Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ತುಳಿತಕ್ಕೆ ಒಳಗಾದ ಪರಿಶಿಷ್ಟ ಸಮುದಾಯದವರಿಗಾಗಿ ಇರುವ ಎಸ್ಇಪಿ- ಟಿಎಸ್ಪಿ ವಿಶೇಷ ಯೋಜನೆ. ವಿದ್ಯಾವಂತರನ್ನಾಗಿ ಮಾಡುವುದು, ಜಮೀನು ಖರೀದಿಸಿ ಕೊಡುವುದು, ಭೂಮಿಗೆ ಕೊಳವೆಬಾವಿ ಹಾಕಿಸಿ ನೀರು ಕೊಡುವುದು, ಕೈಗಾರಿಕೆ ಸ್ಥಾಪನೆಗೆ ನೆರವಿನಂಥ ಆಸ್ತಿ ನಿರ್ಮಾಣಕ್ಕೆ ಹಣ ಕೊಡುವ ಯೋಜನೆ ಇದು. ಅದರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಸಮುದಾಯದವರು ಫ್ರೀ ಬಸ್ಸಿನಲ್ಲಿ ಓಡಾಡುವುದಿಲ್ಲ; ಮೋಜು ಮಸ್ತಿ ಮಾಡುವುದಿಲ್ಲ. ಆದರೆ, ನೀವು ನಮ್ಮವರ ವಿಶೇóಷ ಯೋಜನೆಯ ಹಣವನ್ನು ತೆಗೆದು ನಿಮ್ಮ ಖಾತೆಗೆ ಹಾಕಿದ್ದೀರಿ ಎಂದು ಆಕ್ಷೇಪಿಸಿದರು. ಇದು ನಮ್ಮ ಜನಾಂಗಕ್ಕೆ ಮಾಡಿದ ಮೋಸ ಅಲ್ಲವೇ? ಎಂದು ಪ್ರಶ್ನಿಸಿದರು. ನಮ್ಮಲ್ಲಿ ವಿದ್ಯಾವಂತರು ಹೆಚ್ಚಾಗಿದ್ದಾರೆ. ಆದರೆ, ನಿರುದ್ಯೋಗವೂ ಅಷ್ಟೇ ಬೆಳೆಯುತ್ತಿದೆ. ಯುವನಿಧಿ ಪೇಪರಲ್ಲಿ ಇದೆಯೇ ಹೊರತು ನಮ್ಮ ಜನರಿಗೆ ಇದು ದಕ್ಕಿಲ್ಲ ಎಂದು ವಿವರಿಸಿದರು. ರಿಪಬ್ಲಿಕ್ ಪಾರ್ಟಿಯ ರಾಜ್ಯದ ಹಿರಿಯ ಮುಖಂಡ ಡಾ.ಎಂ.ವೆಂಕಟಸ್ವಾಮಿ, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ…
ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿóಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದವರು; ಅವರು ಈ ಕರಾಳದಿನಕ್ಕೆ ಕಾರಣರು ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ… ಸಿದ್ದರಾಮಯ್ಯನವರು ಅನುಭವಿ ಮುಖ್ಯಮಂತ್ರಿ; ಅವರು ಅಸಮರ್ಥ ಎನ್ನುವುದಿಲ್ಲ. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ ದಲಿತರ ಮೇಲಿನ ಕಾಳಜಿ ಮರೆತುಹೋಗಿದೆಯೇ ಎಂದು ಬಿ.ವೈ. ವಿಜಯೇಂದ್ರ ಅವರು ಕೇಳಿದರು. ದಲಿತ ಸಮುದಾಯಕ್ಕೆ ಶಕ್ತಿ ಕೊಡಬೇಕಾದ ಹಣದ ದುರ್ಬಳಕೆ ಮಾಡಿದ್ದೀರಲ್ಲ? ಇದು ನ್ಯಾಯವೇ ಸಿದ್ದರಾಮಯ್ಯನವರೇ?…
ಶಿವಮೊಗ್ಗ : ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಹೆಚ್5ಎನ್1(ಹಕ್ಕಿಜ್ವರ) ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 ವೈರಸ್ನಿಂದ ಹರಡುವ ರೋಗ. ಇದು ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿAದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು. ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಪ್ರಕರಣ ಕಂಡು ಬಂದಿಲ್ಲ. ಆದರೂ ಹಕ್ಕಿಜ್ವರ ಕುರಿತು ಮುಂಜಾಗೃತಿ ವಹಿಸಬೇಕು. ಸಾಮಾನ್ಯವಾಗಿ…
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವಂತ 137 ವಲಸೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897539883813486877 https://kannadanewsnow.com/kannada/puc-student-commits-suicide-in-tumkur/ https://kannadanewsnow.com/kannada/important-information-for-epfo-account-holders-these-changes-do-not-require-company-permission/
