Author: kannadanewsnow09

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು. ಆದರೆ ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ. ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ.…

Read More

ಚಿತ್ರದುರ್ಗ: ಕರ್ತವ್ಯಕ್ಕೆ ಗೈರಾದ ನರೇಗಾ ತಾಂತ್ರಿಕ ಸಹಾಯಕರ ಬಿಡುಗಡೆಗೊಳಿಸಿ ಚಿತ್ರದುರ್ಗ ಸಿಇಓ ಆದೇಶ ಹೊರಡಿಸಿದ್ದಾರೆ. ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. https://kannadanewsnow.com/kannada/ima-scam-compensation-for-those-who-lost-money-ahead-of-ramzan-says-minister-krishna-byre-gowda/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/

Read More

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ರಕ್ತ ಬರುವಂತೆ ಹಲ್ಲೆಯನ್ನು ಬೆಳಗಾವಿಯಲ್ಲಿ ಮರಾಠಿ ಯುವಕರು ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ದಾಳಿಯನ್ನು ನಡೆಸಲಾಗಿದೆ. ಖಾನಾಪುರದ ಜಾಂಬೋಡಿ ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದೆ. ಕನ್ನಡ ಮಾತನಾಡಿದ್ದಕ್ಕಾಗಿ ಕರವೇ ನಾರಾಯಣಗೌಡ ಬಣದ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ರಕ್ತ ಬರುವಂತೆ ಹಲ್ಲೆಯನ್ನು ಮರಾಠಿ ಯುವಕರು ನಡೆಸಿದ್ದಾರೆ. ಕರವೇ ಉಪಾಧ್ಯಕ್ಷನ ಮೇಲೆ ಹಲ್ಲೆ ನಡೆಸಿದಂತ ಮರಾಠಿ ಪುಂಡರು, ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದಂತ ಜಯವಂತ ನಿಡಗಲ್ಕರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮತ್ತೊಂದೆಡೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ನಾಳೆ ಬೆಳಗಾವಿಗೆ ಮರಾಠಿ ಯುವಕರ ಪುಂಡಾಟ ಘಟನೆಯ ಸಂಬಂಧ ಭೇಟಿ ನೀಡಲಿದ್ದಾರೆ. ಇದೇ ಹೊತ್ತಿನಲ್ಲಿ ಅವರ ತಾಲ್ಲೂಕು ಕರವೇ ಉಪಾಧ್ಯಕ್ಷನ ಮೇಲೆ ಹಲ್ಲೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದೆ. ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಉಪಾಧ್ಯಕ್ಷನ ಮೇಲೆಯೇ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಬೆಳಗಾವಿಯ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷನ ಮೇಲೆಯೇ ಮರಾಠಿ ಯುವಕರು ಗೂಂಡಾಗಿರಿ ಮಾಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕೆ ಕರವೇ ತಾಲ್ಲೂಕು ಉಪಾಧ್ಯಕ್ಷನ ಮೇಲೆ ಹಲ್ಲೆ ಮಾಡಲಾಗಿದೆ. ರಕ್ತ ಬರುವಂತೆ ಬೆಳಗಾವಿಯ ತಾಲ್ಲೂಕು ಕರವೇ ಉಪಾಧ್ಯಕ್ಷನ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿದ್ದಾರೆ. ಹೀಗಾಗಿ ಮತ್ತೆ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಕೆ ಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕನ್ನಡ ಬರೋದಿಲ್ವ, ಕನ್ನಡ ಮಾತನಾಡು ಎಂದಿದ್ದಕ್ಕೆ ಬಸ್ ನಿಲ್ಲಿಸಿ ಯುವಕರು ಹಲ್ಲೆ ಮಾಡಿದ್ದರು. ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/pm-modis-move-has-been-widely-appreciated-by-netizens/ https://kannadanewsnow.com/kannada/super-offer-for-those-who-have-this-rs-2-coin-money-will-rain-5-lakh-rupees-will-be-your-own/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/

