Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಸಂಸ್ಥೆಯ ವೆಬ್ಸೈಟ್ ತಿತಿತಿ.sims_shimogಚಿ.ಛಿom ನಲ್ಲಿ ಪಡೆಯತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಹೆಸರಿಗೆ ಪಡೆದಿರುವ ರೂ.1000 ಡಿಡಿ ಯೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವೊಗ್ಗ 577201 ಈ ವಿಳಾಸಕ್ಕೆ ಸಲ್ಲಿಸಬೇಕು. ಲಕೋಟೆಯ ಮೇಲೆ ಟೆಕ್ನಿಕಲ್ ಆಫೀಸರ್ ಎಂದು ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆಯನ್ನು ನಿಯಮಾವಳಿಗಳ ಪ್ರಕಾರ ನಡೆಸಲಾಗುವುದು ಎಂದು ಸಿಮ್ಸ್ ನಿರ್ದೇಶಕರು ಮತ್ತು ಡೀನ್ ತಿಳಿಸಿದ್ದಾರೆ. https://kannadanewsnow.com/kannada/kanakapura-one-dead-several-injured-as-under-construction-arch-collapses/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/
ಬೆಂಗಳೂರು: ನಗರದಲ್ಲಿ ಪ್ರೀತಿಸಲು ನಿರಾಕರಿಸಿದಂತ ಯುವತಿಯ ಕಾರು, ಬೈಕ್ ಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿದಂತ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇದಷಅಟೇ ಅಲ್ಲದೇ ರೌಡಿ ಶೀಟರ್ ರಾಹುಲ್ ಯುವತಿಯ ತಂದೆಗೂ ಚಾಕುವಿನಿಂದ ಇರಿದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಈ ಘಟನೆ ನಡೆದಿದೆ. ರೌಡಿ ಶೀಟರ್ ರಾಹುಲ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆತ ರೌಡಿ ಶೀಟರ್ ಆಗಿದ್ದರೂ ಯುವತಿ ಆತನನ್ನು ಪ್ರೀತಿಸುತ್ತಿದ್ದಳು. ಆದರೇ ಕೆಲ ದಿನಗಳಿಂದ ಆತನಿಂದ ಯುವತಿ ಅಂತರ ಕಾಯ್ದುಕೊಂಡಿದ್ದಳಂತೆ. ಈ ಕಾರಣದಿಂದ ಸಿಟ್ಟಾದಂತ ರೌಡಿ ಶೀಟರ್ ರಾಹುಲ್, ಯುವತಿಯ ಮನೆಯ ಮುಂದೆ ನಿಲ್ಲಿಸಿದ್ದಂತ ಕಾರು, ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರಿದ್ದನು. ಇದಷ್ಟೇ ಅಲ್ಲದೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎನ್ನುವಂತೆ ಯುವತಿಯ ಮನೆಗೆ ತೆರಳಿ ತಂದೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನುವುದು ಬೆಳಕಿಗೆ ಬಂದಿದೆ. ಘಟನೆಯ ನಂತ್ರ ಗಿರಿನಗರ ಪೊಲೀಸರು ಆರೋಪಿ ರಾಹುಲ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಪ್ರಿಯತಮೆ ತಾಯಿಯಿಂದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ…
