Author: kannadanewsnow09

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜ.30 ರಂದು ಉದ್ಯೋಗ ಮೇಳ ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/…

Read More

ತುಮಕೂರು : “ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರಾಗಿ ಪರಿವರ್ತಿಸಲು ಮುಂದಿನ 50 ವರ್ಷಗಳ ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಸಚಿವನಾಗಿ ನಾನು ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು ಎಂದು ಆಲೋಚನೆ ಮಾಡಿದಾಗ, ರಾಮನಗರ, ಚನ್ನಪಟ್ಟಣ, ನೆಲಮಂಗಲ, ದೊಡ್ಡಬಳ್ಳಾಪುರ ನಂತರ ತುಮಕೂರು ಪರ್ಯಾಯವಾಗಿದೆ. ಇಂದು ತುಮಕೂರು ಜಿಲ್ಲೆಯ ಸಾವಿರಾರು ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಯುವಕರು, ಮಹಿಳೆಯರು, ರೈತರು ಭಾಗವಹಿಸಿದ್ದಾರೆ. ತುಮಕೂರು ಕಲ್ಪತರುನಾಡು.…

Read More

ಶಿವಮೊಗ್ಗ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30ರ ನಾಳೆ ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/maldives-president-muizu-to-be-removed-opposition-ready-to-move-impeachment-motion-report/ https://kannadanewsnow.com/kannada/breaking-govt-extends-ban-on-simi-by-5-years/

Read More

ಮಂಡ್ಯ: ನಗರದಲ್ಲಿ ಕೋಮುವಾದದ ವಿಷ ಬೀಜ ಬಿತ್ತಿ, ರಾಜಕೀಯ ಪ್ರಯೋಜನ ಪಡೆಯಲು ಹೊರಟ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಪ್ರಯತ್ನ ವಿಫಲವಾಗಲಿದೆ. ಇದು ಖಂಡಿತವಾಗಿಯೂ ಯಶ ಕಾಣದು. ಕಾಂಗ್ರೆಸ್‌ನ ಜನಪರ ಯೋಜನೆ, ಕಾಳಜಿ ಬಗ್ಗೆ ಜನರು ಈಗಾಗಲೇ ಅರ್ಥ ಮಾಡಿಕೊಂಡಿದ್ದಾರೆ. ಕೋಮುವಾದಕ್ಕೆ ನಮ್ಮ ಜನ ಸೊಪ್ಪು ಹಾಕುವುದಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರು, ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ್‌ ಗೂಳಿಗೌಡ, ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ, ಕನ್ನಡ ಧ್ವಜ ಹಾರಿಸಲು ಗ್ರಾಪಂನಿಂದ ಅನುಮತಿ ಪಡೆದು, ಆ ಧ್ವಜದ ಕಟ್ಟೆಯ ಮೇಲೆ ಕೇಸರಿ ಬಾವುಟ ಹಾಗೂ ಹನುಮ ಧ್ವಜ ಹಾರಿಸಲಾಗಿತ್ತು. ಜಿಲ್ಲಾಡಳಿತ ಆ ಧ್ವಜ ಇಳಿಸಿ ರಾಷ್ಟ್ರ ಧ್ವಜ ಹಾರಿಸಿದೆ. ಜಿಲ್ಲಾಡಳಿತ ಸಂವಿಧಾನದ ಆಶಯದಂತೆ ಕಾನೂನಾತ್ಮಕವಾಗಿ ನಡೆದುಕೊಂಡಿದೆ. ಆದರೆ, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷ ಜೆಡಿಎಸ್ ಅದನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಪ್ರಯೋಜನ ಪಡೆಯಲು ಹೊರಟಿವೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು. ಬಿಜೆಪಿ ಖಂಡಿತಾ ಯಶಸ್ವಿಯಾಗದು…