Read More

ಭೋಪಾಲ್: ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭೋಪಾಲ್ ನಲ್ಲಿ ಪ್ರಾರಂಭವಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ವೇಳಾಪಟ್ಟಿಯನ್ನು ಬದಲಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಈ ನಡೆಗೆ ನೆಟ್ಟಿಗರು ಭಾರೀ ಮೆಚ್ಚುಗೆ, ಪ್ರಶಂಸೆ, ಶ್ಲಾಘನೆಯನ್ನು ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ 24ರ ಇಂದು ನಡೆಯಲಿರುವ ‘ಇನ್ವೆಸ್ಟ್ ಮಧ್ಯಪ್ರದೇಶ – ಜಾಗತಿಕ ಹೂಡಿಕೆದಾರರ ಶೃಂಗಸಭೆ -2025’ ಗೆ ಮೋದಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸೋದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾದ ಕಾರಣ ತಮ್ಮ ಪ್ರಯಾಣದ ವೇಳಾಪಟ್ಟಿಯನ್ನೇ ಬದಲಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಿ ತಮ್ಮ ಕಾರ್ಯಕ್ರಮವನ್ನು 15 ನಿಮಿಷಗಳವರೆಗೆ ವಿಸ್ತರಿಸಿದರು. ಬೆಳಿಗ್ಗೆ 9.45ಕ್ಕೆ ಹೊರಡಬೇಕಿದ್ದಂತ ವೇಳಾಪಟ್ಟಿಯನ್ನು ಬದಲಾಯಿಸಿ ಬೆಳಿಗ್ಗೆ 10 ಗಂಟೆಗೆ ಹೊರಟರು. ಈ ಕಾರಣದಿಂದಾಗಿ ಇಂದು ಭೂಪಾಲ್ ನಲ್ಲಿ ನಡೆಯುತ್ತಿದ್ದಂತ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯದಲ್ಲಿ ತಲುಪೋದಕ್ಕೆ ಸಾಧ್ಯವಾಯಿತು. ಒಂದು ವೇಳೆ ಮೋದಿ ಬೆಳಿಗ್ಗೆ…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಮಂಡ್ಯ : ಬೈಕ್‌ಗಳಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 8ಕ್ಕೂ ಹೆಚ್ಚು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರಿಂದ 286 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೆಂಗಳೂರಿನಲ್ಲಿ ಕಳ್ಳತನ ಮಾಡಿದ್ದ ಬೈಕ್‌ ಸೇರಿದಂತೆ ಒಟ್ಟು 24.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದ, ಪ್ರಸ್ತುತ ತಿ.ನರಸೀಪುರ ಪಟ್ಟಣದ ಚಿಕ್ಕಮ್ಮತಾಯಿ ಕಲ್ಯಾಣ ಮಂಟಪ ರಸ್ತೆಯ ನಿವಾಸಿ ಸಾಹಸ ಕಲಾವಿದ ಶೃಂಗಾರ್‌ ಎಸ್‌. ಬಿನ್‌ ಶಿವಣ್ಣ (25) ಮತ್ತು ಮಂಡ್ಯ ತಾಲ್ಲೂಕಿನ ಕಸಬಾ ಹೋಬಳಿಯ ಕನ್ನಲಿ ಗ್ರಾಮದ ಕಾರು ಚಾಲಕ ಚೇತನ್‌ ಎಸ್‌. ಬಿನ್‌ ಶೇಖರ್‌ (25) ಬಂಧಿತ ಆರೋಪಿಗಳು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಆರೋಪಿಗಳ ವಿರುದ್ಧ ಬೆಳಕವಾಡಿ, ಮೈಸೂರಿನ ನಜರ್‌ಬಾದ್‌, ಲಕ್ಷ್ಮೀಪುರಂ, ಆಲನಹಳ್ಳಿ, ವರುಣಾ, ಕುವೆಂಪುನಗರ ಹಾಗೂ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಮದ್ದೂರು…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವನ್ನು ಪೊಲೀಸ್ ಪೇದೆಯೇ ಎಸಗಲಾಗಿದೆ. ಸಹಾಯ ಮಾಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಇಂತಹ ಕೃತ್ಯವನ್ನು ಎಸಗಲಾಗಿದೆ. ಪೊಲೀಸ್ ಪೇದೆ ಅರುಣ್ ಎಂಬುವರು 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಠಾಣೆಯ ಪೊಲೀಸ್ ಪೇದೆ ಅರುಣ್ ಎಂಬುವರೇ ಈ ಕೃತ್ಯವೆಸಗಿದಂತವರಾಗಿದ್ದಾರೆ. ನೆರಮನೆಯ ವಿಕ್ಕಿ ಎಂಬಾತ ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು. ಈ ಸಂಬಂಧ ದೂರು ನೀಡಲು ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ತಾಯಿ, ಸಂತ್ರಸ್ತೆ ತೆರಳಿದ್ದರು. ಅವರನ್ನು ಪರಿಚಯ ಮಾಡಿಕೊಂಡಿದ್ದ ಪಿಸಿ ಅರುಣ್, ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದನು. ನ್ಯಾಯ ಕೊಡಿಸುತ್ತೇನೆ, ಅಲ್ಲದೇ ಬಾಲಕಿಗೆ ಕೆಲಸ ಕೊಡುವುದಾಗಿಯೂ ತಾಯಿ, ಸಂತ್ರಸ್ತೆಯನ್ನು ನಂಬಿಸಿದ್ದನು. ಬಾಲಕಿಯನ್ನು ಕಳೆದ ಡಿಸೆಂಬರ್ 2024ರಂದು ಓಯೋ ರೂಮಿಗೆ ಕರೆಸಿಕೊಂಡು ಅತ್ಯಾಚಾರಕ್ಕೆ ಒಳಗಾಗಿ, ನೆರವಿಗೆ ಧಾರಿಸುವಂತ ದೂರು ನೀಡಲು…

Read More

ಬೆಂಗಳೂರು : “ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ ಎಂದು ಸೂಚನೆ ನೀಡಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ನಾವು ಸೋತಿದ್ದ 86 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕರೆಸಿ ಅವರ ಕಷ್ಟ ಆಲಿಸಿ, ಮುಂದಿನ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪರಾಜಿತ ಅಭ್ಯರ್ಥಿಗಳು ಸುಮ್ಮನೆ ಕೂರದೆ ಕಾರ್ಯಪ್ರವೃತ್ತರಾಗಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ. ಎಐಸಿಸಿ ಜತೆ ಚರ್ಚೆ ಮಾಡಿ ಪಕ್ಷಕ್ಕೆ ಹಿನ್ನಡೆ ಇರುವ ಉಳಿದ 20 ಕ್ಷೇತ್ರಗಳಲ್ಲಿ ಪಕ್ಷವನ್ನು ಯಾವ ರೀತಿ ಕಟ್ಟಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ” ಎಂದು ತಿಳಿಸಿದರು.…

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ವಿವರಣೆ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು. “ಕೆಇಆರ್‌…

Read More