Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರಾಖಂಡ: ಉತ್ತರಾಖಾಂಡದ ಪೌರಿ ಎಂಬಲ್ಲಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಭೀಕರ ದುರ್ಘಟನೆ ಸಂಭವಿಸಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಸ್ 100 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://twitter.com/PTI_News/status/1878406275291062587 ಅಪಘಾತದ ನಂತರ, ಪೌರಿಯ ಜಿಲ್ಲಾ ನಿಯಂತ್ರಣ ಕೊಠಡಿ ಎಸ್ಡಿಆರ್ಎಫ್ಗೆ ಮಾಹಿತಿ ನೀಡಿತು. ನಂತರ ತಂಡವನ್ನು ಅಪಘಾತದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಪಘಾತದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿದ ಎಸ್ಡಿಆರ್ಎಫ್, ಅಪಘಾತ ಸಂಭವಿಸಿದಾಗ ಬಸ್ ಪೌರಿಯಿಂದ ದಹಚೋರಿಗೆ ಪ್ರಯಾಣಿಸುತ್ತಿತ್ತು ಎಂದು ಹೇಳಿದರು. ಪೌರಿ ಪೊಲೀಸರು ಮತ್ತು ಸ್ಥಳೀಯ ಜನರು ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪರಿಣಾಮವಾಗಿ, ಒಟ್ಟು 18 ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಸ್ಡಿಆರ್ಎಫ್ ತಿಳಿಸಿದೆ. ಪೌರಿ ಗರ್ವಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ಅವರು ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, “ಬಸ್…
ಮದನಪಲ್ಲಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಇಡಿಯೋಸ್ ಹಾಗೂ ಮಹೀಂದ್ರಾ ಎಕ್ಸ್ ಯುವಿ ಕಾರುಗಳ ನಡುವೆ ಭೀಕರ ಅಫಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಡಿಯೋಸ್ ಕಾರಿನಲ್ಲಿದ್ದಂತ ಆಂಧ್ರದ ಶಿವಕುಮಾರ್ ಹಾಗೂ ಪ್ರಕಾಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಎಕ್ಸ್ ಯುವಿನಲ್ಲಿದ್ದಂತ ನಾಲ್ವರಿಗೆ ಗಾಯವಾಗಿದೆ. ಅವರನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/ https://kannadanewsnow.com/kannada/i-wanted-to-put-a-bullet-through-kapil-devs-head-yograj-singh/
ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು. ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಾಸ್ಯನಟ ವಿಜಿ ಅವರ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರಿಗೆ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/ https://kannadanewsnow.com/kannada/i-wanted-to-put-a-bullet-through-kapil-devs-head-yograj-singh/
ಬೆಂಗಳೂರು: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ನೈಸ್ ಯೋಜನೆ ಹೆಸರಿನಲ್ಲಿ ರೈತರ ಭೂಮಿಯನ್ನು ಲೂಟಿ ಹೊಡೆಯಲಾಗಿದೆ. ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಎಲ್ಲಾ ಸೇರಿ ರೈತರ ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ. 22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ. ರಸ್ತೆ ಮಾಡುತ್ತೇವೆ ಎಂದು ಹೇಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನ ಸಮಿತಿ ಇಡೀ ಯೋಜನೆಯನ್ನೇ…
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು. ಮುಖಂಡರ ಸಭೆಯ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ…
ಢಾಕಾ: ಗಡಿ ಉದ್ವಿಗ್ನತೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಭಾರತ-ಬಾಂಗ್ಲಾ ಗಡಿಯುದ್ದಕ್ಕೂ ಐದು ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಢಾಕಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ವರ್ಮಾ ಮಧ್ಯಾಹ್ನ 3:00 ರ ಸುಮಾರಿಗೆ ಸಚಿವಾಲಯವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ವಿದೇಶಾಂಗ ಕಾರ್ಯದರ್ಶಿ ಜಶಿಮ್ ಉದ್ದೀನ್ ಅವರೊಂದಿಗಿನ ಅವರ ಸಭೆ ಸುಮಾರು 45 ನಿಮಿಷಗಳ ಕಾಲ ನಡೆಯಿತು. ಚರ್ಚೆಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗದಿದ್ದರೂ, ರಾಯಭಾರಿಯನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. https://kannadanewsnow.com/kannada/kiadb-karmakanda-complaint-filed-with-governor-seeking-direction-for-probe-against-balappa-handigunda/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/
ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ‘ಪೇ ಸಿಎಂ ಸೇ ಸಿಎಂ’ ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ‘ಹಂದಿಗುಂದ ಪ್ರಕರಣ’ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ. ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ ಮಾಡಿರುವ ಹಾಗೂ ಪರಿಹಾರ ಹಂಚಿಕೆಯಲ್ಲಿನ ಅಕ್ರಮಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಈ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ (Citizen Rights Foundation) ಅಧ್ಯಕ್ಷ ಕೆ.ಎ.ಪಾಲ್ (K.A. Paul)…
ಬೆಂಗಳೂರು: ನಮ್ಮ ನಡುವೆ ಬಾಂಧವ್ಯ ಬೆಸೆಯಲು ಉತ್ತರ ಕರ್ನಾಟಕ ಭಾಗದ ಸಂಸ್ಕೃತಿಕ ಕಾರ್ಯಕ್ರಮ ಮತ್ತು ನಮ್ಮ ಭಾಗದ ಗ್ರಾಮೀಣ ಕ್ರೀಡೆಗಳನ್ನು ನಡೆಸಿಕೊಂಡು ಹೋಗಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ಹೇಳಿದರು. ಅವರು ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಲಹಂಕದ ನಮ್ಮ ಉತ್ತರ ಕರ್ನಾಟಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ್ದ ಕ್ರೀಡಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿರುವ ನಾವು ನಮ್ಮವರು ಒಂದಾಗಿ ಸೇರಲು ನಮ್ಮಲ್ಲೇ ಭಾಂದವ್ಯ ಬೆಸೆಯಲು ಈ ರೀತಿಯ ಕಾರ್ಯಕ್ರಮ ಆಯೋಜನೆ ಮುಖ್ಯವಾಗಿದೆ ಎಂದು ಹೇಳಿದರು. ನಮ್ಮ ನಮ್ಮಲ್ಲೇ ಭೇದ ಭಾವ ಮಾಡದೇ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸೋಣ ಎಂದು ಹೇಳಿದರು. ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಬೆಂಗಳೂರಿನಲ್ಲಿ ಎಲ್ಲ ಪ್ರದೇಶಗಳಲ್ಲಿಯೂ ಉತ್ತರ ಕರ್ನಾಟಕ ಸಂಘಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಭಾಗದ ಸಂಸ್ಕೃತಿ ಉಳಿಸಿ…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League – IPL) ನ ಮುಂಬರುವ ಋತುವು ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಭಾನುವಾರ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯ ನಂತರ ಶುಕ್ಲಾ ಈ ಘೋಷಣೆ ಮಾಡಿದ್ದಾರೆ. ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಹಾಗೂ ಖಜಾಂಚಿಯಾಗಿ ಪ್ರಭ್ತೇಜ್ ಸಿಂಗ್ ಭಾಟಿಯಾ ಆಯ್ಕೆಯಾಗಿದ್ದಾರೆ. ಜಯ್ ಶಾ ಮತ್ತು ಆಶಿಶ್ ಶೆಲಾರ್ ಅವರಿಂದ ತೆರವಾದ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ನಂತರ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಟಿ 20 ಪಂದ್ಯಾವಳಿಯ 18 ನೇ ಋತುವಿಗೆ ಮುಂಚಿತವಾಗಿ ಎರಡು ದಿನಗಳ ಮೆಗಾ ಹರಾಜು ನಡೆಯಿತು. ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ.ಗೆ ಹರಾಜಿನಲ್ಲಿ ರಿಷಭ್ ಪಂತ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾದಾಗ ಐಪಿಎಲ್ ಹರಾಜಿನ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕಳೆದ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಆಹ್ವಾನಿಸಲಾಗಿದ್ದು, 4ನೇ ಫೆಬ್ರವರಿ 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. ಪಾಲಿಕೆಯ ಕಲ್ಯಾಣ ಇಲಾಖೆಯಲ್ಲಿ 2024-25 ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ. ಅದರಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವರ್ಗಗಳ ಪೌರಕಾರ್ಮಿಕರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗ, ವಿಶೇಷ ಚೇತನರ ವರ್ಗ, ತೃತೀಯ ಲಿಂಗಿಗಳು ಮತ್ತು ಮಹಿಳಾ ವರ್ಗದ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಅಂತರ್ಜಾಲ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ: Online ನಲ್ಲಿ ಸಂಪೂರ್ಣ ಮಾಹಿತಿ 1. ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ. 2. ಶೈಕ್ಷಣಿಕ ಕಾರ್ಯಕ್ರಮದಡಿಯಲ್ಲಿ ಶಾಲಾ ಶುಲ್ಕ ಮರುಪಾವತಿ / ಉನ್ನತ ವ್ಯಾಸಂಗಕ್ಕೆ / ವಿದೇಶ ವ್ಯಾಸಂಗಕ್ಕಾಗಿ ಸಹಾಯಧನ.…














