Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ಪವಿತ್ರ ರಂಜಾನ್ ಮಾಸದ ಚಂದ್ರನ ದರ್ಶನ ಮಂಗಳವಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಮಾರ್ಚ್.12ರ ಮಂಗಳವಾರದ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತಾಚರಣೆ ಆರಂಭಗೊಳ್ಳಲಿದೆ. ಈ ಕುರಿತಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಅವರು ಮಾಹಿತಿ ನೀಡಿದ್ದು, ಮಂಗಳವಾರದ ನಾಳೆ ಚಂದ್ರ ದರ್ಶನವಾಗುವ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಉಪವಾಸ ವ್ರತ ಆಚರಣೆ ಮಾಡಲಾಗುತ್ತದೆ ಎಂದರು. ಈ ಹಿನ್ನಲೆಯಲ್ಲಿ ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಕೇರಳ, ಕಾಸರಗೂಡು ಸೇರಿದಂತೆ ರಾಜ್ಯಾಧ್ಯಂತ ನಾಳೆಯಿಂದ ಪವಿತ್ರ ರಂಜಾನ್ ಮಾಸದ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ. ನಾಳೆಯಿಂದ ಒಂದು ತಿಂಗಳವರೆಗೆ ಮುಸ್ಲೀಂ ಬಾಂಧವರು ಪವಿತ್ರ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡಲಿದ್ದಾರೆ. https://kannadanewsnow.com/kannada/central-government-issues-notification-regarding-implementation-of-caa/ https://kannadanewsnow.com/kannada/good-news-for-anganwadi-workers-cm-assures-rs-2000-salary-hike-soon/
ಚಿತ್ರದುರ್ಗ: ಚುನಾವಣೆ ವೇಳೆಯಲ್ಲಿ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಮೋದಿ ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂಬುದಾಗಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡ ಹಾಗೂ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್ ಮಂಜುನಾಥ್ ಹೇಳಿಕೆ ನೀಡಿದ್ದರು. ಇಂತಹ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಸಮುಧಾಯ ಭವನ ಉದ್ಘಾಟನೆ ಕಾರ್ಯಕ್ರಮದ ವೇಳೆಯಲ್ಲಿ ಮಾತನಾಡಿದ್ದಂತ ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಅವರು ಲೋಕಸಭಾ ಚುನಾವಣೆಯ ಹೊತ್ತಿಲ್ಲೇ ಸಿಲಿಂಡರ್ ಬೆಲೆಯನ್ನು ಕೇವಲ 100 ರೂ ಇಳಿಸಿದ್ದಾರೆ. ನನ್ನ ಕೈಗೆ ಮೋದಿ ಏನಾದರೂ ಸಿಕ್ಕಿದ್ದರೇ ಕಾಲಲ್ಲಿ ಇರೋದನ್ನು ತೆಗೆದು ಹೊಡೆಯುತ್ತಿದ್ದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಜೆಎಸ್ ಮಂಜುನಾಥ್ ಹೇಳಿಕೆಯನ್ನು ಆಕ್ಷೇಪಿಸಿದ್ದಂತ ಚಿತ್ರದುರ್ಗ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಲ್ಲೇಶಯ್ಯ ಎಂಬುವರು ಚಿತ್ರದುರ್ಗ ನಗರ ಠಾಣೆಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ದೂರು ಆಧರಿಸಿ ಕಾಂಗ್ರೆಸ್ ಮುಖಂಡ ಹಾಗೂ ಕಾರ್ಮಿಕ ಕಲ್ಯಾಣ…
ದಾವಣಗೆರೆ : ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಇತ್ತಿಚೀಗೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಕೆಲ ಘಟನೆಗಳು ಚಳಗೇರಿ, ಕುಮಾರಪಟ್ಟಣಂ, ಚಿಕ್ಕಬಾಣಾವರ, ಕುಪ್ಪಂ ಮತ್ತು ಧಮಾವರಂ ರೈಲು ನಿಲ್ದಾಣಗಳ ಬಳಿ ವರದಿಯಾಗಿದ್ದು. ಇಂತಹ ಘಟನೆಗಳನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಿದ್ದು. ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೋಲೀಸ್ ಸಿಬ್ಬಂದಿ ಅಂತಹ ಪ್ರದೇಶಗಳಲ್ಲಿ ಜಾಗರೂಕರಾಗಿದ್ದಾರೆ. ಯಾವುದೇ ವ್ಯಕ್ತಿ, ಕಾನೂನುಬಾಹಿರ ಕೃತ್ಯ ಅಥವಾ ಉದ್ದೇಶಪೂರ್ವಕ ಲೋಪ ಅಥವಾ ನಿರ್ಲಕ್ಷ್ಯದಿಂದ ರೈಲಿನಲ್ಲಿ ಪ್ರಯಾಣಿಸುವ ಅಥವಾ ಇರುವ ವ್ಯಕ್ತಿಯ ಸುರಕ್ಷತೆಗೆ ಅಪಾಯವನ್ನುಂಟುಮಾಡಿದರೆ ಸೆಕ್ಷನ್ 154 ರ ಅಡಿಯಲ್ಲಿ ಒಂದು ವರ್ಷದವರೆಗೆ ಜೈಲು ಶಿಕ್ಷೆ, ಮತ್ತು ದಂಡ, ವಿಧಿಸಲಾಗುವುದು ಅಥವಾ ರೈಲಿನ ರೋಲಿಂಗ್ ಸ್ಟಾಕ್ ಗೆ ಅಡ್ಡಿಪಡಿಸುವುದು ಮತ್ತು ಅಡ್ಡಿಪಡಿಸಲು ಪ್ರಯತ್ನಿಸುವುದನ್ನು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಸೆಕ್ಷನ್ – 153 ರ ಅಡಿಯಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ರೈಲುಗಳ ಮೇಲೆ ಕಲ್ಲು ತೂರಾಟದಂತಹ ಘಟನೆಗಳು ಕಂಡುಬಂದರೆ…
ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಅನುಕೂಲವಾಗುವಂತೆ ಪೌರತ್ವ (ತಿದ್ದುಪಡಿ) ಕಾಯ್ದೆ, 2019 ( Citizenship (Amendment) Act, 2019 -CAA) ಅನುಷ್ಠಾನವನ್ನು ಗೃಹ ಸಚಿವಾಲಯ ಮಾರ್ಚ್ 11ರ ಇಂದು ಅಧಿಸೂಚನೆ ಹೊರಡಿಸಿದೆ. ಹಾಗಾದ್ರೇ ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು.? ಇದು ಯಾರ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಮುಂದೆ ಓದಿ.. ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) 2019 ರ ಡಿಸೆಂಬರ್ನಲ್ಲಿ ಸಂಸತ್ತು ಅಂಗೀಕರಿಸಿತು. ಆಗಿನ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಕಾಯ್ದೆಯನ್ನು ಅನುಮೋದಿಸಿ, ಅದನ್ನು ಕಾನೂನಾಗಿ ಪರಿವರ್ತಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು? ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಆರು ಅಲ್ಪಸಂಖ್ಯಾತರಿಗೆ (ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್) ಈ ಕಾನೂನು ಪೌರತ್ವ ನೀಡುತ್ತದೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಈ ದೇಶಗಳಿಂದ…
ಬೆಂಗಳೂರು : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು. ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು.…
ಮಂಗಳೂರು: ನಗರದಲ್ಲಿನ ಮೆಸ್ಕಾಂ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಂತ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ್ದರು. ಮಾವನ ಮೇಲೆ ರಕ್ಕಸ ಕೃತ್ಯವನ್ನು ಎಸಗಿದ್ದು ಮನೆಯಲ್ಲಿನ ಸಿಸಿಟಿವಿ ದೃಶ್ಯಾವಳಿಯಿಂದ ಬಹಿರಂಗವಾಗಿತ್ತು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಈ ಬೆನ್ನಲ್ಲೇ ಮಾವನ ಮೇಲೆ ಹಲ್ಲೆ ನಡೆಸಿದಂತ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕುಲಶೇಖರ ಹಾಲಿ ಡೇರಿಯ ಸಮೀಪದಲ್ಲಿದ್ದಂತ ಮನೆಯೊಂದರಲ್ಲಿ 87 ವರ್ಷದ ವೃದ್ಧ ಪದ್ಮನಾಭ ಮೇಲೆ ಸೊಸೆ ಉಮಾಶಂಕರಿ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಮೆಸ್ಕಾಂ ಸಿಬ್ಬಂದಿ ಉಮಾಶಂಕರಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ ಹಲ್ಲೆಗೊಳಗಾದ ವೃದ್ಧ ಪದ್ಮನಾಭ ಅವರ ಪುತ್ರ ಪ್ರೀತಮ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಹೀಗಾಗಿ ಕುಲಶೇಖರ ಹಾಲಿನ ಡೇರಿ ಬಳಿಯ ಮನೆಯಲ್ಲಿ ಪದ್ಮನಾಭ ಹಾಗೂ ಅವರ ಸೊಸೆ ಅಂದರೆ ಮಗನ ಪತ್ನಿ ಉಮಾಶಂಕರಿ ಮನೆಯಲ್ಲಿ ವಾಸವಾಗಿದ್ದರು. ಮಾವ ಮನೆಯಲ್ಲಿ ಇರುವಂತ ವಿಚಾರಕ್ಕಾಗಿಯೇ ದಿನನಿತ್ಯ…
