Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ವೃದ್ಧ ತಂದೆಯನ್ನೇ ಮನೆಯಿಂದ ಮಕ್ಕಳು ಹೊರ ಹಾಕಿದಂತ ಘಟನೆ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲೇ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಆಸ್ತಿ ವಿವಾದದ ಹಿನ್ನಲೆಯಲ್ಲಿ ತಂದೆಯನ್ನೇ ಮಕ್ಕಳು ಹೊರ ಹಾಕಿದ್ದಾರೆ. ಹೀಗಾಗಿ ನೆಲೆಯಿಲ್ಲದೇ 82 ವರ್ಷದ ವೃದ್ದ ಬಸಪ್ಪ ಪರದಾಟಿ, ದೇವಸ್ಥಾನದಲ್ಲೇ ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬಸಪ್ಪ ಅವರು ತಮ್ಮ ಮಕ್ಕಳಾದಂತ ಹನುಮಂತಪ್ಪ, ಜಯಪ್ಪ ವಿರುದ್ಧ ಈ ಆರೋಪ ಮಾಡಿದ್ದಾರೆ. ಈ ವಿಷಯ ತಿಳಿದು ಉಪವಿಭಾಗಾಧಿಕಾರಿ ಜಿಲಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ವೃದ್ಧನನ್ನು ಸಾಂತ್ವಾನ ಕೇಂದ್ರಕ್ಕೆ ಕರೆದೊಯ್ದು ಆಶ್ರಯ ನೀಡಿದ್ದಾರೆ. https://kannadanewsnow.com/kannada/minister-ramalinga-reddy-inaugurated-the-renovated-primary-health-center-in-btm-layout-bangalore/ https://kannadanewsnow.com/kannada/breaking-mother-daughter-body-found-in-farm-pond-in-bengaluru-alleges-husband-murder/ https://kannadanewsnow.com/kannada/minister-ramalinga-reddy-inaugurated-the-renovated-primary-health-center-in-btm-layout-bangalore/
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರ ರ್ಯಾಲಿ ನಡೆಸುತ್ತಿದ್ದಂತ ವೇಳೆಯಲ್ಲಿ ಘೋರ ದುರಂತವೇ ಸಂಭವಿಸಿದೆ. ವೃದ್ಧನೊಬ್ಬ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಜಗನ್ ಕಾರಿನ ಚಕ್ರಕ್ಕೆ ಸಿಲುಕಿ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರು ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರ್ಯಾಲಿಯನ್ನು ಜಗನ್ ನಡೆಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರ ತಳ್ಳಾಟವೇ ಉಂಟಾಗಿ ಈ ದುರಂತ ಸಂಭವಿಸಿದೆ. https://twitter.com/Incognito_qfs/status/1936693731849040000
ಬೆಂಗಳೂರು: ನಗರದ ಬಿ.ಟಿ.ಎಂ ಲೇಔಟ್ ವ್ಯಾಪ್ತಿಯ ಜನತೆಗೆ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆಗೊಳಿಸಿದರು. ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸ್ವ ಕ್ಷೇತ್ರದ ಅಭಿವೃದ್ಧಿಗೆ ಕಂಕಣ ತೊಟ್ಟಂತೆ, ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನವೀಕೃತ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರು ನಗರದ ಬಿ.ಟಿ.ಎಂ ವಿಧಾನಸಭಾ ಕ್ಷೇತ್ರ ಎಂದರೆ ಅಭಿವೃದ್ಧಿ,ಅಭಿವೃದ್ಧಿ ಮಾತ್ರ. ಶಿಕ್ಷಣ ಕ್ಷೇತ್ರವಿರಲಿ, Solid Waste Management, ರಸ್ತೆ ಮೂಲಭೂತ ಸೌಕರ್ಯವಿರಲಿ ಅಥವಾ ಆರೋಗ್ಯ ಕ್ಷೇತ್ರವಿರಲಿ, ಎಲ್ಲದರಲ್ಲೂ ಮಾದರಿ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಬಿ.ಟಿಎಂ ವಿಧಾನಸಭಾ ಕ್ಷೇತ್ರ ಎಂದರೆ ಅತಿಶಯೋಕ್ತಿ ಏನಿಲ್ಲ. ಅದಕ್ಕೆ ಹೊಸ ಸೇರ್ಪಡೆ ಎನ್ ಎಸ್ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ನಗರೋತ್ಥಾನದಡಿ ನವೀಕರಿಸಿ, ಮೊದಲನೇ ಮಹಡಿಯನ್ನು ಹೊಸದಾಗಿ ನಿರ್ಮಾಣ ಮಾಡಿ ಎನ್ ಎಸ್ ಪಾಳ್ಯ ಹಾಗೂ ಬಿ ಟಿ ಎಂ ಲೇಔಟ್ ಜನತೆಗೆ ಇಂದು ರಾಮಲಿಂಗಾ ರೆಡ್ಡಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ…
