Author: kannadanewsnow09

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಗೆ 6 ಆಪರೇಷನ್ ಮಾಡಲಾಗಿದೆ. 190 ಹೊಲಿಗೆ ಹಾಕಲಾಗಿದೆ. ಶಿವಣ್ಣ ತಲೆಯಲ್ಲಿ ಒಂದು ಸ್ಟಂಟ್ ಇದೆ. ಹೃದಯದಲ್ಲಿ ಒಂದು ಇದೆ. ಇದೇ ಜನವರಿ.25ರಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ಶಿವರಾಜ್ ಕುಮಾರ್ ಅವರಿಗೆ ಐದೂವರೆ ಗಂಟೆ ಆಪರೇಷನ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೇ ನಾಲ್ಕು ಮುಕ್ಕಾಲು ಗಂಟೆಯಲ್ಲಿ ಆಪರೇಷನ್ ಮುಗಿಯಿತು ಎಂದರು. ಇದಕ್ಕೂ ಮೊದಲು ನಟ ಶಿವರಾಜ್ ಕುಮಾರ್ ಗೆ ಆಪರೇಷನ್ ಮ್ಯಾನುಯಲಿ ಮಾಡಬೇಕೋ ಅಥವಾ ರೋಬೋಟಿಕ್ ಮಾಡಬೇಕೋ ಅಂತನೂ ಚರ್ಚೆ ನಡೆಸಲಾಗಿತ್ತು. ಆದರೇ ಏಳೆಂಟು ಹೋಲ್ ಮಾಡಿ ದೇಹವನ್ನು ಉಲ್ಲಾ ಮಲಗಿಸಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಕೊನೆಗೆ ಮ್ಯಾನುಯೆಲ್ ಸೂಕ್ತವೆಂದು ನಿರ್ಧರಿಸಿ ಆಪರೇಷನ್ ಮಾಡಲಾಗಿದೆ ಎಂದು ತಿಳಿಸಿದರು. ಈಗ ಶಿವರಾಜ್ ಕುಮಾರ್ ಗೆ 63 ವರ್ಷ. ಅವರು ವಾಪಾಸ್ ಬಂದ ಮೇಲೆ 36ರ ರೀತಿ ಕಾಣಿಸ್ತಾರೆ. ವೈದ್ಯರು…

Read More

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ. ಎಲ್ಲೆಲ್ಲಿ ಚಿತ್ರ: ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ. ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ…

Read More

ಕಲಬುರ್ಗಿ: ಚೆಕ್ ಬುಕ್ ನಲ್ಲಿ ಕಲಬುರ್ಗಿ ಆಯುಕ್ತರ ನಕಲಿ ಸಹಿ ಮಾಡಿ, ಬ್ಯಾಂಕ್ ಗೆ ನೀಡಿ ಲಕ್ಷ ಲಕ್ಷ ಹಣ ಡ್ರಾ ಮಾಡಿಕೊಂಡ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ, ಅಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಲಬುರ್ಗಿಯ ಆಯುಕ್ತರಿಗೆ ಸೇರಿದಂತ ಚೆಕ್ ಬುಕ್ ನಲ್ಲಿ ನಕಲಿ ಸಹಿ ಮಾಡಿ ಮೂರು ಚೆಕ್ ಗಳಲ್ಲಿ ಒಟ್ಟು 1 ಕೋಟಿ 30 ಲಕ್ಷ ಹಣ ಡ್ರಾಮಾಡೋದಕ್ಕೆ ಐವರು ಆರೋಪಿಗಳು ಸೇರಿಕೊಂಡು ಪ್ರಯತ್ನಿಸಿದ್ದರು. ಮೊದಲ ಹಂತದಲ್ಲಿ ಮೊದಲ ಚೆಕ್ ನಲ್ಲಿ ಬರೋಬ್ಬರಿ 35,56,640 ಹಣವನ್ನು ನಕಲಿ ಸಹಿಯೊಂದಿಗೆ ಡ್ರಾಮಾಡಿಕೊಂಡಿದ್ದರು. ಇದಲ್ಲದೇ ಇನ್ನೂ ಎರಡು ಚೆಕ್ ಗಳನ್ನು ನೀಡಿ ಹಣ ಡ್ರಾಮಾಡೋದಕ್ಕೆ ಮುಂದಾಗಿದ್ದರು. ಈ ಬಗ್ಗೆ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಕಲಬುರ್ಗಿ ಪಾಲಿಕೆ ಆಯುಕ್ತರ ಗಮನಕ್ಕೆ ತಂದಿದ್ದರು. ಕೂಡಲೇ ಅಲರ್ಟ್ ಆದಂತೆ ಕಲಬುರ್ಗಿ ಪಾಲಿಕೆ ಆಯುಕ್ತರು ಬ್ರಹ್ಮಪುರು ಪೊಲೀಸರಿಗೆ ಈ ಸಂಬಂಧ ದೂರು ನೀಡಿದ್ದರು. ಆಯುಕ್ತರ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಿರ್ಜಾ ಬೇಗ್, ನಾಸೀರ್ ಅಹ್ಮದ್,…

