Author: kannadanewsnow09

ಬೆಂಗಳೂರು:  ಪ್ರಯಾಗ್ರಾಜ್ ವಿಭಾಗದ ಪ್ರಯಾಗ್ರಾಜ್ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾರ್ಯ ಮತ್ತು ಆರ್ಆರ್ಐ (ರೂಟ್ ರಿಲೇ ಇಂಟರ್ಲಾಕಿಂಗ್) ಅನ್ನು ಇಐ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್) ಆಗಿ ಪರಿವರ್ತಿಸುವುದರಿಂದ ಈ ಕೆಳಗಿನ ರೈಲುಗಳನ್ನು ಬೇರೆಡೆಗೆ ತಿರುಗಿಸಲು ಉತ್ತರ ಮಧ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ಈ ಕೆಳಗಿನ ರೈಲುಗಳನ್ನು ನಿಗದಿತ ದಿನಾಂಕಗಳಲ್ಲಿ ತಿರುಗಿಸಲಾಗುವುದಾಗಿ ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 1. ರೈಲು ಸಂಖ್ಯೆ 12539 ಯಶವಂತಪುರ-ಲಕ್ನೋ ಸಾಪ್ತಾಹಿಕ ಎಕ್ಸ್ಪ್ರೆಸ್ ಅಕ್ಟೋಬರ್ 16, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ಲಕ್ನೋ, ಕಾನ್ಪುರ ಸೆಂಟ್ರಲ್, ಭೀಮಸೇನ್, ಓಹಾನ್ ಕ್ಯಾಬಿನ್ ಮತ್ತು ಕಟ್ನಿ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ. 2. ರೈಲು ಸಂಖ್ಯೆ 12540 ಲಕ್ನೋ-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ಅಕ್ಟೋಬರ್ 18, 2024 ರಂದು ಪ್ರಾರಂಭವಾಗುವ ಪ್ರಯಾಣವನ್ನು ಕಟ್ನಿ, ಓಹಾನ್ ಕ್ಯಾಬಿನ್, ಭೀಮಸೇನ್, ಕಾನ್ಪುರ ಸೆಂಟ್ರಲ್ ಜಂಕ್ಷನ್ ಮತ್ತು ಲಕ್ನೋ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ. ಬಿ) ರಂಗಿಯಾ ವಿಭಾಗದ ಮೇಲೆ ನಲ್ಬಾರಿ ಮತ್ತು ಬೈಹಟಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗವನ್ನು…