ಮಂಡ್ಯ: ಜಿಲ್ಲೆಯ ಜೀವನಾಡಿ ಕೆ ಆರ್ ಎಸ್ ಡ್ಯಾಂ ಹೊಸ ದಾಖಲೆ ಬರೆಯೋದಕ್ಕೆ ಸಿದ್ಧಗೊಂಡಿದೆ. ಕೆ ಆರ್ ಎಸ್ ಡ್ಯಾಂನಲ್ಲಿ ಈಗ 119.40 ಅಡಿ ಇದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರವೇ ಬಾಕಿ ಇದೆ. ಹಳೇ ಮೈಸೂರು ಭಾಗದ ರೈತರ ಜೀವನಾಡಿಯೇ ಕೆ ಆರ್ ಎಸ್ ಡ್ಯಾಂ ಆಗಿದೆ. ಈಗಾಗಲೇ 119.40 ಅಡಿ ನೀರು ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿರುವುದು ರೈತರ ಮೊಗದಲ್ಲಿ ಸಂತಸವನ್ನು ಹೆಚ್ಚಿಸಿದೆ. ಅಂದಹಾಗೇ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ನಲ್ಲಿಯೇ ಇಷ್ಟು ಪ್ರಮಾಣದಲ್ಲಿ ಕೆ ಆರ್ ಎಸ್ ಡ್ಯಾಂನಲ್ಲಿ ನೀರು ಸಂಗ್ರಹಣೆ ಆಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್ ತಿಂಗಳಿನಲ್ಲಿ ಕೆ ಆರ್ ಎಸ್ ಡ್ಯಾಂ ಭರ್ತಿಯಾಗುತ್ತಿತ್ತು. ಆದರೇ ಈ ಬಾರಿ ಇಷ್ಟೊಂದು ನೀರು ಸಂಗ್ರಹವಾಗುವ ಮೂಲಕ ಹೊಸ ಇತಿಹಾಸ ಸೃಷ್ಠಿಸಿದೆ. https://kannadanewsnow.com/kannada/pm-modi-speaks-with-iran-president-urges-immediate-de-escalation-dialogue-and-diplomacy/ https://kannadanewsnow.com/kannada/breaking-mother-daughter-body-found-in-farm-pond-in-bengaluru-alleges-husband-murder/
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದರು. ಅಲ್ಲದೇ ಉದ್ವಿಗ್ನತೆಯನ್ನು ಶಮನಗೊಳಿಸಲು ಪುನರುಚ್ಚರಿಸಿದರು. ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಇತ್ತೀಚಿನ ಉಲ್ಬಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಮತ್ತು ಮುಂದಿನ ದಾರಿಯಾಗಿ ತಕ್ಷಣದ ಉಲ್ಬಣವನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆಗೆ ನಮ್ಮ ಕರೆಯನ್ನು ಪುನರುಚ್ಚರಿಸಿದ್ದಾರೆ ಎಂದಿದ್ದಾರೆ. https://twitter.com/narendramodi/status/1936721293682131386
ಬೆಂಗಳೂರು: ಆಧುನಿಕ ಕರ್ನಾಟಕ, ಆ ಮೂಲಕ ಆಧುನಿಕ ಭಾರತ ನಿರ್ಮಾಣಕ್ಕೆ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯಿತ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಜಾತಿ, ಧರ್ಮದವರಿಗೂ ಆಶ್ರಯ, ಅನ್ನ, ಅಕ್ಷರದ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದ ಕೀರ್ತಿ ವೀರಶೈವ ಲಿಂಗಾಯತ ಮಠ ಮಾನ್ಯಗಳಿಗೆ ಸಲ್ಲುತ್ತದೆ ಎಂದರು. ವಿದ್ಯಾವಂತ ಮತ್ತು ಗುಣವಂತ ನಾಗರಿಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಹೀಗಾಗಿ ನಮ್ಮ ಸಮಾಜದ ಮಠಮಾನ್ಯಗಳ ಕೊಡುಗೆಯಿಂದ ಇಂದು ಕೋಟ್ಯಂತರ ಜನರು ವಿದ್ಯಾವಂತರಾಗಿದ್ದಾರೆ, ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಮ್ಮ ಪೂರ್ವಜರು ಪ್ರತಿಪಾದಿಸಿದರು. 12ನೇ ಶತಮಾನದಲ್ಲಿ ಸಕಲ ಜೀವಾತ್ಮರಿಗೆ ಲೇಸನ್ನು ಬಯಸುವ ಸಂದೇಶವನ್ನು ಬಸವಾದಿ ಶರಣರು ಸಾರಿದರು.…
ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ. ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಸಂಬಂಧ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದು ಸರಳ ಹಾಗೂ ಸುಗಮ ರೀತಿಯಲ್ಲಿ ಇ-ಸ್ವತ್ತು ವಿತರಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸೂಚನೆ ನೀಡಿದರು. ವಿಧಾನ ಮಂಡಲದ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199 (ಬಿ) ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇ-ಸ್ವತ್ತು ಆಸ್ತಿ ನಮೂನೆಗಳನ್ನು ವಿತರಿಸುವದರಿಂದ ರಾಜ್ಯದ ಗ್ರಾಮ ಪಂಚಾಯತಿಗಳ…
ಶಿವಮೊಗ್ಗ: ಜಿಲ್ಲೆಯಲ್ಲಿ ಸಾಲದ ಬಾಧೆಯಿಂದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಐದು ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಮೇಘರಾಜ್ ಬಿ.ಹೆಚ್ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಘರಾಜ್ ಮೂಲತಃ ರೈತರಾಗಿದ್ದು, 5 ಲಕ್ಷ ರೂ.ಗಳಿಗೂ ಅಧಿಕ ಬೆಳೆಗಾಗಿ ಸಾಲ ತೆಗೆದುಕೊಂಡಿದ್ದ ಎಂಬುದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹಾಗೂ ಗೋಲ್ಡ್ ಲೋನ್, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲವನ್ನು ಮೇಘರಾಜ್ ಮಾಡಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಕಳೆದ ಮೂರು ವರ್ಷದಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಮೇಘರಾಜ್ ಅವರ ಕೈಗೆ ಬೆಳೆ ಸರಿಯಾಗಿ ಸಿಕ್ಕಿರಲಿಲ್ಲ. ಈ ಹಿನ್ನಲೆಯಲ್ಲಿ ಹಿನ್ನೆಲೆ ಹಾಗೂ ಬೆಳೆ ಹಾನಿಯ ಕಾರಣದಿಂದಾಗಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಆನಂದಪುರ…
ಶಿವಮೊಗ್ಗ: ಪರಿತ್ಯಕ್ತ ಸೇರಿದಂತೆ ಯಾವುದೇ ಮಕ್ಕಳು ಆಧಾರ್ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯುವುದರಿಂದ ವಂಚಿತರಾಗದಂತೆ ನೋಡಿಕೊಳ್ಳಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗಿದ್ದು, ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು. ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರ್ಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರ್ಯಾಕಿಂಗ್‌ಗಾಗಿ ‘ಸಾಥಿ’ ಅಭಿಯಾನದ ಅಂಗವಾಗಿ ಸಮಿತಿ ಸದಸ್ಯರುಗಳಿಗೆ ಶುಕ್ರವಾರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿರುವನ್ವಯ ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ’ (ಸರ್ವೇ ಆಫ್ ಆಧಾರ್ ಆಂಡ್ ಆಕ್ಸಸ್ ಟು ಟ್ರ್ಯಾಕಿಂಗ್ & ಹೊಲಿಸ್ಟಿಕ್ ಇನ್ಕು÷್ಲಷನ್) ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಪರಿತ್ಯಕ್ತ ಮಕ್ಕಳಿಗೆ ಕಾನೂನು…












