Author: kannadanewsnow09

ರಾಮನಗರ/ಬೆಂಗಳೂರು: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು. ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ…

Read More

ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡು ಪ್ರತಿಭಟನೆಯನ್ನು ಸ್ಥಳೀಯರು ನಡೆಸಿದ್ದರು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದ್ದರು. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆ ಸಂಚಾರ ತಡೆ ನಡೆಸಲಾಗಿತ್ತು. ಮುಸ್ಲಿಂ ಸಮುದಾಯವು ರಸ್ತೆಯ ಮಧ್ಯದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈ ಘಟನೆ ಸಂಬಂಧ ಅಂದು ರಾತ್ರಿ ಪಾಳಿಯಲ್ಲಿದ್ದಂತ ಸಿರಿವಾರ ಠಾಣೆಯ ಇಬ್ಬರು ಪೇದೆಗಳಾದಂತ ಇಸ್ಮಾಯಿಲ್ ಹಾಗೂ ರೇವಣ್ಣ ಸಿದ್ಧಪ್ಪ ಕರ್ತವ್ಯ ಲೋಪ ಎಸಗಿರೋದಾಗಿ ತಿಳಿದು ಬಂದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಇಬ್ಬರು…

Read More

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶುಕ್ರವಾರ ತಿರುಗೇಟು ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ ಎಂದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು. ಪ್ರತ್ಯೇಕ ರಾಷ್ಟ್ರ ದ ಬಗ್ಗೆ ಸಂಸದ ಡಿ.ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ; ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡರು. ನಿನ್ನೆ ಮುಖ್ಯಮಂತ್ರಿ ಅವರು…

Read More

ಬೆಂಗಳೂರು: ಚೆನ್ನೈ ಸೆಂಟ್ರಲ್ ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ಸಾಪ್ತಾಹಿಕವಾಗಿ ಸಂಚರಿಸುತ್ತಿತ್ತು. ಹೀಗೆ ಸಂಚರಿಸುತ್ತಿದ್ದಂತ ವಿಶೇಷ ರೈಲನ್ನು ಮುಂದುವರೆಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಂದೇ ಭಾರತ್ ವಿಶೇಷ ರೈಲುಗಳ ಸೇವೆಯನ್ನು ಮುಂದುವರಿಸಲು, ಅಸ್ತಿತ್ವದಲ್ಲಿರುವ ಟಿಕೆಟ್ ದರ್, ಬೋಗಿಗಳ ಸಂಯೋಜನೆ, ನಿಲುಗಡೆಗಳು, ವೇಳಾಪಟ್ಟಿ ಮತ್ತು ಸೇವೆಗಳ ದಿನಗಳೊಂದಿಗೆ ಈ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 27, 2024 ರವರೆಗೆ ವಿಸ್ತರಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ವಲಯವು ಸೂಚಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06037 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ವಂದೇ ಭಾರತ್ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರುವರಿ 7 ರಿಂದ ಮಾರ್ಚ್ 27, 2024 ರವರೆಗೆ ಪ್ರತಿ ಬುಧವಾರ (8 ಟ್ರಿಪ್) ಸಂಚರಿಸಲಿದೆ. ಈ ಮೊದಲು ಜನವರಿ 31, 2024…

Read More

ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ. ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ತಿಳಿಸಿದೆ. ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ…

Read More

ಮಂಡ್ಯ: ಜಿಲ್ಲೆಯ ಕೆರಗೋಡಿನಲ್ಲಿನ ಹನುಮಧ್ವಜ ವಿವಾದದ ಬಳಿಕ, ಜಿಲ್ಲಾಡಳಿತದಿಂದ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗ ಎಚ್ಚರಿಕೆ ವಹಿಸಿದೆ. ಅದರ ಸಲುವಾಗಿ ಮಹತ್ವದ ಕ್ರಮವನ್ನು ಕೈಗೊಂಡಿದೆ. ಒಂದು ವೇಳೆ ನೀವು ಮಂಡ್ಯ ಹನುಮಧ್ವಜ ವಿವಾದದ ಸಂಬಂಧ ಏನಾದ್ರೂ ಹೀಗೆ ಮಾಡಿದ್ರೇ, ನಿಮ್ಮ ವಿರುದ್ಧ ಕೇಸ್ ಫಿಕ್ಸ್ ಆಗಲಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದೆ ಎಂದಿದೆ. ಈ ಸಂಬಂಧ ಯಾರಾ ಆಗಲಿ ಸಾಮಾಜಿಕ ಜಾಲತಾಣಗಳಾದ ಎಕ್ಸ್, ಫೇಸ್ ಬುಕ್, ವಾಟ್ಸ್ ಆಪ್, ಇನ್ ಸ್ಟಾಗ್ರಾಂ, ಯೂಟ್ಯೂಬ್  ಇತ್ಯಾದಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವೀಡಿಯೋಗಳು, ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್ ಗಳು ಹಾಗೂ ಉದ್ರೇಕಕಾರಿ ಭಾಷಣಗಳುವಂತಿಲ್ಲ. ಒಂದು ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಉದ್ರೇಕಕಾರಿ ಭಾಷಣ, ಪೋಸ್ಟರ್ ಕಳುಹಿಸಿದ್ರೇ, ಇದಕ್ಕೆ ಪ್ರಚೋದನೆ ನೀಡಿದ್ರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಸಿದೆ.…

