Author: kannadanewsnow09

ಹಾಸನ: ಜಿಲ್ಲೆಯಲ್ಲಿ ಇಂದು ನಡೆದಂತ ಗಣರಾಜ್ಯೋತ್ಸವದ ನಿಮಿತ್ತದ ಸಾಂಸ್ಕೃತಿಕ ಕಾರ್ಯಕ್ರಮದ ನೃತ್ಯ ಪ್ರದರ್ಶನದ ವೇಳೆಯಲ್ಲಿ ಕಮಲದ ಹೂವನ್ನು ಶಾಲಾ ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ್ದಾರೆ. ಹೀಗೆ ಪ್ರದರ್ಶನ ಮಾಡುತ್ತಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದನ್ನ ಕಂಡಂತ ಶಾಸಕ ಶಿವಲಿಂಗೇಗೌಡ ಅವರು ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಗರಂ ಆದಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಶಾಲೆಯೊಂದರದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನೃತ್ಯ ಪ್ರದರ್ಶನವೊಂದರಲ್ಲಿ ಭಾರತದ ರಾಷ್ಟ್ರೀಯ ಹೂ ಕಮಲದ ಚಿತ್ರವನ್ನು ಪ್ರದರ್ಶಿಸಿದ್ದಾರೆ. ಈ ಕಮಲದ ಹೂ ಕಂಡಂತ ಶಾಸಕ ಶಿವಲಿಂಗೇಗೌಡ ಅವರು, ತಹಶೀಲ್ದಾರ್ ಸಂತೋಷ್ ಹಾಗೂ ಸಾರ್ವಜನಿಕರು ಕೆಂಡಾಮಂಡಲವಾಗಿದ್ದಾರೆ. ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಾಲಾ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಂತ ಶಾಸಕ ಶಿವಲಿಂಗೇಗೌಡ ಅವರು ಕಮಲ ಯಾವ ಪಕ್ಷದ ಚಿನ್ಹೆ? ಯಾವ ಸೀಮೆ ನಾಗರಿಕರು ನೀವು.? ಮಕ್ಕಳನ್ನು ಹೇಗೆ ಉದ್ದಾರ ಮಾಡ್ತೀರಿ ಎಂಬುದಾಗಿ ಗರಂ ಆದ್ರು. ಆಗ ಕಮಲ ಒಂದು ಪಕ್ಷದ…

Read More

ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಲಿದ್ದಾರೆ ಎಂದಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ರೇ, ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಲಿದ್ದಾರೆ. ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ…

Read More

ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಯೋಜಿಸಿದ್ದೇವೆ ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಎಲ್ಲ ವಿಷಯಗಳ ಸಮಾಲೋಚನೆ ಮಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರವನ್ನು, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು…

Read More

ಇಂದು ಪ್ರತಿಯೊಬ್ಬ ಮನುಷ್ಯನೂ ಪ್ರತಿದಿನ ಕೊರಗುವ ಒಂದು ಮಾತು ಏನೆಂದರೆ ನಾನೇನು ಪಾಪ ಮಾಡಿದ್ದೇನೆ ಎಂದರೆ ಈ ಜನ್ಮದಲ್ಲಿ ತುಂಬಾ ಕಷ್ಟ ಪಡುತ್ತಿದ್ದೇನೆ. ಸುಸ್ಥಿತಿಯಲ್ಲಿರುವವರಿಂದ ಹಿಡಿದು ದೀನದಲಿತರ ತನಕ ಎಲ್ಲರೂ ಇದನ್ನೇ ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ನಡೆಸಲಾಗುತ್ತಿದೆ. ಇದರ ಸಲುವಾಗಿ ಕೆಪಿಸಿಸಿ ಸಂವಹನ ಸಮಿತಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಬೂತ್ ಲೆವೆಲ್ ಏಜೆಂಟರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಲು ಹಾಗೂ ನಿಗದಿತ ಸಮಯದೊಳಗೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಲು, ಕೆಪಿಸಿಸಿ, ಡಿಸಿಸಿ, ಬಿಸಿಸಿ ಮುಖಂಡರುಗಳೊಂದಿಗೆ ಸಮನ್ವಯತೆ ಸಾಧಿಸಲು ಕೆಪಿಸಿಸಿಯಿಂದ ಈ ಕೆಳಕಂಡ ಬಿಎಲ್ಎ ಸಮನ್ವಯ ಸಮಿತಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಹೀಗಿದೆ ಕೆಪಿಸಿಸಿ ಸಂವಹನ ಸಮಿತಿ ಬಿಎಲ್ಎ ಪಟ್ಟಿ ಪಿಸಿ ಮೋಹನ್, ಉಪಾಧ್ಯಕ್ಷರು, ಕೆಪಿಸಿಸಿ – ಅಧ್ಯಕ್ಷರು, ಬೆಂಗಳೂರು ವಿಭಾಗದ ಉಸ್ತುವಾರಿಗಳು ಪಿ.ಆರ್ ರಮೇಶ್, ಉಪಾಧ್ಯಕ್ಷರು, ಕೆಪಿಸಿಸಿ – ಅಧ್ಯಕ್ಷರು, ಗುಲ್ಪರ್ಗ ವಿಭಾಗ ಉಸ್ತುವಾರಿಗಳು ವೀರಕುಮಾರ್ ಪಾಟೀಲ್, ಉಪಾಧ್ಯಕ್ಷರು, ಕೆಪಿಸಿಸಿ – ಅಧ್ಯಕ್ಷರು ಬೆಳಗಾವಿ ವಿಭಾಗ ಉಸ್ತುವಾರಿಗಳು ಐವಾನ್…

