Author: kannadanewsnow09

ಚಿತ್ರದುರ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ, ಮತಬೇಟೆಯಲ್ಲಿ ತೊಡಗಿದ್ದಾವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ಘಟಿಸುತ್ತಿವೆ. ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ FIR ದಾಖಲಾಗಿದೆ. ಚಿತ್ರದುರ್ಗದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ಎಫ್ಐಆರ್ ದಾಖಲಾಗಿದೆ. ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಸಂಬಂಧ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://twitter.com/ANI/status/1771847474488975833 https://kannadanewsnow.com/kannada/yo-barkolayya-shivamogga-nandu-shivannas-mass-dialogue-sparks-fidaa/ https://kannadanewsnow.com/kannada/lok-sabha-elections-2024-how-much-money-and-goods-have-been-seized-in-the-state-so-far-here-are-the-details/

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ 6.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಕರ್ನಾಟಕದಲ್ಲಿ ವಶಪಡಿಸಿಕೊಂಡ ಒಟ್ಟು ನಗದು ಮೊತ್ತ 15.78 ಕೋಟಿ ರೂ.ಗೆ ತಲುಪಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ, ಫ್ಲೈಯಿಂಗ್ ಸ್ಕ್ವಾಡ್ಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 15.78 ಕೋಟಿ ನಗದು, 17.3 ಲಕ್ಷ ಮೌಲ್ಯದ ಉಚಿತ ವಸ್ತುಗಳು, 23.37 ಕೋಟಿ ರೂ.ಗೂ ಹೆಚ್ಚು ಮೌಲ್ಯದ 7.41 ಲಕ್ಷ ಲೀಟರ್ ಮದ್ಯ, 65 ಲಕ್ಷ ರೂ.ಗೂ ಹೆಚ್ಚು ಮೌಲ್ಯದ 66.34 ಕೆಜಿ ಮಾದಕ ವಸ್ತುಗಳು ಮತ್ತು 43 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಮೂಲ್ಯ ಲೋಹಗಳನ್ನು ವಶಪಡಿಸಿಕೊಂಡಿದ್ದಾರೆ.…

Read More

ಮೈಸೂರು: ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು. ನಾವು ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಸದಂತೆ ಚುನಾವಣಾ ಆಯೋಗವು ಕಟ್ಟು ನಿಟ್ಟಿನ ನಿಯಂತ್ರಣ ಕ್ರಮ ಕೈಗೊಂಡಿದೆ. ಇದರ ನಡುವೆ ಅಕ್ರಮ ನಡೆಸೋದಕ್ಕೆ ಪ್ರಯತ್ನ ಪಟ್ಟಂತವರಿಗೆ ಚುನಾವಣಾಧಿಕಾರಿಗಳು ಶಾಕ್ ಮೇಲೆ ಶಾಕ್ ನೀಡಿದ್ದಾರೆ. ಹಾಗಾದ್ರೇ ರಾಜ್ಯಾಧ್ಯಂತ ಇದುವರೆಗೆ ಎಷ್ಟು ಹಣ, ವಸ್ತು ಸೀಜ್ ಅನ್ನೋ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯ ಚುನಾವಣಾಧಿಕಾರಿಗಳು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಒಟ್ಟು 15,78,61,211 ಹಣವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ಮತದಾರರಿಗೆ ಹಂಚೋದಕ್ಕೆ ತಂದಿದ್ದಂತ 700 ವಾಲ್ ಕ್ಲಾಕ್ ಸೇರಿದಂತೆ ರೂ.17,35,475 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಂತ ಬರೊಬ್ಬರಿ 23,37,95,611 ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. 66.35 ಕೆಜಿಯ ರೂ.65,71,600 ಮೌಲ್ಯದ ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈವರೆಗೆ ಎಫ್ ಎಸ್, ಎಸ್ ಎಸ್ ಟಿ, ಪೊಲೀಸ್ ಅಧಿಕಾರಿಗಳಿಂದ 1.10 ಕೆಜಿ ಬಂಗಾರ, ಆದಾಯ ತೆರಿಗೆ ಇಲಾಖೆಯಿಂದ 0.98 ಕೆಜಿ ಬಂಗಾರ ಸೇರಿದಂತೆ ಒಟ್ಟಾರೆ…

