Author: kannadanewsnow09

ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರು- ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ…

Read More

ಬೆಂಗಳೂರು : “ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರ ಸಿಎಸ್ಆರ್ ನಿಧಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ರಾಮನಗರ ಜಿಲ್ಲೆಯಲ್ಲಿ 20 ಶಾಲೆಗಳ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಎಸ್ ಶಾಲೆಗಳ ನಿರ್ಮಾಣ ಸಂಬಂಧ ರಾಮನಗರದಲ್ಲಿ ಖಾಸಗಿ ಸಂಸ್ಥೆಗಳ ಜತೆ ಶಿವಕುಮಾರ್ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಜಿಲ್ಲೆಯ ಶಾಸಕರು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು “ಇಂದು ರಾಮನಗರ ಜಿಲ್ಲೆ ಹಾಗೂ ನನ್ನ ರಾಜಕೀಯ ಬದುಕಿಗೆ ಅತಿ ಹೆಚ್ಚು ಸಂತೋಷ ತಂದ ದಿನ. ರಾಜ್ಯದಲ್ಲಿ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹಳ್ಳಿಗಳಿಂದ ಬೆಂಗಳೂರು ಹಾಗೂ ಇತರೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ನಮ್ಮ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಕಾರ್ಯಕ್ರಮ ರೂಪಿಸಿದೆ ಎಂದರು. ಈ ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಹಣವನ್ನು ಬಳಸದೇ, ಸಿಎಸ್ಆರ್ ನಿಧಿಯಿಂದ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಹಾಗಾದ್ರೇ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ಮಾತನಾಡಿದ್ರು ಅಂತ ಮುಂದೆ ಓದಿ. ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈ ಮೋದಿ ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ದ ಇದ್ದವರು. ಮೋದಿ ವಿರೋಧಿ ನಾನಲ್ಲ. ಇವತ್ತು ಅವರು ವಿಶ್ವ ನಾಯಕ ಎಂದರು. ವಂಶ ಪಾರಂಪರ್ಯದ ಬಗ್ಗೆ ಹೆಚ್ಚು ಮಾತಾಡಲ್ಲ. ರಾಜ್ಯದ ಬಿಜೆಪಿ ಯಲ್ಲಿ ಕೂಡ ಕಾಂಗ್ರೆಸ್ ಸಂಸ್ಕ್ರತಿ ಬೆಳೆಯುತ್ತಿರುವುದು ದೌರ್ಭಾಗ್ಯ. ಕಳೆದ ವಿಧಾನಸಭೆ ಚುನಾವಣೆ ವೇಳೆ ನನಗಾದ ಅನ್ಯಾಯ ಸರಿಪಡಿಸುವ ಭರವಸೆ ಪಕ್ಷದ ನಾಯಕರಿಂದ ಸಿಕ್ಕಿತ್ತು. ಯಡಿಯೂರಪ್ಪ ಸಹ ಹಾವೇರಿಯಲ್ಲಿ ಕಾಂತೇಶ್ ಗೆ ಟಿಕೆಟ್ ಕೊಡಿಸಿ ಗೆಲ್ಲಿಸುವೆ ಎಂದಿದ್ದರು. ಆದರೆ ಅಲ್ಲಿ ಬೊಮ್ಮಾಯಿ ಮತ್ತು ಶೋಭಾ ಪರ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಹೈಕಮಾಂಡ್ ತೀರ್ಮಾನಕ್ಕೆ…

Read More

ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ. ಇದು ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆದರೇ ಮೋದಿ ವಿರುದ್ಧ ಹೋಗುವುದಿಲ್ಲ. ನಾನು ಗೆದ್ದರೇ ಮೋದಿಯನ್ನೇ ಬೆಂಬಲಿಸುವುದಾಗಿ ತಿಳಿಸಿದರು. ನಾನು ಪ್ರಾಣ ಹೋದರೂ ‘ಮೋದಿ ವಿರುದ್ಧ’ ಹೋಗುವುದಿಲ್ಲ – ‘ಕೆ.ಎಸ್.ಈಶ್ವರಪ್ಪ’ ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಶಾಕ್ ನೀಡಿತ್ತು. ಈ ಕಾರಣಕ್ಕೆ ಸಿಡಿದೆದ್ದಿದ್ದಂತ ಅವರು ಬಂಡಾಯ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸೋದಾಗಿ ಘೋಷಿಸಿದ್ದರು. ಆದ್ರೇ ಇಂದು ಯುಟರ್ನ್ ಹೊಡೆದಿರುವಂತ ಅವರು, ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ ಅಂತ ತಿಳಿಸಿದ್ದಾರೆ. ನಗರದ…

