Subscribe to Updates
Get the latest creative news from FooBar about art, design and business.
Author: kannadanewsnow09
BIG NEWS: ‘ಗೃಹಲಕ್ಷ್ಮೀ ಹಣ’ದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ ‘ಯಜಮಾನಿ’
ರಾಜಯಭಾಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗೃಹಲಕ್ಷ್ಮೀ ಯೋಜನೆ ಸಾವಿರಾರು ಮಹಿಳೆಯರ ಬದುಕಿಗೆ ದಾರಿ ದೀಪವಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣದಿಂದ ಟಿವಿ, ಫ್ರಿಡ್ಜ್ ಖರೀದಿಸಿದವರು ಒಂದೆಡೆ ಆದ್ರೇ, ಇಡೀ ಊರಿಗೆ ಹೋಗಿಗೆ ಊಟ ಹಾಕಿಸಿದಂತ ತಾಯಿ ಮತ್ತೊಂದೆಡೆ. ಈ ನಡುವೆ ತನ್ನ ಗ್ರಾಮ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಸಹಾಯವಾಗಲೆಂದು ಇಲ್ಲೊಬ್ಬ ಯಜಮಾನಿ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ. ಹೌದು ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬುವರು ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ. ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿಯ ಈ ಕಾರ್ಯವನ್ನು ಗ್ರಾಮಸ್ಥರು ಹಾಡಿ ಹೊಗಳಿಸಿದ್ದಾರೆ. ವಿದ್ಯಾರ್ಥಿಗಳಂತೂ ಮನಮೆಚ್ಚಿ ಮಲ್ಲವ್ವನನ್ನು ಕೊಂಡಾಡಿದ್ದಾರೆ. ಒಟ್ಟಾರೆಯಾಗಿ ಮಲ್ಲವ್ವ ನನ್ನಗೆ ಬಂದ ಗೃಹಲಕ್ಷ್ಮಿ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ್ದೇನೆ. ಇದರ ಸದುಪಯೋಗ ವಿದ್ಯಾರ್ಥಿಗಳಿಗೆ ಆಗಲಿ ಎಂಬುದಾಗಿ ಮನವಿ ಮಾಡಿದ್ದಾರೆ. https://kannadanewsnow.com/kannada/another-train-accident-two-coaches-derail-in-mumbai/ https://kannadanewsnow.com/kannada/breaking-cm-siddaramaiah-clarifies-that-state-government-has-withdrawn-old-hubballi-riots-case/
ಮುಂಬೈ: ಭಾನುವಾರ ಮಧ್ಯಾಹ್ನ ಮುಂಬೈ ಸೆಂಟ್ರಲ್ ಕಾರ್ಶೆಡ್ ಪ್ರವೇಶಿಸುವಾಗ ಖಾಲಿ ಇಎಂಯು ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ. ರೇಕ್ ಖಾಲಿಯಾಗಿದ್ದರಿಂದ, ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ರೈಲ್ವೆ ತಿಳಿಸಿದೆ. https://twitter.com/rajtoday/status/1845374094163751059 ಪಶ್ಚಿಮ ರೈಲ್ವೆ ತನ್ನ ಪೋಸ್ಟ್ನಲ್ಲಿ, “12: 10 ರ ಸುಮಾರಿಗೆ ಮುಂಬೈ ಸೆಂಟ್ರಲ್ಗೆ ಪ್ರವೇಶಿಸುವಾಗ ಒಂದು ಇಎಂಯು ಖಾಲಿ ರೇಕ್ನ ಎರಡು ಬೋಗಿಗಳು ಹಳಿ ತಪ್ಪಿವೆ. ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ವರೆಗಿನ ನಿಧಾನಗತಿಯ ಟ್ರ್ಯಾಕ್ ಅನ್ನು ತಡೆಹಿಡಿಯಲಾಗಿದೆ ಮತ್ತು ರೈಲುಗಳನ್ನು ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ನಡುವಿನ ವೇಗದ ಮಾರ್ಗಕ್ಕೆ ತಿರುಗಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆ ಮುಂದುವರೆದಿದೆ.
ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ ಬೆದರಿಕೆ ಹಾಕಿದ್ದೇನೆ? ಅವರ ಬಗ್ಗೆ ಇರುವ ವಿಚಾರವನ್ನು ದಾಖಲೆ ಸಮೇತ ಹೇಳಿದ್ದೇನೆ. ಅದನ್ನು ಬೆದರಿಕೆ ಎಂದರೆ ಹೇಗೆ? ಕೇವಲ ರಾಜಕೀಯ ದುರುದ್ದೇಶದಿಂದ ದೂರು ನೀಡಿದ್ದಾರೆ. ನಾನೂ ಅದಕ್ಕೆಲ್ಲ ಹೆದರಲ್ಲ, ಅವರೂ ನನಗೆ ಹೆದರಬೇಕಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ನಾನು ಆ ಅಧಿಕಾರಿ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು ನಿಜ. ನಾನು ಏನು ಮಾತನಾಡಿದ್ದೇನೆ ಎನ್ನುವುದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿವೆ. ಆ ಮಾಧ್ಯಮಗೋಷ್ಠಿ ನಂತರ ಆ ಅಧಿಕಾರಿ ಸಹೋದ್ಯೋಗಿಗಳಿಗೆ ಬರೆದ ಪತ್ರದ ಬಗ್ಗೆಯೂ ಗೊತ್ತಿದೆ ಎಂದು ಸಚಿವರು ತಿಳಿಸಿದರು. ಈ ವಿಷಯ ನ್ಯಾಯಾಲಯಕ್ಕೆ ಬರುತ್ತದೆ, ಅಲ್ಲಿ ಎದುರಿಸುತ್ತೇನೆ. ನಾನು ಎಲ್ಲಿಯೂ…
ನವದೆಹಲಿ: ವಿಜಯದಶಮಿಯನ್ನು ಶನಿವಾರ (ಅಕ್ಟೋಬರ್ 12) ದೇಶಾದ್ಯಂತ ಉತ್ಸಾಹ ಮತ್ತು ಆನಂದದಿಂದ ಆಚರಿಸಲಾಗುತ್ತಿದ್ದು, ಇದರಲ್ಲಿ ಭಾಗವಹಿಸಲು ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಮಾಧವ್ ದಾಸ್ ಪಾರ್ಕ್ನಲ್ಲಿ ಶ್ರೀ ಧರ್ಮಿಕ್ ಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದರು. ಅವರು ಬಿಲ್ಲು ಬಾಣವನ್ನು ಕೈಯಲ್ಲಿ ಹಿಡಿದು ರಾವಣ ದಹನವನ್ನು ಮಾಡಿದರು. ಇದಕ್ಕೂ ಮುನ್ನ ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರು ಉದ್ಯಾನವನದಲ್ಲಿ ರಾಮ, ಲಕ್ಷ್ಮಣರ ಪಾತ್ರಗಳನ್ನು ನಿರ್ವಹಿಸುವ ಕಲಾವಿದರ ಹಣೆಗೆ ತಿಲಕ ಹಚ್ಚಿದರು. https://twitter.com/ANI/status/1845080143024488730 ದಸರಾ 2024 ವಿಜಯದಶಮಿ ಅಥವಾ ದಸರಾ ಪ್ರತಿ ವರ್ಷ ನವರಾತ್ರಿಯ ಕೊನೆಯಲ್ಲಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಇದನ್ನು ಹಿಂದೂ ಲುನಿ-ಸೌರ ಕ್ಯಾಲೆಂಡರ್ ನ ಏಳನೇ ದಿನವಾದ ಅಶ್ವಿನಿ ತಿಂಗಳ ಹತ್ತನೇ ದಿನದಂದು ಆಚರಿಸಲಾಗುತ್ತದೆ. ಈ ಹಬ್ಬವು ಸಾಮಾನ್ಯವಾಗಿ ಗ್ರೆಗೋರಿಯನ್ ಕ್ಯಾಲೆಂಡರ್ ತಿಂಗಳುಗಳಾದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಬರುತ್ತದೆ. ವಿಜಯದಶಮಿ ಹಬ್ಬವನ್ನು ದೇಶದ ಬಹುತೇಕ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ,…
ತಮಿಳುನಾಡು: ಮೈಸೂರು-ದರ್ಭಾಂಗ ಬಾಗ್ಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ 12 ಬೋಗಿಗಳು ಹಳಿ ತಪ್ಪಿದ ಘಟನೆ ತಮಿಳುನಾಡಿನ ಕವರಪೆಟ್ಟೈ ಬಳಿ ಶುಕ್ರವಾರ ನಡೆದಿದೆ. ಈ ಘಟನೆಯು ಈ ಪ್ರದೇಶದ ರೈಲು ಸೇವೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. 18 ರೈಲುಗಳನ್ನು ರದ್ದುಪಡಿಸಲಾಗಿದೆ ಮತ್ತು ಹಲವಾರು ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ರೈಲ್ವೆ ಸಚಿವಾಲಯವು ಒಟ್ಟು ಗಾಯಗಳ ಸಂಖ್ಯೆಯ ಬಗ್ಗೆ ನವೀಕರಿಸಿದ ವರದಿಯನ್ನು ಇನ್ನೂ ನೀಡಿಲ್ಲ, ಆದಾಗ್ಯೂ 19 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ದೃಢೀಕರಿಸದ ವರದಿಗಳ ಪ್ರಕಾರ ಯಾವುದೇ ಸಾವುನೋವುಗಳಿಲ್ಲ. ಗಾಯಗೊಂಡ ಪ್ರಯಾಣಿಕರಿಗೆ ಸಹಾಯ ಮಾಡಲು ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್ ಗಳನ್ನು ತ್ವರಿತವಾಗಿ ಸ್ಥಳಕ್ಕೆ ಕಳುಹಿಸಲಾಗಿದೆ. ರೈಲು ಸೇವೆಗಳನ್ನು ಪುನರಾರಂಭಿಸಲು ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ, ಆದರೆ ಭಾರಿ ಮಳೆ ಪ್ರಯತ್ನಗಳಿಗೆ ಅಡ್ಡಿಯಾಗಿದೆ. ಪುನಃಸ್ಥಾಪನೆ ಪೂರ್ಣಗೊಳ್ಳಲು ಸುಮಾರು 16 ಗಂಟೆಗಳು ಬೇಕಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಗಂಟೆಗೆ 80 ಕಿ.