Read More

ಮೈಸೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ತನ್ನ ತವರು ಕ್ಷೇತ್ರದಲ್ಲಿನ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ಧರಾಮಯ್ಯ ಅವರು ನೇರವಾಗೇ ಕಣಕ್ಕೆ ಇಳಿದಿದ್ದಾರೆ. ಇಂದಿನಿಂದ ನಾಲ್ಕು ದಿನಗಳ ಕಾಲ ಮೈಸೂರಲ್ಲೇ ವಾಸ್ತವ್ಯ ಹೂಡಲಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ಕಣದಲ್ಲಿರುವಂತ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಲಿದ್ದಾರೆ. ಮೈಸೂರಿನಲ್ಲಿ ಸರಣಿ ಸಭೆಯನ್ನು ನಡೆಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ತವರು ಕ್ಷೇತ್ರದಲ್ಲೇ ಅಭ್ಯರ್ಥಿಗಳ ಗೆಲುವಿಗೆ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಶಾಸಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡುತ್ತಿರುವಂತ ಅವರು, ಗೊಂದಲ ಅಸಮಾಧಾನವಿದ್ದರೇ, ಆ ನಾಯಕರನ್ನು ಕರೆದು ಮಾತನಾಡುವ ಕೆಲಸ ಮಾಡುತ್ತಿದ್ದಾರೆ. https://kannadanewsnow.com/kannada/sonu-gowda-illegally-adopted-child-police-conduct-spot-mahazar/ https://kannadanewsnow.com/kannada/no-property-tax-hike-bbmp-clarifies-reports-circulating/

Read More

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವಿಡಿಯೋಗಳು ಹರಿದಾಡುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು BBMP ಸ್ಪಷ್ಟಪಡಿಸಲಾಗಿದೆ. Index.daily ಎಂಬ ಇನ್ಸ್ ಸ್ಟಾಗ್ರಾಮ್ ಪೇಜ್ (https://www.instagram.com/reel/C4c-4klyOlJ/?igsh=ajc0dHVwdjJ3YTBr) ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ. ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು 2 ಪಟ್ಟು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 3-5 ಪಟ್ಟು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಮಾತನಾಡಿರುತ್ತಾರೆ. ಇನ್ಸ್ ಸ್ಟಾಗ್ರಾಮ್ ನಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಹೇಳಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಯಾವುದೇ ಆಸ್ತಿ ತೆರಿಗೆ ಯನ್ನು ಹೆಚ್ಚಳ ಮಾಡುವುದಿಲ್ಲ. ಆಸ್ತಿ ತೆರಿಗೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ…

Read More

ಮೈಸೂರು : ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತವಾಗಿ ನುಡಿದರು. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು. ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ…

Read More

ಮೈಸೂರು: ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಯಪ್ಪಾ ಯಪ್ಪಾ ಮೋದಿಯವರಷ್ಟು, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ ಎಂಬುದಾಗಿ ಸಿ.ಎಂ.ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದೆ ಎಂದರು.‌ ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ…

