Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರಿನ ‘ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್’ಗಳಿಗೆ BBMPಯಿಂದ ಹೊಸ ರೂಲ್ಸ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
ಬೆಂಗಳೂರು: ನಗರದಲ್ಲಿನ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್ ಗಳಿಗೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿಗೊಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿದ್ರೆ ಅಂತ ಮಾಲೀಕರ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ. ಬಿಬಿಎಂಪಿಯಿಂದ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಬಾರ್, ಹೋಟೆಲ್, ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ವಲಯ ಮಾಡದ ಕಾರಣ, ಸಾರ್ವಜನಿಕ ವಲಯದಲ್ಲಿ ಧೂಮಪಾನ ಮಾಡುತ್ತಿರುವುದು ಕಂಡು ಬಂದಿದೆ ಎಂದಿದೆ. ಸಾರ್ವಜನಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಹೀಗಿದ್ದೂ ನಿಯಮ ಮೀರಿ ಧೂಮಪಾನ ಮಾಡುತ್ತಿರುವ ಬಗ್ಗೆ ದೂರುಗಳು ಕಂಡು ಬರುತ್ತಿದ್ದಾವೆ. ಈ ಹಿನ್ನಲೆಯಲ್ಲಿ ಈ ಕೆಳಕಂಡಂತೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿರುವುದಾಗಿ ಹೇಳಿದೆ. ಹೀಗಿದೆ ಹೊಸ ನಿಯಮಗಳು – ಬಾರ್, ರೆಸ್ಟೋರೆಂಟ್, ಪಬ್ ಗಳಲ್ಲಿ 30 ಕುರ್ಚಿ ಇದ್ದರೇ, 30 ಕೊಠಡಿಗಳಿಗಿಂತ ಮೇಲ್ಪಟ್ಟು ಇದ್ದರೇ ಅಂತಹ ಎಡೆಯಲ್ಲಿ ಧೂಮಪಾನ ವಲಯ ನಿಗದಿ ಕಡ್ಡಾಯ – ಧೂಮಪಾನ ವಲಯ ನಿರ್ಮಾಣ ಮಾಡಿ, ಆ ಸ್ಥಳದಲ್ಲಿ…
ಬೆಂಗಳೂರು: ಆಧುನಿಕ ಯುಗದಲ್ಲಿ ಮಾರ್ಡನ್ ಶಿಕ್ಷಣ ನೀಡುವುದು ನಮ್ಮ ಇಲಾಖೆ ಹಾಗೂ ಸರ್ಕಾರದ ಗುರಿಯಾಗಿದೆ. ಮುಂದಿನ ಹಂತದಲ್ಲಿ ರಾಜ್ಯದಲ್ಲಿ 18 ಸಾವಿರ ಅಂಗನವಾಡಿಯಲ್ಲಿ LKG ಮತ್ತು UKG ಆರಂಭ ಮಾಡಲಾಗುತ್ತದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನ ಮಂಡಳದ ಇಡೀ ಸದನ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಳುಗಿದ ಸಂದರ್ಭದಲ್ಲಿ ಈ ರಾಜ್ಯದ ಬಡ ಮಕ್ಕಳಿಗೆ ಶೈಕ್ಷಣಿಕ ಶಕ್ತಿ ತುಂಬುವ, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಮಹತ್ಕಾರ್ಯವನ್ನು ತಮ್ಮ ಇಲಾಖೆಯ ಮೂಲಕ ಮಾಡಿದ್ದಾರೆ ಎಂದರು. ರಾಜಕೀಯ ಏನೇ ಇರಲಿ, ಇತ್ತೀಚಿನ ವರ್ಷಗಳಲ್ಲಿ ಸರಕಾರದಿಂದ ಸಮಾಜಕ್ಕೆ ಸಿಕ್ಕಿದ ಅತ್ಯಂತ ಉಪಯುಕ್ತವಾದ ಉಲ್ಲೇಖನೀಯ ಯೋಜನೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ನಿರ್ಣಯ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಉಸಿರಿಲ್ಲದ, ಹಸಿದ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣವೆಂಬುದು ಮರೀಚಿಕೆ ಎನ್ನುತ್ತಿರುವ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಾವು ಅಂದುಕೊಂಡಿದ್ದನ್ನು ಸಾಧಿಸಿದ್ದಾರೆ. 1975ರಲ್ಲಿ, ಅಂದಿನ…
