Author: kannadanewsnow09

ಬೆಂಗಳೂರು : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು. ಇದೇವೇಳೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ರಘುಮೂರ್ತಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕೂಡ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್…

Read More

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು. 1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ…

Read More

ಪೋಷಕರು ತಮ್ಮ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಮಾಡುತ್ತಿರುತ್ತಾರೆ, ಭವಿಷ್ಯದಲ್ಲಿ ಉನ್ನತಿ ಹೊಂದಲಿ ಎಂದು ಬಯಸುತ್ತಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಪದೇಪದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುರ್ವೇದದಲ್ಲಿ ತಿಳಿಸಿರುವ ಸ್ವರ್ಣ ಪ್ರಾಶನ ಸಂಸ್ಕಾರ ಉತ್ತಮ ಆಯ್ಕೆಯಾಗಿದೆ. ಸ್ವರ್ಣಪ್ರಾಶನ ಎಂದರೇನು? ಸ್ವರ್ಣಪ್ರಾಶನವು ಆಯುರ್ವೇದದಲ್ಲಿ ವಿವರಿಸಲಾದ 16 ಸಂಸ್ಕಾರಗಳಲ್ಲಿ ಒಂದಾಗಿದೆ. ಅದು ಮಕ್ಕಳ ಸರ್ವತೋಮುಖವಾದ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಶುದ್ಧೀಕರಿಸಿದ ಸ್ವರ್ಣವನ್ನು(ಚಿನ್ನ) ಇತರೆ ಔಷದ ದ್ರವ್ಯಗಳೊಂದಿಗೆ ಸೇವನೆಯೋಗ್ಯವಾದ ರೂಪದಲ್ಲಿ ತಯಾರಿಸಿ, ನಿರ್ದಿಷ್ಟ ದಿನದಂದು (ಪುಷ್ಯ ನಕ್ಷತ್ರ) ಅಥವಾ ನಿತ್ಯವೂ ಸೇವಿಸುವುದರಿಂದ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯವನ್ನು ಉತ್ತಮಗೊಳಿಸಬಹುದಾಗಿದೆ. ಸ್ವರ್ಣ ಪ್ರಾಶನದಿಂದ ಆಗುವ ಪ್ರಯೋಜನಗಳು ‌ಮಕ್ಕಳ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ‌ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ‌ಸೋಂಕುಗಳನ್ನು ತಡೆಗಟ್ಟುತ್ತದೆ – ಪದೇ ಪದೇ…

Read More

ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ಎನ್ನುವುದೇ ಬಹುತೇಕರ ಕುತೂಹಲವಾಗಿದೆ. ಇದಕ್ಕೆ ರಾಜ್ಯ ಚುನಾವಣಾ ಆಯುಕ್ತರು ತೆರೆ ಎಳೆದಿದ್ದಾರೆ. ಏಪ್ರಿಲ್ ಒಳಗೆ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಡಿಸಿ ಕಚೇರಿಗೆ ಭೇಟಿ ನೀಡುತ್ತಿದ್ದೇನೆ. ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸುವುದಾಗಿ ತಿಳಿಸಿದರು. ಇನ್ನೂ ಚುನಾವಣಾ ಆಯೋಗಕ್ಕೆ ಮೀಸಲಾತಿ ಪಟ್ಟಿ ಕೊಟ್ಟ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಪ್ರವೃತ್ತರಾಗಲಿದ್ದೇವೆ. ಎಲ್ಲಿ ಹೋದ್ರೂ ಜನರು ಚುನಾವಣೆ ಯಾವಾಗ ಅಂತ ಕೇಳುತ್ತಿದ್ದಾರೆ ಎಂದರು. ಏಪ್ರಿಲ್ ಒಳಗೆ ಚುನಾವಣೆ ನಡೆಸಿ ಅಧಿಕಾರ ಕೊಡಬೇಕೆಂದು ಕೊಂಡಿದ್ದೇವೆ ಎಂಬುದಾಗಿ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು ತಿಳಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಚುನಾವಣಾ ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮೀಸಲಾತಿ ಪಟ್ಟಿ ಕೈಸೇರುತ್ತಿದ್ದಂತೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಏಪ್ರಿಲ್ ಒಳಗೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆ…

Read More

ಬೆಳಗಾವಿ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು. ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ…