Read More

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಶಾಕ್ ನೀಡಿತ್ತು. ಈ ಕಾರಣಕ್ಕೆ ಸಿಡಿದೆದ್ದಿದ್ದಂತ ಅವರು ಬಂಡಾಯ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸೋದಾಗಿ ಘೋಷಿಸಿದ್ದರು. ಆದ್ರೇ ಇಂದು ಯುಟರ್ನ್ ಹೊಡೆದಿರುವಂತ ಅವರು, ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ ಅಂತ ತಿಳಿಸಿದ್ದಾರೆ.  ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ. ಮೋದಿ ಪ್ರಧಾನಿ ಆಗುವ ಮೊದಲು ಎಲ್ಲಾ ದೇಶಗಳು ಪಾಕ್ ಆಗಿದ್ದವು. ಆದ್ರೇ ಮೋದಿ ಪ್ರಧಾನಿ ಆದ ನಂತ್ರ ಎಲ್ಲಾ ದೇಶಗಳು ಭಾರತದ ಜೊತೆಗಿವೆ ಎಂದರು. ಮುಸ್ಲೀಂ ರಾಷ್ಟ್ರಗಳು ಕೂಡ ಮೋದಿಗೆ ರತ್ನಗಂಬಳಿ ಹಾಸಿ ಕರೆಯುತ್ತಿವೆ. ನಮ್ಮ ದೇಶಕ್ಕೆ ಬನ್ನಿ ಎಂದು ಮೋದಿಗೆ ದುಂಬಾಲು ಬೀಳುತ್ತಿವೆ ಎಂದು ಹೇಳಿದರು. ವಂಶ ಪಾರಂಪರ್ಯ ವಿರುದ್ಧ ಮೋದಿ ಮಾತನಾಡಿದ್ದಾರೆ. ಹೀಗಾಗಿ ವಂಶ ಪಾರಂಪರ್ಯ…

Read More

ನಿತ್ಯ ಪಠಿಸುವ ಪ್ರಮುಖ ಶ್ಲೋಕ – ಮಂತ್ರಗಳು ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ…

Read More

ಬೆಂಗಳೂರು: ಇಂದು ಕಾಮಾಕ್ಷಿಪಾಳ್ಯದಲ್ಲಿ ಪಾದಚಾರಿಯೊಬ್ಬನಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ಪ್ರಕರಣ ನಡೆದಿತ್ತು. ಆದ್ರೇ ಆತ ತಾನಾಗಿಯೇ ಬಸ್ ಅಡಿ ಬಿದ್ದು, ಸಾವನ್ನಪ್ಪಿರುವ ಆಘಾತಕಾರಿ ವೀಡಿಯೋವನ್ನು ಬಿಎಂಟಿಸಿ ಬಿಡುಗಡೆ ಮಾಡಿ, ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 14.03.2024 ರಂದು ಘಟಕ 31ರ ವಾಹನ ಸಂಖ್ಯೆ KA 57 F583, ಅನುಸೂಚಿ ಸಂಖ್ಯೆ 242ಬಿ/10 ರಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಅಪಾರ್ಟ್ಮೆಂಟ್ಗೆ ಸುತ್ತುವಳಿ ಮಾಡುತ್ತಿರುವಾಗ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಿಂದ ಸ್ವಲ್ಪ ಮುಂದೆ ಸಂಸ್ಥೆಯ ವಾಹನ ಚಲಿಸುತ್ತಿರುವಾಗ ಪಾದಚಾರಿ, ಚೇತನ್, 34 ವರ್ಷ, ರವರು ತಾವಾಗೆ ಓಡಿ ಬಂದು ರಸ್ತೆಗೆ ಬಿದ್ದಿರುತ್ತಾರೆ ಎಂದು ತಿಳಿಸಿದೆ. ಇದನ್ನು ಗಮನಿಸಿದ ನಮ್ಮ ಚಾಲಕರು ತತಕ್ಷಣವೆ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಹಿತ, ಪಾದಾಚಾರಿ ಬಸ್ಸಿನ ಎಡ ಮಧ್ಯೆ ಭಾಗದಲ್ಲಿ ಬಂದ ಕಾರಣ, ಬಸ್ಸಿನ ಹಿಂದಿನ ಚಕ್ರವು ಪಾದಚಾರಿಯ ಎಡಗೈಗೆ ಮತ್ತು ಎಡಗಾಲಿನ ಪಾದಕ್ಕೆ ತಾಗಿ ತೀವ್ರ ಸ್ವರೂಪದ ರಕ್ತ…

