Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಿದೆ. ಈ ಕುರಿತಂತೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು – ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಹೀಗಿವೆ ದೀಪಾವಳಿ ಹಬ್ಬದ ಪ್ರಯುಕ್ತ ಸಂಚರಿಸಲಿರುವಂತ ವಿಶೇಷ ರೈಲುಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06209/06210) ರೈಲು ಸಂಚಾರ ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ, ಅರ್ಹತೆಯನ್ನು ಪಡೆದಂತ ಅಭ್ಯರ್ಥಿಯಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ. ದಿನಾಂಕ 18-10-2024ರಲ್ಲಿ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಯನ್ನು ದಿನಾಂಕ 01-02-2023ರ ಸುತ್ತೋಲೆಯ ಅನ್ವಯ ತಯಾರಿಸಿ ಪ್ರಕಟಿಸಲಾಗಿದೆ. ದಿನಾಂಕ 06-06-2020ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ…
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಹಾಸನಾಂಬ ದೇವಿಯ ದೇವಾಲಯವಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವಂತ ಹಾಸನಾಂಬೆ ತಾಯಿಯ ಬಾಗಿಲು ತೆರೆಯೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.24ರಂದು ಮಧ್ಯಾಹ್ನ 12ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಂತ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರು, ಹಾಸನಾಂಬ ದೇವಾಲಯವು ಅಕ್ಟೋಬರ್.24ರಂದು ಮಧ್ಯಾಹ್ನ 12 ಗಂಟೆಗೆ ಬಾಗಿಲು ತೆರೆಯಲಿದೆ. ಆದರೇ ಮೊದಲ ದಿನವಾದಂತ ಅಂದು ಭಕ್ತರಿಗೆ ಹಾಸನಾಂಬ ದರ್ಶನಕ್ಕೆ ಅವಕಾಶವಿಲ್ಲ ಎಂದರು. ಮೊದಲ ಮತ್ತು ಕೊನೆಯ ದಿನದಂದು ಹಾಸನಾಂಬ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುವುದಿಲ್ಲ. ಅಕ್ಟೋಬರ್.25ರಿಂದ 11 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಿಯ ದರ್ಶನಕ್ಕೆ ಟಿಕೆಟ್ ಖರೀದಿಸಿಯೂ ಭಕ್ತರು ದರ್ಶನ ಮಾಡಬಹುದಾಗಿದೆ. 1000 ಹಾಗೂ 300 ರೂ ಟಿಕೆಟ್ ಖರೀದಿಸಿದವರಿಗೆ ಒಂದೊಂದು ಲಾಡು, ಪ್ರಸಾದವನ್ನು ವಿತರಿಸುವುದಾಗಿ ತಿಳಿಸಿದರು. ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ…
ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂಬುದಾಗಿ ಸಿ.ಪಿ ಯೋಗೇಶ್ವರ್ ಅವರು ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದಂತ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಂತ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಆನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/cp-yogeshwar-meets-speaker-horatti-and-formally-resigns-from-mlc-post/
ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದರು. ಆದರೇ ಅವರಿಗೆ ಬಿಜೆಪಿ ನೀಡುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳೇ ಆ ಕ್ಷೇತ್ರದಲ್ಲಿ ನಿಲ್ಲುವುದು ಖಚಿತವಾಗಿತ್ತು. ಈ ಸುಳಿವು ಅರಿತಂತ ಸಿಪಿ ಯೋಗೇಶ್ವರ್ ಅವರು, ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ನೀಡಿದ್ದಾರೆ. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/breaking-upsc-engineering-exam-2025-mains-exam-postponed-upsc-exam/
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ಹಾನಿ ಪರಿಶೀಲನೆ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು. ಕಳೆದೊಂದು ತಿಂಗಳಿಂದ ಪ್ರವಾಹ ಸಂಬಂಧದ ಸಭೆಯೇ ನಡೆದಿಲ್ಲ. ಸರ್ಕಾರ ಕೂಡಲೇ ಸಭೆ ಕರೆದು ಕನಿಷ್ಠ 5,000 ಕೋಟಿ ರೂ. ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ವಿಶೇಷವಾಗಿ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. 16 ತಿಂಗಳ ಕಾಂಗ್ರೆಸ್ ಸರ್ಕಾರದ…