Read More

ಬೆಂಗಳೂರು: ಸೋನಿಯಾ ಗಾಂಧಿ ಅವರು ಅಧಿಕಾರವನ್ನೇ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹೀಗಾಗಿ ನಾನು ಕೂಡ ಕೆಲವೊಮ್ಮೆ ತ್ಯಾಗ ಮಾಡಬೇಕಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಅಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಇಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದಂತ ಅವರು, ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಸಭೆಯಲ್ಲಿ ಸ್ಮರಿಸಿದರು. ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ…

Read More

ಮುಂಬೈ : ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (Tata Consultancy Services -TCS) 2025ರಲ್ಲಿ ಕ್ಯಾಂಪಸ್ನಿಂದ 40,000 ಫ್ರೆಶರ್ಗಳನ್ನು ನೇಮಿಸಿಕೊಳ್ಳಲಿದೆ. ಟೆಕ್ ದೈತ್ಯ ಫ್ಲಿಪ್ಕಾರ್ಟ್ 2025 ರ ಮೂರನೇ ತ್ರೈಮಾಸಿಕದಲ್ಲಿ ಸುಮಾರು 5,000 ಉದ್ಯೋಗಿಗಳ ಕಡಿತವನ್ನು ಅನುಭವಿಸಿದೆ. ಈ ಕಾರಣದಿಂದಾಗಿ, ಈ ವರ್ಷ ನೇಮಕಾತಿಯನ್ನು ಹೆಚ್ಚಿಸುವ ಬಗ್ಗೆ ಆಡಳಿತ ಮಂಡಳಿ ಆಶಾವಾದವನ್ನು ತೋರಿಸಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಡ್ ಮಾತನಾಡಿ, ಉದ್ಯೋಗಿಗಳ ಸಂಖ್ಯೆಯಲ್ಲಿನ ಕುಸಿತವು ಬೇಡಿಕೆಯಲ್ಲಿ ಕುಸಿತವನ್ನು ಸೂಚಿಸುವುದಿಲ್ಲ. ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ, ಟಿಸಿಎಸ್ ಸಿಎಚ್ಆರ್ಒ ಮಿಲಿಂದ್ ಲಕ್ಕಡ್ 40,000 ಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದರು. ಕಂಪನಿಯು ಎಐ-ಫಸ್ಟ್ ಸಂಸ್ಥೆಯಾಗಿ ತನ್ನನ್ನು ತಾನು ಸ್ಥಾಪಿಸಲು ಬಯಸಿದೆ ಎಂದು ಹೇಳಿದರು. ಇತ್ತೀಚೆಗೆ, ಲಕ್ಕಡ್ 2026 ರ ವೇಳೆಗೆ ಸುಮಾರು 40,000 ಉದ್ಯೋಗಿಗಳನ್ನು ಮತ್ತು ಹೆಚ್ಚಿನ ಪದವೀಧರರನ್ನು ನೇಮಿಸಿಕೊಳ್ಳುವುದನ್ನು ದೃಢಪಡಿಸಿದೆ. ಇದು ಯುಎಸ್ ಯು -1 ಬಿ ವೀಸಾಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದು…

Read More

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಈ 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಪಾಲಿಕೆಯ ತೆರಿಗೆ ವ್ಯಾಪ್ತಿಗೆ ತರುವ ಮತ್ತು ಅರ್ಹತೆ ಹೊಂದುವ ಎಲ್ಲಾ ಸ್ವತ್ತುಗಳಿಗೂ ಬಿಬಿಎಂಪಿ ವತಿಯಿಂದ ಹೊಸ ಖಾತಾ ನೀಡುವ ದೂರದೃಷ್ಟಿಯೊಂದಿಗೆ ಮುನ್ನಡೆದಿದ್ದಾರೆ. ಅದರಂತೆ, ಪಾಲಿಕೆಯು ಆನ್‌ಲೈನ್ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ನಾಗರೀಕರುಗಳು ಹೊಸ ಖಾತಾ ಪಡೆಯುವ ಸಲುವಾಗಿ ತಮ್ಮ (i) ಮಾರಾಟ/ನೋಂದಣಿ ಪತ್ರ (ii) ಆಧಾರ್ (iii) ಇಸಿ ಪ್ರಮಾಣ ಪತ್ರ (iv) ಆಸ್ತಿ ಫೋಟೊ (v) ಬೆಸ್ಕಾಂ ಐಡಿಗಳನ್ನು ಸಲ್ಲಿಸಬಹುದಾಗಿದೆ. ನೀವು ಬಿಬಿಎಂಪಿಯ ಖಾತೆಯನ್ನು ಹೊಂದಿರದಿದ್ದಲ್ಲಿ ದಯವಿಟ್ಟು ಆನ್‌ಲೈನ್ ಮೂಲಕ ಅರ್ಜಿಯನ್ನು ಬಿಬಿಎಂಪಿಯ ಜಾಲತಾಣವಾದ @ https://bbmp.karnataka.gov.in/newkhata ರಲ್ಲಿ ಸಲ್ಲಿಸಬಹುದು. (ಸೂಚನೆ: ಒಂದು…