Read More

ಬೆಂಗಳೂರು: ವಿಪಕ್ಷ ನಾಯಕರಾದ ಆರ್ ಅಶೋಕ್ ಅವರ ಇತ್ತೀಚಿನ ಪತ್ರಿಕಾ ಹೇಳಿಕೆ ಓದಿ ನಿಜಕ್ಕೂ ಆಘಾತವಾಯಿತು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹಾಗೂ ಈ ಹಿಂದೆ ಕಂದಾಯ ಇಲಾಖೆಯ ಸಚಿವರಾಗಿಯೂ ಇದ್ದವರಿಗೆ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗದ ನಡುವಿನ ವ್ಯತ್ಯಾಸವೂ ತಿಳಿಯದಿರುವುದು ಅಚ್ಚರಿಯ ವಿಚಾರ. ಸಿಎಂ ಸಿದ್ದರಾಮಯ್ಯನವರನ್ನು ಟೀಕಿಸುವ ಬರದಲ್ಲಿ ನನ್ನ ವಿರುದ್ಧವೂ ಕೀಳುಮಟ್ಟದ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಾದ ನಡೆ ಅಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆಯಲ್ಲಿ “ಜಿಎಸ್ಟಿ ಸಭೆಗೆ ಹೋಗುವ ಪ್ರತಿನಿಧಿ ಕಡಲೆಕಾಯಿ ತಿನ್ನುತ್ತಾರಾ?” ಎಂದು ಪ್ರಶ್ನಿಸಿರುವ ಆರ್. ಅಶೋಕ್ ಅವರೇ ಜಿಎಸ್ಟಿ ಕಮಿಟಿ ಹಾಗೂ ಹಣಕಾಸು ಆಯೋಗ ಇವೆರಡೂ ಬೇರೆ ಬೇರೆ ಎಂಬ ಕುರಿತು ಕಡಲೆಕಾಯಿ ಬೆಳೆಯುವ ನಮ್ಮ ನಾಡಿನ ಸಾಮಾನ್ಯ ರೈತನಿಗೆ ಇರುವಷ್ಟೂ ಕನಿಷ್ಠ ಜ್ಞಾನ ವಿಪಕ್ಷ ನಾಯಕನಾದ ತಮಗೆ ಇಲ್ಲದಿರುವುದು ಈ ನಾಡಿನ ದೌರ್ಭಾಗ್ಯ ಎಂದಿದ್ದಾರೆ. ಮೊದಲು ತಾವು ಜಿಎಸ್ಟಿ ಎಂದರೆ ಏನು..? ಜಿಎಸ್ಟಿ ಸಭೆಯಲ್ಲಿ ಚರ್ಚೆಯಾಗುವ ವಿಚಾರಗಳೇನು ಎಂಬ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಜಾಮೀನು ಅರ್ಜಿಯ ಕುರಿತಂತೆ ವಾದವನ್ನು ಆಲಿಸಿತು. ಆ ಬಳಿಕ ಪ್ರಕರಣದಲ್ಲಿನ ಇತರೆ ಆರೋಪಿಗಳ ಕಾಯ್ದಿರಿಸಿದ್ದಂತ ಜಾಮೀನು ಆದೇಶವನ್ನು ಪ್ರಕಟಿಸಿದೆ. ಎ.1 ಆರೋಪಿ ಪವಿತ್ರಾ ಗೌಡ, ಎ.2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎ.8 ಆರೋಪಿ ರವಿಶಂಕರ್ ಹಾಗೂ ಎ.13  ಆರೋಪಿ ದೀಪಕ್ ಪರ ವಕೀಲರ ವಾದವನ್ನು ಆಲಿಸಿಜದ್ದಂತ ನ್ಯಾಯಾಲಯವು ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಎ8 ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿದ್ದಾರೆ. ಅವರನ್ನು ನಾಳೆ ಜಾಮೀನು ಹಿನ್ನಲೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. https://kannadanewsnow.com/kannada/hc-stays-appointment-of-administrator-for-state-government-employees-association/ https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/ https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಈ ಬಳಿಕ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಆದರೇ ಸರ್ಕಾರಿ ನೌಕರ ಸಂಘದ ಆಡಳಿತ ಅಧಿಕಾರಿ ನೇಮಕಕ್ಕೆ ಹೈ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ ಹಾಗೂ ಜಿಲ್ಲಾ-ತಾಲೂಕು ಅಧ್ಯಕ್ಷರುಗಳೇ, ಪದಾಧಿಕಾರಿಗಳೇ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಕಳೆದ ವಾರ ಆಡಳಿತಾಧಿಕಾರಿ ಯನ್ನು ನೇಮಿಸಿದ್ದ ಆದೇಶಕ್ಕೆ ಇಂದು ಕರ್ನಾಟಕ ಉಚ್ಚ ನ್ಯಾಯಾಲಯವು ಸುದೀರ್ಘ ವಿಚಾರಣೆಯನ್ನು ನಡೆಸಿತು ಎಂದಿದ್ದಾರೆ. ಈ ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಿ ನೌಕರ ಸಂಘಕ್ಕೆ ನೇಮಿಸಿದ್ದ ಆಡಳಿತಾಧಿಕಾರಿ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ದಿನಾಂಕ 16.10.2024ಕ್ಕೆ ಮುಂದೂಡಿತು ಎಂದು ತಿಳಿಸಿದ್ದಾರೆ. ಅಂದಹಾಗೇ ದಿನಾಂಕ 07-10-2024ರಂದು ಆದೇಶದಲ್ಲಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರ…

