Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಆರಂಭಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 51 ಫೆಲೋಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಂಡಿದ್ದು ಕಲ್ಯಾಣ ಕರ್ನಟಾಕ ಜಿಲ್ಲೆಗಳಲ್ಲಿ ಸಾರ್ವಜನಿಕ ನೀತಿಯನ್ನು ಅರಿತ ಯುವ ವೃತ್ತಿಪರ ಸಮೂಹವನ್ನು ಅಭಿವೃದ್ಧಿ ಗೊಳಿಸೋದಕ್ಕಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಆರಂಭಿಸಲಾಗುತ್ತಿದೆ ಎಂದಿದೆ. ಈ ಫೆಲೋಗಳು ಕ್ಷೇತ್ರದ ಸ್ಥಿತಿಗತಿಗಳ ಮಾಹಿತಿ ಸಂಗ್ರಹ ಮಾಡಬೇಕು. ಸ್ಥಳೀಯ ಆಡಳಿತದ ಬಗ್ಗೆ ತಿಳುವಳಿಕೆ ಹೊಂದಿರಬೇಕು. ಅಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನದಂತ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದೆ. ಕಾರ್ಯಾವಧಿ – 2 ವರ್ಷಗಳು ಆಗಿದ್ದಾವೆ. ಸಂಭಾವನೆ – ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಳಿಗೆ ನೇಮಕಗೊಳ್ಳೋರಿಗೆ ಪ್ರತಿ ತಿಂಗಳು ಪ್ರಯಾಣ ಭತ್ಯೆ ಸೇರಿ 61,500 ನೀಡಲಾಗುತ್ತದೆ. ಅರ್ಹತೆಯ ಮಾನದಂಡಗಳು ವಯಸ್ಸು 32 ವರ್ಷಕ್ಕಿಂತ ಕಡಿಮೆ ಇರಬೇಕು. 1-2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ…

Read More

ಕೊಪ್ಪಳ: ಇದು ಕೇವಲ ಮಠ ಅಲ್ಲ. ಇದೊಂದು ದೊಡ್ಡ ಶಕ್ತಿ ಕೇಂದ್ರ. ಜನರಿಗೆ ಜ್ಞಾನ, ಧರ್ಮದ ಅರಿವು ಮೂಡಿಸುವ ಪುಣ್ಯ ಕ್ಷೇತ್ರ. ನನ್ನ 60 ವರ್ಷಗಳ ಜೀವನದಲ್ಲಿ ಇಷ್ಟು ದೊಡ್ಡ ಮಟ್ಟದ ಜಾತ್ರೆ ನೋಡಿಲ್ಲ. ನಾನಿಂದು ಉಪಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಗವಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಮಾಧ್ಯಮಗಳ ಜತೆ ಮಾತನಾಡಿದಂತ ಅವರು, ದೇವರು, ಗವಿ ಸಿದ್ದೇಶ್ವರ, ಅಜ್ಜಯ್ಯನವರು ಸೇರಿ ಇಲ್ಲಿನ ಜನರ ನಂಬಿಕೆಯಾಗಿದ್ದಾರೆ. ಇಲ್ಲಿರುವ ಎಲ್ಲಾ ಭಕ್ತರಿಗೆ ನೆಮ್ಮದಿ, ಸುಖ, ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಭಕ್ತ ಹಾಗೂ ಭಗವಂತನ ನಡುವೆ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಈ ದೇವಾಲಯದಲ್ಲಿ ಅಜ್ಜನ ಹಾಗೂ ನಿಮ್ಮ ಆಶೀರ್ವಾದ ಪಡೆಯಲು ಬಂದಿದ್ದೇನೆ. ಪುರಂದರ ದಾಸರ, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಪದದಂತೆ ಎಂದು ಈ ಪವಿತ್ರ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿ ಮಾಡುರುವುದು…

Read More

ಬೆಂಗಳೂರು : ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು. 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯ ವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ…

