Author: kannadanewsnow09

ಬೆಂಗಳೂರು: ದಿನಾಂಕ 29.01.2025ರ ಬುಧವಾರದ ನಾಳೆ ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 17:30 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜ.29ರ ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ,…

Read More

ಬೆಂಗಳೂರು: ರಾಜ್ಯದ ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ಮೂಲಕ ಇ-ಖಾತಾ ಇಲ್ಲದ ನಗರ ಪ್ರದೇಶದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ…

Read More

ನವದೆಹಲಿ: ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 41 ಎ (ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಸೆಕ್ಷನ್ 35) ಪ್ರಕಾರ ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಆರೋಪಿ / ಶಂಕಿತರಿಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸಿಆರ್ಪಿಸಿ, 1973/ ಬಿಎನ್ಎಸ್ಎಸ್, 2023 ರ ಅಡಿಯಲ್ಲಿ ಗುರುತಿಸಲ್ಪಟ್ಟ ಮತ್ತು ಸೂಚಿಸಿದ ಸೇವಾ ವಿಧಾನಕ್ಕೆ ಪರ್ಯಾಯವಾಗಿ ಅಥವಾ ಬದಲಿಯಾಗಿ ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ನೋಟಿಸ್ ಸೇವೆಯನ್ನು ಪರಿಗಣಿಸಲಾಗುವುದಿಲ್ಲ ಅಥವಾ ಗುರುತಿಸಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಿಆರ್ಪಿಸಿ ಸೆಕ್ಷನ್ 160 / ಬಿಎನ್ಎಸ್ಎಸ್, 2023 ರ ಸೆಕ್ಷನ್ 179 ಮತ್ತು ಸಿಆರ್ಪಿಸಿಯ ಸೆಕ್ಷನ್ 175 / ಬಿಎನ್ಎಸ್ಎಸ್ನ ಸೆಕ್ಷನ್ 195 ರ ಅಡಿಯಲ್ಲಿ ಆರೋಪಿಗಳಿಗೆ ನೋಟಿಸ್ ನೀಡಬಹುದು ಅಥವಾ ಸಿಆರ್ಪಿಸಿ / ಬಿಎನ್ಎಸ್ಎಸ್ ಅಡಿಯಲ್ಲಿ ಸೂಚಿಸಿರುವ ಸೇವಾ ವಿಧಾನದ ಮೂಲಕ ಮಾತ್ರ ನೀಡಬಹುದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ಮತ್ತು ನ್ಯಾಯಮೂರ್ತಿ…

Read More

ಬೆಂಗಳೂರು: ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು. ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

Read More

ಬೆಂಗಳೂರು: “ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲಾ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ…

Read More

ನವದೆಹಲಿ: ದೆಹಲಿಯ ಬುರಾರಿ ಪ್ರದೇಶದಲ್ಲಿ ನಿರ್ಮಾಣ ಹಂತದ 4 ಅಂತಸ್ತಿನ ಕಟ್ಟಡವೊಂದು ಕುಸಿದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (Delhi Fire Services -DFS) ಇಲಾಖೆ ತಿಳಿಸಿದೆ. ಡಿಎಫ್ಎಸ್ ಪ್ರಕಾರ, ಬುರಾರಿಯ ಕೌಶಿಕ್ ಎನ್ಕ್ಲೇವ್ನ ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿಯ ಮನೆಯೊಳಗೆ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈಗಾಗಲೇ 8 ಮಂದಿಯನ್ನು ರಕ್ಷಿಸಲಾಗಿದೆ. ಒಟ್ಟು ಒಂಬತ್ತು ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಸಿದ ಸ್ಥಳದಿಂದ ದೃಶ್ಯಗಳು ಪ್ರದೇಶದ ಸುತ್ತಲೂ ಹರಡಿರುವ ಬೃಹತ್ ಅವಶೇಷಗಳು ಮತ್ತು ಅವಶೇಷಗಳನ್ನು ತೋರಿಸಿದೆ. ಅನೇಕ ಆಂಬ್ಯುಲೆನ್ಸ್ ಗಳು ಸಹ ಸ್ಥಳಕ್ಕೆ ತಲುಪಿದವು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಈ ಘಟನೆ ತುಂಬಾ ದುಃಖಕರವಾಗಿದೆ. ಬುರಾರಿಯ ನಮ್ಮ ಶಾಸಕ ಸಂಜೀವ್ ಝಾ ಜಿ ಅವರಿಗೆ ಪಕ್ಷದ ಕಾರ್ಯಕರ್ತರೊಂದಿಗೆ ತಕ್ಷಣ ಅಲ್ಲಿಗೆ ಹೋಗಿ ಪರಿಹಾರ ಮತ್ತು ರಕ್ಷಣಾ…

Read More

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಕೊಟ್ಟು, ಜನರಿಗೆ ಕಟ್ಟೋದಕ್ಕೆ ಕಿರುಕುಳ ನೀಡೋದು ಜಾಸ್ತಿಯಾಗಿತ್ತು. ಈ ಕಾರಣಕ್ಕೆ ಕೆಲವೆಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ಈ ಬೆನ್ನಲ್ಲೇ ಸೂಕ್ತ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಅಲರ್ಟ್ ಆಗಿರುವಂತ ಪೊಲೀಸರು ಐದು ಮೆಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ತವರು ಕ್ಷೇತ್ರದಲ್ಲೇ ಬಾಲ ಬಿಚ್ಚಿದಂತ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿದ್ದಂತ ಐದು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರಿನ ಮೇಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತೆ ಆತ್ಮಹತ್ಯೆ ಮಾಡಿಕೊಂಡ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಇದಲ್ಲದೇ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಮಹಿಳಾ ಸ್ವಸಹಾಯ ಸಂಘ ಸೇರಿ ಐದು ಖಾಸಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.…

Read More

ನವದೆಹಲಿ: 2020 ರಿಂದ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಸೋಮವಾರ ನಿರ್ಧರಿಸಿವೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೇರ ವಿಮಾನಯಾನವನ್ನು ಪುನರಾರಂಭಿಸಲು ಎರಡೂ ಕಡೆಯವರು ತಾತ್ವಿಕವಾಗಿ ಒಪ್ಪಿಕೊಂಡರು. ಭಾರತ ಮತ್ತು ಚೀನಾ ಜನರ ನಡುವಿನ ಸಂಪರ್ಕವನ್ನು ಉತ್ತೇಜಿಸಲು ಮತ್ತು ಸುಗಮಗೊಳಿಸಲು ಒಪ್ಪಿಕೊಂಡವು. ವಿಶೇಷವಾಗಿ ಮಾಧ್ಯಮ ಮತ್ತು ಚಿಂತಕರ ಚಾವಡಿಗಳ ನಡುವೆ ಈ ನಿರ್ಧಾರಕ್ಕೆ ಬರಲಾಗಿದೆ. https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/ https://kannadanewsnow.com/kannada/good-news-for-village-accountants-helpers-state-govt-disburses-incentives/

Read More

ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು. ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ ಎಂದರು.…

Read More