Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗೌರಿ ಗಣೇಶ ಹಬ್ಬದ ಕಾರಣ ಸಾಲು ಸಾಲು ರಜೆಯಿದೆ. ಹೀಗಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿವಿಧ ಊರುಗಳಿಗೆ ತೆರಳುವುದಕ್ಕೆ ಜನ ಜಂಗುಳಿಯೇ ಏರ್ಪಟ್ಟಿದೆ. ಇಂತಹ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ 1500 ಕೆ ಎಸ್ ಆರ್ ಟಿಸಿ ಬಸ್ ಅಲ್ಲದೇ, ಹೆಚ್ಚುವರಿಯಾಗಿ ಬಿಎಂಟಿಸಿಯಿಂದ 200ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ,…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League -IPL) 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ( Rajasthan Royals ) ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ( Rahul Dravid ) ಅವರನ್ನು ನೇಮಕ ಮಾಡಲಾಗಿದೆ. ದ್ರಾವಿಡ್ ತಕ್ಷಣದಿಂದ ಜಾರಿಗೆ ಬರುವಂತೆ ಫ್ರಾಂಚೈಸಿಯ ಮುಖ್ಯ ತರಬೇತುದಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಮುಂಬರುವ ಮೆಗಾ ಹರಾಜು ಸೇರಿದಂತೆ 2025 ರ ಋತುವಿನ ಯೋಜನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರಾಜಸ್ಥಾನ್ ರಾಯಲ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವಾಪಸಾಗಲಿದ್ದಾರೆ ಎಂದಿದೆ. ಕ್ರಿಕೆಟ್ ಐಕಾನ್ ತನ್ನ ಗುಲಾಬಿ ಜರ್ಸಿಯನ್ನು ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲಶ್ ಮೆಕ್ಕ್ರಮ್ ಅವರಿಂದ ಸ್ವೀಕರಿಸುವಾಗ ಸೆರೆಹಿಡಿಯಲಾಯಿತು. ಬೆಂಗಳೂರಿನಲ್ಲಿ ಸಹಿ ಹಾಕಲಾಗುತ್ತಿರುವ ಒಪ್ಪಂದವನ್ನು ಸೆರೆಹಿಡಿಯಲು ಆರ್ ಆರ್ ಅಡ್ಮಿನ್ ಕೂಡ ಹಾಜರಿದ್ದರು ಎಂದು ನಂಬಲಾಗಿದೆ ಎಂದು ಹೇಳಿದೆ. “ವಿಶ್ವಕಪ್…
ಶಿವಮೊಗ್ಗ : ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಹರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ಅನ್ಲೈನ್ ಕೌನ್ಸಲಿಂಗ್ಗೆ ಅರ್ಜಿ ಆಹ್ವಾನ ಶಿವಮೊಗ್ಗದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 06ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/breaking-instagram-star-younis-zaroora-taken-into-police-custody-in-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/
ಶಿವಮೊಗ್ಗ : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಸೆ. 10 ರಿಂದ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 10 ರಂದು ನೆಹರು ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್ 14 ರಂದು ನೆಹರೂ ಮೈದಾನ, ಸಾಗರದಲ್ಲಿ, ಸೆಪ್ಟೆಂಬರ್ 15 ರಂದು ವಿ.ಐ.ಎಸ್.ಎಲ್ ಕ್ರೀಡಾಂಗಣ ಭದ್ರಾವತಿ ಮತ್ತು ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ, ಸೆಪ್ಟೆಂಬರ್ 17 ರಂದು ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ ಮತ್ತು ತಾಲ್ಲೂಕು ಕ್ರೀಡಾಂಗಣ ಹೊಸನಗರದಲ್ಲಿ, ಸೆಪ್ಟೆಂಬರ್ 18 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ನಿಯಮಗಳು: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗುವುದು. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು…
ಶಿವಮೊಗ್ಗ : ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದುದಿಲ್ಲ. ಸಾಗರ ತಾಲ್ಲೂಕಿನ ತಲವಾಟ 01, ಎಸ್.ಎಸ್ ಭೋಗ್ 01, ಉಳ್ಳೂರು 01, ತೀರ್ಥಹಳ್ಳಿ ತಾಲ್ಲೂಕಿನ ಹಾರೊಗೊಳಿಗೆ 01, ಅರಳಸುರಳಿ 01,…
ಬೆಂಗಳೂರು : ಪಾವಗಡದ ಸೋಲಾರ್ ಪಾರ್ಕ್ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಸೌರ ವಿದ್ಯುತ್ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್ ಅವರು, ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿರುವುದರಿಂದ ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ ಎಂದು ತಿಳಿಸಿದ್ದಾರೆ. 2044ರ ಹಣಕಾಸು ವರ್ಷದವರೆಗೆ ಪ್ರತಿ ಕಿ.ವ್ಯಾ.ಹೆಚ್.ಗೆ 2.89 ರೂ.ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಿದ್ದು, ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತವು 2024ರ ಜುಲೈ 22 ರಂದು ಒಪ್ಪಿಗೆ ಪತ್ರ ನೀಡಿತ್ತು. ನಂತರ ಈ ವಿದ್ಯುತ್ ಖರೀದಿ ಒಪ್ಪಿಗೆ ಏರ್ಪಟ್ಟಿದೆ ಎಂದು ಹೇಳಿದ್ದಾರೆ.…
ಬೆಂಗಳೂರು: ನಾಳೆಯಿಂದ ಗಣೇಶ ಚತುರ್ಥಿ ಹಬ್ಬ ಆರಂಭಗೊಳ್ಳಲಿದೆ. ರಾಜ್ಯ, ದೇಶ, ವಿದೇಶದಲ್ಲೂ ಮೂಷಿಕನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕರು ಗಣೇಶೋತ್ಸವದ ವೇಳೆಯಲ್ಲಿ ಕಡ್ಡಾಯವಾಗಿ ಈ ಕೆಲ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರದ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್ ಅವಘಡಗಳಾಗದಂತೆ ಎಚ್ಚರವಹಿಸಿ…
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು ಮುಂದಿನ ವರ್ಷದ ಪರೀಕ್ಷೆಗೆ ಅಂಕ ಯೋಜನೆಯನ್ನು ಬಿಡುಗಡೆ ಮಾಡಿದೆ. ಸಿಬಿಎಸ್ಇ ಬೋರ್ಡ್ ಪರೀಕ್ಷೆ 2025 ರಲ್ಲಿ ಹಾಜರಾಗುವ ವಿದ್ಯಾರ್ಥಿಗಳು ಅದನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಬಹುದು. ಪಠ್ಯಕ್ರಮದ ಏಕರೂಪತೆ ಮತ್ತು ಸರಿಯಾದ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವುದು ಮಾದರಿ ಪ್ರಶ್ನೆ ಪತ್ರಿಕೆಗಳು (ಎಸ್ಕ್ಯೂಪಿಗಳು) ಮತ್ತು ಮಾರ್ಕಿಂಗ್ ಸ್ಕೀಮ್ಗಳನ್ನು (ಎಂಎಸ್) ಬಿಡುಗಡೆ ಮಾಡುವ ಉದ್ದೇಶವಾಗಿದೆ. ಇದು ಪ್ರಶ್ನೆ ಪತ್ರಿಕೆಯ ವಿನ್ಯಾಸದ ಬಗ್ಗೆ ವಿಶಾಲವಾದ ತಿಳುವಳಿಕೆಯನ್ನು ನೀಡುತ್ತದೆ. ‘ಎಸ್ಕ್ಯೂಪಿಗಳು ಪ್ರಶ್ನೆ ಪತ್ರಿಕೆ ವಿನ್ಯಾಸದ ಬಗ್ಗೆ ವಿಶಾಲವಾದ ತಿಳುವಳಿಕೆಯನ್ನು ನೀಡುತ್ತವೆ ಮತ್ತು ನಿಜ ಜೀವನದಲ್ಲಿ ಪರಿಕಲ್ಪನೆಗಳ ಅನ್ವಯವನ್ನು ಉತ್ತೇಜಿಸುವ ಒಟ್ಟಾರೆ ಗಮನದೊಂದಿಗೆ ತರಗತಿಯ ಬೋಧನೆ ಮತ್ತು ಕಲಿಕೆಯ ಚಟುವಟಿಕೆಗಳಿಗೆ ಬಳಸಬೇಕಾಗಿದೆ’ ಎಂದು ಅಧಿಕೃತ ನೋಟಿಸ್ನಲ್ಲಿ ತಿಳಿಸಲಾಗಿದೆ. 10 ಮತ್ತು 12 ನೇ ತರಗತಿಗಳಿಗೆ ಇಂಗ್ಲಿಷ್, ಗಣಿತ, ಹಿಂದಿ, ಸಮಾಜ ವಿಜ್ಞಾನ, ವಿಜ್ಞಾನ, ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ…
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷಿಕ ಕನಿಷ್ಟ 40 ಸಾವಿರ ರೂ. ಉಳಿತಾಯವಾಗಲಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್ಗೆ 1.25 ರೂ. ಮಾತ್ರ ಪಾವತಿ ಮಾಡಬೇಕು. ಸರ್ಕಾರದ ಈ ಕ್ರಮದಿಂದ 4 ಸಾವಿರ ಘಟಕಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದುವರೆಗೆ ಮಾಸಿಕ 500 ಯೂನಿಟ್ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು. ಹೆಚ್ಚುವರಿ ಬಳಕೆಯ ವಿದ್ಯುತ್ಗೆ ನೇಕಾರರು ವಿದ್ಯುತ್ ಕಂಪನಿಗಳು ನಿಗದಿಪಡಿಸಿರುವ ದರದಲ್ಲಿ ವಿದ್ಯುತ್ ಶುಲ್ಕ ಪಾವತಿಸಬೇಕಿತ್ತು. ಸರ್ಕಾರ ಸಬ್ಸಿಡಿ ಮಿತಿ ರದ್ದುಪಡಿಸಿರುವುದರಿಂದ ಮಾಸಿಕ ಎಷ್ಟೇ ಯೂನಿಟ್ ವಿದ್ಯುತ್ ಬಳಕೆ ಮಾಡಿದರೂ 1.25 ರೂ. ದರ ವಿಧಿಸಲಾಗುವುದು ಎಂದು ವಿವರಿಸಿದರು. ನಮ್ಮ ಸರ್ಕಾರ…
ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಸೆ.5ರ ಗುರುವಾರದಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಿದೆ. ಎಫ್ ಎ ಕ್ಯೂ ಗುಣಮಟ್ಟದ ಸೋಯಾಬಿನ್ ಗೆ ಕ್ವಿಂಟಲ್ ಗೆ 4,892 ರೂ ಹಾಗೂ ಉದ್ದಿನ ಕಾಳಿಗೆ ಕ್ವಿಂಟಲ್ ಗೆ 7,400 ರೂ. ಬೆಲೆ ನಿಗದಿಪಡಿಸಲಾಗಿದೆ.…