Read More

ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅದರ ಬದಲಾಗಿ ನಮ್ಮ ಪಕ್ಷದ ಶಾಲು ಹಾಕಬಹುದಾಗಿತ್ತು ಎಂಬುದಾಗಿ ತಿಳಿಸಿದ್ದಾರೆ. ಮೈತ್ರಿ ಬಳಿಕ ಒಂದುಗೂಡಿ ಕೆಲಸ ಮಾಡ್ತಿದ್ದೇವೆ. ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಮಂಡ್ಯದಲ್ಲಿನ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕುಮಾರಸ್ವಾಮಿಗೆ ಯಾರೋ ಬಂದು ಕೇಸರಿ ಶಾಲು ಹಾಕಿರ್ತಾರೆ. ಅವರೇ ಏನು ಹಾಕಿರೋದಿಲ್ಲ ಎಂದರು. ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದರ ಬಗ್ಗೆ ದೊಡ್ಡ ವ್ಯಾಖ್ಯಾನ ಮಾಡೋ ಅಗತ್ಯವಿಲ್ಲ. ಕೇಸರಿ ಶಾಲು ಬದಲು ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದರು. ನಾನು ಯಾವತ್ತೂ ಕೇಸರಿ ಶಾಲು ಹಾಕೋದಿಲ್ಲ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕಲ್ಲ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ…

Read More

ಬೆಂಗಳೂರು: ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಕೆ. ಇಲ್ಲವಾದಲ್ಲಿ ರದ್ದು ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಚುನಾವಣಾ ಆಯೋಗಕ್ಕೆ ಅವರ ವಿರುದ್ಧ ದೂರು ನೀಡಿದ್ದಾರೆ. ಇಂದು ಕೆಆರ್ ಸರ್ಕಲ್ ನಲ್ಲಿರುವಂತ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದಂತ ಅವರು, ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಅವರು ಮತದಾರರನ್ನು ಸೆಳೆಯೋ ಪ್ರಯತ್ನಕ್ಕೆ ಇಳಿಸಿದ್ದಾರೆ. ಇದೇ ಕಾರಣದಿಂದಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದರೇ ಮಾತ್ರವೇ ಗ್ಯಾರಂಟಿ ಯೋಜನೆ ಮುಂದುವರೆಯಲಿದ್ದಾವೆ. ಸೋತರೆ ರದ್ದು ಎಂಬುದಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಆಮಿಷಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಚುನಾವಣಾ ಆಯೋಗಕ್ಕೆ…

Read More

ಮಂಡ್ಯ: ಜಿಲ್ಲೆಯ ಕೃಷ್ಣ ರಾಜ ಸಾಗರ ಅಂದರೆ ಕೆ ಆರ್ ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. KRS ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ನಿಷೇಧಿಸಿರೋದಾಗಿ ತಿಳಿಸಿದೆ. ಜನವರಿ 8ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್ ಆದೇಶದಂತೆ ಸಾರ್ವಜನಿಕ ಪ್ರಕಟಣೆಯನ್ನು ಮಂಡ್ಯ ಜಿಲ್ಲಾಡಳಿತದಿಂದ ಇಂದು ಹೊರಡಿಸಲಾಗಿದೆ. ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ, ಗಣಿಗಾರಿಕೆ ಸಂಬಂಧಿತ ಚಟುವಟಿಕೆ ನಿಷೇಧಿಸಿ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕಟಣೆ ಹೊರಡಿಸಿ, ಕೋರ್ಟ್ ಆದೇಶ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಕೋರ್ಟ್ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆಯನ್ನು ನೀಡಲಾಗಿದೆ. ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ

Read More

ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ಮೇಷ ರಾಶಿ ಇಂದಿನ ದಿನ ಇಂದು ನೀವು ಮಿಶ್ರ ಫಲವನ್ನು ಪಡೆಯುವ ದಿನ. ಅಂತಹ ಪರಿಸ್ಥಿತಿಯಲ್ಲಿ, ಉನ್ನತ ಅಧಿಕಾರಿಯೊಂದಿಗಿನ ಸಂಘರ್ಷವು ಹಾನಿಕಾರಕವಾಗಿರುತ್ತದೆ. ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ವ್ಯವಹಾರದಲ್ಲಿ ಹೊಸ ಸಂಬಂಧಗಳು ಅದೃಷ್ಟವನ್ನು ತರುತ್ತವೆ. ಇಂದು ನಿಮಗೆ ಸಾಮಾಜಿಕ ಗೌರವ ಸಿಗುತ್ತದೆ. ಸ್ನೇಹಿತರೊಂದಿಗೆ ಸುದೀರ್ಘ ಪ್ರವಾಸಕ್ಕೆ ಹೋಗಬಹುದು. ದಂಪತಿಗಳು ಜೀವನದಲ್ಲಿ ಮಾಧುರ್ಯ…

Read More