Author: kannadanewsnow09

ಬೆಂಗಳೂರು: ರಾಜ್ಯದ 32 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ. ಹೀಗಿದೆ 32 ಶಾಸಕರಿಗೆ ನೀಡಿರುವಂತ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಲೀಸ್ಟ್ ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ…

Read More

ಬೆಂಗಳೂರು: ತೀವ್ರ ಕುತೂಹಲ  ಮೂಡಿಸಿದ್ದಂತ ನಿಗಮ ಮಂಡಳಿ ಸ್ಥಾನದ ಪಟ್ಟಿ ಕೊನೆಗೂ ಹೊರ ಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಆದೇಶವನ್ನು ನೀಡಿ, ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ 32 ಶಾಸಕರಿಗೆ ವಿವಿಧ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಿದಂತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಮೊದಲ ಬಾರಿಗೆ ನೀಡಿದ್ದಾರೆ. ಹೀಗಿದೆ 32 ಶಾಸಕರಿಗೆ ನೀಡಲಾಗಿರುವಂತ ನಿಗಮ ಮಂಡಳಿ ಸ್ಥಾನದ ಪಟ್ಟಿ ಅಪ್ಪಾಜಿ ಸಿಎಸ್ ನಾಡಗೌಡ- ಕೆ ಎಸ್ ಡಿ ಎಲ್ ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ( ವಾಯುವ್ಯ ಸಾರಿಗೆ ನಿಗಮ) ಹೆಚ್ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಎಸ್ ಆರ್ ಶ್ರೀನಿವಾಸ್ – ಕೆ ಎಸ್ ಆರ್ ಟಿಸಿ ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ ಬಿಜಿ ಗೋವಿಂದಪ್ಪ…

Read More

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ. ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ‌ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ಚೀಕರಿಸಿದ ಸಚಿವರು, ತಮ್ಮ ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಅವರು ಪಾಲ್ಗೊಂಡು ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನ ಸನ್ಮಾನಿಸಿ, ಗೌರವಿಸಲಾಯಿತು. https://kannadanewsnow.com/kannada/constitution-is-the-holy-book-of-indians-it-should-not-be-allowed-to-be-tampered-with-deputy-cm-dk-shivakumar-shivakumar/ https://kannadanewsnow.com/kannada/big-news-30-people-will-come-from-bjp-jds-says-minister-cheluvarayaswamy/

Read More

ಬೆಂಗಳೂರು : “ಹಿಂದೂಗಳಿಗೆ ಭಗವದ್ಗೀತೆ, ಮುಸಲ್ಮಾನರಿಗೆ ಖುರಾನ್, ಕ್ರೈಸ್ತರಿಗೆ ಬೈಬಲ್ ಹೇಗೆ ಪವಿತ್ರ ಗ್ರಂಥವೋ ಅದೇರೀತಿ ಪ್ರತಿಯೊಬ್ಬ ಭಾರತೀಯನಿಗೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಪವಿತ್ರ ಗ್ರಂಥ. ಇದನ್ನು ತಿರುಚಲು ಅವಕಾಶ ನೀಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆನೇಕಲ್ ನಲ್ಲಿ ನಡೆದ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೆ ಪವಿತ್ರ ಗ್ರಂಥ. ಪ್ರಜಾಪ್ರಭುತ್ವ ಎಂದರೆ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ಜನ ಪ್ರತಿನಿಧಿಗಳನ್ನು ಜನರೇ ಆಯ್ಕೆ ಮಾಡುವ ವ್ಯವಸ್ಥೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ರಕ್ಷಣೆ ನೀಡಲಾಗಿದೆ. ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಯಾವುದೇ ಒಂದು ಜಾತಿ, ಧರ್ಮ ಹಾಗೂ ವರ್ಗಕ್ಕೆ ಸೇರಿಲ್ಲ. ಎಲ್ಲರನ್ನೂ ಸಮಾನವಾಗಿ ಕಂಡು ಸಹಾಯ ಮಾಡುವುದು ಕಾಂಗ್ರೆಸ್ ಪಕ್ಷದ ತತ್ವ.…

Read More

ವಿಜಯಪುರ: ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ ಇಂದು 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹೊಡೆಯೋದಕ್ಕೆ ಹೋಗಿ, ನೆರೆದಿದ್ದಂತ ಜನರ ಮೇಲೆ ಗುಂಡು ಹಾರಿಸಿದ್ದಾನೆ. ಮಲ್ಲು ಗಿನ್ನಿ ಎಂಬಾತ ಅಚಾನಕ್ಕಾಗಿ ಹಾರಿಸಿದಂತ ಈ ಗುಂಡು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೋಮವ್ವ ಎಂಬುವರ ತೊಡೆ ಭಾಗಕ್ಕೆ ಹೊಕ್ಕಿದೆ. ತೀವ್ರ ರಕ್ತ ಸ್ತ್ರಾವದೊಂದಿಗೆ ಕುಸಿದು ಬಿದ್ದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯಿಂದಾಗಿ ಗಾಯಗೊಂಡಿರುವಂತ ಸೋಮವ್ವ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ಬಳಿಕ ಕನ್ನಡ ಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು,…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯನ ( CM Siddaramaiah ) ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ಅನ್ವಯಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಕೆಎಎಸ್ ಹುದ್ದೆ ( KAS Recruitment ) ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಮಾತ್ರ ಅನ್ವಯ ಆಗುವಂತೆ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆ ( KAS Exam 2024 ) ಬರೆಯುವವರಿಗೆ ಒಂದು ಬಾರಿಗೆ ಸೀಮಿತವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಅಂತ ತಿಳಿಸಿದೆ. ಇನ್ನೂ 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ…

