Author: kannadanewsnow09

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. ಒಂದು ಇಂಚು ಸರ್ಕಾರಿ ಭೂಮಿಯನ್ನು ಒತ್ತುವರಿಯಾಗದಂತೆ ತಡೆಯೋದಕ್ಕೆ ಬೀಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು ರಾಜ್ಯಾಧ್ಯಂತ ಸರ್ಕಾರಿ ಜಮೀನುಗಳ ಸ್ಥಳ, ವಿಸ್ತೀರ್ಣ ಮತ್ತು ನಕ್ಷೆಯನ್ನು ಮೊಬೈಲ್ ಆಪ್ ನಲ್ಲಿ ದಾಖಲಿಸುವ ಕಾರ್ಯ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣವಾಗಲಿದೆ ಎಂದಿದ್ದಾರೆ. ಈ ಪ್ರಕ್ರಿಯೆ ಪೂರ್ಣವಾದರೇ ಪ್ರತಿ ಮೂರು ತಿಂಗಳಿಗೊಮ್ಮ ವಾಸ್ತವ ಸ್ಥಿತಿಗತಿ ಅರಿಯಲು ನಿರಂತರ ಬೀಟ್ ವ್ಯವಸ್ಥೆ ಇರಲಿದ್ದು, ಒಂದಿಂಚೂ ಸರ್ಕಾರಿ ಭೂಮಿ ಕಬಳಿಕೆಯಾಗದಂತೆ ತಡೆಯುವ ಪರಿಣಾಮಕಾರಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರ್ಕಾರ, ಎಲ್ಲ ಸರ್ಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್‌) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್‌ ಬಂದ್‌ ಸಿದ್ಧಪಡಿಸಲು ಮೊಬೈಲ್‌ ಆ್ಯಪ್‌ ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್‌ ಬಳಸಿ…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ. ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ. ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದ ಕಾರಣ, ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ಸಿನ ಗ್ಲಾಸ್ ಪುಡಿ ಪುಡಿಯಾಗಿದೆ. ಘಟನೆಯ ಬಳಿಕ ಶಾಲಾ ವಾಹನದ ಚಾಲಕ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದಂತ ಕಲಬುರ್ಗಿ ಸಂಚಾರ-2 ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-rbi-bans-new-customer-addition-to-paytm-bank/