Read More

ನವದೆಹಲಿ: ಪೊಂಗಲ್ ಮತ್ತು ಮಕರ ಸಂಕ್ರಾಂತಿ ಹಬ್ಬಗಳ ಕಾರಣ ಬುಧವಾರ (ಜನವರಿ 15, 2025)ದ ನಾಳೆ ನಿಗದಿಯಾಗಿದ್ದ ಯುಜಿಸಿ-ನೆಟ್ ಪರೀಕ್ಷೆಯನ್ನು ( UGC-NET examination ) ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಪ್ರಕಟಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಎನ್ಟಿಎ ತಿಳಿಸಿದೆ. 2025 ರ ಜನವರಿ 15 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬದ ಕಾರಣದಿಂದಾಗಿ ಯುಜಿಸಿ – ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಮನವಿ ಬಂದಿದೆ ಎಂದು ಎನ್ಟಿಎ ಹೇಳಿಕೆಯಲ್ಲಿ ತಿಳಿಸಿದೆ. “ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025 ರ ಜನವರಿ 15 ರಂದು ನಿಗದಿಯಾಗಿದ್ದ ಯುಜಿಸಿ-ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು” ಎಂದು ಅದು ಹೇಳಿದೆ.

Read More

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಟಿಸಿರುವ ಚಿತ್ರ `ದಿಲ್ ದಾರ್’. ಆರಂಭಿಕವಾಗಿ ಕೆಲ ಮಾಹಿತಿ ನೀಡಿದ್ದ ಚಿತ್ರತಂಡ ಯಾವ ಭರಾಟೆಗಳೂ ಇಲ್ಲದೆ ತಣ್ಣಗೆ ಈ ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿದೆ. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹಾಡೊಂದು ಮಾತ್ರವೇ ಸದ್ಯ ಬಾಕಿ ಉಳಿದುಕೊಂಡಿದೆ. ಈ ಹಂತ ದಾಟಿಕೊಂಡರೂ ಸದರಿ ಸಿನಿಮಾ ನಾಯಕಿಯ ಬಗ್ಗೆ ಚಿತ್ರತಂಡ ಗೌಪ್ಯತೆ ಕಾಪಾಡಿಕೊಂಡಿತ್ತು. ಕಡೆಗೂ ಕೀರ್ತಿ ಕೃಷ್ಣ ಶ್ರೇಯಸ್ ಗೆ ನಾಯಕಿಯಾಗಿ ನಟಿಸಿದ್ದಾರೆಂಬ ಅಧಿಕೃತ ಮಾಹಿತಿಯನ್ನು ಇದೀಗ ಜಾಹೀರು ಮಾಡಲಾಗಿದೆ! ಕೀರ್ತಿ ಕೃಷ್ಣ ಇತ್ತೀಚೆಗಷ್ಟೇ ಚಿತ್ರರಂಗದಲ್ಲಿ ಮೆಲುವಾಗಿ ಕೇಳಿಸುತ್ತಿರೋ ಹೆಸರು. ವಿಶೇಷವೆಂದರೆ, ಈಕೆ ನಟ ಶರಣ್ ಅವರ ಸೊಸೆ. ಅವರ ತಂಗಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ. ಸಿಂಪಲ್ ಸುನಿ ಮುಂಬರುವ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿರುವ ಕೀರ್ತಿ, ಈಗಾಗಲೇ ದಿಲ್ ದಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆಂಬ ಮೆಚ್ಚುಗೆ ಚಿತ್ರತಂಡದಲ್ಲಿದೆ. ಒಂದು ವಿರಳ ಪ್ರೇಮ ಕಥೆಗೆ…

Read More