Read More

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲ್ಗುಣದಿಂದಾಗಿ ರಾಜ್ಯದಲ್ಲಿ ಬರಗಾಲ ಬಂದಿದೆ. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಕೋಟಿಗಟ್ಟಲೆ ರೂಪಾಯಿ ಸಾಲ ಮಾಡುವುದರ ಜೊತೆಗೆ, ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಹಣ ನೀಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಬಂದ ಹಿಂದೂಗಳು ರಸ್ತೆ ಬದಿಯಲ್ಲಿ ಬದುಕುತ್ತಿದ್ದಾರೆ. ಇದುವರೆಗೆ ಅವರಿಗೆ ಬದುಕುವ ಅವಕಾಶವನ್ನೇ ನೀಡಲಿಲ್ಲ. ಕಾಂಗ್ರೆಸ್‌ನವರಿಗೆ ಕರುಣೆಯೇ ಇಲ್ಲ. ಆದರೆ ಅವರಿಗೆ ಪೌರತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಿಂದಾಗಿ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಅವರಿಗೆ ಸರ್ಕಾರ ಬಿರಿಯಾನಿ ಕೊಟ್ಟು ಕಳುಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಸರಿನಲ್ಲೇ ರಾಮ ಇದ್ದಾನೆ ಎನ್ನುತ್ತಾರೆ. ಹಾಗೆಯೇ ವೀರಪ್ಪನ್‌ ಕೂಡ ದೇವರ ಹೆಸರು ಇಟ್ಟುಕೊಂಡಿದ್ದ. ದೇವರ ಹೆಸರು ಹೃದಯದಲ್ಲಿ ಇರಬೇಕು. ರಾಮಮಂದಿರ ಕಟ್ಟಿದರೂ ಕಾಂಗ್ರೆಸ್‌ ನಾಯಕರು ಅಲ್ಲಿಗೆ ಹೋಗಲಿಲ್ಲ. ಮೋದಿಯವರು ಇಲ್ಲದಿದ್ದರೆ ಮಂದಿರ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ರಾಮನ ಹೆಸರಿನಿಂದ…

Read More

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು ಸಂಘರ್ಷವನ್ನು ಮುಂದುವರಿಸಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಸುಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರ ಅಂತ್ಯವಾಡಿದ್ದೇನೆ ಎಂದು ಅವರು ತಿಳಿಸಿದರು. https://kannadanewsnow.com/kannada/another-victim-of-killer-bmtc-in-bengaluru-man-dies-on-the-spot-after-bus-hits-him-while-crossing-road/ ಎಚ್ ಡಿ ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಮಂಡ್ಯ ಹೆಚ್ಚು ಶಕ್ತಿ ನೀಡಿದೆ.ನಾನು ನನ್ನ ಕುಟುಂಬದ ಯಾರು ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವರನ್ನು ಹಿಂದೆ ನಿಂತು ಶಕ್ತಿ ತುಂಬಿದ್ದೇವೆ. ನಾನು ಅಥವಾ ನಿಖಿಲ್ ಸ್ಪರ್ಧಿಯುಸುವ ನಿಮ್ಮ ಮಾತಿಗೆ ಶಿರಬಾಗಿ ನಮಸ್ಕರಿಸುತ್ತೇನೆ. ನಿಮ್ಮ ಮಾತಿಗೆ ಅಪಚಾರ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು.…

Read More

ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.…

Read More