Author: kannadanewsnow09

ಮೈಸೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣವಾಗಿರುವಂತ, ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಸೌಲಭ್ಯವನ್ನು ಒದಗಿಸುವ ದೃಷ್ಠಿಯಿಂದ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದರು. ದಸರಾ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಭಕ್ತರಿಗೆ ಸೌಲಭ್ಯ ಒದಗಿಸಿಕೊಡಬೇಕಿದೆ. ಸ್ವಚ್ಥತೆ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದಂತ ಅವರು, ಸುರಕ್ಷತೆಯ ದೃಷ್ಠಿಯಿಂದ ಸಿಸಿಟಿವಿ ಅಳವಡಿಕೆಗೂ ಸೂಚಿಸಿದರು. ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವ ಸಲುವಾಗಿ ಧೂಮಪಾನ, ಮಧ್ಯಪಾನ, ಗುಟ್ಕಾ ನಿಷೇಧವಿದೆ. ಇದಲ್ಲದೇ ಚಾಮುಂಡಿ ತಾಯಿಯ ದರ್ಶನದ ವೇಳೆಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/cm-siddaramaiah-appropriate-action-will-be-taken-against-those-concerned-if-quality-arrangements-are-not-provided-at-chamundeshwari-sannidhi-cm-siddaramaiah/ https://kannadanewsnow.com/kannada/shimoga-dc-orders-ban-on-use-of-djs-during-ganesha-eid-milad-festivals-across-the-district/ https://kannadanewsnow.com/kannada/big-news-what-media-actor-darshan-who-is-accused-of-murder-wants-a-tv-in-jail/

Read More

ತೆಲಂಗಾಣ: ಹರಿಯಾಣದ ಸುಭಾನ್ ಖಾನ್ ಇತ್ತೀಚೆಗೆ ತೆಲಂಗಾಣದಲ್ಲಿ ನಿಜ ಜೀವನದ ಹೀರೋ ಆಗಿದ್ದಾರೆ. ಪ್ರವಾಹದಲ್ಲಿ ಸಿಲುಕ್ಕಿದ್ದಂತ 9 ಜನರನ್ನು ರಕ್ಷಿಸುವ ಮೂಲಕ, ಹೀರೋಯಿಸಂ ತೋರಿಸಿದ್ದಾರೆ. ತೀವ್ರ ಪ್ರವಾಹದ ಮಧ್ಯೆ ಸೇತುವೆಯ ಮೇಲೆ ಸಿಲುಕಿದ್ದ ಒಂಬತ್ತು ಜನರನ್ನು ರಕ್ಷಿಸುವ ಮೂಲಕ ಖಾನ್ ಸುದ್ದಿಯಾಗಿದ್ದಾರೆ. ಖಮ್ಮಮ್ ಜಿಲ್ಲೆಯ ಮುನ್ನೇರು ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಪ್ರಕಾಶ್ ನಗರ ಸೇತುವೆಯಲ್ಲಿ ಈ ನಾಟಕೀಯ ಘಟನೆ ನಡೆದಿದ್ದು, ನೀರಿನ ಮಟ್ಟ ಏರಿಕೆಯಾಗಿದ್ದು, ಒಂಬತ್ತು ಜನರು ಸಿಕ್ಕಿಬಿದ್ದಿದ್ದಾರೆ. ಅವರು ರಾಜ್ಯ ಸರ್ಕಾರಕ್ಕೆ ಸಹಾಯಕ್ಕಾಗಿ ವೀಡಿಯೊ ಮನವಿಯನ್ನು ರೆಕಾರ್ಡ್ ಮಾಡಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಹೆಲಿಕಾಪ್ಟರ್ ಅವರನ್ನು ತಲುಪಲು ಸಾಧ್ಯವಾಗಲಿಲ್ಲ. ಅಧಿಕೃತ ಸಹಾಯ ಲಭ್ಯವಿಲ್ಲದ ಕಾರಣ, ಸುಭಾನ್ ಖಾನ್ ತನ್ನ ಬುಲ್ಡೋಜರ್ ಅನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸುವ ಜವಾಬ್ದಾರಿಯನ್ನು ವಹಿಸಿಕೊಂಡರು. ಅಪಾಯಗಳ ಬಗ್ಗೆ ಎಚ್ಚರಿಕೆಗಳ ಹೊರತಾಗಿಯೂ, ಅವರು ಕಾರ್ಯನಿರ್ವಹಿಸಲು ನಿರ್ಧರಿಸಿದರು. “ನಾನು ಸತ್ತರೆ, ಅದು ಒಂದು ಜೀವ, ಆದರೆ ನಾನು ಹಿಂತಿರುಗಿದರೆ, ನಾನು ಒಂಬತ್ತು ಜನರನ್ನು ಉಳಿಸುತ್ತೇನೆ” ಎಂದು ಖಾನ್…

Read More

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಒಪ್ಪಿಗೆ ಸೂಚಿಸಿ, ಆಯೋಜಕರಿಗೆ ಅನುಮತಿಯನ್ನು ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಸ್ಠಾಪನೆಯೇ ಸಖತ್ ಸುದ್ದಿಯಾಗಿತ್ತು. ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿಯನ್ನು ಕೋರಿ 4 ರಿಂದ 5 ಸಂಘಟನೆಗಳಿಂದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ಪರಿಶೀಲಿಸಿದಂತ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು, ಗಜಾನನ ಉತ್ಸವ ಮಹಾ ಮಂಡಳಿಗೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವುದಕ್ಕೆ ಒಪ್ಪಿಗೆ ಪತ್ರವನ್ನು ನೀಡಿದ್ದಾರೆ. ಪಾಲಿಕೆಯಿಂದ ಅನುಮತಿ ದೊರೆತ ಕಾರಣ, ಸೆ.7ರಿಂದ ಮೂರು ದಿನಗಳ ಕಾಲ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಹಬ್ಬವನ್ನು ಆಚರಿಸಲಾಗುತ್ತದೆ. https://kannadanewsnow.com/kannada/cm-siddaramaiah-appropriate-action-will-be-taken-against-those-concerned-if-quality-arrangements-are-not-provided-at-chamundeshwari-sannidhi-cm-siddaramaiah/ https://kannadanewsnow.com/kannada/shimoga-dc-orders-ban-on-use-of-djs-during-ganesha-eid-milad-festivals-across-the-district/

Read More

ನವದೆಹಲಿ: ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ, 2024’ ಅನ್ನು ಅಂಗೀಕರಿಸಿದೆ. ‘ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳು ಮತ್ತು ತಿದ್ದುಪಡಿ) ಮಸೂದೆ 2024’ ಎಂದು ಅಧಿಕೃತವಾಗಿ ಹೆಸರಿಸಲಾದ ಈ ಶಾಸನವನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಟಕ್ ಅವರು ಇಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಂಡಿಸಿದರು. ಸೆಪ್ಟೆಂಬರ್ 5 ರಿಂದ ಜಾರಿಗೆ ಬರಲಿರುವ ಈ ಮಸೂದೆಯು, ಅತ್ಯಾಚಾರದ ಅಪರಾಧಿಗಳಿಗೆ ಅವರ ಕೃತ್ಯಗಳು ಸಂತ್ರಸ್ತೆಯ ಸಾವಿಗೆ ಕಾರಣವಾದರೆ ಅಥವಾ ಅವಳನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟರೆ ಮರಣದಂಡನೆ ವಿಧಿಸುವುದನ್ನು ಕಡ್ಡಾಯಗೊಳಿಸುತ್ತದೆ. 2024 ರ ಅತ್ಯಾಚಾರ ವಿರೋಧಿ ಮಸೂದೆಯು ರಾಜ್ಯದಲ್ಲಿ ಹೆಚ್ಚುತ್ತಿರುವ ಲೈಂಗಿಕ ಹಿಂಸಾಚಾರದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರ ಕೈಗೊಂಡ ಮಹತ್ವದ ಶಾಸನಾತ್ಮಕ ಹೆಜ್ಜೆಯಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧ ಸಾಬೀತಾದರೆ 10 ದಿನಗಳ ಒಳಗೆ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಮಸೂದೆ ಹೇಳುತ್ತದೆ.…

Read More

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದೆ. ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, 2020 (ಕರ್ನಾಟಕ ಕಾಯ್ದೆ 26/ 2020) ರ ಸೆಕ್ಷನ್ 3 ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಡೆಂಗ್ಯೂ ಜ್ವರದ ತೀವ್ರ ಸ್ವರೂಪಗಳನ್ನು ಒಳಗೊಂಡಂತೆ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, 2020 (ಕರ್ನಾಟಕ ಕಾಯ್ದೆ 26, 2020) ರ ಸೆಕ್ಷನ್ 4 ಮತ್ತು 16 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ, 2020 ಕ್ಕೆ ತಿದ್ದುಪಡಿ ಮಾಡಲು ಈ ಕೆಳಗಿನ ನಿಯಮಗಳನ್ನು ರೂಪಿಸಲಾಗಿದೆ…

Read More

ಬೆಂಗಳೂರು: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತ್ರ, ಮೆರವಣಿಗೆಯಲ್ಲಿ ಕೊಂಡೊಯ್ದು, ಹೊಳೆ, ಕೆರೆಯಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ತೆಪ್ಪವನ್ನು ಬಳಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ 07-09-2024ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ನಂತ್ರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಮಿಗೆ ಮೂಲಕ ತೆಗೆದುಕೊಂಡು ಹೋಗಿ, ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಿದ್ದು, ಈ ಹಿಂದೆ ತೆಪ್ಪ ಮುಗುಚಿ ಹಲವೆಡೆ ಅನಾಹುತವಾಗಿದೆ ಎಂದಿದೆ. ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಗುಚಿ 12 ಜನ ಸಾವನ್ನಪ್ಪಿದಂತ ಘಟನೆ ಈ ಹಿಂದೆ ನಡೆದಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆಯ ವೇಳೆಯಲ್ಲಿ ರಾಜ್ಯಾಧ್ಯಂತ ತೆಪ್ಪ ಬಳಕೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ. ಇನ್ನೂ ಒಂದು ವೇಳೆ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ 3 ರಿಂದ 4…

Read More

ತಾಂತ್ರಿಕ ನಿರ್ವಹಣೆಗಾಗಿ ತಾತ್ಕಾಲಿಕವಾಗಿ ಆಫ್ಲೈನ್ಗೆ ತೆಗೆದುಕೊಳ್ಳಲಾಗಿದ್ದ ಪಾಸ್ಪೋರ್ಟ್ ಸೇವಾ ಪೋರ್ಟಲ್ ಈಗ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆನ್ಲೈನ್ಗೆ ಮರಳಿದೆ. ಸೆಪ್ಟೆಂಬರ್ 1, 2024 ರಂದು ಸಂಜೆ 7:00 ಗಂಟೆಗೆ ಈ ವ್ಯವಸ್ಥೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಘೋಷಿಸಿತು. ಇದು ನಾಗರಿಕರು ಮತ್ತು ಅಧಿಕಾರಿಗಳಿಗೆ ಸಮಾನವಾಗಿ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. ಮೂಲತಃ ಹೆಚ್ಚು ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದ್ದ ನಿರ್ವಹಣಾ ಕಾರ್ಯವು ಯೋಜಿತಕ್ಕಿಂತ ಮುಂಚಿತವಾಗಿ ಪೂರ್ಣಗೊಂಡಿತು. ಇದು ಪಾಸ್ಪೋರ್ಟ್ ಸಂಬಂಧಿತ ಸೇವೆಗಳಿಗೆ ಕನಿಷ್ಠ ಅಡಚಣೆಯನ್ನು ಖಚಿತಪಡಿಸಿತು. ಪೋರ್ಟಲ್ ಈಗ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಬಳಕೆದಾರರಿಗೆ ಅಪಾಯಿಂಟ್ಮೆಂಟ್ ಗಳನ್ನು ಕಾಯ್ದಿರಿಸಲು, ಪಾಸ್ಪೋರ್ಟ್ಗಳನ್ನು ನವೀಕರಿಸಲು ಮತ್ತು ಇತರ ಸೇವೆಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. https://twitter.com/passportsevamea/status/1830249644737048998 ಆಗಸ್ಟ್ 30ಕ್ಕೆ ಅಪಾಯಿಂಟ್ಮೆಂಟ್ ಮರು ನಿಗದಿ ನಿರ್ವಹಣೆಯ ಹಿನ್ನೆಲೆಯಲ್ಲಿ, ಆಗಸ್ಟ್ 30, 2024 ರಂದು ನಿಗದಿಯಾಗಿದ್ದ ಅಪಾಯಿಂಟ್ಮೆಂಟ್ ಗಳನ್ನು ಮರು ನಿಗದಿಪಡಿಸಲಾಗುವುದು. ಹೊಸ ಅಪಾಯಿಂಟ್ಮೆಂಟ್  ದಿನಾಂಕಗಳು ಮತ್ತು ಸಮಯಗಳ ಬಗ್ಗೆ ಅರ್ಜಿದಾರರಿಗೆ ತಿಳಿಸಲಾಗುವುದು ಎಂದು ಸಚಿವಾಲಯ ಭರವಸೆ ನೀಡಿದೆ. ಆದಾಗ್ಯೂ, ಆನ್ಲೈನ್…

Read More

ಬೆಂಗಳೂರು: ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ( Raichur, Bellary & Koppal Districts Cooperative Milk Producers’ Societies Union Ltd-RBKMUL) ಹಾಲು ಖರೀದಿ ದರವನ್ನು ಲೀಟರ್ಗೆ 1.50 ರೂ.ಗಳಷ್ಟು ಕಡಿಮೆ ಮಾಡಿರುವುದರಿಂದ ರೈತರ ಲಾಭ ಕುಗ್ಗುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಇತರ ಹಾಲು ಒಕ್ಕೂಟಗಳು ಮುಂದಿನ ದಿನಗಳಲ್ಲಿ ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸ್ಕಿಮ್ಡ್ ಹಾಲಿನ ಪುಡಿ ಮತ್ತು ಬೆಣ್ಣೆಯ ದರಗಳಲ್ಲಿನ ಏರಿಳಿತಗಳು ಇದಕ್ಕೆ ಕಾರಣ. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ಖರೀದಿ ದರವನ್ನು 1.50 ರೂ.ಗಳಷ್ಟು ಕಡಿತಗೊಳಿಸಲಾಗಿದೆ. ಇದು ಲಾಭ ಮತ್ತು ನಷ್ಟದ ಬ್ಯಾಲೆನ್ಸ್ ಶೀಟ್ ಅನ್ನು ಆಧರಿಸಿದೆ. ಆರ್ಬಿಕೆಎಂಯುಎಲ್ಗೆ ೩ ಕೋಟಿ ರೂ.ಗಳ ನಷ್ಟವನ್ನು ಸರಿದೂಗಿಸಲು…

Read More

ನವದೆಹಲಿ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ District Reserve Guard -DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force – CRPF) ಜಂಟಿ ತಂಡವು ಒಂಬತ್ತು ಮಾವೋವಾದಿಗಳನ್ನು ಕೊಂದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ, ಎನ್ಕೌಂಟರ್ ಬೆಳಿಗ್ಗೆ 10: 30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಇನ್ನೂ ನಡೆಯುತ್ತಿದೆ. ಇಲ್ಲಿಯವರೆಗೆ, ಒಂಬತ್ತು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಸೆಲ್ಫ್-ಲೋಡಿಂಗ್ ರೈಫಲ್ (Self-Loading Rifle – SLR), .303 ರೈಫಲ್ ಮತ್ತು .315 ಬೋರ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಯೋಧರು ಸುರಕ್ಷಿತವಾಗಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ, ಮತ್ತು ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದು ಅದು ಹೇಳಿದೆ. https://kannadanewsnow.com/kannada/shimoga-dc-orders-ban-on-use-of-djs-during-ganesha-eid-milad-festivals-across-the-district/ https://kannadanewsnow.com/kannada/cm-siddaramaiah-appropriate-action-will-be-taken-against-those-concerned-if-quality-arrangements-are-not-provided-at-chamundeshwari-sannidhi-cm-siddaramaiah/

Read More

ಶಿವಮೊಗ್ಗ: ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಾಧ್ಯಂತ ಡಿಜೆ ಸಿಸ್ಟಂ ಬಳಕೆ ಮಾಡದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 07,09,2024 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿನಾಂಕ: 16,09,2024 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ನಿಷೇಧಗೊಳಿಸಲು ಆದೇಶ ಹೊರಡಿಸಬೇಕಾಗಿ…

Read More