Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಕಾರ್ಯ ಇಂದು ನಡೆಯುತ್ತಿದೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಹೊಳಿ ಅವರು ಸಾಗರಕ್ಕೆ ಬಂದು, ಭಾಗವಹಿಸದೇ ವಾಪಾಸು ಆಗಿದ್ದಾರೆ. ಈ ಕುರಿತಂತೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗುತ್ತಿದೆ. ಆ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ ಎಂದರು. ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ವಾಪಾಸು ಆದರು. ಒಟ್ಟಾರೆಯಾಗಿ ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಿಂದಿರುಗಿದರೇ, ಸ್ಥಳೀಯ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕೂಡ ಗೈರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲು ದಿನಾಂಕ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದು, ಅಂತ್ಯಗೊಂಡಿದೆ. ಇನ್ನೇನಿದ್ದರೂ ಇಂದು ಉದ್ಘಾಟನೆಯನ್ನು ಮಾಡುವುದು ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಇಂದು ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ್ಧರಾಮಯ್ಯ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಕ್ಷೇತ್ರದಲ್ಲಿ “ರಾಷ್ಟ್ರ ಸಮರ್ಪಣೆ ಮತ್ತು ಶಿಲಾನ್ಯಾಸ ಸಮಾರಂಭ” ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಮತ್ತು ಕರಡು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹ ಮುದ್ರಿಸಲಾಗಿದೆ. ಆದಾಗ್ಯೂ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಲಾಗಿಲ್ಲ ಮತ್ತು ಅದೇ ದಿನ ವಿಜಯಪುರ…
ನವದೆಹಲಿ: ಕೇಂದ್ರ ಸರ್ಕಾರವು ನಡೆಸುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ, ಶೀಘ್ರವೇ 20ನೇ ಕಂತಿನ ಹಣ ಬಿಡುಗಡೆಯಾಗಲಿದ್ದು, ರೈತರು ತಪ್ಪದೇ ಈ 3 ಕೆಲಸಗಳನ್ನು ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆಯಡಿ ಹಣವನ್ನು ತಲಾ 2 ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಉದಾಹರಣೆಗೆ, ಈ ಬಾರಿ ಯೋಜನೆಯ 20 ನೇ ಕಂತು ಬಿಡುಗಡೆಯಾಗಲಿದೆ. ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ನೀವು ಈ ಕಂತಿನ ಪ್ರಯೋಜನವನ್ನು ಪಡೆಯಬಹುದು. ಯೋಜನೆಯಡಿಯಲ್ಲಿ ಅಗತ್ಯ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ, ಅದರ ಬಗ್ಗೆ ನೀವು ಮತ್ತಷ್ಟು ತಿಳಿದುಕೊಳ್ಳಬಹುದು. ಆದ್ದರಿಂದ ರೈತರು ಮಾಡಬೇಕಾದ ಈ ಕೆಲಸಗಳು ಯಾವುವು ಎಂದು ತಿಳಿಯೋಣ. 20 ನೇ ಕಂತು ಯಾವಾಗ ಬಿಡುಗಡೆ ಮಾಡಬಹುದು? ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಬಿಡುಗಡೆಯಾಗಲಿರುವ 20 ನೇ ಕಂತು ಜುಲೈ 9 ರ ನಂತರವೇ ಬಿಡುಗಡೆಯಾಗಲಿದೆ ಎಂದು ನಂಬಲಾಗಿದೆ. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ ಮತ್ತು ಅವರು…