ರಾಮನಗರ: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮತಕ್ಷೇತ್ರ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಅದೇ ನಿರ್ಮಾಣ ಹಂತದ ಆರ್ಚ್ ಕುಸಿತಗೊಂಡ ಪರಿಣಾಮ ಅದರಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಕನಕಪುರದ ರೂರಲ್ ಕಾಲೇಜಿನಲ್ಲಿ ನಿರ್ಮಾಣ ಹಂತದ ಆರ್ಚ್ ಏಕಾಏಕಿ ಕುಸಿತಗೊಂಡಿದೆ. ಈ ಘಟನೆಯಲ್ಲಿ ಆರ್ಚ್ ಅಡಿಯಲ್ಲಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರ್ಚ್ ಕುಸಿತದಿಂದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವಂತ ಶಂಕೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಈ ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದೆ. https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/ https://kannadanewsnow.com/kannada/bengaluru-over-100-school-vehicles-seized-by-rto-officials/
ಬೆಂಗಳೂರು : “ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕಾಗುತ್ತದೆ. ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ…
ನವದೆಹಲಿ: ಎಲ್ ಪಿಜಿ ಸಿಲಿಂಡರ್ ನಲ್ಲಿ ಎಷ್ಟು ಅನಿಲ ಉಳಿದಿದೆ ಅಂತ ನೀವು ಒಂದು ಕ್ಷಣದಲ್ಲಿ ಕಂಡುಹಿಡಿಯಬಹುದು. ಅದು ಹೇಗೆ ಅಂತ ಮುಂದೆ ಓದಿ. 1. ತೂಕವನ್ನು ಪರಿಶೀಲಿಸಿ ಎಲ್ಲಾ ಗ್ಯಾಸ್ ಸಿಲಿಂಡರ್ ಗಳು ‘ತಾರೆ ತೂಕ’ (ಅಥವಾ ಟಿ.ಡಬ್ಲ್ಯೂ.) ಎಂದು ಕರೆಯಲ್ಪಡುವ ಏನನ್ನಾದರೂ ಹೊಂದಿರುತ್ತವೆ, ಇದು ಖಾಲಿ ಗ್ಯಾಸ್ ಸಿಲಿಂಡರ್ ನ ಒಟ್ಟು ತೂಕವಾಗಿದೆ. ಟಿ.ಡಬ್ಲ್ಯೂ.ಗೆ ನಿಖರವಾದ ಮೊತ್ತವನ್ನು ಕಂಡುಹಿಡಿಯಲು ನೀವು ಸಿಲಿಂಡರ್ ಅನ್ನು ಸ್ಟಾಂಪ್ ಮಾಡಿದ ಗುರುತುಗಾಗಿ ಪರಿಶೀಲಿಸಬಹುದು, ಅದು ತೂಕವನ್ನು ಹೇಳುತ್ತದೆ, ಸಾಮಾನ್ಯವಾಗಿ ಕಿಲೋಗ್ರಾಂಗಳಲ್ಲಿ. ಟಿ.ಡಬ್ಲ್ಯೂ. ಸಾಮಾನ್ಯವಾಗಿ ಕ್ಯಾಪ್ ಮೇಲೆ ಇರುತ್ತದೆ. 2. ಸಿಲಿಂಡರ್ ಮೇಲೆ ಬಿಸಿ ನೀರನ್ನು ಸುರಿಯಿರಿ ಎಷ್ಟು ಅನಿಲ ಉಳಿದಿದೆ ಎಂದು ತೂಕ ಮಾಡಲು ಅಥವಾ ಲೆಕ್ಕಹಾಕಲು ನಿಮಗೆ ಸಾಧ್ಯವಾಗದಿದ್ದರೆ, ನೀವು ಮಾಡಬೇಕಾದಂತ ಮತ್ತೊಂದು ಪತ್ತೆ ವಿಧಾನವೆಂದರೇ ಬಿಸಿ ನೀರನ್ನು ಗ್ಯಾಸ್ ಸಿಲಿಂಡರ್ ಮೇಲೆ ಸುರಿಯುವುದು. ಗ್ಯಾಸ್ ಸಿಲಿಂಡರ್ ನಲ್ಲಿ ಇದ್ದರೇ ಅದರ ಮೇಲೆ ಕೈ ಇಟ್ಟು ನೋಡಿದಾಗ ತಣ್ಣಗಿನ ಅನುಭವ ನೀಡುತ್ತದೆ.…
