Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿ ಸರ್ಕಾರಿ ಭೂಮಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಕಂದಾಯ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಒತ್ತಾಯಿಸಿದ್ದಾರೆ. ಶನಿವಾರ ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವೈಫಲ್ಯ “ತಹಶೀಲ್ದಾರ್ ರಶ್ಮಿ ಅವರು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರನ್ನು ಸಾಕ್ಷಿಸಮೇತ ಹಿಡಿದು ಒಂದು ತಿಂಗಳು ಕಳೆದಿದೆ. ಆದರೂ ಈ ಹಗರಣದ ಪ್ರಮುಖ ಆರೋಪಿಯಾದ ನ್ಯಾಯವಾದಿಯೊಬ್ಬರನ್ನು ವಿಚಾರಣೆಗೆ ಒಳಪಡಿಸದಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ರಕ್ಷಣೆ ಇರುವುದರಿಂದಲೇ ತನಿಖೆ ಕುಂಟುತ್ತಾ ಸಾಗಿದೆ” ಎಂದು ಅವರು ನೇರವಾಗಿ ಆರೋಪಿಸಿದರು. ಹತ್ತು ತಿಂಗಳ ಹಿಂದೆಯೇ ಎಚ್ಚರಿಸಲಾಗಿತ್ತು…
ಬೆಂಗಳೂರು: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಷಡ್ಯಂತ್ರ್ಯದಿಂದ ಲೋಕಸಭೆಯಲ್ಲಿ ಲೋಕಸಭೆಯಲ್ಲಿ ಸೋಲಾಗಿದ್ದನ್ನು ಖಂಡಿಸಿ ಜೆಡಿಎಸ್ ಮಹಿಳಾ ಘಟಕ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದ ಈ ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತೆಯರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್ ಅವರು; 1996ರಲ್ಲಿ ಶಾಸನಸಭೆಗಳಲ್ಲಿ ಮಹಿಳೆಯರಿಗೆ ನ್ಯಾಯೋಚಿತ ಮೀಸಲಾತಿ ನೀಡುವ ಉದ್ದೇಶದಿಂದ ಸಂಸತ್ತಿನಲ್ಲಿ ಮಹಿಳಾ ಮೀಸಲು ವಿಧೇಯಕವನ್ನು ಮಂಡಿಸಿದ್ದರು. ಅಂದು ಕೂಡ ಕಾಂಗ್ರೆಸ್ ಮತ್ತು ಸಂಯುಕ್ತ ರಂಗದ ಕೆಲ ಮಿತ್ರಪಕ್ಷಗಳ ಕುಯುಕ್ತಿಯಿಂದ ಆ ಮಸೂದೆಗೆ ಸೋಲಾಯಿತು. ಮತ್ತೆ ಅದೇ ಇತಿಹಾಸ ಮರುಕಳಿದ್ದು, ರಾಷ್ಟ್ರದ ಮಹಿಳೆಯರಿಗೆ ಕಾಂಗ್ರೆಸ್ ಮೋಸ ಮಾಡಿದೆ…
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿ ಮಾತನಾಡಿದರು. ಅವರು ಮಹಿಳಾ ಮೀಸಲಾತಿ ಮಸೂದೆ ವಿಫಲಕ್ಕೆ ದೇಶದ ಮಹಿಳೆಯರನ್ನು ಕ್ಷಮೆಯಾಚಿಸಿದರು. ಅವರ ಭಾಷಣದ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ… ಕಾಂಗ್ರೆಸ್ ಮಹಿಳಾ ಮೀಸಲಾತಿ ವಿಷಯವನ್ನು ದ್ವೇಷಿಸುತ್ತದೆ ಮತ್ತು ಇದನ್ನು ತಡೆಯಲು ಯಾವಾಗಲೂ ಪಿತೂರಿ ನಡೆಸಿದೆ… ಈ ದಿಕ್ಕಿನಲ್ಲಿ ಪ್ರಯತ್ನಗಳು ನಡೆದಾಗಲೆಲ್ಲಾ ಕಾಂಗ್ರೆಸ್ ಯಾವಾಗಲೂ ಅಡೆತಡೆಗಳನ್ನು ಹಾಕುತ್ತಿತ್ತು. ಈ ಬಾರಿಯೂ ಸಹ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತಡೆಯಲು ಒಂದಲ್ಲ ಒಂದು ಸುಳ್ಳುಗಳನ್ನು ಬಳಸಿದವು… ಅವರು ರಾಷ್ಟ್ರವನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. https://twitter.com/ANI/status/2045526375298392221 ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಕ್ಷೇತ್ರ ಪುನರ್ವಿಂಗಡಣೆಯ ಬಗ್ಗೆ ನಿರಂತರವಾಗಿ ಸುಳ್ಳು ಹೇಳುತ್ತಿವೆ. ಈ ನೆಪದಲ್ಲಿ ಅವರು ವಿಭಜನೆಯ ಜ್ವಾಲೆಯನ್ನು ಹೊತ್ತಿಸಲು ಬಯಸುತ್ತಾರೆ. ಕಾಂಗ್ರೆಸ್ ತನ್ನ ಪರಂಪರೆಯಂತೆ ಬ್ರಿಟಿಷರಿಂದ ಒಡೆದು ಆಳುವ ರಾಜಕೀಯವನ್ನು ಕಲಿತಿದೆ. ಇಂದಿಗೂ ಕಾಂಗ್ರೆಸ್ ಅದೇ ರೀತಿ ಕಾರ್ಯನಿರ್ವಹಿಸುತ್ತಿದೆ. ದೇಶದೊಳಗೆ ಬಿರುಕುಗಳನ್ನು ಉಂಟುಮಾಡುವ ಭಾವನೆಗಳನ್ನು ಕಾಂಗ್ರೆಸ್…
ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ಸಂಸತ್ತಿನಲ್ಲಿ ಹಿನ್ನಡೆಯಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ, ಮಹಿಳೆಯರ ಕನಸುಗಳನ್ನು ನುಚ್ಚುನೂರು ಮಾಡಿದ ವಿರೋಧ ಪಕ್ಷಗಳ ನಡವಳಿಕೆಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. “ನನ್ನನ್ನು ಕ್ಷಮಿಸಿ” ಎಂದ ಪ್ರಧಾನಿ: ದೇಶದ ತಾಯಂದಿರು ಮತ್ತು ಸಹೋದರಿಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಇಂದು ನಿಮ್ಮ ಮುಂದೆ ಕ್ಷಮೆ ಕೇಳಲು ಬಂದಿದ್ದೇನೆ. ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವಲ್ಲಿ ನಾವು ಸದ್ಯಕ್ಕೆ ಯಶಸ್ವಿಯಾಗಲಿಲ್ಲ. ನಿಮ್ಮ ಹಕ್ಕುಗಳನ್ನು ಒದಗಿಸಲು ನಮಗೆ ಸಾಧ್ಯವಾಗದಿರುವುದಕ್ಕೆ ನಾನು ವಿಷಾದಿಸುತ್ತೇನೆ,” ಎಂದು ಭಾವುಕರಾಗಿ ನುಡಿದರು. https://twitter.com/ANI/status/2045519764089606515 ವಿಪಕ್ಷಗಳ ವಿರುದ್ಧ ವಾಗ್ದಾಳಿ: ಮಸೂದೆಯ ವೈಫಲ್ಯಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳೇ ಕಾರಣ ಎಂದು ಪ್ರಧಾನಿ ನೇರ ಆರೋಪ ಮಾಡಿದರು. ಕನಸುಗಳ ಭಂಗ: “ವಿರೋಧ ಪಕ್ಷಗಳು ಮಹಿಳೆಯರ ಕನಸುಗಳನ್ನು ಮತ್ತು ಅವರ ಪ್ರಗತಿಯ ಹಾದಿಯನ್ನು ತುಳಿದು ಹಾಕಿದ್ದಾರೆ. ಅವರ ಈ ಅಹಂಕಾರಿ…
ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯ ಸುತ್ತ ನಡೆಯುತ್ತಿರುವ ರಾಜಕೀಯ ಸಂಘರ್ಷದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿರೋಧ ಪಕ್ಷಗಳು ದೇಶದ ಜನತೆಯನ್ನು ಹಾದಿ ತಪ್ಪಿಸುತ್ತಿವೆ ಮತ್ತು ಅವರ “ಅಸಲಿ ಮುಖ” ಈಗ ಇಡೀ ದೇಶದ ಮುಂದೆ ಬಯಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ವಿಪಕ್ಷಗಳ ‘ಪಿತೂರಿ’ಯ ಬಗ್ಗೆ ಮೋದಿ ಮಾತು: ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಹಾದಿ ತಪ್ಪಿಸುವ ಪ್ರಯತ್ನ ಮಾಡಿವೆ ಎಂದು ಪ್ರಧಾನಿ ಆರೋಪಿಸಿದರು. ಪಾದರಕ್ಷೆ ತತ್ವದ ಟೀಕೆ: ವಿಪಕ್ಷಗಳ ನಡವಳಿಕೆಯು ಅವರ ಸಂಕುಚಿತ ಮನೋಭಾವವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು. ಪ್ರಾದೇಶಿಕ ಪಕ್ಷಗಳಿಗೆ ಸಂಕಷ್ಟ: ಕಾಂಗ್ರೆಸ್ ಒಂದು ದೊಡ್ಡ ‘ಪಿತೂರಿ’ಯಲ್ಲಿ ತೊಡಗಿದ್ದು, ಇದು ಪ್ರಾದೇಶಿಕ ಪಕ್ಷಗಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ಪ್ರಧಾನಿ ಎಚ್ಚರಿಸಿದ್ದಾರೆ. 2029ರ ಲೋಕಸಭೆ ಚುನಾವಣೆಯಿಂದ ಜಾರಿ: ದಶಕಗಳಿಂದ ಬಾಕಿ ಉಳಿದಿರುವ ಮಹಿಳೆಯರ ಹಕ್ಕುಗಳನ್ನು…
ನವದೆಹಲಿ : ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಮಹಿಳೆಯರ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ‘ಸ್ವಾರ್ಥ ರಾಜಕಾರಣ’ವೇ ಕಾರಣ ಎಂದು ಅವರು ಕಿಡಿಕಾರಿದ್ದಾರೆ. “ತಾಯಂದಿರು, ಸಹೋದರಿಯರೇ ನನ್ನನ್ನು ಕ್ಷಮಿಸಿ”: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ನಾನು ಇಂದು ನಮ್ಮ ರಾಷ್ಟ್ರದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರೊಂದಿಗೆ ಮಾತನಾಡಲು ಬಂದಿದ್ದೇನೆ. ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ನಾವು ಯಶಸ್ವಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ನಾನು ದೇಶದ ಮಹಿಳೆಯರಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ,” ಎಂದು ಭಾವುಕರಾಗಿ ನುಡಿದರು. ವಿಪಕ್ಷಗಳ ವಿರುದ್ಧ ಕೆಂಡಾಮಂಡಲ: ಮಸೂದೆಯ ಸೋಲಿಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (TMC), ಡಿಎಂಕೆ (DMK) ಮತ್ತು ಸಮಾಜವಾದಿ ಪಕ್ಷಗಳನ್ನು (SP) ನೇರವಾಗಿ ಹೊಣೆಗಾರರನ್ನಾಗಿ ಮಾಡಿದ ಪ್ರಧಾನಿ ಮೋದಿ, ವಿಪಕ್ಷಗಳು ಸಾರ್ವಜನಿಕ ಹಿತಾಸಕ್ತಿಗಿಂತ ರಾಜಕೀಯಕ್ಕೇ ಹೆಚ್ಚಿನ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿದರು. ಸ್ವಾರ್ಥ ರಾಜಕಾರಣ: “ವಿರೋಧ ಪಕ್ಷಗಳ ಸಂಕುಚಿತ ಮತ್ತು ಸ್ವಾರ್ಥಿ ರಾಜಕಾರಣದ…
ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳು ಗಾಳಿಯಲ್ಲಿ ತೇಲಿ ಬರುತ್ತಿವೆ. ದೆಹಲಿಗೆ ತೆರಳಿದ್ದ ಶಾಸಕರ ತಂಡದ ಭೇಟಿ ಮತ್ತು ಹಿರಿಯ ನಾಯಕರ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ನಾಂದಿ ಹಾಡಿವೆ. ಸಚಿವ ಸ್ಥಾನದ ಆಕಾಂಕ್ಷಿಗಳು ಒಂದೆಡೆಯಾದರೆ, ಮುಖ್ಯಮಂತ್ರಿ ಸ್ಥಾನದ ಇಂಗಿತ ವ್ಯಕ್ತಪಡಿಸುತ್ತಿರುವ ನಾಯಕರು ಮತ್ತೊಂದೆಡೆ – ಒಟ್ಟಾರೆಯಾಗಿ ಹೈಕಮಾಂಡ್ ಅಂಗಳದಲ್ಲಿ ಈಗ ದೊಡ್ಡ ಆಟವೇ ಶುರುವಾಗಿದೆ. ಇದೆಲ್ಲದರ ನಡುವೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್ ಆಗಿದ್ದು, ಸಂಪುಟ ಪುನರ್ ರಚನೆ ಫಿಕ್ಸ್ ಎನ್ನುವ ಸುಳಿವನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ನೀಡಿದ್ದಾರೆ. ದೆಹಲಿ ಭೇಟಿ ಫಲಪ್ರದ: ಬೇಳೂರು ಗೋಪಾಲಕೃಷ್ಣ ವಿಶ್ವಾಸ ಇಂದು ದೆಹಲಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, “ನಮ್ಮ ದೆಹಲಿ ಭೇಟಿ ಅತ್ಯಂತ ಫಲಪ್ರದವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸುದೀರ್ಘ ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ್ದೇವೆ. ನಮ್ಮ ನೋವು-ನಲಿವುಗಳನ್ನು ಅವರು ಶಾಂತವಾಗಿ ಆಲಿಸಿದ್ದಾರೆ,”…
ಶಿವಮೊಗ್ಗ: ಜಿಲ್ಲೆಯ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಸಮಿತಿಯ ಪದಾಧಿಕಾರಿಗಳನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸನ್ಮಾನಿಸಿ, ಗೌರವಿಸಲಾಯಿತು. ನ್ಯಾಸ ಪ್ರತಿಷ್ಠಾನದ ನೂತನ ಸಮಿತಿಗೆ ಸನ್ಮಾನಿಸಿ ಗೌರವ: ಇಂದು ಸಾಗರದ ಮಾರಿ ಗುಡಿ ಕಚೇರಿಯಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಪವಿತ್ರ ನಾಗರಾಜ್, ಉಪಾಧ್ಯಕ್ಷರಾದ ಶ್ರೀನಿವಾಸ್ ಮೇಸ್ತ್ರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ ಆನಂದ್, ಸಹ ಕಾರ್ಯದರ್ಶಿಗಳಾದಂತ ಡಿಶ್ ಗುರು, ಪುರುಷೋತ್ತಮ್ (ಪುಚ್ಚಿ) ಹಾಗೂ ಖಜಾಂಚಿ ವಿ.ಶಂಕರ್(ಮಾಸ್ಟರ್ ಶಂಕರ್) ಅವರನ್ನು ಸಾಗರ ಸರ್ಕಾರಿ ನೌಕರರ ಸಂಘದಿಂದ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು. ನೌಕರರ ಸಹಕಾರ ಸದಾ ಇರಲಿದೆ: ಸಂತೋಷ್ ಕುಮಾರ್ ಸನ್ಮಾನಿಸಿ ಮಾತನಾಡಿದ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎನ್. ಅವರು, “ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಯಶಸ್ಸಿನಲ್ಲಿ ಅಧಿಕಾರಿಗಳು ಮತ್ತು ನೌಕರರು ಸದಾ…
