Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸೊರಬದ ಉಳವಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಟ್ರಿಲ್ಲರ ಹೊಡೆಯುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಪತ್ರೆಸಾಲಿನ ಯುವಕ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಡೆಡ್ ಲೈನ್ ಎಂದು ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ, ಯುವಕನಿಗೆ ವಿದ್ಯುತ್ ಶಾಕ್ ಉಳವಿಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ, ಪಕ್ಕದಲ್ಲಿ ಡೆಡ್ ಲೈನ್ ಎಂಬುದಾಗಿ ವಿದ್ಯುತ್ ವಯರ್ ಸಹಿತ ಕಂಬಗಳನ್ನು ಹಾಗೆ ಬಿಡಲಾಗಿದೆ. ಇದೇ ಇಂದಿನ ಘಟನೆಗೆ ಕಾರಣ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೆಡ್ ಲೈನ್ ಎಂದು ಮೇನ್ ಲೈನ್, ನಾಲ್ಕು ಲೈನ್ ಪಕ್ಕದಲ್ಲೇ ಗೈಯಿರುವ ಕಂಬವನ್ನು ಬಿಡಲಾಗಿದೆ. ಇದಕ್ಕೆ ಬಳ್ಳಿ ಸುತ್ತಿಕೊಂಡು ಹೋಗಿ ಮೇನ್ ಲೈನ್ ಗೆ ತಾಗಿದೆ. ಇಂದು ಅದೇ ಕಾರಣಕ್ಕಾಗಿ ಟ್ರ್ಯಾಕ್ಟರ್ ಗೆ ಗೈ ತಾಗಿದ್ದೇ ತಡ ವಿದ್ಯುತ್ ಶಾಕ್ ಹೊಡೆದಿದೆ. ಇದರಿಂದ ಅರುಣ್ ಕುಮಾರ್ ಕೈ, ಕಾಲು ಸುಟ್ಟು ಹೋಗಿವೆ. ಜೊತೆಗೆ ಟ್ರ್ಯಾಕ್ಟ್ ಸಹ ಸುಟ್ಟಿದೆ ಎಂಬುದು ಜನರ ಆರೋಪವಾಗಿದೆ. ಮೆಸ್ಕಾಂ ಕಚೇರಿ ಮುಂದೆ ಇದ್ದರೂ ಕಣ್ ಮುಚ್ಚಿ ಕುಳಿತ…
ಯಾದಗಿರಿ: ಜಿಲ್ಲೆಯಲ್ಲಿ ರೌಡಿ ಶೀಟರ್ ಜೊತೆ ಕೇಕ್ ಕಟ್ ಮಾಡಿದಂತ ಪಿಎಸ್ಐ ಒಪ್ಪರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಠಾಣೆಯ ಪಿಎಸ್ಐ ರಾಜಶೇಖರ್ ರಾಠೋಡ್ ಅವರು ರೌಡಿ ಶೀಟರ್ ಜೊತೆಗೆ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿದ್ದರು. ರೌಡಿ ಶೀಟರ್ ಶೀಟರ್ ನಾಗರಾಜ್ ಜೊತೆಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ್ದ ಪೋಟೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದವು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅವರು ನಾರಾಯಣಪುರ ಠಾಣೆಯ ಪಿಎಸ್ಐ ರಾಜಶೇಖರ ರಾಠೋಡ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. https://kannadanewsnow.com/kannada/rs-300-spent-on-meals-300-crore-cm-siddaramaiah-collection-r-ashok/ https://kannadanewsnow.com/kannada/770606-2breaking-bjp-releases-first-list-for-bihar-elections-names-of-71-candidates-announced/