Read More

ಹೇಗ್: ಗಾಝಾದಲ್ಲಿ ಫೆಲೆಸ್ತೀನೀಯರ ನರಮೇಧವನ್ನು ತಡೆಗಟ್ಟಲು ಇಸ್ರೇಲ್ ವಿರುದ್ಧ ತಾತ್ಕಾಲಿಕ ಕ್ರಮಗಳನ್ನು ಹೊರಡಿಸುವ ಅಗತ್ಯವಿದೆ ಎಂದು ಅಂತರರಾಷ್ಟ್ರೀಯ ನ್ಯಾಯಾಲಯವು ಬಹು ನಿರೀಕ್ಷಿತ ತೀರ್ಪಿನಲ್ಲಿ ತೀರ್ಪು ನೀಡಿದೆ. “ಇಸ್ರಾಯೇಲ್ ರಾಜ್ಯವು … ನರಮೇಧ ಸಮಾವೇಶದ ಅನುಚ್ಛೇದ 2 ರ ವ್ಯಾಪ್ತಿಯಲ್ಲಿ ಎಲ್ಲಾ ಕೃತ್ಯಗಳನ್ನು ತಡೆಗಟ್ಟಲು ತನ್ನ ಅಧಿಕಾರದೊಳಗೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ನ್ಯಾಯಾಲಯ ಖಡಕ್ ಸೂಚನೆಯನ್ನು ನೀಡಿದೆ. ಇಸ್ರೇಲ್ ವಿರುದ್ಧ ಹೊರಿಸಲಾದ ನರಮೇಧ ಆರೋಪವನ್ನು ವಜಾಗೊಳಿಸಬೇಕೆಂಬ ಕರೆಗಳನ್ನು ಅಂತರರಾಷ್ಟ್ರೀಯ ನ್ಯಾಯಾಲಯ ತಿರಸ್ಕರಿಸಿದೆ. ಗಾಝಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ದಕ್ಷಿಣ ಆಫ್ರಿಕಾ ಸಲ್ಲಿಸಿದ ಪ್ರಕರಣದಲ್ಲಿ ಹೇಗ್ ನ ನ್ಯಾಯಾಧೀಶರು ತಮ್ಮ ಮಧ್ಯಂತರ ತೀರ್ಪನ್ನು ನೀಡಿದರು. ಗಾಝಾದಲ್ಲಿನ ‘ಮಾನವ ಪ್ರಾಣಿಗಳ’ ಬಗ್ಗೆ ಇಸ್ರೇಲ್ ರಕ್ಷಣಾ ಸಚಿವರು ನೀಡಿದ ಹೇಳಿಕೆಗಳನ್ನು ಗಣನೆಗೆ ತೆಗೆದುಕೊಂಡಿರುವುದಾಗಿ ಐಸಿಜೆ ಹೇಳಿದೆ. “ಈ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ದುರಂತದ ವ್ಯಾಪ್ತಿಯ ಬಗ್ಗೆ ನ್ಯಾಯಾಲಯಕ್ಕೆ ಚೆನ್ನಾಗಿ ತಿಳಿದಿದೆ ಮತ್ತು ನಿರಂತರ ಪ್ರಾಣಹಾನಿ ಮತ್ತು ಮಾನವ ಸಂಕಟದ ಬಗ್ಗೆ ತೀವ್ರ ಕಳವಳ ಹೊಂದಿದೆ” ಎಂದು…

Read More

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿರುವ ಅವರು; ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ. ‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ…

Read More

ಬೆಂಗಳೂರು: ಈವರೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನು ಮಾತ್ರವೇ ನೇಮಕ ಮಾಡಲಾಗುತ್ತಿತ್ತು. ಹೊಸ ಸಂಪ್ರದಾಯ ಎನ್ನುವಂತೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದಿತ್ತು. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ. 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರೋದಲ್ಲದೇ, ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನ ನೇಮಕ ಮಾಡಿ ಆದೇಶಿಸಿದ್ದಾರೆ. ಸಿಎಂ ಹೊರಡಿಸಿರುವಂತ ನಡವಳಿಯಲ್ಲಿ ಹಾನಗಲ್ ಶಾಸಕರಾಗಿರುವಂತ ಶ್ರೀನಿವಾಸ ಮಾನೆ ಅವರನ್ನು ಉಪ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಸಿಎಂಗೂ ರಾಜಕೀಯ ಸಲಹೆಗಾರರನ್ನ ನೇಮಕ ಮಾಡಲಾಗಿದೆ. https://kannadanewsnow.com/kannada/34-mlas-to-be-appointed-as-chairpersons-of-corporation-board-state-govt/ https://kannadanewsnow.com/kannada/youtube-celebreties-deep-fake/

Read More

ಬೆಂಗಳೂರು: ರಾಜ್ಯದ 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ, ಸರ್ಕಾರದ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿಎನ್ ನಾಗ ಪ್ರಶಾಂತ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಮುಖ್ಯಮಂತ್ರಿಯವರ ನಡವಳಿಯಂತೆ ದಿನಾಂಕ 26-01-2024ರನವ್ಯ ಈ ಕೆಳಕಂಡ ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ-ಮಂಡಳಿಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಹೀಗಿದೆ 34 ಶಾಸಕರಿಗೆ ನೀಡಲಾದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ ಹಂಪನಗೌಡ ಬಾದರ್ಲಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ…

Read More

ಬೆಂಗಳೂರು: ರಾಜ್ಯದ 35 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ. ಹೀಗಿದೆ 35 ಶಾಸಕರಿಗೆ ನೀಡಿರುವಂತ ನಿಗಮ ಮಂಡಳಿಯ ನೇಮಕಾತಿ ಪಟ್ಟಿ ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ…

Read More