Read More

ಜೀವನದಲ್ಲಿ ಎಲ್ಲ ರೀತಿಯ ಸವಲತ್ತುಗಳನ್ನು ಪಡೆದು ಮಾನಸಿಕ ಸಂತೋಷದಿಂದ ಬದುಕುವವನು ಸಕಲ ಸಂಪತ್ತಿನಿಂದ ಬಾಳುತ್ತಾನೆ ಎಂದು ಹೇಳಲಾಗುತ್ತದೆ. ಯಶಸ್ಸಿನ ನಂತರ ನಾವು ಎಲ್ಲಾ ಸಂಪತ್ತು ಮತ್ತು ಯಶಸ್ಸನ್ನು ಪಡೆಯಲು ವಿವಿಧ ರೀತಿಯ ಪೂಜೆಗಳಿವೆ. ಅದರಲ್ಲಿ ಡಂಬಳ ದೀಪಾರಾಧನೆಯೂ ಒಂದು. ಈ ಪೂಜೆಯನ್ನು ಸರಿಯಾಗಿ ನಡೆಸುವುದು ಹೇಗೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಐಶ್ವರ್ಯಮ್…

Read More

ಶಿವಮೊಗ್ಗ: ಮೂತ್ರ ವಿಸರ್ಜನೆಗೆ ತೆರಳಿದ್ದಂತ ವ್ಯಕ್ತಿಯ ಮೇಲೆ ಸಿಮೆಂಟ್ ಸ್ಲ್ಯಾಬ್ ಕುಸಿದು ಬಿದ್ದ ಪರಿಣಾಮ, ಅದರಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ವಿನೋಬನಗರದಲ್ಲಿ ನಡೆದಿದೆ. ಶಿವಮೊಗ್ಗದ ವಿನೋಬನಗರದ ರೈಲ್ವೆ ಪ್ಯಾರಲರ್ ರಸ್ತೆಯಲ್ಲಿ ಮೂತ್ರ ವಿಸರ್ಜನೆಗೆಂದು ಚರಂಡಿ ಸ್ಲ್ಯಾಬ್ ಮೇಲೆ ನಿಂತಿದ್ದಂತ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ(45) ಎಂಬುವರ ಮೇಲೆ ಕುಸಿತಗೊಂಡು ಅದರಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಮುತ್ತಪ್ಪ ಚರಂಡಿಗೆ ಬೀಳುತ್ತಿದ್ದಂತ ಸ್ಲ್ಯಾಬ್ ಕೂಡ ಅವರ ಮೇಲೆ ಬಿದ್ದಿದೆ. ಈ ಅವಘಡದಲ್ಲಿ ಗಾಯಗೊಂಡಿದ್ದಂತ ಮುತ್ತಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ವಿನೋಬನಗರ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/give-compensation-to-farmers-like-bjp-govt-leave-chair-r-ashoka/ https://kannadanewsnow.com/kannada/mandya-cm-siddaramaiah-mla-ganiga-ravis-banners-torn-by-mob-pelting-stones/

Read More

ಕೋಲಾರ : ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಟಿ ಯಲ್ಲಿ ಆರ್‌.ಅಶೋಕ ಮಾತನಾಡಿದರು. ಬರಗಾಲ ಬಂದು ಏಳು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಬೆಳಗಾವಿ ಅಧಿವೇಶನ ಕಳೆದು ತಿಂಗಳಾದರೂ ಪರಿಹಾರ ಕೊಟ್ಟಿಲ್ಲ. ರೈತರು ಚಾತಕ ಪಕ್ಷಿಗಳಂತೆ ಪರಿಹಾರಕ್ಕೆ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆ ಇದೆ. ಆದರೂ ಒಂದೇ ಒಂದು ಗೋಶಾಲೆ ತೆರೆದಿಲ್ಲ. ಅಲ್ಪಸಂಖ್ಯಾತ ಇಲಾಖೆ ಸಚಿವರು ಮನವಿ ಕೊಟ್ಟ ಮೂರು ದಿನಗಳಲ್ಲಿ ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ಅನುದಾನವನ್ನು ಕಾಲನಿ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಬಂದಾಗ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ಎನ್ನುವಂತೆ 2024ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ ರೂ.12,KKI (ಹನ್ನೆರಡು ಸಾವಿರ ರೂಪಾಯಿಗಳು ಮಾತ್ರ) ರಂತ ಗರಿಷ್ಠ 62,500 ಮೆಟ್ರಿಕ್ ಟನ್ ಉಂಡ ಕೊಬ್ಬರಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನಗಳ ಮಾರ್ಗಸೂಚಿಗಳನ್ವಯ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ರೈತರಿಂದ ಖರೀದಿಸಲು ಅನುಮತಿ ನೀಡಿ ಆದೇಶಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2)ರ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು ಇವರ ಏಕ ಕಡತದ ಪ್ರಸ್ತಾವನೆಯಲ್ಲಿ, 2024ನೇ ಸಾಲಿನ ಉಂಡ ಕೊಬ್ಬರಿ ಖರೀದಿ ಪ್ರಕ್ರಿಯೆ ಕೈಗೊಂಡ ನಂತರವು…