Read More

ಮೈಸೂರು: ಮೋದಿ ಆಶ್ವಾಸನೆಗಳ ಗತಿ ಏನಾಯ್ತು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು ಶೈಲಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಚಪ್ಪಾಳೆ ತಟ್ಟಿ ಕಾರ್ಯಕರ್ತರು ಸಂಭ್ರಮಿಸಿದರು. ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. *ಮೋದಿಯವರು ವಿದೇಶದಿಂದ ಕಪ್ಪು ಹಣ ತರ್ತೀವಿ ಅಂದ್ರು- ತಂದ್ರಾ? *ಎಲ್ಲರ ಅಕೌಂಟಿಗೆ 15 ಲಕ್ಷ ಹಾಕ್ತೀವಿ ಅಂದ್ರು. ಹಾಕಿದ್ರಾ? *ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು. ಮಾಡಿದ್ರಾ? *ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ್ರು, ದುಪ್ಪಟ್ಟಾಯ್ತಾ? *ಅಚ್ಛೇ ದಿನ್ ಆಯೆಗಾ ಅಂದ್ರು, ಬಂತಾ ಅಚ್ಛೆ ದಿನ್? *ಭಾರತದ ಸಾಲವನ್ನೆಲ್ಲಾ ತೀರಿಸ್ತೀವಿ ಅಂದ್ರು. ಮೋದಿ ಪ್ರಧಾನಿಯಾದಾಗ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ಈಗ ದೇಶದ ಸಾಲ 183 ಲಕ್ಷ ಕೋಟಿಗೆ ಏರಿಕೆ ಆಗಿದೆ. 10…

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಡಿ ವಶದಲ್ಲಿದ್ದಾಗ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿನ ನೀರು ಮತ್ತು ಒಳಚರಂಡಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಮ್ಮ ಮೊದಲ ನಿರ್ದೇಶನವನ್ನು ನೀಡಿದ್ದಾರೆ. ಶನಿವಾರ ತಡರಾತ್ರಿ ಕೇಜ್ರಿವಾಲ್ ಅವರ ಸೂಚನೆಗಳನ್ನು ಸ್ವೀಕರಿಸಿದ ದೆಹಲಿ ಜಲ ಸಚಿವೆ ಅತಿಶಿ, ಪತ್ರಿಕಾಗೋಷ್ಠಿಯಲ್ಲಿ ತಮ್ಮದೇ ಆದ ಸವಾಲುಗಳ ನಡುವೆ ಕೇಜ್ರಿವಾಲ್ ಅವರ ಬದ್ಧತೆಯನ್ನು ನೋಡಿ ಕಣ್ಣೀರು ಬಂದಿದೆ ಎಂದು ಹೇಳಿದರು. ಬೇಸಿಗೆ ಸಮೀಪಿಸುತ್ತಿದ್ದಂತೆ ಕೊರತೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಹೆಚ್ಚುವರಿ ನೀರಿನ ಟ್ಯಾಂಕರ್ ಗಳನ್ನು ನಿಯೋಜಿಸುವಂತೆ ಕೇಜ್ರಿವಾಲ್ ನಿರ್ದೇಶನ ನೀಡಿದರು. ಮುಖ್ಯ ಕಾರ್ಯದರ್ಶಿಯನ್ನು ಒಳಗೊಳ್ಳಲು ಮತ್ತು ಅಗತ್ಯವಿದ್ದರೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಸಹಾಯವನ್ನು ಪಡೆಯಲು ಕೇಜ್ರಿವಾಲ್ ಅವರ ನಿರ್ದೇಶನಗಳನ್ನು ಅತಿಶಿ ಉಲ್ಲೇಖಿಸಿದರು. ಅವರಿಂದ ಸಂಪೂರ್ಣ ಸಹಕಾರವನ್ನು ನಿರೀಕ್ಷಿಸುತ್ತಾರೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮನ್ನು ದೆಹಲಿಯ ಜನರ ಮುಖ್ಯಮಂತ್ರಿ ಎಂದು ಪರಿಗಣಿಸುವುದಿಲ್ಲ, ಅವರು ದೆಹಲಿಯ ಪ್ರತಿಯೊಬ್ಬ ನಿವಾಸಿಯನ್ನು ತಮ್ಮ ಕುಟುಂಬದ ಸದಸ್ಯ ಎಂದು ಪರಿಗಣಿಸುತ್ತಾರೆ. ಆದ್ದರಿಂದ ಮಗನಾಗಿ, ಹಿರಿಯ ಸಹೋದರನಾಗಿ, ಕಸ್ಟಡಿಯಲ್ಲಿಯೂ…

Read More