ಬೆಂಗಳೂರು: ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ; ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ ಸರಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ನೀಡಿದೆ. ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು. ವೇತನ ಸಿಗದೇ ಗ್ರಂಥಪಾಲಕರ ಆತ್ಮಹತ್ಯೆ, ಬಿಲ್ ಪಾವತಿ ಆಗದೇ ಗುತ್ತಿಗೆದಾರರ ಆತ್ಮಹತ್ಯೆ, ವರ್ಗಾವಣೆ ಕಮಿಷನ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ, ನಿಗಮಗಳಲ್ಲಿ ಸರಕಾರಿ ಸಾಲ ಸಿಗದೇ ಮೈಕ್ರೋ ಫೈನಾನ್ಸ್ ಕಿರುಕುಳದಲ್ಲಿ ಬಡವರ ಆತ್ಮಹತ್ಯೆ, ಬರ ಮತ್ತು…
ಬೆಂಗಳೂರು: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ; ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ ಎಂದು ಆರ್. ಅಶೋಕ್ ಅವರು ಆರೋಪಿಸಿದರು. ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ. ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಕಿರಣ್ ಮಜುಂದಾರ್ ಅವರು ಟ್ವೀಟ್ ಮಾಡಿದ್ದಾರೆ. ಚೀನಾದ ಕಂಪೆನಿಯು ರಸ್ತೆಯ ಪರಿಸ್ಥಿತಿ ಕೆಟ್ಟದಾಗಿ ಇರುವ ಕುರಿತು ಕಸದ ರಾಶಿ ಬಗ್ಗೆ ತಿಳಿಸಿ, ಹೂಡಿಕೆ ಬೇಡವೇ ಎಂದು ಕೇಳಿದೆ ಎಂದು ಪ್ರಸ್ತಾಪಿಸಿದ್ದಾರೆ ಎಂದು ಗಮನಕ್ಕೆ ತಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಎಂದು ಕೇಳಿದರು. ಮೋಹನ್ದಾಸ್ ಪೈ ಅವರು…
ಬೆಂಗಳೂರು: ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದು ಪ್ರಕಟಿಸಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಇಂದು ಮತ್ತು ನಾಳೆ (14 ಮತ್ತು 15 ಅಕ್ಟೋಬರ್, 2025) ನಡೆಯುತ್ತಿರುವ ಪ್ರವಾಸೋದ್ಯಮದ ಹೊಸ ಉಪಕ್ರಮಗಳ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಸಚಿವರು ಇಂದು ಮಾತನಾಡುತ್ತಿದ್ದರು. ಜಾಗತಿಕ ಸ್ಪರ್ಧಾತ್ಮಕ ಪ್ರವಾಸೋದ್ಯಮ 50 ತಾಣಗಳನ್ನು ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಿಷನ್ನ ಅಡಿಯಲ್ಲಿ ಕರ್ನಾಟಕ ಸರ್ಕಾರವು ಗದಗ, ಹಂಪಿ, ಮೈಸೂರು ಮತ್ತು ಉಡುಪಿಗಳನ್ನು ಭವಿಷ್ಯೋತ್ತರ ಜಾಗತಿಕ ತಾಣಗಳೆಂದು ಪರಿಗಣಿಸಬೇಕೆಂದು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದೆ. ಪಾರಂಪರಿಕ ಜಾಗತಿಕ ತಾಣದ ಎಲೆಮರೆಯ ಕಾಯಿಯಂತೆ ಅನರ್ಘ್ಯ ರತ್ನದಂತಹ ತಾಣವಾಗಿರುವ ಗದಗ ಪರಂಪರೆ, ನಿಸರ್ಗ ಮತ್ತು ಸಂಸ್ಕೃತಿಗಳ ಸಮ್ಮೀಲನವಾಗಿ ಪರಿಪಕ್ವವಾದ ಸೌಹಾರ್ದತೆಯನ್ನು…
ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚಿಸಲಾಗಿದೆ. ಅದರಲ್ಲಿ ದಿನಾಂಕ:05-04-2017 ರಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಸಮವಸ್ತ್ರ ಧಲಿಸಿ ಪ್ರಯಾಣಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಮವಸ್ತ್ರ ಧರಿಸದೆ ಇಲಾಖೆಯ ಗುರುತಿನ ಚೀಟಿ ತೋಲಿಸಿ ಪ್ರಯಾಣ ಮಾಡುವ ಅಧಿಕಾರಿ/ಸಿಬ್ಬಂದಿಗಳಿಗೆ ಉಚಿತವಾಗಿ ಪ್ರಯಾಣಿಸಲು ತಮ್ಮ ಸಂಸ್ಥೆಯ ಎಲ್ಲಾ ನಿರ್ವಾಹಕರುಗಳಿಗೆ ಸೂಚನೆ ನೀಡುವಂತೆ ಕೋರಲಾಗಿತ್ತು ಎಂದಿದ್ದಾರೆ. ಆದರೆ ಉಲ್ಲೇಖಿತ ತಮ್ಮ ಪತ್ರದಲ್ಲಿ ಸಮವಸ್ತ್ರ ಧರಿಸಿದ ಪೊಲೀಸ್ ಸಿಬ್ಬಂದಿ ವರ್ಗದವರು ಮಾತ್ರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾ ಪ್ರಯಾಣಿಸಲು ಅವಕಾಶ ನೀಡುವಂತೆ ತಮ್ಮ ಇಲಾಖೆಯ ಎಲ್ಲಾ ಚಾಲನಾ ಸಿಬ್ಬಂದಿಗಳಗೂ ಮಾಹಿತಿ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿರುತ್ತದೆ. ಈಗಾಗಲೇ ಬೆಂಗಳೂರು ಮಹಾನಗರ ಸಾಲಿಗೆ ಸಂಸ್ಥೆಯ ವತಿಯಿಂದ…
ಬೆಂಗಳೂರು: ಉನ್ನತ ವ್ಯಾಸಂಗ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್ ಗಳಿಗೆ ವೈದ್ಯಾಧಿಕಾರಿಗಳನ್ನು ಸೇವಾನಿರತ ಕೋಟಾದಡಿ ಅನುಮೋದಿಸಲು ಅಥವಾ ನಿಯೋಜನೆ ಮುಖಾಂತರ ಪ್ರಾಯೋಜಿಸಲು ಈ ಮಾರ್ಗಸೂಚಿಗಳನ್ನು ಹಾಗೂ ಅರ್ಹತಾ ಮಾನದಂಡಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬಿಎಸ್ ಅವರು ನಡವಳಿಯನ್ನು ಹೊರಡಿಸಿದ್ದು, ವೈದ್ಯಾಧಿಕಾರಿಗಳನ್ನು ಸ್ನಾತಕೋತ್ತರ ವ್ಯಾಸಂಗ ಮತ್ತು ಸೂಪರ್-ಸ್ಪೆಷಾಲಿಟಿ ಉನ್ನತ ವ್ಯಾಸಂಗಕ್ಕೆ ಸೇವಾನಿರತವಾಗಿ ನಿಯೋಜಿಸುವ ಸಂದರ್ಭದಲ್ಲಿ ಪ್ರಸ್ತುತ ‘ಕರ್ನಾಟಕ ನಾಗರಿಕ ಸೇವಾ ನಿಯಮಗಳು’, ‘ಕರ್ನಾಟಕ ಸರ್ಕಾರಿ ಸೇವಾ (ಸಮೂಹ-ಎ ಅಧಿಕಾರಿಗಳ ಉನ್ನತ ಅಧ್ಯಯನಕ್ಕೆ ಪ್ರತಿನಿಯೋಜನೆ ಮತ್ತು ತರಬೇತಿ ರಜೆ) ನಿಯಮಗಳು, 2008’ ಮತ್ತು ‘ಕರ್ನಾಟಕ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಮತ್ತು ಡಿಪ್ಲೊಮಾ ಕೋರ್ಸ್ಗಳ ಆಯ್ಕೆ ಮತ್ತು ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯ ನಡವಳಿಕೆ ನಿಯಮಗಳು 2006’ರ ನಿಯಮ ಮತ್ತು ನಿಬಂಧನೆಗಳೊಂದಿಗೆ ನಡೆಸಲಾಗುತ್ತಿದ ಎಂಬುದನ್ನು ಗಮನಿಸಲಾಗಿದೆ. ಆದಾಗ್ಯೂ, ಈ ನಿಯಮಗಳ ನಡುವೆ ಸ್ಥಿರತೆ ಮತ್ತು…