Read More

ಬೆಂಗಳೂರು: ಕಂದಾಯ ಸಚಿವ ಕೃಷ್ಣಭೈರೇಗೌಡ ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣಗೆ ನಿಂತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ. ಇಂದು ರಾಜ್ಯಪಾಲರಿಗೆ ದೂರು ನೀಡಿರುವಂತ ದಿನೇಶ್ ಕಲ್ಲಹಳ್ಳಿ ಅವರು, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ದೂರಿನಲ್ಲಿ ಮನವಿ ಮಾಡಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಜಮೀನು ಅವ್ಯವಹಾರ ನಡೆದಿದೆ. ಸರ್ವೆ ನಂಬರ್.150ರಲ್ಲಿ ಅಕ್ರಮವಾಗಿ ಜಮೀನು ಮಾರಾಟ ಮಾಡಲಾಗಿದೆ. ಪೋಡಿ, ನಕ್ಷೆ ಆಗದೇ ಜಮೀನು ಮಾರಾಟ ಮಾಡಲಾಗಿದೆ. ಸಾಗುವಳಿದಾರರು ಅಕ್ರಮವಾಗಿ ಜಮೀನು ಮಾರಾಟ ಮಾಡಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ. ಇನ್ನೂ ಡೆವೆಲಪರ್ಸ್ ಕಂಪನಿಯೊಂದಕ್ಕೆ ಸಾಗುವಳಿದಾರರು ಅಕ್ರಮವಾಗಿ ಜಮೀನು ಮಾರಾಟ ಮಾಡಿದ್ದಾರೆ. ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಮೇಲೆ ಕ್ರಮ ಕೈಗೊಳ್ಳಬೇಕು. ಹಗರಣದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಕೆಗೆ ಕ್ರಮ ವಹಿಸಲು ಸೂಚಿಸಬೇಕು ಎಂಬುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ನೀಡಿರುವಂತ ದೂರಿನಲ್ಲಿ ದಿನೇಶ್…

Read More

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ…

Read More

ಬೆಂಗಳೂರು: ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು. ಈ ಮೂಲಕ ನುಡಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ನಡೆದಿದ್ದಾರೆ. ಆ ಮೂಲಕ ಸಂತ್ರಸ್ತರಿಗೆ ಮೂರು ಹಸುವನ್ನು ಕೊಡಿಸುವ ಮೂಲಕ ಮಾನವೀಯತೆಯನ್ನು ಮರೆದಿದ್ದಾರೆ. https://kannadanewsnow.com/kannada/big-relief-for-pooja-khedkar-in-upsc-fraud-case-sc-orders-no-coercive-action/ https://kannadanewsnow.com/kannada/breaking-sc-stays-arrest-of-former-ias-officer-pooja-khedkar-puja-khedkar/

Read More

ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ವಂಚಿಸಿದ ಮತ್ತು ತಪ್ಪಾಗಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ಅವರನ್ನು ಫೆಬ್ರವರಿ 14 ರವರೆಗೆ ಬಂಧನದಿಂದ ಸುಪ್ರೀಂ ಕೋರ್ಟ್ ಬುಧವಾರ (ಜನವರಿ 15) ರಕ್ಷಿಸಿದೆ. ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಖೇಡ್ಕರ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಗೆ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 14ಕ್ಕೆ (ಶುಕ್ರವಾರ) ಮುಂದೂಡಲಾಗಿದೆ. ಬಂಧನಪೂರ್ವ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಪೂಜಾ ಖೇಡ್ಕರ್ ಹೊಸದಿಲ್ಲಿ, ಜ.14: ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ಅವರು ನಿರೀಕ್ಷಣಾ ಜಾಮೀನಿಗಾಗಿ…

Read More

ನವದೆಹಲಿ: ನಾಳೆ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸುತ್ತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಾಳಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿಯೇ ಹೇಳಲಾಗುತ್ತಿತ್ತು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಕೂಡ ನಾಳಿನ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿಯೂ ತಿಳಿಸಿದ್ದರು. ಆದರೇ ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸುತ್ತಿಲ್ಲ. ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಜಾತಿ ಗಣತಿ ವರದಿಯಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ. ಇದುವರೆಗೂ ವರದಿ ಓಪನ್ ಕೂಡ ಮಾಡಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-kpsc-group-b-recruitment-exam-to-be-held-on-january-19-25-this-rule-is-mandatory-for-the-candidates/ https://kannadanewsnow.com/kannada/breaking-sc-stays-arrest-of-former-ias-officer-pooja-khedkar-puja-khedkar/

Read More

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್‌ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಎಂದಿದೆ. ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್‌ಗಳು ಹರಿದಾಡುತ್ತಿವೆ. ಈ ಮೆಸೇಜ್‌ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಾರ್ವಜನಿಕರು…

Read More

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್‌) ಉಮಾ ಮಹದೇವನ್‌ ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೇಳಿದರು. ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದೂ ಸಚಿವರು ತಮ್ಮ ತಿಳಿಸಿದರು. ಸ್ಥಳೀಯ ಸಂಸ್ಥೆಗಳಾದ ಗ್ರಾಮ…

Read More