ಬೆಂಗಳೂರು: ನಗರದಲ್ಲಿ ಹಲವೆಡೆ ರಸ್ತೆ ಗುಂಡಿಗಳದ್ದೇ ದರ್ಬಾರ್. ವಾಹನ ಸವಾರರು ಸಂಚಾರಕ್ಕೂ ಸವಾಲು ಎದುರಿಸುವಂತೆ ಗುಂಡಿಗಳಿದ್ದಾವೆ. ಇದೀಗ ಬೆಂಗಳೂರಿನ ರಸ್ತೆ ಗುಂಡಿ ಗಮನಕ್ಕೆ ಮೊಬೈಲ್ ಅಪ್ಲಿಕೇಷನ್ ರಿಲೀಸ್ ಮಾಡಲಾಗಿದೆ. ಹೀಗಾಗಿ ಸಿಲಿಕಾನ್ ಸಿಟಿ ಶೀಘ್ರವೇ ಗುಂಡಿ ಮುಕ್ತವಾಗುವ ಸಾಧ್ಯತೆ ಇದೆ. “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆ ಅಡಿ ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಸಚಿವರು ಹಾಗೂ ಶಾಸಕರುಗಳೊಂದಿಗೆ ಸಭೆ ನಡೆಸಿದರು. ಇದೇ ವೇಳೆ “ಬ್ರ್ಯಾಂಡ್ ಬೆಂಗಳೂರು” ಕುರಿತ ಕಿರುಹೊತ್ತಿಗೆ ಹಾಗೂ ರಸ್ತೆ ಗುಂಡಿ ಗಮನ ಮೊಬೈಲ್ ಅಫ್ಲಿಕೇಷನ್ ಅನ್ನು ಅನಾವರಣಗೊಳಿಸಲಾಯಿತು. ಏನಿದು “ರಸ್ತೆ ಗುಂಡಿ ಗಮನ(Fix Pothole) – ಮೊಬೈಲ್ ಅಪ್ಲಿಕೇಷನ್? ನಗರದಲ್ಲಿ ರಸ್ತೆ ಗುಂಡಿಗಳನ್ನು ಪಾರದರ್ಶಕವಾಗಿ ಗುರುತಿಸಲು ಹಾಗೂ ನಿಗಧಿತ ಅವಧಿಯಲ್ಲಿ ದುರಸ್ಥಿಪಡಿಸಲು ಸುಲಲಿತ ತಂತ್ರಜ್ಞಾನವನ್ನು ಹೊಂದಿರುವ “ರಸ್ತೆ ಗುಂಡಿ ಗಮನ- ಮೊಬೈಲ್ ಅಪ್ಲಿಕೇಷನ್” ಅನ್ನು ಅನಾವರಣಗೊಳಿಸಲಾಗಿದೆ.…
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನಲ್ಲಿ ಕಾರು ಕಮರಿಗೆ ಬಿದ್ದ ಪರಿಣಾಮ 5 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಭೀಕರ ಅಪಘಾತವೊಂದು ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಸಿಮ್ಥಾನ್-ಕೊಕರ್ನಾಗ್ ರಸ್ತೆಯಲ್ಲಿ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ ಐವರು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ವಾಹನವು ಮಡ್ವಾ ಕಿಶ್ತ್ವಾರ್ ನಿಂದ ತೆರಳುತ್ತಿದ್ದಾಗ ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ಪರಿಣಾಮ ಕಂದಕಕ್ಕೆ ಉರುಳಿ ಬಿದ್ದ ಕಾರಣ, ಭೀಕರ ಅಪಘಾತ ಸಂಭವಿಸಿ 8 ಮಂದಿ ದುರ್ಮರಣಹೊಂದಿದ್ದಾರೆ. https://kannadanewsnow.com/kannada/https-kannadanewsnow-com-kannada-14-year-old-girl-dies-of-dengue-in-kerala/ https://kannadanewsnow.com/kannada/ban-on-tourists-visiting-muttatti-tourist-spot/