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ. ಬರೋಬ್ಬರಿ ಕೆ ಎಸ್ ಆರ್ ಟಿ ಸಿಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:22.10.2025 ಹಾಗೂ 26.10.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು,…
ಬೆಂಗಳೂರು: ರಾಜ್ಯದಲ್ಲಿ ಬಳಕೆಯಲ್ಲಿರುವಂತ 15 ಕಾಫ್ ಸಿರಪ್ ಸುರಕ್ಷಿತವೆಂಬುದಾಗಿ ಲ್ಯಾಂಬ್ ವರದಿಯಿಂದ ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಿಂದ ಕಾಫ್ ಸಿರಪ್ ಟೆಸ್ಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 15 ಕಾಫಿ ಸಿರಪ್ ಸುರಕ್ಷಿತ ಎಂದು ರಿಪೋರ್ಟ್ ನಲ್ಲಿ ತಿಳಿದು ಬಂದಿದೆ. ಸುಮಾರು 350 ಕಾಫ್ ಸಿರಪ್ ಪೈಕಿ 15 ಕಾಫ್ ಸಿರಪ್ ಸುರಕ್ಷಿತವೆಂದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ. ಇನ್ನೂ ಉಳಿದ ಕಾಫ್ ಸಿರಪ್ ಗಳ ಸ್ಯಾಂಪಲ್ ಟೆಸ್ಟಿಂಗ್ ರಿಪೋರ್ಟ್ ಬರಬೇಕಿದೆ. ಮಹಾರಾಷ್ಟ್ರ, ರಾಜಸ್ಥಾನದಲ್ಲಿ ಕಾಫ್ ಸಿರಪ್ ನಿಂದ ಮಕ್ಕಳ ಸರಣಿ ಸಾವಿನ ಹಿನ್ನಲೆಯಲ್ಲಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. 1 ಕಾಫ್ ಸಿರಪ್ ಟೆಸ್ಟ್ ಮಾಡಲು ಕನಿಷ್ಠ 7 ದಿನ ಸಮಯಾವಕಾಶಬೇಕು ಎಂಬುದಾಗಿ ಮಾಹಿತಿ ಹಂಚಿಕೊಂಡಿದೆ.
ಚಿತ್ರದುರ್ಗ: ದಾವಣಗೆರೆ ವಿವಿಯ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ಅಕ್ಟೋಬರ್.9, 10ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 2025-26ನೇ ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯಲ್ಲಿರುವಂತ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಸ್ಪರ್ಧೆಯಲ್ಲಿ ಈ ಕೆಳಕಂಡಂತೆ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಪವನ್ ಎಚ್- Power Lifting 66 kg ವಿಭಾಗದಲ್ಲಿ ಒಟ್ಟು 410 kg ಎತ್ತುವ ಮೂಲಕ ಪ್ರಥಮ ಸ್ಥಾನ, Weight Lifting 65 kg ವಿಭಾಗದಲ್ಲಿ ಒಟ್ಟು 180 kg ಎತ್ತುವ ಮೂಲಕ ಪ್ರಥಮ ಸ್ಥಾನ ನವೀನ್ ಎಸ್ -Weight Lifting 71 kg ವಿಭಾಗದಲ್ಲಿ ಒಟ್ಟು 215 kg ಎತ್ತುವ ಮೂಲಕ ಪ್ರಥಮ ಸ್ಥಾನ ವಿಷ್ಣು ಎಮ್ -…