Read More

ಮಂಡ್ಯ: ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಹಾಜರಾತಿ ಕಡ್ಡಾಯ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇದು ಕನ್ನಡ ತಾಯಿಯ ಹಬ್ಬವಾಗಿದ್ದು, ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದ ಕೆಲಸಗಳು ಸುಸೂತ್ರವಾಗಿ ನಡೆಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು. ಸ್ವಾಗತ ಸಮಿತಿಯು ತಪ್ಪದಂತೆ ಕನ್ನಡಪರ ಸಂಘ ಸಂಸ್ಥೆ ಹಾಗೂ ಸಂಘಟನೆಗಳು, ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ಚಾನಿಸಿ ಎಂದರು. ಪಥ ಸಂಚಲನ ಪೊಲೀಸ್, ಗೃಹ ರಕ್ಷಕ, ಅಬಕಾರಿ,…

Read More

ಬೆಂಗಳೂರು: ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಾಯವು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ನಟ ದರ್ಶನ್ ಅವರು ಪ್ರಕರಣದಲ್ಲಿ ಜಾಮೀನು ಕೋರಿ, ನಾಳೆ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಇಂದು ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ ಬಿಗ್ ಶಾಕ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ನಾಳೆ ನಟ ದರ್ಶನ್ ಪರ  ವಕೀಲರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ. https://kannadanewsnow.com/kannada/cm-siddaramaiah-gives-good-news-to-gram-panchayat-members-employees/ https://kannadanewsnow.com/kannada/breaking-i-am-ndas-candidate-in-channapatna-by-election-union-minister-hd-kumaraswamy/

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದ್ದು, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದೆ. ಜೈಲೇ ಗತಿ ಎನ್ನುವಂತೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಈಗ ತೀರ್ಪು ಪ್ರಕಟಿಸಿರುವಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಲಾಯವು ಎ.1 ಆರೋಪಿ ಪವಿತ್ರಾ ಗೌಡ, ಎ.2…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ವಾದಿಸಿದ್ದರು. ಇಂದು ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಎ.13 ಆರೋಪಿ ದೀಪಕ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸುತ್ತಾ, ಎ8 ರವಿಶಂಕರ್ ಜಾಕನಾದರೂ ಅಪಹಣದಲ್ಲಿ ಪಾತ್ರವಿದೆ. ಆತ ಬಟ್ಟೆಯಲ್ಲಿಯೂ ರೇಣುಕ್ಸಾವಮಿ ರಕ್ತದ ಕೆಲೆಗಳು ಪತ್ತೆಯಾಗಿವೆ. ಷಡ್ಯಂತ್ರ ಸಾಭೀತಿಗೆ ಒಂದೇ ಬಾರಿಗೆ ಎಲ್ಲ ಒಪ್ಪಂದವಾಗಬೇಕಿಲ್ಲ. ಎಲ್ಲಾ ಗೌಪ್ಯತೆಗಳೂ ಎಲ್ಲರಿಗೂ ತಿಳಿದಿರಬೇಕೆಂದಿಲ್ಲ. ಹೀಗಾಗಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್,  ಎ11 ನಾಗರಾಜು. ಎ12 ಲಕ್ಷ್ಮಣ್ ಗೆ ಜಾಮೀನು…

Read More

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ  ಮೊದಲ ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಪವಿತ್ರಗೌಡ ಪರ ಟಾಮಿ ಸ್ಟಾಮಿನ್‌ ಅವರು ವಾದ ಮಂಡನೆ ಮಾಡಿದ್ದರು, ಪವಿತ್ರಗೌಡ ಅವರು ಕೊಲೆಯಲ್ಲಿ ಪಾತ್ರವಹಿಸಿಲ್ಲ ಎನ್ನುವುದನ್ನು ನ್ಯಾಯಾಧೀಶರಿಗೆ ತಿಳಿಸುವುದಕ್ಕೆ ಮುಂದಾದರು ಆದರೆ ಅದು ಯಶಸ್ವಿಯಾಗಿಲ್ಲ.

Read More

ಸವದತ್ತಿ : ತಿರುಪತಿ ಮಾದರಿಯಲ್ಲೇ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದರು.  ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು. ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ.…

Read More