ನವದೆಹಲಿ: ಪಿಎಂ ಕಿಸಾನ್ ಯೋಜನೆಯ 19ನೇ ಕಂತು ಬಿಡುಗಡೆಯಾಗಿದೆ. ನಿಮ್ಮ ಖಾತೆಗೆ 2000 ರೂ.ಗಳು ಬಂದಿವೆಯೇ ಎಂದು ಪರಿಶೀಲಿಸುವುದು ಹೇಗೆಂದು ಮುಂದೆ ತಿಳಿಯಿರಿ. ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಫೆಬ್ರವರಿ 24) ಬಿಡುಗಡೆ ಮಾಡಿದ್ದಾರೆ. 72 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ 1,400 ಕೋಟಿ ರೂ.ಗಳನ್ನು ವರ್ಗಾಣೆಯಾಗಿದೆ. https://twitter.com/ANI/status/1893962844959547578 ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ಬಿಹಾರದ ಭಾಗಲ್ಬುರ್ ನಲ್ಲಿ ಬಿಡುಗಡೆ ಮಾಡಿದರು. ಅಲ್ಲದೇ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. “ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತನ್ನು ಪ್ರಧಾನಿ ಬಿಹಾರದ ಭೂಮಿಯಿಂದ ರೈತರ ಖಾತೆಗಳಿಗೆ ಬಿಡುಗಡೆ ಮಾಡುತ್ತಿರುವುದು ನಮಗೆ ಬಹಳ ಅದೃಷ್ಟದ ವಿಷಯವಾಗಿದೆ. ಇದರಲ್ಲಿ 76,000 ಕ್ಕೂ ಹೆಚ್ಚು ಸೇರಿಸಲಾಗಿದೆ. ಇದು ಕೇಂದ್ರ ಸರ್ಕಾರದ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಇದು ರೈತರಿಗೆ ನೇರವಾಗಿ ಪ್ರಯೋಜನಕಾರಿಯಾಗಿದೆ ಎಂಬುದಾಗಿ ಪ್ರಧಾನಿ ಮೋದಿ ತಿಳಿಸಿದರು. ಪಿಎಂ-ಕಿಸಾನ್ ಎಂದರೇನು?…
ಮೈಸೂರು: ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪುಂಡರ ವಿರುದ್ಧ ರಾಜ್ಯ ಸರಕಾರವು ದೃಢತೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ಕನ್ನಡಿಗರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮರಾಠಿಗರ ಪುಂಡಾಟದ ಕುರಿತು ಗಮನ ಸೆಳೆದ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಕನ್ನಡಿಗರ ವಿಚಾರದಲ್ಲಿ ಈ ಭಂಡ ಸರಕಾರ ರಾಜಕಾರಣ ಮಾಡುತ್ತದೆ ಎಂದು ಅನಿಸುತ್ತಿಲ್ಲ ಎಂದ ಅವರು, ಪ್ರಚೋದನಕಾರಿ ಹೇಳಿಕೆ ಕೊಡುವುದು ಮತ್ತು ಪುಂಡಾಟಿಕೆ ಮಾಡುವವರಿಂದ ಎರಡೂ ರಾಜ್ಯಗಳಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕನ್ನಡಿಗರನ್ನು ಬೆದರಿಸುವವರು, ಪುಂಡಾಟಿಕೆ ಮಾಡುವವರ ವಿರುದ್ಧ ರಾಜ್ಯ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಇಲ್ಲವಾದರೆ ಇದು ರಾಜ್ಯಕ್ಕೇ ಹರಡುವ ಸಾಧ್ಯತೆ ಇದೆ ಎಂದು ಆತಂಕದಿಂದ ತಿಳಿಸಿದರು. ಉಚಿತ ವಿದ್ಯುತ್ ಹಣವನ್ನು ಸರಕಾರ ಭರಿಸಬೇಕಿದೆ. ಇಲ್ಲದಿದ್ದರೆ, ಸಾರ್ವಜನಿಕರಿಂದ ಹಣ ವಸೂಲಿಗೆ ಅವಕಾಶ ಕೊಡುವಂತೆ ಎಸ್ಕಾಂಗಳು…