ಶ್ರೀನಗರ : ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕರ್ ನಾಗ್ ನ ದಕ್ಸುಮ್ ಪ್ರದೇಶದ ಬಳಿ ವಾಹನವೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಜೆಕೆ 03 ಎಚ್ 9017 ನೋಂದಣಿ ಸಂಖ್ಯೆಯನ್ನು ಹೊಂದಿರುವ ಸುಮೋ ವಾಹನವು ನಿಯಂತ್ರಣ ಕಳೆದುಕೊಂಡು ದಕ್ಷುಮ್ ಬಳಿ ರಸ್ತೆಗೆ ಉರುಳಿದೆ ಎಂದು ಅಧಿಕಾರಿಗಳು ಜಿಎನ್ಎಸ್ಗೆ ತಿಳಿಸಿದ್ದಾರೆ. ಈ ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ವಾಹನವು 5 ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಪುರುಷರೊಂದಿಗೆ ಕಿಶ್ತ್ವಾರ್ ನಿಂದ ಕೊಂಡೊಯ್ಯುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. https://kannadanewsnow.com/kannada/14-year-old-girl-dies-of-dengue-in-kerala/ https://kannadanewsnow.com/kannada/https-kannadanewsnow-com-kannada-14-year-old-girl-dies-of-dengue-in-kerala/ https://kannadanewsnow.com/kannada/ban-on-tourists-visiting-muttatti-tourist-spot/
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಬೇರೆ ರಾಜ್ಯಗಳಿಂದ ಮಾಂಸ ಸಾಗಾಟವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಸಂಬಂಧ ಪೊಲೀಸರಿಂದ 3 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ರೈಲುಗಳ ಮೂಲಕ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಮಾಂಸ ಸಾಕಾಟ ಮಾಡುತ್ತಿದ್ದ ಸಂಬಂಧ 90 ಪಾರ್ಸಲ್ ಗಳನ್ನು ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಅಲ್ಲದೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಅದು ನಾಯಿ ಮಾಂಸವೋ ಅಥವಾ ಬೇರೆ ಮಾಂಸವೋ ಎನ್ನುವ ಬಗ್ಗೆ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿತ್ತು. ಈ ಪ್ರಕರಣದ ಸಂಬಂಧ ಬೇರೆ ರಾಜ್ಯದಿಂದ ಬೆಂಗಳೂರಿಗೆ ಮಾಂಸ ಸಾಗಾಟದ ಕಾರಣ, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಿಸಲಾಗಿದೆ. ಒಂದು ಅಕ್ರಮವಾಗಿ ಮಾಂಸ ಮಾರಾಟದ ಸಂಬಂಧದ ಎಫ್ಐಆರ್ ಆಗಿದ್ದರೇ, ಎರಡನೇಯರು ಅಕ್ರಮವಾಗಿ ಗುಂಪು ಗೂಡಿ ಗಲಾಟೆ ಮಾಡಿದ ಆರೋಪ ಹಾಗೂ ಕಾನೂನು ಬಾಹಿರ ಚಟುವಟಿಕೆ ಆರೋಪದಡಿ 2ನೇ ಎಫ್ಐಆರ್ ದಾಖಲಿಸಲಾಗಿದೆ. ಇನ್ನೂ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದಂತ ಆರೋಪದಡಿ ಪುನೀತ್ ಕೆರೆಹಳ್ಳಿ…
ಬೆಳಗಾವಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯ ನಿಯಂತ್ರಣದ ಕ್ರಮದ ನಡುವೆಯೂ ಡೆಂಗ್ಯೂವಿನಿಂದಾಗಿ ಇಂದು 14 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಧಾರವಾಡ ಕುಂದಗೋಳದಲ್ಲಿ ಡೆಂಗ್ಯೂವಿನಿಂದ ಬಳಲುತ್ತಿದ್ದಂತ 5 ವರ್ಷದ ಬಾಲಕಿನ್ನು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಈ ಬೆನ್ನಲ್ಲೇ ತೀವ್ರ ಜ್ವರದಿಂದ ಬಳಲುತ್ತಿದ್ದಂತ 14 ವರ್ಷದ ಬಾಲಕಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾದಂತೆ ಆಗಿದೆ. ಮೃತ 14 ವರ್ಷದ ಬಾಲಕಿಯನ್ನು ಪ್ರಣಾಲಿ ಎಂಬುದಾಗಿ ತಿಳಿದು ಬಂದಿದೆ. ಈ ಬಾಲಕಿ ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದವಳಾಗಿದ್ದಾಳೆ. ಬಾಲಕಿಗೆ ಮೊದಲು ವಾಂತಿ-ಬೇಧಿ ಕಾಣಿಸಿಕೊಂಡಿತ್ತು. ಆ ಬಳಿಕ ಜ್ವರ ಬಂದಿತ್ತು. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ 14 ವರ್ಷದ ಬಾಲಕಿ ಪ್ರಣಾಲಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಆಕೆ ಡೆಂಗ್ಯೂವಿನಿಂದ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಆರೋಗ್ಯ ಇಲಾಖೆಯಿಂದ ಖಚಿತ ಮಾಹಿತಿ ತಿಳಿದು…
ಶಿವಮೊಗ್ಗ: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ. ಶೀಘ್ರವೇ ಪತ್ರಕರ್ತರಿಗೂ ಆರೋಗ್ಯ ವಿಮೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಪತ್ರಕರ್ತರಿಗೆ, ಮಾಧ್ಯಮಗಳಿಗೆ ಕಾರ್ಪೋರೇಟ್ ಜಗತ್ತಿನ ಸಮಸ್ಯೆಗಳೇ ದೊಡ್ಡದಾಗಿ ಕಾಣುತ್ತಿವೆ. ನಾವೆಲ್ಲಾ ರೈತರ, ಕಾರ್ಮಿಕರ ಮತ್ತು ಶ್ರಮಿಕರ ಮಕ್ಕಳು. ನಮ್ಮ ಸಮುದಾಯಗಳು ಏನೆಲ್ಲಾ ಸಂಕಷ್ಟಗಳನ್ನು ಎದುರಿಸುತ್ತಿವೆ ಎನ್ನುವುದು ನಮಗೆ ಮುಖ್ಯವಾಗುತ್ತಿಲ್ಲ. ನಮ್ಮ ಬೇರುಗಳನ್ನು, ನಮ್ಮ ಹಿನ್ನೆಲೆಯನ್ನು ಮರೆತಿರುವುದೇ ಇದಕ್ಕೆ ಕಾರಣ ಎಂದರು. ಶಿವಮೊಗ್ಗ ಚಳವಳಿಗಳ ತವರೂರು. ಸಮಾಜವಾದಿ, ಗೇಣಿ ಹೋರಾಟ, ರೈತ-ದಲಿತ ಹೋರಾಟಗಳ ಜೊತೆಗೆ ಪತ್ರಿಕಾ ಚಳವಳಿಗೂ ಹೆಸರಾದ ಜಿಲ್ಲೆ ಎನ್ನುತ್ತಾ ಪತ್ರಿಕೋದ್ಯಮಕ್ಕೆ ಲಂಕೇಶ್ ಅವರ ಕೊಡುಗೆಗಳನ್ನು ಉಲ್ಲೇಖಿಸಿದರು. ಸರ್ಕಾರ ಪತ್ರಕರ್ತ ಸಮುದಾಯದ ಸಮಸ್ಯೆಗಳಿಗೆ ಗರಿಷ್ಠ ಮಟ್ಟದಲ್ಲಿ ಸ್ಪಂದಿಸುತ್ತಿದೆ…
