Author: kannadanewsnow09

ಬೆಂಗಳೂರು: ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದಂತ 5, 8 ಮತ್ತು 9ನೇ ತರಗತಿ ಪರೀಕ್ಷೆ ಸ್ಥಗಿತಗೊಂಡಿತ್ತು. ಈ ಪರೀಕ್ಷೆ ಸಂಬಂಧ ಹೈಕೋರ್ಟ್ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿ, ಮುಂದುವರೆಸೋದಕ್ಕೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಸೋಮವಾರದಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಇದಕ್ಕಾಗಿ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಸಂಕಲನಾತ್ಮಕ ಮೌಲ್ಯಾಮಾಪನ-2 ಅಂದರೇ ಎಸ್ಎ-2 ನಡೆಸೋದಕ್ಕೆ ನಿರ್ಧರಿಸಲಾಗಿತ್ತು ಎಂದಿದ್ದಾರೆ. ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಪರೀಕ್ಷೆಯನ್ನು ರದ್ದುಪಡಿಸಿ ಆದೇಶಿ, ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಧ್ಯಂತರ ಅರ್ಜಿಗಳ ವಿಚಾರಣೆ ಸೂಚಿಸಿತ್ತು. ಆ…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ ಸೇರಿಸಿದರೆ ಸಾಕಾಗುವುದಿಲ್ಲ.…

Read More

ಬೆಂಗಳೂರು: ಸಾಫ್ಟ್ ವೇಲ್ ಅಪ್ ಡೇಟ್ ಕಾರಣದಿಂದಾಗಿ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಂಡಿತ್ತು. ಈ ಹಿನ್ನಲೆಯಲ್ಲಿ ವಿದ್ಯುತ್ ಗ್ರಾಹಕರು ಬಿಲ್ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ವಿಳಂಬ ವಿದ್ಯುತ್ ಬಿಲ್ ಪಾವತಿಗೆ ಬಡ್ಡಿ ವಿಧಿಸೋದಿಲ್ಲ ಎಂಬುದಾಗಿ ಎಸ್ಕಾಂ ಮಾಹಿತಿ ನೀಡಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19ರವರೆಗೆ ಎಲ್ಲಾ 5 ಎಸ್ಕಾಂಗಳ ನಗರ ಪ್ರದೇಶಗಳ (RAPDRP) ಸ್ಥಗಿತಗೊಂಡಿದ್ದ ಆನ್ ಲೈನ್ ವಿದ್ಯುತ್ ಸೇವೆಗಳು ಇದೀಗ ಪುನಾರಂಭಗೊಂಡಿದ್ದು, ಈ ತಿಂಗಳ 30ರೊಳಗೆ ಎಲ್ಲಾ ಆನ್ ಲೈನ್ ಸೇವೆಗಳು ಯಥಾಸ್ಥಿತಿಗೆ ಬರಲಿವೆ ಎಂದು ತಿಳಿಸಿದೆ. ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಬಿಲ್ ವಿಳಂಬ ಪಾವತಿಗೆ ಬಡ್ಡಿ ವಿಧಿಸುವುದಿಲ್ಲ ಹಾಗೂ ಈ ಸಂದರ್ಭದಲ್ಲಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಆನ್ ಲೈನ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ, ಹೊಸ…

Read More

ಬೆಂಗಳೂರು: ಇಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಕಾಯ್ದಿರಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯ ತೀರ್ಪು ಪ್ರಕಟಿಸಲಾಗಿತ್ತು. ಈ ತೀರ್ಪಿನಲ್ಲಿ ಬಾಕಿ ಪರೀಕ್ಷೆ ನಡೆಸೋದಕ್ಕೆ ಶಿಕ್ಷಣ ಇಲಾಖೆಗೆ ಅನುಮತಿ ನೀಡಿತ್ತು. ಹೀಗಾಗಿ ಮಾರ್ಚ್.25ರಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪುನರಾರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ…