Read More

ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋ ಸಲುವಾಗಿ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯ ಜೆಇ ಪ್ರಕಾಶ್ ಎಂಬುವರು ಗುತ್ತಿಗೆದಾರ ಮಂಜೇಶ್ ಎಂಬುವರಿಗೆ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋದಕ್ಕೆ 2.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಎಲೆಕ್ಟ್ರಿಕ್ ಗುತ್ತಿಗೆದಾರ ಮಂಜೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ 1.5 ಲಕ್ಷ ಲಂಚದ ಹಣವನ್ನು ಬೆಸ್ಕಾಂ ಜೆಇ ಪ್ರಕಾಶ್ ಅವರಿಗೆ ನೀಡೋದಕ್ಕೆ ನಿಗದಿ ಪಡಿಸಲಾಗಿತ್ತು. ಅದರಂತೆ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಬೆಸ್ಕಾಂ ಜೆಇ ಪ್ರಕಾಶ್ ಅವರನ್ನು ಹಿಡಿದಿದ್ದಾರೆ. ಇದೀಗ ಬೆಸ್ಕಾಂ ಜೆಇ ಪ್ರಕಾಶ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಂಡು, ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಪ್ಲೋಮಾ, ಪದವೀಧರರಿಗೆ ಯುವನಿಧಿ ಜಾರಿಗೊಳಿಸಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ರಾಜ್ಯ ಮಟ್ಟದ ಬೃಹತ್ ಉದ್ಯೋ ಮೇಳವನ್ನು ಫೆಬ್ರವರಿ.19, 20ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ-2024ಅನ್ನು ದಿನಾಂಕ 19-02-2024 ಮತ್ತು 20-02-2024ರಂದು ಆಯೋಜಿಸಲಾಗುತ್ತಿದೆ ಎಂದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಫೆ.19, 20 ರಂದು ಆಯೋಜಿಸಲಾಗುತ್ತಿದ್ದು, ಅಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ https://udyogamela.skillconnect.kaushalkar.com/candidateRegistration ಲಿಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಬಹುದು. ಫೆ.19, 20 ರಂದು ನಡೆಯುವಂತ ಬೃಹತ್ ಉದ್ಯೋಗ ಮೇಳದಲ್ಲಿ ಭಾಗಿಯಾಗಿ, ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 18005999918 ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ. https://kannadanewsnow.com/kannada/bengaluru-three-injured-as-lord-rams-cutout-breaks-down/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡದ ಬೆನ್ನಲ್ಲೇ, ಮತ್ತೊಂದು ಭೀಕರ ಅವಘಡ ನಡೆದಿದೆ. ಅದೇ ಶ್ರೀರಾಮನ ಕಟೌಟ್ ಕಟ್ಟೋ ಸಂದರ್ಭದಲ್ಲಿ, ಅದು ಮುರಿದು ಬಿದ್ದು ಮೂವರು ಗಾಯಗೊಂಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಪಕ್ಕದಲ್ಲಿ ಶ್ರೀರಾಮನ ಕಟೌಟ್ ನಿರ್ಮಿಸೋ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಮುರಿದು ಬಿದ್ದ ಕಾರಣ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶ್ರೀರಾಮನ ಕಟೌಟ್ ದಿಢೀರ್ ಮುರಿದು ಬಿದ್ದ ಹಿನ್ನಲೆಯಲ್ಲಿ ಅದನ್ನು ಕಟ್ಟುತ್ತಿದ್ದಂತ ಮೂವರು ಅದರಡಿ ಸಿಲುಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ, ರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯ ಬಳಿಕ, ಶ್ರೀರಾಮನ ಕಟೌಟ್ ಕಟ್ಟೋ ಪ್ರಕ್ರಿಯೆ ಹಲವೆಡೆ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಇಂದು ಹೆಚ್ ಎಎಲ್ ಏರ್ಪೋರ್ಟ್ ಬಳಿಯಲ್ಲಿ ನಿರ್ಮಾಣ ಮಾಡುತ್ತಿದ್ದಂತ ವೇಳೆಯಲ್ಲಿ ಇಂತಹ ಅವಘಡ ನಡೆದಿದೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಇದರಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದಂತ ಘಟನೆ ನಡೆದಿದೆ. ಅಲ್ಲದೇ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರೋದಾಗಿ ತಿಳಿದು ಬಂದಿದೆ. ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಯಿತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆ ಸಂಚಾರ ತಡೆದರು. ಮುಸ್ಲಿಂ ಸಮುದಾಯವು ರಸ್ತೆಯ ಮಧ್ಯದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿತು. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಸರ್ಕಾರ ಪಾಪರ್ ಆಗಲಿದೆ ಎಂದು ಸರ್ಕಾರದ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಅದೇ ರೀತಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ‌. ಅವರೆಲ್ಲರೂ ಸರಿಯಾಗಿಯೇ ಹೇಳಿದ್ದಾರೆ. ಏಕೆಂದರೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಕಳೆದ ಬಾರಿ ದೃಷ್ಟಿ ಬೊಟ್ಟಿನಂತೆ ಕಾಂಗ್ರೆಸ್ ‌ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಈಗ ಅದನ್ನು ಕೂಡ ಕಳೆದುಕೊಳ್ಳಲಿದೆ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದ ಕಡೆಯಲ್ಲೆಲ್ಲ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಬಿಹಾರದಲ್ಲಿ ಈಗಾಗಲೇ ಅಧಿಕಾರ ಕಳೆದುಕೊಂಡಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ದೂರವಾಗಿದ್ದಾರೆ. ಎಲ್ಲ ಕಡೆ ಇಲ್ಲ ಎಂಬ ಪ್ರತಿಕ್ರಿಯೆ ಬಂದಿದ್ದು, ಕರ್ನಾಟಕದಲ್ಲೂ ಇಲ್ಲ ಎಂಬುದೇ ಗ್ಯಾರಂಟಿಯಾಗಲಿದೆ‌. ಆದ್ದರಿಂದ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದರು. ಅನೇಕರು ಬಿಜೆಪಿಗೆ ಬರಲು ಆಸಕ್ತಿ ತೋರಿಸುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಮರಳಿ ಪ್ರಧಾನಿಯಾಗಿಸುವುದು ನಮ್ಮ ಗುರಿ ಎಂದರು. https://kannadanewsnow.com/kannada/there-should-be-no-manual-scavengers-in-the-state-cm-siddaramaiah/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.‌ ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದರು. ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು. ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ‌ ಈ ಕಾರ್ಯಕ್ರಮಗಳನ್ನು ಜಾರಿ‌ ಮಾಡಿದೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 144 ಪಿಎಸ್ಐ ಸಿವಿಲ್ ಹುದ್ದೆಗಳಲ್ಲಿದ್ದಂತ ಅಧಿಕಾರಿಗಳನ್ನು ವರ್ಗಾವಣೆ ( Civil PSI Transfer ) ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ಹೊರಡಿಸಿರುವಂತ ಮಾರ್ಗಸೂಚಿಯ ಅನ್ವಯ 144 ಸಿವಿಲ್ ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಮಾಡುತ್ತಿರೋದಾಗಿ ತಿಳಿಸಿದೆ. ನರೋನ ಪೊಲೀಸ್ ಠಾಣೆಯ ಸಿವಿಲ್ ಪಿಎಸ್ಐ ಆಗಿದ್ದಂತ ಗಂಗಮ್ಮ ಅವರನ್ನು ಬೀದರ್ ಜಿಲ್ಲೆಯ ಮೆಹಕರ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಚಿದಾನಂದ ಕಾಸಪ್ಪ ಗೋಳ್ ಅವರನ್ನು ಬೀದರ್ ಜಿಲ್ಲೆಯ ಬಿಮಲ್ ಖಡ ಪೊಲೀಸ್ ಠಾಣೆಗೆ, ಚೇತನ್ ಅವರನ್ನು ಬೀದರ್ ಹೊಸ ನಗರ ಪೊಲೀಸ್ ಠಾಣೆ, ಸುಖಾನಂದ್ ಅವರನ್ನು ಬೀದರ್ ನ ಮನ್ನಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 144 ಸಿವಿಲ್ ಪಿಎಸ್ಐಗಳ ವರ್ಗಾವಣೆ ಪಟ್ಟಿ https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/

Read More

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಂಕಿತ ಹಾಕದೇ, ವಿಧಾನಮಂಡಲದ ಅಧಿವೇಶನ ಘೋಷಣೆಯಾದ ಕಾರಣ, ವಾಪಾಸ್ ಕಳುಹಿಸಿದ್ದಾರೆ. ಇಂತಹ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದರು. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/guarantee-schemes-will-not-be-stopped-at-any-cost-cm-siddaramaiah/

Read More