ನವದೆಹಲಿ: ಒಲಿಂಪಿಕ್ಸ್ ನಲ್ಲಿ ಪೋಡಿಯಂನಲ್ಲಿ ಅಗ್ರಸ್ಥಾನದಲ್ಲಿ ನಿಂತು ಚಿನ್ನದ ಪದಕ ಗೆಲ್ಲಲು ಸಾಕಷ್ಟು ಸಮಯ ಬೇಕಾಗುತ್ತದೆ. ವಿಶ್ವದಾದ್ಯಂತದ ಅತ್ಯುತ್ತಮ ಕ್ರೀಡಾಪಟುಗಳು ತಮ್ಮ ರಾಷ್ಟ್ರಕ್ಕೆ ಕೀರ್ತಿ ತರುವ ಏಕೈಕ ಉದ್ದೇಶದಿಂದ ಕ್ರೀಡಾ ವೈಭವದಲ್ಲಿ ಸ್ಪರ್ಧಿಸುತ್ತಾರೆ. ಹಾಗಾದ್ರೆ ಒಲಿಂಪಿಕ್ ಚಿನ್ನದ ಪದಕವನ್ನು ತಯಾರಿಸಲು ಎಷ್ಟು ಚಿನ್ನವನ್ನು ಬಳಸುತ್ತಾರೆ? ಅದರ ಮೌಲ್ಯವೇನು ಅನ್ನುವ ಬಗ್ಗೆ ಮುಂದೆ ಓದಿ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವುದು ಕ್ರೀಡೆಯ ಉತ್ತುಂಗವೆಂದು ಪರಿಗಣಿಸಲಾಗುತ್ತದೆ ಮತ್ತು ಉನ್ನತ ಸ್ಥಾನವನ್ನು ತಲುಪಲು ವರ್ಷಗಳ ಕಠಿಣ ಪರಿಶ್ರಮ, ಸಮರ್ಪಣೆ, ರಕ್ತ, ಬೆವರು ಮತ್ತು ತರಬೇತಿ ಬೇಕಾಗುತ್ತದೆ. ಒಲಿಂಪಿಕ್ ಚಿನ್ನದ ಪದಕವನ್ನು ಗೆಲ್ಲುವ ಕ್ರೀಡಾಪಟುವಿಗೆ ಅಮೂಲ್ಯವಾಗಿ ಉಳಿದರೂ, ಪದಕವನ್ನು ತಯಾರಿಸಲು ಖಂಡಿತವಾಗಿಯೂ ವೆಚ್ಚವಾಗುತ್ತದೆ. ಪದಕದ ಮೌಲ್ಯವನ್ನು ಅದನ್ನು ತಯಾರಿಸಲು ಬಳಸುವ ಲೋಹಗಳಿಂದ ಅಥವಾ ಒಂದನ್ನು ಗೆಲ್ಲಲು ತೆಗೆದುಕೊಳ್ಳುವ ವರ್ಷಗಳ ತ್ಯಾಗವನ್ನು ಪರಿಗಣಿಸಿ ಅದಕ್ಕೆ ತಗಲುವ ವೆಚ್ಚದಿಂದ ನಿರ್ಧರಿಸಲಾಗುವುದಿಲ್ಲ. ಆದರೆ ಒಲಿಂಪಿಕ್ ಚಿನ್ನದ ಪದಕದಲ್ಲಿ ಎಷ್ಟು ಚಿನ್ನವಿದೆ ಎಂದು ಇನ್ನೂ ಆಶ್ಚರ್ಯವಾಗುತ್ತದೆ. ಇದು ಸಂಪೂರ್ಣವಾಗಿ ಚಿನ್ನದಿಂದ ಮಾಡಲ್ಪಟ್ಟಿದೆಯೇ…
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಪ್ರವಾಸಿ ತಾಣ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶ ವ್ಯಾಪ್ತಿಗೆ ಪ್ರವಾಹ ಕಡಿಮೆಯಾಗುವವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ತಾಲ್ಲೂಕು ಆಡಳಿತ ಆದೇಶಿಸಿದೆ. ಈ ಕುರಿತಂತೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ತಾಲ್ಲೂಕು ದಂಡಾಧಿಕಾರಿ ಕೆಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆ,ಮಳವಳ್ಳಿ ತಾಲ್ಲೂಕು ಹಲಗೂರು ಹೋಬಳಿ ಯಲ್ಲಿರುವ ಮುತ್ತತ್ತಿ ಗ್ರಾಮವು ಪುಸಿದ್ಧ ಯಾತ್ರಾ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಗ್ರಾಮದ ಪಕ್ಕದಲ್ಲಿ ಕಾವೇರಿ ನದಿ ಹರಿಯುತ್ತಿದ್ದು,ದೇವಸ್ಥಾನಕ್ಕೆ ಬರುವ ಪುವಾಸಿಗರು ನದಿಯೊಳಗೆ ಇಳಿದು ಈಜಾಡುವುದು, ಮೋಜು, ಮಸ್ತಿ ಮಾಡುವುದು ಮಾಡುತ್ತಿರುತ್ತಾರೆ ಎಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ನೈಸರ್ಗಿಕವಾಗಿ ಹೆಚ್ಚು ಮಳೆಯಾಗಿರುವುದರಿಂದ ನದಿಯಲ್ಲಿ ಕಾವೇರಿ ನೀರಿನ ಪ್ರವಾಹ ಹೆಚ್ಚಾಗಿರುತ್ತದೆ. ಅದಲ್ಲದ ಕಾವೇರಿ ಜಲಾಶಯದಿಂದ ಹೆಚ್ಚುವರಿಯಾಗಿ 115000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿದ್ದು, ಮುತ್ತತ್ತಿಯಲ್ಲಿ ಕಾವೇರಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಈ ಸಮಯದಲ್ಲಿ ಸಾರ್ವಜನಿಕರು ನದಿಯೊಳಗೆ ಇಳಿಯುವುದರಿಂದ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ಮುಂಜಾಗೃತ…