Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ. ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. 2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಸಭಾ ನಡವಳಿಯನ್ವಯ ಈ ಪೈಕಿ ಒಬ್ಬರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ. ಪುಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ…
ಬೆಂಗಳೂರು: ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್ ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು ಸಹಕರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೂ ತಗಡೂರು ಧನ್ಯವಾದ ತಿಳಿಸಿದ್ದಾರೆ. ಆರೋಗ್ಯ ಯೋಜನೆಯನ್ನು ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೆ, ಮುಂದೆ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ.
ಬೆಂಗಳೂರು: ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು 1000 ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು.
ಬೆಂಗಳೂರು: ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಕುವೆಂಪು ಅವರ ಕವಿತೆಯ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಚೊಚ್ಚಲ 16ನೇ ಬಜೆಟ್ ಮಂಡನೆಯನ್ನು ಆರಂಭಿಸಿದರು. ಈ ಮೂಲಕ ಸಮ ಸಮಾಜದ ನಿರ್ಮಾಣದ ವಾದವನ್ನು ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯ ಬಜೆಟ್ 2025-26 ಮಂಡನೆ ಆರಂಭಿಸಿದ್ದಾರೆ. ಕುವೆಂಪು ಅವರ ಕವಿತೆಯನ್ನು ವಾಚಿಸುವ ಮೂಲಕ ತಮ್ಮ ಬಜೆಟ್ ಭಾಷಣ ಆರಂಭಿಸಿದರು. ಸಮ ಸಂಜಾಯ ಆಶಯದ ಮೂಲಕ ದೇಶ ಕಟ್ಟಲು, ಡಾ. ಬಾಬಾ ಸಾಹೇ ಸಂವಿಧಾನ ಕೊಟ್ಟಿದ್ದಾರೆ ಎಂಬುದಾಗಿ ಹೇಳುವ ಮೂಲಕ ಬಜೆಟ್ ಭಾಷಣ ಆರಂಭಿಸಿದರು. ಆರಂಭದಲ್ಲಿ ನಿಂತು ಮಂಡಿಸಿದಂತ ಅವರು, ಆ ಬಳಿಕ ಕುಳಿತು ಮಂಡಿಸಲು ಸ್ಪೀಕರ್ ಯುಟಿ ಖಾದರ್ ಅವರಿಂದ ಅನುಮತಿ ಪಡೆದರು.
ಬೆಂಗಳೂರು: ಮುಂದಿನ 1 ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದಿದ್ದಾರೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ತಿಳಿಸಿದ್ದಾರೆ. https://twitter.com/siddaramaiah/status/1897867222196142592?t=R4N7Gy0RPS3YelVCy1rLUQ&s=19 https://kannadanewsnow.com/kannada/cm-siddaramaiah-arrives-at-vidhana-soudha-budget-presentation-begins/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ವಿಧಾನಸೌಧಕ್ಕಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ. ಇದೀಗ ವಿಧಾನಸೌಧಕ್ಕೆ ಆಗಮಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು ತಮ್ಮ 16ನೇ ಚೊಚ್ಚಲ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿದ್ದಾರೆ. https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/ https://kannadanewsnow.com/kannada/finance-department-officials-hand-over-budget-copy-to-cm-siddaramaiah/
ಬೆಂಗಳೂರು: ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ. ಇದೀಗ ವಿಧಾನಸೌಧಕ್ಕೆ ಆಗಮಿಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಕೆಲವೇ ಕ್ಷಣಗಳಲ್ಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡಲಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/this-is-siddaramaiahs-last-budget-opposition-leader-r-ashoka/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ 2025-26 ಅವರ ಕೊನೆಯ ಬಜೆಟ್ ಆಗಿದೆ ಎಂಬುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಬಜೆಟ್ ಮಂಡನೆಗೂ ಮುನ್ನಾ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು. ಅನುದಾನ ಕೊಡದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗಿದರು. ಈ ವೇಳೆ ಮಾತನಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು ಇದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೊನೆಯ ಬಜೆಟ್ ಆಗಿದೆ. ಸದ್ಯದಲ್ಲೇ ಈ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ. ಅಷ್ಟರಲ್ಲಿ ಎಷ್ಟು ಬಾಚಿಕೊಳ್ಳಬೇಕೋ ಅಷ್ಟು ಬಾಚಿಕೊಳ್ಳಬೇಕು ಅಂದುಕೊಂಡಿದ್ದಾರೆ ಎಂಬುದಾಗಿ ಕಿಡಿಕಾರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ಮನೆ ಹಾಳ ಸಿದ್ಧರಾಮಯ್ಯ ಅವರದ್ದು ಇದು ಕೊನೆಯ ಬಜೆಟ್ ಆಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/special-cabinet-approves-cm-siddaramaiahs-budget-presentation/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ 2025-26ಕ್ಕೆ ಅನುಮೋದನೆ ಪಡೆದರು. ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗಾತ್ರ 4.09 ಲಕ್ಷ ಕೋಟಿ ಆಗಿದೆ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/ https://kannadanewsnow.com/kannada/finance-department-officials-hand-over-budget-copy-to-cm-siddaramaiah/