ದೇವನಹಳ್ಳಿ : ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ…
ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆ ನೀಡಿದರು. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು. https://kannadanewsnow.com/kannada/note-from-march-15-onwards-if-drinking-water-is-used-for-other-purposes-in-bengaluru-there-will-be-on-the-spot-penalty/ https://kannadanewsnow.com/kannada/central-government-issues-notification-regarding-implementation-of-caa/
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾರ್ಬೆಜ್ ಸಿಟಿ ನಂತ್ರ, ನೀರಿನ ಸಮಸ್ಯೆ ಉಲ್ಭಣಗೊಂಡಿದೆ. ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ, ನಗರದಲ್ಲಿ ಅನಗತ್ಯ ಉದ್ದೇಶಗಳಿಗಾಗಿ ನೀರು ಪೋಲು ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದಂಡದ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಜಲಮಂಡಳಿಯ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು, ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು. ನೀರಿನ ಸಮಸ್ಯೆ ಇರುವ ಈ ಸಂದರ್ಭದಲ್ಲಿ ಮಿತವಾಗಿ ನೀರನ್ನು ಬಳಸುವಂತೆ ಮನವಿ ಮಾಡಿದ್ದಾರೆ. ಕಾವೇರಿ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಆದೇಶಿಸಲಾಗಿದೆ. ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದರೆ, ಮಾರ್ಚ್ 15ರಿಂದ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಸ್ಥಳ ದಂಡ ಶುಲ್ಕದ ನಮೂನೆಯನ್ನು ಸಿದ್ಧಪಡಿಸಲಾಗುತ್ತಿದೆ. ಸಿಬ್ಬಂದಿ ಬೆಳಗ್ಗೆ ಮತ್ತು ಸಂಜೆ ಎರಡು ಪಾಳಿಯಲ್ಲಿ ವಾರ್ಡ್ಗಳಲ್ಲಿ ಸಂಚರಿಸಿ ಪರಿಶೀಲನೆ ಮಾಡುತ್ತಾರೆ. ಸಾರ್ವಜನಿಕರು 1916 ಸಹಾಯವಾಣಿಗೂ ಕರೆ ಮಾಡಿ ನೀರಿನ ದುರ್ಬಳಕೆ ಬಗ್ಗೆ ಮಾಹಿತಿ ನೀಡಬಹುದು ಎಂದು…
ಬೆಂಗಳೂರು: ನಗರದಲ್ಲಿ ನೀರಿನ ಆಹಾಕಾರ ಎದ್ದಿದೆ. ಇದರ ನಡುವೆ ಅಪಾರ್ಮೆಂಟ್ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 35 ಸಾವಿರ ಲೀಟರ್ ನೀರು ಸರಬರಾಜು ಮಾಡಲಾಗುವುದು ಎಂಬುದಾಗಿ ಜಲಮಂಡಳಿ ತಿಳಿಸಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು, ಪಾಲಿಕೆ ನಿಯಮಾವಳಿಗಳ ಪ್ರಕಾರ ಬೆಂಗಳೂರು ಹೊರವಲಯದ ಅಪಾರ್ಟ್ ಮೆಂಟ್ ಗೆ ದೈನಂದಿನ ಕುಡಿಯುವ ಮತ್ತು ದೈನಂದಿನ ಅಡುಗೆ ಅಗತ್ಯತೆಗಳಿಗಾಗಿ ವಾರಕ್ಕೆ 35 ಸಾವಿರ ಲೀಟರ್ ಕಾವೇರಿ ನೀರನ್ನು ಸರಬರಾದು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಹೊರವಲಯದ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿ, ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪಾಲಿಕೆ ನಿಯಮಾವಳಿಗಳ ಪ್ರಕಾರ, ಅಪಾರ್ಟ್ಮೆಂಟ್ಗೆ ದೈನಂದಿನ ಕುಡಿಯುವ ಮತ್ತು ದೈನಂದಿನ ಅಡುಗೆ ಅಗತ್ಯಗಳಿಗಾಗಿ ವಾರಕ್ಕೆ 35 ಸಾವಿರ ಲೀಟರ್ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/ https://kannadanewsnow.com/kannada/central-government-issues-notification-regarding-implementation-of-caa/