ ನೀರಾವರಿ ಯೋಜನಗೆಳ ಬಗ್ಗೆ ಪ್ರಸ್ತಾಪಿಸಿಲ್ಲ. ರಾಯಚೂರು ಏಮ್ಸ್ ಘೋಷಿಸೋ ನಿರೀಕ್ಷೆ ಇತ್ತು. ಕೇಂದ್ರ ಸಚಿವ ನಡ್ಡಾ ಕೂಡ ಭರವಸೆ ನೀಡಿದ್ದರು. ಬಜೆಟ್ ನಲ್ಲಿ ಏಮ್ಸ್ ಬಗ್ಗೆ ಯಾವ ಪ್ರಸ್ತಾಪವಿಲ್ಲ ಎಂದರು. ಬೆಂಗಳಊರು ರಾಜಕಾಲುವೆ ನಿರ್ವಹಣೆಗೆ ಬ್ಯುಸಿನೆಸ್ ಕಾರಿಡಾರ್ ಗೆ ನಾವು ಹಣ ಕೇಳಿದ್ದವು. ನಮಗೆ ಕೇಂದ್ರ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ. ಇಂದಿನ ಕೇಂದ್ರ ಬಜೆಟ್ ದೂರದೃಷ್ಠಿಯಿಲ್ಲದ, ನಿರಾಶಾದಾಯಕ ಬಜೆಟ್ ಆಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. https://kannadanewsnow.com/kannada/increase-honorarium-for-anganwadi-workers-as-mentioned-in-manifesto-r-ashoka/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/