ಮಾಗಡಿ: “ಬಮುಲ್ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ. ಈ ಕೆಲಸವನ್ನು ನಾನು ಮಾಡುತ್ತೇನೆ. ಇದಕ್ಕೆ ಎಲ್ಲಾ ನಾಯಕರ ಬೆಂಬಲ ಬೇಕು. ಎಲ್ಲರ ಜೊತೆಯೂ ನಾನು ಚರ್ಚೆ ನಡೆಸುತ್ತೇನೆ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸುರೇಶ್ ಅವರು ಭಾನುವಾರ ಮಾತನಾಡಿದರು. “ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಮನವಿ ಎಂದರೆ ನಂದಿನಿ ಉಳಿಸಿ, ಬೆಳೆಸಿ,ಉತ್ಪನ್ನಗಳನ್ನು ಬಳಸಿ” ಎಂದರು. “ನಂದಿನಿ ಉತ್ಪನ್ನಗಳ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ. ಉದಾಹರಣೆಗೆ ಪನ್ನೀರಿನ ಬೇಡಿಕೆಗೆ ಶೇ 5 ರಷ್ಟು ಮಾತ್ರ ನಾವು ಪೂರೈಕೆ ಮಾಡುತ್ತಿದ್ದೇವೆ. ಇದನ್ನು ಹೆಚ್ಚು ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಜನರೇ ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸುವ ಮೂಲಕ ಮಾರುಕಟ್ಟೆ ಹೆಚ್ಚು ಮಾಡಿಕೊಡಬೇಕು” ಎಂದು ಹೇಳಿದರು. “ಹೊಸಕೋಟೆಯಲ್ಲಿ 22 ಎಕರೆ ಜಮೀನು,…
ಹಾಸನ: ಜಿಲ್ಲೆಯ ಕತ್ತರಿಘಟ್ಟ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕತ್ತರಿಘಟ್ಟ ಗ್ರಾಮದ ಬಳಿಯ ರೈಲ್ವೆ ಹಳಿಯ ಮೇಲೆ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದೆ. ಒಂದೂವರೆ ವರ್ಷದ ಗಂಡು, 3-4 ವರ್ಷದ ಹೆಣ್ಣು ಚಿರತೆ ಕಳೇಬರ ಇದಾಗಿದೆ. ರೈಲು ಡಿಕ್ಕಿಯಾಗಿ ಗಂಡು ಹಾಗೂ ಹೆಣ್ಣು ಚಿರತೆ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಚಿರತೆ ಸಾವಿಗೆ ಕಾರಣ ತಿಳಿಯಲು ಎಲ್ಲಾ ಪರೀಕ್ಷೆಯನ್ನು ವನ್ಯಜೀವಿ ವೈದ್ಯರು ನಡೆಸುತ್ತಿದ್ದಾರೆ. https://kannadanewsnow.com/kannada/business-jet-crash-at-london-airport/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/
ಲಂಡನ್: ಎಸೆಕ್ಸ್ನ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಬಿಸಿನೆಸ್ ಚೆಟ್ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದ ನಂತ್ರ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇಂದು ಮಧ್ಯಾಹ್ನ 4 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯಿಂದ “ದೊಡ್ಡ ಬೆಂಕಿಯ ಉಂಡೆ” ಮತ್ತು ಕಪ್ಪು ಹೊಗೆ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ವರದಿಗಳ ಪ್ರಕಾರ, ವಿಮಾನವು ಟೇಕ್ ಆಫ್ ಆಗುವಾಗ ಅಪಘಾತಕ್ಕೀಡಾಗಿದ್ದು, ಸಣ್ಣ ಜೆಟ್ ವಿಮಾನವು ನೆದರ್ಲ್ಯಾಂಡ್ಸ್ಗೆ ಪ್ರಯಾಣಿಸುತ್ತಿತ್ತು ಎಂದು ನಂಬಲಾಗಿದೆ. https://kannadanewsnow.com/kannada/good-news-for-milk-producers-in-the-state-d-k-suresh-announces-loan-facility-up-to-2-lakhs-for-purchasing-2-cows/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/
ರಾತ್ರಿ ಮಲಗಿರುವಾಗ ದುಃಸ್ವಪ್ನಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ ಕುಳಿತಂತೆ ಭಾಸವಾಗುತ್ತದೆ. ಈ ರೀತಿಯ ಅನುಭವ ಅನೇಕ ಮಂದಿಗೆ ಸಹಜವಾಗಿ ಆಗಿರುತ್ತದೆ. ಇನ್ನು ನಿದ್ರೆಯ ಸಮಯದಲ್ಲಿ ದೆವ್ವ ನನ್ನ ಎದೆಯ ಮೇಲೆ ಕುಳಿತಿತ್ತು ಮತ್ತು ನನ್ನ ಬಾಯಿಂದ ಯಾವುದೇ ಮಾತುಗಳು ಬರುತ್ತಿರಲಿಲ್ಲ ಹಾಗೂ ಅಲುಗಾಡಲು ಸಹ ಆಗುತ್ತಿರಲಿಲ್ಲ ಎಂದು ಕೆಲವರು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…
ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸಾಗರ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆಯಾಗುತ್ತಿರುವುದು ಹಿನ್ನೀರಿನ ಜನರ ತ್ಯಾಗದ ಪ್ರತೀಕವಾಗಿ ಲೋಕಾರ್ಪಣೆಯಾಗುತ್ತಿದೆ. ಇದು ನನಗೆ ಸಂತಸ ತಂದಿದೆ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೋಡ್ಲು- ಕಳಸವಳ್ಳಿ ಸೇತುವೆಗಾಗಿ ಹೋರಾಟ ಮಾಡಿದವರನ್ನು ಹತ್ತಿಕ್ಕುವ ಕೆಲಸ ನಡೆದಿದೆ. ಮುಂಬರುವಂತ ದಿನಗಳಲ್ಲಿ ಅವರ ಸೇವೆಸ್ಮರಿಸಿ ಗೌರವಿಸುವ ಚಿಂತನೆ ಮಾಡಲಾಗುವುದು. ಸೇತುವೆ ನಿರ್ಮಾಣಕ್ಕೆ ಎಲ್ಲ ಹಂತದಲ್ಲೂ ಪ್ರಯತ್ನ ನಡೆದಿದ್ದು ಅಂತಿಮವಾಗಿ ಹಿನ್ನೀರ ಜನರ ಸೇವೆಗೆ ಸೋಮವಾರದಿಂದ ಸೇತುವೆ ಲಭ್ಯವಾಗಲಿದೆ ಎಂದರು. ನಾಳೆ ಅಂಬಾರಗೋಡ್ಲು- ಕಳಸವಳ್ಳಿ ಸೇತುವೆ ಲೋಕಾರ್ಪಣೆಗೆಗಾಗಿ ಆಗಮಿಸುತ್ತಿರುವ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರದ ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಮಧು ಬಂಗಾರಪ್ಪ ಅವರನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ಅರಗ ಜ್ಞಾನೇಂದ್ರ ಕೇಂದ್ರ ಸರ್ಕಾರದಿಂದ ಸೇತುವೆ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.…
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಬೆಳಕವಾಡಿ ಪೋಲೀಸರು ದಾಳಿ ಮಾಡಿ 24 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮುತ್ತತ್ತಿಯಲ್ಲಿ ಹಲವಾರು ಮಂದಿ ಲಕ್ಷಾಂತರ ರೂಪಾಯಿಯೊಂದಿಗೆ ಜೂಜಾಟದಲ್ಲಿ ತೊಡಗಿದ್ದಾರೆ. ಎಂದು ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಹಾಗೂ ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ರವರ ಸೂಚನೆ ಮೇರೆಗೆ ದಾಳಿ ನಡೆಸಿದ ಬೆಳಕವಾಡಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ವಿ.ಪ್ರಕಾಶ್ ಹಾಗೂ ಸಿಬ್ಬಂದಿಗಳು ಭಾನುವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ದಾಳಿ ಮಾಡಿ ಸುಮಾರು 4 ಲಕ್ಷದ 38 ಸಾವಿರದ 770 ರೂ ನಗದು ಹಾಗೂ 13 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಲಗೂರು ಪೋಲೀಸ್ ಠಾಣೆಯಲ್ಲಿ 24 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/english-teacher-minister-dr-sharanprakash-patil-video-goes-viral/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/
ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿಯ ನೂತನ ಶರಾವತಿ ಹಿನ್ನೀರಿನ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೇತುವೆ, ಕಾರ್ಯಕ್ರಮದ ವೇದಿಕೆಯಾದಂತ ನೆಹರು ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಮಾಹಿತಿ ನೀಡಿದ್ದು, ನಾಳೆ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಗರದಾಧ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು. ನಾಳೆ ಇಬ್ಬರು ಎಎಸ್ಪಿ, 6 ಡಿವೈಎಸ್ಪಿ, 22 ಸಿಪಿಐ ಹಾಗೂ ಇನ್ಸ್ ಪೆಕ್ಟರ್, 35 ಪಿಎಸ್ಐ, 60 ಎಎಸ್ಐ, 276 ಹೆಚ್ ಸಿ ಪಿಸಿ, 300 ಹೋಂ ಗಾರ್ಡ್ ಸೇರಿದಂತೆ 699 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ 3 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ನಾಳೆಯ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿರುವುದಾಗಿ ಹೇಳಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…