Read More

ಬೆಂಗಳೂರು: ಕರ್ನಾಟಕ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಒಂದೆಡೆ ನಾಳೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮತ್ತೊಂದೆಡೆ ಲೋಕಸಭಾ ಚುನಾವಣೆಗಾಗಿ ಬಿಜೆಪಿಯಿಂದ ಕ್ಲಸ್ಟರ್ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಲೋಕಸಭಾ ಕ್ಲಸ್ಟರ್ ಗಳಿಗೆ ಪ್ರಮುಖರನ್ನ ಈ ಕೆಳಕಂಡಂತೆ 8 ಕ್ಲಸ್ಟರ್ ಗಳಿಗೆ ನಿಯುಕ್ತಿ ಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಹೀಗಿದೆ ಲೋಕಸಭಾ ಕ್ಲಸ್ಟರ್ ಗಳಿಗೆ ನಿಯೋಜಿಸಿದ ಉಸ್ತುವಾರಿಗಳ ಪಟ್ಟಿ ಮೈಸೂರು, ಚಾಮರಾಜನಗ, ಮಂಡ್ಯ, ಹಾಸು – ಎಸ್ ಎ ರಾಮದಾಸ್ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ – ಎಂ.ಬಿ ಭಾನುಪ್ರಕಾಶ್ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ – ಮಹೇಶ್ ಟೆಂಗಿನಕಾಯಿ ಬೀದರ್, ಗುಲ್ಬರ್ಗಾ – ರಾಜಕುಮಾರ್ ಪಾಟೀಲ ತೇಲ್ಕೂರ್ ರಾಯಚೂರು, ಕೊಪ್ಪಳ, ಬಳ್ಳಾರಿ – ಚಂದ್ರಶೇಖರ್ ಪಾಟೀಲ್ ಹಲಗೇರಿ ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ – ಕೆ.ಎಸ್ ನವೀನ್ ತುಮಕೂರು,…

Read More

ಕೊಪ್ಪಳ: ಬಿಜೆಪಿಯೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಬೆನ್ನಲ್ಲೇ ಕೆಆರ್ ಪಿಪಿ ಪಕ್ಷ ಕೂಡ ಮೈತ್ರಿಯೊಂದಿಗೆ ಕಣಕ್ಕೆ ಇಳಿಯೋ ಸೂಚನೆ ನೀಡಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಅಂತ ಕೆ ಆರ್ ಪಿಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೋದಿ ಮತ್ತೆ ಪ್ರಧಾನಿಯಾಗೋದಾದ್ರೇ ಹೊಂದಾಣಿಕೆ ಮಾಡಿಕೊಂಡು ಹೋಗೋದಕ್ಕೆ ನಾವು ಸಿದ್ಧರಿದ್ದೇವೆ ಎಂಬುದಾಗಿ ಹೇಳಿದ್ದಾರೆ. ನಮ್ಮ ನಿಲುವು ಇಷ್ಟೇ ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗೋದಕ್ಕೆ ಕೆ ಆರ್ ಪಿಪಿ ಹೊಂದಾಣಿಕೆ ರಾಜಕಾಣ ಮಾಡೋದಕ್ಕೆ ಸಿದ್ಧವಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಹೋಗೋ ಬಗ್ಗೆ ಸದ್ಯಕ್ಕೆ ಯಾವ ನಿರ್ಧರ ಕೈಗೊಂಡಿಲ್ಲ. ಬಿಜೆಪಿ ನಯಾಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಕೆ ಆರ್ ಪಿ ಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ 4 ರಿಂದ 5 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕೋ ಚಿಂತನೆ ನಡೆಸಲಾಗಿದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/note-applications-invited-for-training-in-sheep-and-goat-rearing/ https://kannadanewsnow.com/kannada/good-news-for-guarantee-scheme-beneficiaries-convention-to-be-held-in-all-taluks-in-february/

Read More

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜನವರಿ 30 ಮತ್ತು 31 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್‍ಕಾರ್ಡ್ ಜೆರಾಕ್ಸ್, 2 ಪಾಸ್‍ ಪೋಟೋ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಸುಂಕದ್ ತಿಳಿಸಿದ್ದಾರೆ. https://kannadanewsnow.com/kannada/good-news-for-poor-suffering-from-kidney-failure-free-dialysis-centres-opened-across-the-state/ https://kannadanewsnow.com/kannada/103-people-tested-positive-for-coronavirus-in-the-state-134-recovered/

Read More

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಉಚಿತವಾಗಿ ಉತ್ತಮ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಹೊಸ ಡಯಾಲೈಸರ್ ಯಂತ್ರಗಳ ಸೇವೆಗೆ ಚಾಲನೆ ನೀಡಿದೆ. ಬೆಂಗಳೂರಿನ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದರು. ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219ಕ್ಕೆ ಹೆಚ್ಚಿಸಲಾಗಿದ್ದು, 800 ಹೊಸ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗುತ್ತಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದಿನಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಿವೆ. ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ 20 ನೂತನ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಸಿಎಂ…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಅಲ್ಲದೇ ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸೋದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಳೆ ನಾಡಿದ್ದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರ್ನಾಟಕ ಬಿಜೆಪಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಪ್ರವಾಸದ ವಿವರವನ್ನು ಬಿಡುಗಡೆ ಮಾಡಲಾಗಿದೆ. ದಿನಾಂಕ 28-01-2024ರಂದು ಬೆಳಿಗ್ಗೆ 9 ಗಂಟೆಗೆ ಮಂತ್ರಾಲಯಕ್ಕೆ ಭೇಟಿ ನೀಡಲಿದ್ದಾರೆ. ಆ ನಂತ್ರ 12 ಗಂಟೆಯವರೆಗೆ ರಾಯಚೂರಿನ ಜಿಲ್ಲಾ ಕಾರ್ಯಾಲಯದಲ್ಲಿ ಮನ್ ಕಿ ಬಾತ್ ವೀಕ್ಷಣೆ ಮಾಡಲಿದ್ದಾರೆ. ಸಂಜೆ 5.30ರ ಹಾಗೆ ಯಾದಗಿರಿ ತಲುಪಿ ಪತ್ರಿಕಾಗೋಷ್ಠಿ, ಕಾರ್ಯಕರ್ತರ ಸಭೆ, ಬೂತ್ ಅಧ್ಯಕ್ಷರ ಮನೆಗೆ ಭೇಟಿಯನ್ನು ನೀಡಿ, ಅಲ್ಲಿಂದ ಸಂಜೆ 7.30ಕ್ಕೆ ರಸ್ತೆ ಮಾರ್ಗದ ಮೂಲಕ ಕಲಬುರ್ಗಿಯನ್ನು ತಲುಪಿ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ದಿನಾಂಕ 29-01-2024ರಂದು ಕಲಬುರ್ಗಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಿಗ್ಗೆ 10.30ಕ್ಕೆ ಬೀದರ್ ತಲುಪಲಿದ್ದಾರೆ. ಬೆಳಿಗ್ಗೆ 10.30ರಿಂದ 2 ಗಂಟೆಯ ಅವಧಿಯಲ್ಲಿ ಬೂತ್ ಅಧ್ಯಕ್ಷರ ಮನೆ…

Read More

ಧಾರವಾಡ : ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು. ಸರಕಾರದ ಅಭಿವೃದ್ದಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ, ಗುರಿ ನೀಡಲಾಗಿದೆ. ಸರಕಾರದಿಂದ ಹಂತಹಂತವಾಗಿ ಅನುದಾನವೂ ಬಿಡುಗಡೆ ಆಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಫೆಬ್ರವರಿ ತಿಂಗಳಲ್ಲಿ…

Read More

ಬೆಂಗಳೂರು; ರಾಜ್ಯದಲ್ಲಿ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 134 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 2,224 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದೆ. ಇಂದು ಹೊಸದಾಗಿ ಬಳ್ಳಾರಿ 03, ಬೆಳಗಾವಿ 04, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 65, ಬೀದರ್, ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದಿದೆ. ಇನ್ನೂ ಹಾಸನ 02, ಕಲಬುರ್ಗಿ 03, ಕೊಪ್ಪಳ 02, ಮೈಸೂರು 05, ಶಿವಮೊಗ್ಗ 02, ತುಮಕೂರು 10 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸೇರಿದಂತೆ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ ದೃಢಪಟ್ಟಿದೆ. ಸೋಂಕಿತರಾದಂತ 134 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 310 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/

Read More