ಶಿವಮೊಗ್ಗ : ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು, ರೌಂಡ್ ಟೇಬಲ್, ವಿವಿಧ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ‘ ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಹಾಗೂ ಸಿಎಸ್ಆರ್ ಯೋಜನೆಗಳ ಅನುಷ್ಟಾನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ 3 ವಿಭಾಗಗಳಿವೆ. ಒಂದು ಸಿಎಸ್ಆರ್ ನಿಧಿ, ದಾನಿಗಳು ಮತ್ತು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ದಾನಿಗಳಾಗಿದ್ದು, ರಾಜ್ಯದಲ್ಲಿ ಅನೇಕ ಶಾಲೆಗಳು ಅಭಿವೃದ್ದಿ ಕಾಣುತ್ತಿವೆ. ಶಿಕ್ಷಣ ಇಲಾಖೆಯಲ್ಲಿ 46…
ಬಾಂಗ್ಲಾದೇಶ: ಇಲ್ಲಿನ ಕಾಕ್ಸ್ ಬಜಾರ್ ಜಿಲ್ಲೆಯ ವಾಯುಪಡೆಯ ನೆಲೆಯ ಮೇಲೆ ಸೋಮವಾರ ದುಷ್ಕರ್ಮಿಗಳು ನಡೆಸಿದಂತ ಗುಂಡಿನ ದಾಳಿಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ದೃಢಪಡಿಸಿದೆ. ಮೂಲಗಳ ಪ್ರಕಾರ, ಸಂತ್ರಸ್ತನನ್ನು 30 ವರ್ಷದ ಸ್ಥಳೀಯ ವ್ಯಾಪಾರಿ ಶಿಹಾಬ್ ಕಬೀರ್ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶ ಸಶಸ್ತ್ರ ಪಡೆಗಳ ಸಾರ್ವಜನಿಕ ಸಂಪರ್ಕ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್ಪಿಆರ್) ಸಂಕ್ಷಿಪ್ತ ಹೇಳಿಕೆಯಲ್ಲಿ, “ಕಾಕ್ಸ್ ಬಜಾರ್ ವಾಯುಪಡೆಯ ನೆಲೆಯ ಪಕ್ಕದಲ್ಲಿರುವ ಸಮಿತಿ ಪ್ಯಾರಾದ ಕೆಲವು ಅಪರಾಧಿಗಳು ಕಾಕ್ಸ್ ಬಜಾರ್ ವಾಯುಪಡೆಯ ನೆಲೆಯ ಮೇಲೆ ದಾಳಿ ನಡೆಸಿದರು. ಈ ನಿಟ್ಟಿನಲ್ಲಿ ಬಾಂಗ್ಲಾದೇಶ ವಾಯುಪಡೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದೆ. ಮಾಹಿತಿಯ ಪ್ರಕಾರ ಹಿಂದಿನ ದಿನ ಭೂ ವಿವಾದ ಭುಗಿಲೆದ್ದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದ್ದು, ಇದು ವಾಯುಪಡೆಯ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಆದಾಗ್ಯೂ, ಸ್ಥಳೀಯರು ಕಲ್ಲುಗಳನ್ನು ಎಸೆದಿದ್ದರಿಂದ ಘರ್ಷಣೆ ಹಿಂಸಾತ್ಮಕವಾಗಿ ಮಾರ್ಪಟ್ಟಿತು, ಇದು ಎರಡೂ ಕಡೆ ಗಾಯಗಳಿಗೆ…
ಬೆಂಗಳೂರು : ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ ಎಂದರು. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದರು. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ. ನಮ್ಮ ಜಾತಿ ವ್ಯವಸ್ಥೆಗೆ ಚಲನೆ…