Read More

ಬೆಂಗಳೂರು : “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ರಾಜ್ಯದಲ್ಲಿ 78 ಲಕ್ಷ ಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರೂ. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಇನ್ನು ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ಸಂಗ್ರಹವಾಗಿತ್ತು. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ 2 ಲಕ್ಷ ಸಂಗ್ರಹಿಸಿ ಸುಮಾರು 20 ಕೋಟಿ ಸಂಗ್ರಹಿಸಲಾಯಿತು. ಈ ಬಾರಿ ಲೋಕಸಭೆ ಚುನಾವಣೆ ಸಮಯದಲ್ಲೂ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದೆ. ಎಐಸಿಸಿ ನಾಯಕರು ಬೇಡ ಎಂದು ತಿಳಿಸಿದರು.…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇದರೊಟ್ಟಿಗೆ ಮಾದರಿ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಅನೇಕ ಕಡೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗುತ್ತಿವೆ. ಹಾಗಾದ್ರೇ ಲೋಕಸಭಾ ಚುನಾವಣೆ ಹೊತ್ತಲ್ಲೇ ನಿಮಗೊಂದು ಉಪಯುಕ್ತ ಮಾಹಿತಿ ಎನ್ನುವಂತೆ, ನೀತಿ ಸಂಹಿತೆ ಕಾಯ್ದೆ ಮತ್ತು ಕಲಂಗಳು ಏನೆಲ್ಲಾ ಅಂತ ಮುಂದೆ ಓದಿ. ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆದು, ಜೂನ್.4ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಅಕ್ರಮ ತಡೆಗೆ ಚುನಾವಣಾ ಆಯೋಗವು ಮಹತ್ವದ ಕ್ರಮ ಕೈಗೊಂಡಿದೆ. ಹೀಗಿದ್ದೂ ಇದನ್ನು ಮೀರಿ ಅಕ್ರಮ ಎಸಗೋದಕ್ಕೆ ಪ್ರಯತ್ನ ಪಟ್ಟವರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ಮಾಹಿತಿಯಂತೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ವಿವಿಧ ಕಾಯ್ದೆ ಮತ್ತು ಕಲಂಗಳಿದ್ದಾವೆ. 125 ಆರ್.ಡಿ ಆಕ್ಟ್ ಮತ್ತು 153(ಎ), 295, 505 ಐಪಿಸಿ ಕಾಯ್ದೆಯಂತೆ ಧರ್ಮ, ಜಾತಿ, ಭಾಷೆ ಆಧಾರದ ಮೇಲೆ ಗುಂಪು ಗುಂಪುಗಳ ಮದ್ಯೆ ದ್ವೇಷ ಭಾವನೆ ಉಂಟು ಮಾಡೋದಾಗಿದೆ. 125…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ಷೇಪಾರ್ಹ ವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದಂತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ನಿಯೋಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರರಾದ ಹೆಚ್. ವೆಂಕಟೇಶ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ವಸಂತ್ ಕುಮಾರ್ ಅವರು ಇಂದು ಸಂಜೆ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿದ್ದಾರೆ. ಬಿಜೆಪಿ ಸಲ್ಲಿಸಿರುವಂತ ದೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಆಕ್ಷೇಪಾರ್ಹ ಟ್ವಿಟ್ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. https://kannadanewsnow.com/kannada/breaking-court-dismisses-plea-challenging-income-tax-re-assessment/ https://kannadanewsnow.com/kannada/state-government-orders-formation-of-investigation-team-to-probe-foeticide-case/

Read More

ಬೆಂಗಳೂರು: ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಹೊಸಕೋಟೆ ನಗರದ (1) ಎಸ್.ಪಿ.ಜಿ. ಆಸ್ಪತ್ರೆ, (2) ಓವಮ್ ಆಸ್ಪತ್ರೆ, ಹೊಸಕೋಟೆ (3) ನೆಲಮಂಗಲದ ಅಸರಾ ಆಸ್ಪತ್ರೆ, ಈ ಖಾಸಗಿ ಆಸ್ಪತ್ರೆಗಳು ಪಿಸಿ & ಪಿಎನ್‌ಡಿಟಿ ಮತ್ತು ಎಂ.ಟಿ.ಪಿ. ಕಾಯ್ದೆ ಉಲ್ಲಂಘಿಸಿ, ಪರವಾನಗಿ ಪಡೆಯದೇ ಗರ್ಭಪಾತಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತಾದ ತಪಾಸಣೆ ಮಾಡಲು ಜಿಲ್ಲಾ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿತ ಅಧಿಕಾರ ಪಡೆದು ಹಾಗೂ ಈ ಖಾಸಗಿ ಆಸ್ಪತ್ರೆಗಳ ಅನಧಿಕೃತ ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಿರುತ್ತೇನೆಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯು ವರದಿ ಸಲ್ಲಿಸುತ್ತಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ತಮ್ಮ ಕರ್ತವ್ಯಕ್ಕೆ ಅಡಚಣೆ ಯುಂಟಾಗುತ್ತಿರುವುದರಿಂದ ತಮಗೆ ರಜೆ ಮೇಲೆ ತೆರಳಲು ಅನುಮತಿ ನೀಡುವಂತೆ ಹಾಗೂ ಜಿಲ್ಲಾ ಆಕುಕ ಅಧಿಕಾರಿಗಳ ಒತ್ತಡ ತಾಳದೆ ತಾವು…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನುಗೌಡ ಅವರಿಗೆ ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 4 ದಿನ ಪೊಲೀಸ್ ಕಷ್ಟಡಿಗೆ ಕೋರ್ಟ್ ನೀಡಿ ಆದೇಶಿಸಿದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆ್ಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಲಾಗಿತ್ತು. ಈ ಬಳಿಕ ಅವರನ್ನು ನ್ಯಾಯಾಲಯದ…

Read More

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿನ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿದಂತ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರು ಹನುಮಾನ್ ಜಾಲೀಸ್ ಹಾಕಿದ್ದಕ್ಕೆ ಅವರ ಮೇಲೆ ನಡೆದಿದ್ದ ಹಲ್ಲೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಸೇರಿ 41 ಮಂದಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ಇಂದು ಮಧ್ಯಂತರ ತಡೆಯನ್ನು ನೀಡಿ ಆದೇಶಿಸಿದೆ. ಇನ್ನೂ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಬಾಂಬರ್ ತಮಿಳುನಾಡಿನ ವ್ಯಕ್ತಿಯ ಬಗ್ಗೆ…

Read More