ಶಿವಮೊಗ್ಗ: ರಾಜ್ಯ, ಹೊರ ರಾಜ್ಯ, ದೇಶ-ವಿದೇಶಗಳಲ್ಲಿ ಡೊಳ್ಳು ಕುಳಿತದ ಮೂಲಕ ಕರುನಾಡಿನ ವಿಶಿಷ್ಠ ಕಲೆಯನ್ನು ಪ್ರದರ್ಶಿಸಿದಂತ ಕಲಾವಿದನಿಗೆ, ನಾಲ್ಕೈದು ಬಾರಿ ಅರ್ಜಿ ಸಲ್ಲಿಸಿದರು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡದೇ ಇರುವುದು ವಿಪರ್ಯಾಸವೇ ಸರಿ. ರಾಜ್ಯೋತ್ಸವ ಪ್ರಶಸ್ತಿಗೂ ರೆಕಮೆಂಡೇಷನ್, ರಾಜಕೀಯ ನಾಯಕರ ಪ್ರಭಾವ ಬಳಸಿ ಈ ಕಲಾವಿದ ಪಡೆಯ ಬೇಕೋ ಅಥವಾ ಕುರುನಾಡಿನ ಕೀರ್ತಿ ದೇಶ-ವಿದೇಶಗಳಲ್ಲಿ ಸಾರಿದಂತ ನಿಜ ಕಲಾವಿದನ ಕಲಾ ಸೇವೆ ಗುರ್ತಿಸಿ ಈ ಬಾರಿ 2024ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾರೆ ಸಚಿವ ಶಿವರಾಜ ತಂಡರಿಗೆ ಎಂಬ ನಿರೀಕ್ಷೆಯಲ್ಲಿ ಡೊಳ್ಳು ಕಲಾವಿದ ಜಿ.ಸಿ ಮಂಜಪ್ಪ ಇದ್ದಾರೆ. ಹಾಗಾದ್ರೇ ಅವರ ಸಾಧನೆಯ ಏನು.? ರಾಜ್ಯೋತ್ಸವ ಪ್ರಶಸ್ತಿ ನೀಡುವ ಮಟ್ಟದ ಕಲಾಸಿರಿವಂತಿಕೆ ಮೆರೆದು, ಜನಜನಿತರೇ ಎನ್ನುವ ಬಗ್ಗೆ ಅವರ ಸಾಧನೆ ಮುಂದಿದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಣ್ಣೂರು ಗ್ರಾಮದ ಜಿ.ಸಿ ಮಂಜಪ್ಪ ಅವರು ಅಂತರಾಷ್ಟ್ರೀಯ ಡೊಳ್ಳಿನ ತಂಡದ ಮುಖ್ಯ ಕಲಾವಿದ ಎಂಬುದಾಗಿಯೇ ಪ್ರಸಿದ್ಧಿ. 2019ನೇ ಸಾಲಿನ ಜಾನಪದ ಆಕಾಡೆಮಿ ವಾರ್ಷಿಕ ಪ್ರಶಸ್ತಿ,…
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಸೋಮವಾರ ಗಂಡರ್ಬಾಲ್ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬುಡ್ಗಾಮ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ವಿಧಾನಸಭೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸ್ಪೀಕರ್ ಹಂಗಾಮಿ ಮುಬಾರಕ್ ಗುಲ್ ಈ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ, ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಗೆಲುವು ಸಾಧಿಸಿದ ನಂತರ ಅಬ್ದುಲ್ಲಾ ಬುಡ್ಗಾಮ್ನಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನ್ಯಾಷನಲ್ ಕಾನ್ಫರೆನ್ಸ್ ನಾಯಕನಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಜಮ್ಮುವಿನ ನೌಶೇರಾ ಶಾಸಕ ಸುರಿಂದರ್ ಕುಮಾರ್ ಅವರು ಇತರ ಸಚಿವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ನಂತರ, ಒಮರ್ ಅಬ್ದುಲ್ಲಾ ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ನಲ್ಲಿ ಗೌರವ ರಕ್ಷೆ ಸ್ವೀಕರಿಸಿದರು ಮತ್ತು ವಿವಿಧ ಇಲಾಖೆಗಳ…
ನವದೆಹಲಿ: ಹಬ್ಬದ ಋತುವಿನಲ್ಲಿ ಭಾರತವು ಸದ್ದು ಮಾಡುತ್ತಿದ್ದಂತೆ, ಆನ್ಲೈನ್ ಶಾಪಿಂಗ್ ಪ್ಲಾಟ್ಫಾರ್ಮ್ಗಳು ಬ್ಯಾಕ್-ಟು-ಬ್ಯಾಕ್ ಮಾರಾಟವನ್ನು ಆಯೋಜಿಸುತ್ತಿವೆ. ಬಳಕೆದಾರರಿಗೆ ಹಲವಾರು ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತಿವೆ. ಉತ್ತಮ ಡೀಲ್ ಗಳನ್ನು ಪಡೆಯಲು ಶಾಪರ್ ಗಳು ಇ-ಕಾಮರ್ಸ್ ಸೈಟ್ ಗಳಿಗೆ ಧಾವಿಸುತ್ತಿದ್ದಾರೆ. ಇದನ್ನೇ ಬಂಡವಾಳವಾಗಿ ಮಾಡಿಕೊಂಡ ವಂಚಕರು, ಆನ್ ಲೈನ್ ವಂಚನೆಯಲ್ಲಿ ಗ್ರಾಹಕರನ್ನು ವಂಚಿಸೋದಕ್ಕೆ ಹಲವು ದಾರಿಯನ್ನು ಕಂಡುಕೊಂಡಿದ್ದಾರೆ. ಹೀಗಾಗಿ ನೀವು ಆನ್ ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುತ್ತಿದ್ದರೇ, ಅದಕ್ಕೂ ಮುನ್ನ ಈ ಕೆಳಕಂಡ ಕೆಲ ಎಚ್ಚರಿಕೆಯನ್ನು ವಹಿಸೋದು ಮರೆಯಬೇಡಿ. ನಿಮ್ಮ ನೆಚ್ಚಿನ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಬೇರೆಡೆ ಸಿಗುತ್ತವೇ ಅಂದ್ರೆ ಯಾರು ತಾನೆ ಆಸೆ ಪಡೋದಿಲ್ಲ ಹೇಳಿ.? ಸೋ ಹಾಗಂತ ನೀವು ಈ ಹಬ್ಬದ ಹೊತ್ತಲ್ಲೇ ಅಧಿಕೃತ ವೆಬ್ ಸೈಟ್ ಹೊರತಾಗಿ, ಬೇರೆ ಆಮಿಷಗಳನ್ನು ಒಳಗೊಂಡ ವೆಬ್ ಸೈಟ್ ಗೆ ಭೇಟಿ ನೀಡಿ ಖರೀದಿಸಿದ್ದೇ ಆದ್ರೇ, ನೀವು ವಂಚನೆ ಒಳಗಾಗೋದು ಗ್ಯಾರಂಟಿ. ಮೋಸದ ಮೂಲಕ ನಿಮ್ಮ ಖಾತೆಯ ಹಣ ಸೈಬರ್ ವಂಚಕರ…
ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು…