Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಗ್ರಾಹಕರ ವೇದಿಕೆಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನು ನಿಯಮಾನುಸಾರ ಮಾಡಬೇಕಾಗಿರುತ್ತದೆ ಖಾಲಿ ಇರುವ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳಿಗೆ ನೇಮಕಾತಿ ಕೋರಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗ 02-05-2024 ರಂದು ಪ್ರಸ್ತಾವನೆ ಸಲ್ಲಿಸಿರುತ್ತದೆ ಮುತ್ತದ ನಂತರವೂ ಅನೇಕ ಹುದ್ದೆಗಳು ಖಾಲಿಯಾಗಿದ್ದು ಇಲಿಯವರೆಗೆ ನೇಮಕಾತಿ ಆಗಿರುವುದಿಲ್ಲ ಇದರಿಂದ ವಿವಿಧ ಗ್ರಾಹಕರ ನ್ಯಾಯಾಲಯದಲ್ಲಿ ಸಾವಿರಾರು ಪ್ರಕರಣಗಳು ವಿಚಾರಣೆಗೆ ಬಾಕಿ ಇರುತ್ತದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಗ್ರಾಹಕರ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಹೈಕೋರ್ಟ್ ನ ನಿವೃತ್ತ…

Read More

ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ 2024ಕ್ಕೆ ಬಿಜೆಪಿಯಿಂದ ಇಂದು 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ತನ್ನ ಹುರಿಯಾಳುಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶನಿವಾರ ಸಂಜೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಚಂಪೈ ಸೊರೆನ್ ಅವರನ್ನು ಸೆರೈಕೆಲಾದಿಂದ ನಾಮನಿರ್ದೇಶನ ಮಾಡಿದೆ. ಸೊರೆನ್ 1991 ರಿಂದ ಸೆರೈಕೆಲಾದಲ್ಲಿ ಗೆಲ್ಲುತ್ತಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ ತಮ್ಮ ಮಾಜಿ ಪಕ್ಷ ಮತ್ತು ಅದರ ಸಮ್ಮಿಶ್ರ ಪಾಲುದಾರ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಏತನ್ಮಧ್ಯೆ, ಜಾರ್ಖಂಡ್ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ ಧನ್ವಾರ್ ನಿಂದ ಸ್ಪರ್ಧಿಸಲಿದ್ದಾರೆ. ಪಕ್ಷದ ರಾಜ್ಯ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಧನ್ವಾರ್ನಿಂದ, ಲೋಬಿನ್ ಹೆಂಬ್ರೋಮ್ ಬೊರಿಯೊದಿಂದ, ಸೀತಾ ಸೊರೆನ್ ಜಮ್ತಾರಾದಿಂದ, ಮಾಜಿ ಸಿಎಂ ಚಂಪೈ ಸೊರೆನ್ ಸರೈಕೆಲ್ಲಾದಿಂದ, ಗೀತಾ ಬಾಲ್ಮುಚು ಚೈಬಾಸಾದಿಂದ, ಗೀತಾ ಬಾಲ್ಮುಚು ಜಗನ್ನಾಥಪುರದಿಂದ, ಮೀರಾ ಮುಂಡಾ ಪೋಟ್ಕಾದಿಂದ ಸ್ಪರ್ಧಿಸಲಿದ್ದಾರೆ.…

Read More

ಹುಬ್ಬಳ್ಳಿ:  ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಯಾವುದೇ ಪಾತ್ರವಿಲ್ಲ ಎಂಬುದಾಗಿ ದೂರುದಾರೆ ಸುನೀತಾ ಚೌವ್ಹಾಣ್ ಸ್ಪಷ್ಟ ಪಡಿಸಿದ್ದಾರೆ. ಇಂದು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಯಾವುದೇ ಪಾತ್ರವಿಲ್ಲ. ಬದಲಾಗಿ ಅವರ ಹೆಸರನ್ನು ಸಹೋದರ ಗೋಪಾಲ್ ಜೋಶಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದರು. ತಾನು ಪ್ರಕರಣ ಸಂಬಂಧ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಆ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗಿದ್ದೆನು. ವಂಚನೆ ಪ್ರಕರಣ ಸಂಬಂಧ ಪೊಲೀಸರು ಕೇಳಿದಂತ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ.  ಟಿಕೆಟ್ ಕೊಡಿಸುವುದಾಗಿ ಗೋಪಾಲ್​ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ.…

Read More

ಹಾಸನ: ಜಿಲ್ಲೆಯ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತವಾಗಿದೆ. ಈ ಅಪಘಾತದಲ್ಲಿ ಸಿಐಡಿ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ನಗರದಿಂದ ಅರಕಲಗೂಡಿಗೆ ಖಾಸಗಿ ಕೆಲಸ ನಿಮಿತ್ತ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಎರಿಟಿಗಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನದ ಕಡೆಯಿಂದ ಬರುತ್ತಿದ್ದಂತ ಇನ್ನೋವಾ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾಗಿದೆ. ಇನ್ನೋವಾ ಕಾರು ಹಾಗೂ ಎರಿಟಿಗಾ ಕಾರಿನ ನಡುವೆ ನಡೆದಂತ ಅಪಘಾತದಲ್ಲಿ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ.ಮಂಜು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಪೋಟೋಗಳು ವೈರಲ್ ಆಗಿದ್ದಾವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿರ್ಮಾಪಕ ಕೆ.ಮಂಜು ಅವರು, ವೈದ್ಯರ ಸಲಹೆ ಮೇರೆಗೆ ಜನರಲ್ ಬಾಡಿ ಚೆಕಪ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದೆನು ಎಂದಿದ್ದಾರೆ. ನನಗೆ ಈ ಹಿಂದೆ ಆಪರೇಷನ್ ಆಗಿತ್ತು, ಅದರ ನೋವು ಕೂಡ ಸಣ್ಣದಾಗಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲೂ ಆಸ್ಪತ್ರೆಗೆ ದಾಖಲಾಗಿ ಇಸಿಜಿ ಸೇರಿದಂತೆ ಇತರೆ ಪರೀಕ್ಷೆಗೆ ಒಳಗಾಗಿದ್ದೇನೆ. ನಾನು ಆರೋಗ್ಯವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/fir-filed-against-sandalwood-actor-mayur-patel-over-land-dispute/ https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/

Read More

ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು. ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. 2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು. ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. 2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು…

Read More

ಬೆಂಗಳೂರು: ಭೂಮಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಾಂಧಲೆ ನಡೆಸಿದ ಕಾರಣ, ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 14.5 ಎಕರೆ ಜಮೀನು ವಿಚಾರ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿತ್ತು. ಹೀಗಿದ್ದರೂ ಕೋರ್ಟ್ ಆದೇಶ ಮೀರಿ ಆ ಜಮೀನಿಗೆ ನಿರ್ಮಿಸಲಾಗಿದ್ದಂತ ಕಾಂಪೌಂಡ್ ಅನ್ನು ಜೆಸಿಬಿ ಕೊಂಡೊಯ್ದು ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಕೆಡವಿ ದಾಂಧಲೆ ನಡೆಸಿದ್ದರು. ಜೊತೆಗೆ ಅಲ್ಲೇ ಶೆಡ್ ಕೂಡ ನಿರ್ಮಿಸಿದ್ದರು. ಈ ಹಿನ್ನಲೆಯಲ್ಲಿ ಜಮೀನು ಮಾಲೀಕರಾದಂತ ಶಾಲಿನಿ ಎಂಬುವರು ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ನಟ ಮಯೂರ್ ಪಟೇಲ್ ವಿರುದ್ಧ ಕೋರ್ಟ್ ಆದೇಶ ಉಲ್ಲಂಘಿಸಿ ದಾಂಧಲೆ ನಡೆಸಿ, ಜಮೀನಿನ ಕಾಂಪೌಂಡ್ ಕೆಡವಿ ಹಾಕಿದ್ದರ ವಿರುದ್ಧ ದೂರು ನೀಡಿದ್ದರು. ಅವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಿದ್ದರು. ಶಾಲಿನಿ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ವಿರುದ್ಧ ಹೆಚ್ ಎಸ್ ಆರ್ ಲೇಔಟ್…

Read More

ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದಾಗ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಬುಜ್ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಹೈದರಾಬಾದ್: ತೆಲಂಗಾಣ ಲೋಕಸೇವಾ ಆಯೋಗ (Telangana Public Service Commission – TPSC) ಗ್ರೂಪ್ 1 ಸೇವೆಗಳ ಆಕಾಂಕ್ಷಿಗಳು ಮುಖ್ಯ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ( Union Minister Bandi Sanjay Kumar ) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ನ ನಾಗರಿಕ ಸೇವೆಗಳು ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸಂಸ್ಥೆಗಳ ಕೇಂದ್ರವಾದ ಅಶೋಕ್ ನಗರದಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಆಕಾಂಕ್ಷಿಗಳನ್ನು ಭೇಟಿಯಾದ ನಂತರ, ಕೇಂದ್ರ ಸಚಿವರು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಮತ್ತು ಆಕಾಂಕ್ಷಿಗಳ ಕಳವಳಗಳನ್ನು ತಿಳಿಸಲು “ಚಲೋ ಸೆಕ್ರೆಟರಿಯೇಟ್” ರ್ಯಾಲಿಯನ್ನು ನಡೆಸಿದರು. ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಮತ್ತು ನೇಮಕಾತಿ ಪ್ರಕ್ರಿಯೆ ಮತ್ತು ಮೀಸಲಾತಿಯ ಮೇಲೆ ಕೆಲವು ಸರ್ಕಾರಿ ಆದೇಶಗಳ ಪರಿಣಾಮದ ಬಗ್ಗೆ ಆಕಾಂಕ್ಷಿಗಳು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. https://kannadanewsnow.com/kannada/farmers-should-not-be-disheartened-state-government-is-pro-farmer-madhu-bangarappa/ https://kannadanewsnow.com/kannada/bengaluru-power-outages-in-these-areas-from-tomorrow-till-october-23/

Read More

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ. ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷö್ಮವಾಗಿದ್ದು ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು. ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ…

Read More