Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹೊಸದಾಗಿ, ನವೀಕರಣದ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಾಗಿ ಆನ್‍ಲೈನ್‍ನಲ್ಲಿ ಸರ್ಕಾರ ನಿಗಧಿಪಡಿಸಿರುವ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸರ್ಕಾರದ ನಿರ್ದೇಶನದಂತೆ ಅರ್ಜಿ ಸಲ್ಲಿಸುವ ವಿಕಲಚೇತನ ಫಲಾನುಭವಿಗಳಿಗೆ ರಿಯಾಯಿತಿ ಬಸ್‍ಪಾಸ್‍ಗಳನ್ನು ವಿತರಿಸುತ್ತಿವೆ. ನೂತನ ಬಸ್ ಪಾಸ್ ಪಡೆಯಲು ಹಾಗೂ ಹಾಲಿ ಪಾಸುಗಳ ನವೀಕರಣಕ್ಕಾಗಿ 2025ರ ಫೆ.28 ರವರೆಗೆ ಅವಕಾಶ ನೀಡಿದೆ. ವಿಕಲಚೇತನರು ಖಾಸಗಿ ಕಂಪ್ಯೂಟರ್ ಸೆಂಟರ್‍ಗಳಲ್ಲಿ ಹೆಚ್ಚಿನ ಸೇವಾಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುತ್ತಿರುವುದು. ಇದರಿಂದ ವಿಕಲಚೇತನರಿಗೆ ಆರ್ಥಿಕ ತೊಂದರೆಯಾಗುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲೆಯ ವಿಕಲಚೇತನರು ಹೊಸದಾಗಿ, ನವೀಕರಣದ ಬಸ್‍ಪಾಸ್‍ಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್ ಕೇಂದ್ರಗಳಲ್ಲಿ ರೂ.25 ಸೇವಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ. https://kannadanewsnow.com/kannada/shimoga-government-employees-association-supports-infrastructure-in-government-schools/ https://kannadanewsnow.com/kannada/are-you-suffering-from-stuttering-participate-in-this-free-workshop-tondre-clear/
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರನ್ನು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆರ್. ಮೋಹನ್‌ಕುಮಾರ್ ಅವರು, ಸರ್ಕಾರಿ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಹಾಗೂ ಅಭಿವೃದ್ಧಿಗೆ ತುರ್ತು ಅಗತ್ಯವಾಗಿರುವ ಶಾಲಾ ಕಟ್ಟಡಗಳ ದುರಸ್ತಿ, ಗ್ರಂಥಾಲಯ, ಕ್ರೀಡಾ ಸಾಮಗ್ರಿಗಳು ಹಾಗೂ ಪಠ್ಯ ವಸ್ತುಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ನೌಕರರ ಸಂಘದ ಜಿಲ್ಲಾ ಘಟಕ ವಿಶೇಷ ಗಮನಹರಿಸಲಿದೆ ಎಂದು ಸಚಿವರ ಗಮನಕ್ಕೆ ತಂದರು. ಅಲ್ಲದೇ ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸುವುದು ಮತ್ತು ಶಿಕ್ಷಣದ ಗುಣಾತ್ಮಕ ಬದಲಾವಣೆಯಲ್ಲಿ ಸಂಘವು ಪ್ರಮುಖ ಪಾತ್ರ ವಹಿಸಲಿದೆ. ಈ ಮಹತ್ವದ ಸಂದರ್ಭದಲ್ಲಿ ಮಾನ್ಯ ಸಚಿವರು ಅಗತ್ಯ ಸಹಕಾರ ನೀಡುವಂತೆ ಅವರಲ್ಲಿ ಮನವಿ ಮಾಡಿದರು. ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ಇಂತಹ ಮಹತ್ವದ ಕಾರ್ಯಕ್ಕೆ…
ಬೆಳಗಾವಿ : ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗಿದೆ. ಪರಿಸರ ಸೂಕ್ಷ್ಮ ವಲಯವಾಗಿರುವಂತ ಚಿಕ್ಕಮಗಳೂರಿನ ಪಶ್ಚಿಮಘಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಕಾಡು ಹೊತ್ತು ಉರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಬಿದುರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇಲ್ಲಿಂದ ಆರಂಭಗೊಂಡಂತ ಬೆಂಕಿ, ಕಾಡಿನ ಇತರೆ ಭಾಗಕ್ಕೂ ವ್ಯಾಪ್ಸಿದೆ. ನೂರಾರು ಎಕರೆ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕಾಡ್ಗಿಚ್ಚು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಂದಿಸಲು ಹರಸಾಹಸ ಪಡುವಂತೆ ಆಗಿದೆ. ಇದೀಗ ಸ್ಥಳದಲ್ಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ. https://kannadanewsnow.com/kannada/vijayapura-brick-kiln-workers-assault-case-five-arrested/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/
ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು. ಈಗಾಗಲೇ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಘಟನೆಯ ಬಗ್ಗೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ವಿಧಾನಸೌಧದಲ್ಲಿ ಸೋಮವಾರ ಉತ್ತರಿಸಿದ್ದಾರೆ. ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಂದಹಾಗೇ ಇಟ್ಟಿಗೆ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದಡಿ ಇಟ್ಟಿಕೆ ಕಾರ್ಖಾನೆಯ ಮಾಲೀಕ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/applications-invited-for-selection-of-nomadic-semi-nomadic-nominated-members/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಅಲೆಮಾರಿ/ಅರೆಅಲೆಮಾರಿ ಜನಾಂಗದವರ ಸಲಹಾ ಸಮಿತಿ/ಪ್ರಗತಿ ಪರಿಶೀಲನಾ ಸಮಿತಿಗೆ ಜಿಲ್ಲಾ ಮಟ್ಟದಲ್ಲಿ ಒಬ್ಬರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಜಿಲ್ಲಾ ಮಟ್ಟದ ಅಲೆಮಾರಿ ಜನಾಂಗದ ಪ್ರತಿನಿಧಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯಲ್ಲಿ ಸದಸ್ಯರಾಗಿರುವ ದಾಖಲೆ, ಸಮುದಾಯದ ಪ್ರಗತಿಗಾಗಿ ಅವರು ಮಾಡಿರುವ ಸಾಧನೆಗಳ ವಿವರ ಹಾಗೂ ವೈಯಕ್ತಿಕ ಮಾಹಿತಿಯನ್ನು ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ ವಿ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-01 ಇಲ್ಲಿಗೆ ಜನವರಿ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು. ಅಂದಹಾಗೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರ ಬೆನ್ನಿನ ಎರಡು ಮೂಳೆಗಳು ಮುರಿತವಾಗಿದ್ದವು. ಹೀಗಾಗಿ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/fake-gandhis-brought-freedom-to-the-country-opposition-leader-r-ashoka/ https://kannadanewsnow.com/kannada/important-information-for-those-who-have-taken-admission-in-bachelors-and-masters-degrees-in-ksou/
ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು ಎಂದರು. ಕಾರ್ಮಿಕರಿಗೆ ಥಳಿತ ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ. ಶೇ.60 ರಷ್ಟು ಕಮಿಷನ್ ಕೊಟ್ಟರೆ ಮಾತ್ರ ಈ ಸರ್ಕಾರದಲ್ಲಿ ಫೈಲ್ ಮೂವ್…
ಮಂಡ್ಯ: ಮದ್ದೂರು ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪ ಚಿರತೆಗಳು ಓಡಾಟ ನಡೆಸಿರುವ ಘಟನೆ ಭಾನುವಾರ ಸಂಜೆ ಜರುಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ರೈಲು ನಿಲ್ದಾಣ ಹಾಗೂ ಆಶ್ರಯ ಬಡಾವಣೆಯ ನಡುವೆ ಇರುವ ಹರಳೀಮರದ ಬಳಿ ಚಿರತೆ ಮತ್ತು ಎರಡು ಮರಿಗಳು ಭಾನುವಾರ ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದು, ಆಶ್ರಯ ಬಡಾವಣೆಯ ಸಾರ್ವಜನಿಕರಿಗೆ ಮತ್ತು ರೈಲು ನಿಲ್ದಾಣದ ಪ್ರಯಾಣಿಕರಿಗೆ ಸುದ್ದಿ ತಿಳಿಸಿದ್ದಾರೆ. ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸಂಚಾರದ ಬಗ್ಗೆ ಸುದ್ದಿ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿಯೇ ಅಲ್ಲಿ ಬೋನನ್ನು ಇರಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಚಿರತೆ ಮತ್ತು ಎರಡು ಮರಿಗಳು ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದಾರೆ. ಹೀಗಾಗಿ ಚಿರತೆ ಸೆರೆಗಾಗಿ ಬೋನನ್ನು ಇರಿಸಲಾಗಿದೆ. ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಂಡಿದ್ದು, ಜನರು ರಾತ್ರಿ ಹೊತ್ತು ಒಬ್ಬರೇ ಓಡಾಟ ಮಾಡುವುದು ಹಾಗೂ ರೈತರು ಜಮೀನುಗಳ ತೆರಳುವಾಗ ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಸಾರ್ವಜನಿಕರಲ್ಲಿ…
ಮಂಡ್ಯ : ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ನಡೆಯುತ್ತಿದ್ದ ಪ್ರತಿಭಟನೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಹುಲ್ಲುಕೆರೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೇವರಾಜು ಅವರ ಪತ್ನಿ ಮಂಜುಳಾ (48) ಎಂಬಾಕೆಯೇ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯಾಗಿದ್ದಾರೆ. ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಮೊದಲ 15 ತಿಂಗಳಿಗೆ ಶೃತಿ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಂದದ ಮೇರೆಗೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರ ಅವಽ ಮುಗಿದ ಬಳಿಕ ರಾಜೀನಾಮೆ ನೀಡಿದ್ದರು. ನಂತರ ಅಧ್ಯಕ್ಷರಾಗಿ ವೀಣಾ ಅವರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಇವರನ್ನು ಬಿಟ್ಟು ಬೇರೆಯವರು ಅಧ್ಯಕ್ಷರನ್ನಾಗಿ ಕೆಲವರು ಮಾಡಿಕೊಂಡರು. ಇದನ್ನು ಪ್ರಶ್ನಿಸಿ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದರು. ಬಳಿಕ ಅಧ್ಯಕ್ಷರಾಗಿದ್ದವರು ರಾಜೀನಾಮೆ ನೀಡಿದ್ದ ಓರ್ವ ನಿರ್ದೇಶಕರನ್ನು ತಮ್ಮ ಪರ ಸೆಳೆದುಕೊಂಡು ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆಂಬಂತೆ ಹೇಳಿಕೆ ಕೊಡಿಸಿದ್ದರು. ವಿವಾದದ ಹಿನ್ನೆಲೆಯಲ್ಲಿ ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಇಂದು ಏಕಾಏಕಿ ಸಭೆ ನಡೆಸಲು…