ತುಮಕೂರು: ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಕಾಲೇಜಿನ ಹಾಸ್ಟೆಲ್ ನಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಸಿದ್ಧಾರ್ಥ ಕಾಲೇಜಿನ ಹಾಸ್ಟೆಲ್ ನಲ್ಲಿಯೇ ಪಿಯು ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಲ್ ನಿಂದ ಹಾಸ್ಟೆಲ್ ಮಹಡಿ ಮೇಲಿನ ಕೊಠಡಿಯಲ್ಲಿ ದೀಪಿಕಾ(19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿರಾ ತಾಲ್ಲೂಕಿನ ಕುಂಟೆಗೌಡನಹಳ್ಳಿಯ ವಿದ್ಯಾರ್ಥಿನಿ ದೀಪಿಕಾ ಸಿದ್ಧಾರ್ಥಾ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಹಾಸ್ಟೆಲ್ ನಲ್ಲಿ ವೇಲ್ ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-priests-employees-of-temples-in-the-state-committee-formed-to-remove-pay-disparity/ https://kannadanewsnow.com/kannada/important-information-for-epfo-account-holders-these-changes-do-not-require-company-permission/
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ದೇವಸ್ಥಾನಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ ಅನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಅದೇ ಅರ್ಚಕರು, ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ. ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897535758086385925
ಬೆಂಗಳೂರು: ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಸಿಹಿಸುದ್ದಿ ಎನ್ನುವಂತೆ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿರುವಂತ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು, ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು ಎಂದಿದ್ದಾರೆ. ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು. https://twitter.com/KarnatakaVarthe/status/1897569292469813467 https://kannadanewsnow.com/kannada/kuwj-endowment-awards-ceremony-to-be-held-in-koppal-on-march-9/ https://kannadanewsnow.com/kannada/important-information-for-epfo-account-holders-these-changes-do-not-require-company-permission/
ಬೆಂಗಳೂರು: ಕಲಾವಿದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಎಂಬುದಾಗಿ ಹೇಳಿರುವಂತ ಹೇಳಿಕೆ ಸರಿಯಾದುದಲ್ಲ ಅಂತ ನಟಿ ರಮ್ಯಾ ಆಕ್ಷೇಪಿಸಿದ್ದಾರೆ. ನಗರದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಟ್ಟು, ಬೋಲ್ಟ್ ಹೇಳಿಕೆ ಬೆದರಿಸುವ ಉದ್ದೇಶ ಇಲ್ಲ ಅಂತ ಅವರೇ ಸ್ಪಷ್ಟ ಪಡಿಸಿದ್ದಾರೆ. ಆದರೇ ಹಾಗೆ ಅವರು ಹೇಳಿದ್ದು ತಪ್ಪು. ಅವರ ಈ ರೀತಿಯ ಹೇಳಿಕೆ ಕೆಲವರಿಗೆ ಇಷ್ಟ ಆಗಿಲ್ಲ. ಈಗಾಗಲೇ ಡಿಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಕ್ಲಾರಿಫಿಕೇಷನ್ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ನಾವು ಬಿಟ್ಟು ಬಿಡೋಣ ಅಂತ ತಿಳಿಸಿದರು. ನನಗೆ ಬೆಂಗಳೂರು ಚಲನಚಿತ್ರೋತ್ಸವದ ಬಗ್ಗೆ ಒಂದು ವಾರದ ಹಿಂದೆಯೇ ಆಹ್ವಾನ ಬಂದಿತ್ತು. ಬೇರೆಯವರಿಗೆ ಆಹ್ವಾನ ಹೋಗಿದ್ಯೋ ಇಲ್ಲವೋ ನನಗೆ ಗೊತ್ತಿಲ್ಲ. ನನಗಂತೂ ಆಹ್ವಾನ ಬಂದಿದೆ. ಹಾಗಾಗಿ ನಾನು ಈಗ ಫಿಲ್ಮ್ ಫೆಸ್ಟಿವೆಲ್ ಗೆ ಹೋಗ್ತಿದ್ದೇನೆ. ಒಂದು ಮಾತು ತಿಳಿದುಕೊಳ್ಳಬೇಕಿದೆ. ನಾಡು, ನುಡಿ, ಜಲದ ವಿಚಾರವಾಗಿ ಯಾವುದೇ ಆಹ್ವಾನ ಬೇಕಿಲ್ಲ.…
ಬೆಂಗಳೂರು: ಕರ್ನಾಯಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವಂತ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿತ್ತು. ಈ ಪ್ರಶಸ್ತಿ ಪುರಸ್ಕೃತರಿಗೆ ದತ್ತಿ ಪ್ರಶಸ್ತಿಯನ್ನು ಕೊಪ್ಪಳದಲ್ಲಿ ಮಾ.9ರಂದು ನಡೆಯುವಂತ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದಿದ್ದಾರೆ. ಕೊಪ್ಪಳದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೂ.ಭಾ. ವಡ್ಡಟ್ಟಿ, ಸಿರಾಜ್ ಬಿಸರಳ್ಳಿ ಸ್ವಾಗತ ನಮ್ಮ ನಾಡು ನಮ್ಮ ಹೆಮ್ಮೆ ಹೋರಾಟದ ನೆಲ ಕೊಪ್ಪಳಕ್ಕೆ ಸ್ವಾಗತ…. ಬನ್ನಿ ಕೊಪ್ಪಳಕ್ಕೆ… ಮನುಷ್ಯನ ಜೀವನದಲ್ಲಿ ಪ್ರಾಣಕ್ಕಿಂತಲೂ ಅತ್ಯಮೂಲ್ಯವಾದ ವಸ್ತು ಮತ್ತೊಂದು ಇರಲಾರದು ಎನಿಸುತ್ತದೆ.ಅಂತಹ ಅಮೂಲ್ಯವಾದ ಪ್ರಾಣವನ್ನು ನೀಡಿ, ಜೀವನವನ್ನು ಈ ನಾಡಿನ ,ದೇಶದ ಬಿಡುಗಡೆಗಾಗಿ ಸ್ವಾತಂತ್ರ್ಯ ಪ್ರೇಮಿ ಹೋರಾಟಗಾರರು ಹೋರಾಟದ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಒಂದು ಪ್ರಶ್ನೆಗೆ ನಾಲ್ಕು ಆಯ್ಕೆಗಳ ಬದಲಾಗಿ ಐದು ಆಯ್ಕೆ ನೀಡಲಿದೆ ಎಂಬುದಾಗಿ ಕೆಇಎ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕೆಇಎ, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಗೆ ಉತ್ತರವಾಗಿ ಐದು ಆಯ್ಕೆಯನ್ನು ಕೊಡಲಿದೆ. ಇನ್ಮುಂದೆ ನಡೆಯುವಂತ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ಹೊಸ ನಿಯಮ ಅನ್ವಯ ಆಗಲಿದೆ ಎಂದಿದೆ. ಇನ್ನೂ ಯುಜಿ ಸಿಇಟಿ-2025ರ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪರೀಕ್ಷಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು. ಸಿಇಟಿ ಪರೀಕ್ಷೆಯಲ್ಲಿ ಎಂದಿನಂತೆ ಒಂದು ಪ್ರಶ್ನೆಯ ಉತ್ತರಕ್ಕೆ ನಾಲ್ಕು ಆಯ್ಕೆಗಳನ್ನು ನೀಡಲಾಗುತ್ತದೆ ಎಂಬುದಾಗಿ ಹೇಳಿದೆ. ಕೆಇಎ ನಡೆಸುವಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರವೇ ನಾಲ್ಕು ಉತ್ತರಗಳ ಬದಲಾಗಿ ಐದು ಉತ್ತರಗಳ ಆಯ್ಕೆಯನ್ನು ಇನ್ಮುಂದೆ ನೀಡಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದೆ. https://kannadanewsnow.com/kannada/women-friendly-gram-panchayat-campaign-to-be-launched-from-march-8-to-june-30-priyank-kharge/ https://kannadanewsnow.com/kannada/good-news-speaker-u-t-khader-says-club-will-be-set-up-for-mlas-to-chat/