Read More

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳದಲ್ಲಿ ಐಸಿಸ್ ಉಗ್ರನ ಜೊತೆಗೆ ನಂಟು ಹೊಂದಿದ್ದಂತ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ಮುಂಬೈನ ಎಟಿಎಸ್ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸಿರೋದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ನಿನ್ನೆ ಆಗಮಿಸಿರೋ ಮುಂಬೈನ ಎಟಿಎಸ್ ಅಧಿಕಾರಿಗಳು, ಭಟ್ಕಳ ಪೊಲೀಸರ ಸಹಾಯದೊಂದಿಗೆ ಐಸಿಸ್ ಉಗ್ರನ ಜೊತೆಗೆ ನಂಟು ಹೊಂದಿದ್ದಂತ ಮಹಿಳೆಯೊಬ್ಬರನ್ನು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ನಾಸಿಕ್ ಟಿಡ್ಕೆ ಕಾಲೋನಿಯಲ್ಲಿ ಐಸಿಸ್ ಜೊತೆಗೆ ನಂಟು ಹೊಂದಿದ್ದಂತ ಆರೋಪದಲ್ಲಿ ಹುಸೇನ್ ಅಬ್ದುಲ್ ಅಜೀಜ್ ಶೇಕ್(32) ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಯಿಂದ ಸಿಮ್ ಕಾರ್ಡ್, ಮೊಬೈಲ್ ಪೋನ್, ಪೆನ್ ಡ್ರೈವ್, ಲ್ಯಾಪ್ ಟಾಪ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇಂತಹ ಬಂಧಿತ ಐಸಿಸ್ ಜೊತೆಗೆ ಸಂಪರ್ಕ ಹೊಂದಿದ್ದಂತ ಶಂಕಿತ ಆರೋಪಿ ಹುಸೇನ್ ಜೊತೆಗೆ ಸಂಪರ್ಕವನ್ನು ಭಟ್ಕಳದ ಮಹಿಳೆಯೊಬ್ಬರು ಹೊಂದಿದ್ದರು. ಅಲ್ಲದೇ ಆತನನ್ನು ಭಟ್ಕಳಕ್ಕೆ ಕರೆಸಿಕೊಂಡಿದ್ದಂತ ಮಹಿಳೆ, ಲಾಡ್ಜ್ ಒಂದರಲ್ಲಿ ಖಾಸಗಿಯಾಗಿಯೂ ಕೆಲ ಕಾಲ ಭೇಟಿಯಾಗಿದ್ದರು ಎಂಬುದಾಗಿ ತನಿಖೆಯಿಂದ ತಿಳಿದು…

Read More

ನವದೆಹಲಿ: ಪಾಕಿಸ್ತಾನ ಆಲ್ರೌಂಡರ್ ಶೋಯೆಬ್ ಮಲಿಕ್ ಅವರು ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ( Bangladesh Premier League -BPL) ನ 2024 ರ ಋತುವಿನಲ್ಲಿ ಇನ್ನು ಮುಂದೆ ಆಡುವುದಿಲ್ಲ ಎಂದು ತಿಳಿದುಬಂದಿದೆ. ಮಲಿಕ್ ವೈಯಕ್ತಿಕ ಕಾರಣಗಳಿಗಾಗಿ ದುಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆಯಾದರೂ, ಬಾಂಗ್ಲಾದೇಶದ ಮಾಧ್ಯಮಗಳಲ್ಲಿನ ವರದಿಗಳು ವಿಭಿನ್ನ ನಿರೂಪಣೆಯನ್ನು ಚಿತ್ರಿಸುತ್ತವೆ. ಬಾಂಗ್ಲಾದೇಶದ ಪತ್ರಕರ್ತ ಸೈಯದ್ ಸಮಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕಾರ, ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮಲಿಕ್ ಅವರ ಒಪ್ಪಂದವನ್ನು ಅವರ ಫ್ರಾಂಚೈಸಿ ಫಾರ್ಚೂನ್ ಬರಿಶಾಲ್ ಕೊನೆಗೊಳಿಸಿದೆ. “ಫಿಕ್ಸಿಂಗ್ ಆರೋಪದ ಮೇಲೆ ಫಾರ್ಚೂನ್ ಬರಿಸಾಲ್ ಶೋಯೆಬ್ ಮಲಿಕ್ ಅವರ ಒಪ್ಪಂದವನ್ನು ಕೊನೆಗೊಳಿಸಿದೆ. ಇತ್ತೀಚೆಗೆ ನಡೆದ ಪಂದ್ಯದಲ್ಲಿ ಸ್ಪಿನ್ನರ್ ಆಗಿರುವ ಮಲಿಕ್ ಒಂದೇ ಓವರ್ನಲ್ಲಿ ಮೂರು ನೋ ಬಾಲ್ಗಳನ್ನು ಎಸೆದಿದ್ದರು. ಫಾರ್ಚೂನ್ ಬರಿಶಾಲ್ ತಂಡದ ಮಾಲೀಕ ಮಿಜಾನುರ್ ರೆಹಮಾನ್ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಬಿಪಿಎಲ್ 2024: ಸಾಮಿ ಎಕ್ಸ್ (ಹಿಂದೆ ಟ್ವಿಟರ್) ಪೋಸ್ಟ್ನಲ್ಲಿ ಬರೆದಿದ್ದಾರೆ. ನಿಖರವಾಗಿ ಏನಾಯಿತು? ವಿಶೇಷವೆಂದರೆ, ಮಲಿಕ್…

Read More

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ “ಸ್ವಾವಲಂಭಿ” ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ. ಗರಿಷ್ಠ 5 ಲಕ್ಷದ ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು…

Read More

ಬೆಂಗಳೂರು : “ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದರು. ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ.…

Read More