ಮಂಡ್ಯ : ಕ್ಷೇತ್ರದಲ್ಲಿ ಅಂದಾಜು 800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕೆರೆ ಮತ್ತು ನಾಲೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಳೆಗಾಲ ಶುರುವಾಗುವ ಮುನ್ನವೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಶನಿವಾರ 5 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸೋಮನಹಳ್ಳಿ ಕೆರೆಯನ್ನು ಸ್ವಚ್ಚ, ಸೌಂದರ್ಯಕರಣ ಮಾಡಬೇಕೆಂಬ ಉದ್ದೇಶದಿಂದ ಈಗಾಗಲೇ 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅದರಲ್ಲಿ ಒತ್ತುವರಿ ತೆರವು, ಹೊಸ ತೂಬುಗಳ ನಿರ್ಮಾಣ, ಕೆರೆ ಹೂಳು ತೆಗೆಯುವ ಕೆಲಸ ಮಾಡಲಾಗುತ್ತಿದೆ. ಇದರ ಜೊತೆಗೆ 5 ಕೋಟಿ ವೆಚ್ಚದಲ್ಲಿ ವಾಕಿಂಗ್ ಪಾತ್, ವಿದ್ಯುತ್ ದೀಪ, ನಾಲೆ, ರಸ್ತೆ, ಏರಿ ಹಾಗೂ ಕೊಡಿ ನಿರ್ಮಾಣ ಮಾಡಲು ಇಂದು ಚಾಲನೆ ನೀಡಲಾಗಿದೆ. ಕೋಡಿಹಳ್ಳಿ ಗ್ರಾಮವು ನಗರಸಭಾ ವ್ಯಾಪ್ತಿಗೆ ಸೇರಿರುವುದರಿಂದ ಈಗಾಗಲೇ ರಸ್ತೆ, ಚರಂಡಿ ಹಾಗೂ ಮೂಲ ಸೌಕರ್ಯ ಕಲ್ಪಿಸಲಾಗಿದ್ದು, ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ…
ಚಿಕ್ಕಮಗಳೂರು: ವನ್ಯಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ನೀಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆನೆ, ಕಾಡೆಮ್ಮೆ, ಕಾಡುಕೋಣ, ಹಂದಿಗಳಿಂದ ತೀವ್ರ ಬೆಳೆ ಹಾನಿ ಆಗುತ್ತಿದ್ದು, ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ಪರಿಹಾರ ನೀಡಬೇಕು. ಪ್ರಾಮಾಣಿಕವಾಗಿ ಬೆಳೆ ಹಾನಿಯ ನಿರ್ಧಾರ ಮಾಡಬೇಕು ಎಂದರು. ಪ್ರಸ್ತುತ ವೃತ್ತಕ್ಕೆ 1 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಬಾಕಿ ಇರುವ ಎಲ್ಲ ಬೆಳೆ ಹಾನಿ ಪರಿಹಾರ ನೀಡುವಂತೆ ಸೂಚಿಸಿದ ಅವರು, ಆನೆ ನಿಗ್ರಹ ಕಂದಕ, ಸೌರತಂತಿಬೇಲಿಗಳ ಸಮರ್ಪಕ ನಿರ್ವಹಣೆ ಮಾಡುವಂತೆಯೂ ತಿಳಿಸಿದರು. ಆನೆ ಸೆರೆ ತಂಡ: ಮೂಡಿಗೆರೆ, ಕೊಪ್ಪ ಮೊದಲಾದ ಕಡೆಗಳಲ್ಲಿ ಆನೆ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲೇ ಒಂದು ಆನೆ ಸೆರೆ ಕಾರ್ಯತಂಡ ಸ್ಥಾಪಿಸುವ ಬಗ್ಗೆ ಪರಿಶೀಲಿಸಿ, ಕಾರ್ಯಸಾಧ್ಯ ವರದಿ ಕೇಳಿದ…