Read More

ಬೆಂಗಳೂರು: ರಾಜ್ಯವು ಈಗಾಗಲೇ ಅನಿಮೇಷನ್‌, ಗೇಮಿಂಗ್‌ ಮತ್ತು ಕಾಮಿಕ್ಸ್‌ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿದ್ದು, 2028ರ ವೇಳೆಗೆ 30 ಸಾವಿರ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಲಲಿತ ಅಶೋಕ ಹೋಟೆಲ್‌ನಲ್ಲಿ ಐಟಿ-ಬಿಟಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನದ GAFX2024 ಐದನೇ ಆವೃತ್ತಿಯನ್ನು ಉದ್ಘಾಟಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಶ್ರೀ ಶರತ್ ಬಚ್ಚೇಗೌಡ, ಅಧ್ಯಕ್ಷರು, ಕಿಯೋನಿಕ್ಸ್, ಶ್ರೀಮತಿ ನಿವೃತಿ ರೈ, ಎಂಡಿ, ಮತ್ತು ಸಿಇಒ, ಇನ್ವೆಸ್ಟ್ ಇಂಡಿಯಾ, ಶ್ರೀ ಕ್ರಿಸ್ ಗೋಪಾಲಕೃಷ್ಣನ್, ಅಧ್ಯಕ್ಷ ಆಕ್ಸಿಲರ್ ವೆಂಚರ್ಸ್, ಸಹ-ಸ್ಥಾಪಕ ಇನ್ಫೋಸಿಸ್, ಅಧ್ಯಕ್ಷ ಇನ್ಫೋಸಿಸ್ ಸೈನ್ಸ್ ಫೌಂಡೇಶನ್; ಶ್ರೀ ರಾಜನ್ ನವನಿ, ಸ್ಥಾಪಕ ಮತ್ತು CEO, Jet Synthesys; ಶ್ರೀ ವಿಶಾಲ್ ಧೂಪರ್, ಮ್ಯಾನೇಜಿಂಗ್ ಡೈರೆಕ್ಟರ್, ಏಷ್ಯಾ ಸೌತ್ – NVIDIA; ಶ್ರೀ ಸಾಯಿ ಶ್ರೀನಿವಾಸ್ ಕಿರಣ್ ಗರಿಮೆಲ್ಲ; ಸಹ-ಸಂಸ್ಥಾಪಕ, MPL; ಶ್ರೀ ಆಶಿಶ್ ಕುಲಕರ್ಣಿ, ಸ್ಥಾಪಕ ಮತ್ತು CEO, Punnaryug…

Read More

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಈ ಕೆಳಕಂಡ ಹತ್ತು ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಪ್ರಯಾಣಿಕರಿಂದ ಹೆಚ್ಚುತ್ತಿರುವ ಬೇಡಿಕೆ ಪೂರೈಸುವ ಸಲುವಾಗಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯ ಅವಧಿಯನ್ನು ವಿಸ್ತರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಈ ವಿಶೇಷ ರೈಲುಗಳು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಸಂಚರಿಸಲಿವೆ. ಅವುಗಳ ವಿವರ ಈ ಕೆಳಗಿನಂತಿವೆ. 1. ರೈಲು ಸಂಖ್ಯೆ 03245 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 24.04.2024 ರವರೆಗೆ ವಿಸ್ತರಿಸಲಾಗುತ್ತಿದೆ. 2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 26.04.2024 ರವರೆಗೆ ವಿಸ್ತರಿಸಲಾಗುತ್ತಿದೆ. 3. ರೈಲು ಸಂಖ್ಯೆ 03251 ದಾನಾಪುರ-…

Read More