ಮೀ ವೇಗದಲ್ಲಿ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲು ಲೂಪ್ ಲೈನ್ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ…
ಬೆಂಗಳೂರು: ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಚಿತ್ರವನ್ನು ಬಳಸಿಕೊಂಡು ಜಾಹೀರಾತು ನೀಡಿದ್ದು ತಪ್ಪು. ಕರ್ನಾಟಕದಲ್ಲಿ ದುಷ್ಟ ಶಕ್ತಿಗಳು ಯಾರು ಅಂದ್ರೆ ಅದು ಸಿದ್ಧರಾಮಯ್ಯ. ಅವರಿಂದಲೇ ದುಷ್ಟ ಶಕ್ತಿಗಳ ಸಂಹಾರ ಶುರುವಾಗಲಿ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್ ಗಳ ಮೇಲೆ ಸರ್ಕಾರ ಪ್ರಕರಣ ದಾಖಲಿಸಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ ಮಾಡೋ ಕಾರಣದಿಂದಾಗಿ ಎಲ್ಲಾ ಕೇಸ್ ವಾಪಾಸ್ ಪಡೆದಿದ್ದಾರೆ. ಇದು ರಾಜ್ಯ ಸರ್ಕಾರ ಮಾಡಿದಂತ ಅಕ್ಷಮ್ಯ ಅಪರಾಧ ಎಂಬುದಾಗಿ ಗುಡುಗಿದರು. ಶಿವಮೊಗ್ಗ, ಉಡುಪಿ, ಮಂಗಳೂರು ಹಿಂದೂ ಕಾರ್ಯಕರ್ತರ ಮೇಲೆ ಯಾಕೆ ದಾಖಲಿಸಿದ್ದಂತ ಕೇಸ್ ವಾಪಾಸ್ ಪಡೆದಿಲ್ಲ? ಅವರು ಕ್ರಿಮಿನಲ್ ಗಳು, ಇವರು ಕ್ರಿಮಿನಲ್ ಗಳು ಅಲ್ವ? ನೀವು ಜನರನ್ನು ಕೆರಳಿಸುವಂತ ಕೆಲಸ ಮಾಡುತ್ತಿದ್ದೀರಿ. ಕೇಂದ್ರ ಸರ್ಕಾರಕ್ಕೆ ನಿಮ್ಮ ವಿರುದ್ಧ ಕ್ರಮ ಜರುಗಿಸಬೇಕು ಎಂಬುದಾಗಿ ಪತ್ರ…
ಬೆಂಗಳೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗಾಗಿ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅಕ್ಟೋಬರ್ 20, 2024 ರೊಳಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9845171789 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-sslc-fail-students-re-admission-to-class-10/ https://kannadanewsnow.com/kannada/attention-ladies-these-documents-are-mandatory-to-get-free-sewing-machine/ https://kannadanewsnow.com/kannada/8-days-left-to-apply-for-krishi-bhagya-scheme-last-date-to-apply-for-krishi-bhagya-scheme-is-october-20/
ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಮರು ದಾಖಲಾತಿ ಪಡೆದಲ್ಲಿ ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಸರ್ಕಾರಿ ಪ್ರೌಢಶಾಲೆಗಳಲ್ಲಿ 10…
ಬೆಂಗಳೂರು: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/job-fair-to-be-held-in-bengaluru-on-october-20/ https://kannadanewsnow.com/kannada/good-news-for-ration-card-holders-distribution-of-foodgrains-for-october-begins/
ಧಾರವಾಡ : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್‍ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಜಿಲ್ಲೆಯಲ್ಲಿ 29,430 ಅಂತ್ಯೋದಯ ಹಾಗೂ 3,55,200 ಬಿಪಿಎಲ್ ಒಟ್ಟು…