Author: kannadanewsnow09

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತ-ಯುಎಸ್ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲು ದೂರವಾಣಿ ಕರೆ ಮೂಲಕ ಸುದೀರ್ಘವಾಗಿ ಮಾತನಾಡಿದರು. ವಿಶೇಷವೆಂದರೆ, ಯುಎಸ್ ಸರ್ಕಾರದ ಆಹ್ವಾನದ ಮೇರೆಗೆ ಜನವರಿ 20 ರಂದು ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಟ್ರಂಪ್ಗೆ ಬರೆದ ಪತ್ರವನ್ನು ಒಯ್ದರು. https://kannadanewsnow.com/kannada/only-fan-model-dies-after-falling-from-balcony-while-having-sex-onlyfans-death/ https://kannadanewsnow.com/kannada/man-commits-suicide-after-writing-suicide-note-as-wife-commits-suicide-in-karnataka/

Read More

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಂಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿದರು. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯ ವೈಶಿಷ್ಟ್ಯತೆ * ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು * ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್ * ಭುವನೇಶ್ವರಿ ಪ್ರತಿಮೆ – 20 ಟನ್ * ಕರ್ನಾಟಕ ನಕ್ಷೆ – 11.50 ಟನ್ * ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ * ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ…

Read More

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು. ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ…

Read More

ಮಂಡ್ಯ: ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ವಿಸಿ ನಾಲೆಗೆ ಎಸೆದು ತಾನೂ ಆತ್ಮಹತ್ಯೆಗೆ ತಾಯಿಯೊಬ್ಬಳು ನೀರಿಗೆ ಹಾರಿದಂತ ಘಟನೆ ನಡೆದಿದೆ. ತಾಯಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಇಬ್ಬರು ಮಕ್ಕಳು ಮಾತ್ರ ನೀರುಪಾಲಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಗೆ ತಾಯಿ ವಿದ್ಯಾ ಎಂಬುವರು ಕೌಟುಂಬಿಕ ಕಲಹದಿಂದ ತನ್ನ ಇಬ್ಬರು ಮಕ್ಕಳನ್ನು ಎಸೆದು, ತಾನು ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ನಾಲೆಗೆ ಹಾರಿದ್ದನ್ನು ಗಮನಿಸಿದಂತ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಆದರೇ ನೀರಿನ ಸೆಳೆತ ಹೆಚ್ಚಿದ ಹಿನ್ನಲೆಯಲ್ಲಿ ಮಕ್ಕಳ ಮಾತ್ರ ನೀರುಪಾಲಾಗಿ ಕೊಚ್ಚಿ ಹೋಕಿದ್ದಾರೆ. https://kannadanewsnow.com/kannada/man-commits-suicide-after-writing-suicide-note-as-wife-commits-suicide-in-karnataka/ https://kannadanewsnow.com/kannada/only-fan-model-dies-after-falling-from-balcony-while-having-sex-onlyfans-death/

Read More

ಬೆಂಗಳೂರು: ಮುಡಾ ಹಗರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೀಡಿದ್ದಂತ ನೋಟಿಸ್ ಗೆ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಗೆ ಇಡಿ ನೋಟಿಸ್ ನೀಡಿದ್ದಂತ ಸಂಬಂಧ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠ ನಡೆಸಿತು. ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಮುಂದಿನ ವಿಚಾರಣೆಯವರೆಗೆ ಇಡಿ ಸಮನ್ಸ್ ಗೆ ತಡೆ ನೀಡಿ ಆದೇಶಿಸಿದೆ. https://kannadanewsnow.com/kannada/3-million-indians-active-on-non-wedding-gleeden-app-bengaluru-tops-the-list/ https://kannadanewsnow.com/kannada/only-fan-model-dies-after-falling-from-balcony-while-having-sex-onlyfans-death/

Read More

ನವದೆಹಲಿ: ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ನಲ್ಲಿ 3 ಮಿಲಿಯನ್ ಭಾರತೀಯರು ಸಕ್ರಿಯರಾಗಿದ್ದಾರೆ. ಬೆಂಗಳೂರಲ್ಲಿ ಹೆಚ್ಚು ಬಳಕೆದಾರರು ಗ್ಲೀಡೆನ್ ಬಳಕೆ ಮಾಡುವ ಮೂಲಕ ಅಗ್ರಸ್ಥಾನದಲ್ಲಿದೆ ಎಂಬುದಾಗಿ ವರದಿಯೊಂದು ತಿಳಿಸಿದೆ. ಈ ಬಗ್ಗೆ ಕಂಪನಿಯೊಂದು ಮಾಹಿತಿ ಬಿಡುಗಡೆ ಮಾಡಿದ್ದು, ‘ಸಂತೋಷದ ನಂತರ’ ಏಕೈಕ ಮಾರ್ಗ ಎಂದು ನಾವು ಭಾವಿಸಿದಾಗ, ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ಭಾರತೀಯ ಬಳಕೆದಾರರ ಡೇಟಾದೊಂದಿಗೆ ನಮ್ಮನ್ನು ಆಶ್ಚರ್ಯಗೊಳಿಸಿತು. ಗ್ಲೀಡೆನ್ ಭಾರತದಲ್ಲಿ 3 ಮಿಲಿಯನ್ ಬಳಕೆದಾರರನ್ನು ದಾಖಲಿಸಿದೆ. ದೊಡ್ಡ ಅದ್ಧೂರಿ ಮದುವೆಗಳ ಭೂಮಿಯಾದ ಭಾರತದಲ್ಲಿ ವಿವಾಹೇತರ ಡೇಟಿಂಗ್ ಅಪ್ಲಿಕೇಶನ್ನಲ್ಲಿ ಅನೇಕ ವಿವಾಹಿತರು ಇರುವುದು ವಿಪರ್ಯಾಸವಲ್ಲವೇ? ಎಂದಿದೆ. 2024 ರಲ್ಲಿ ಅಪ್ಲಿಕೇಶನ್ ತನ್ನ ಬಳಕೆದಾರರ ಸಂಖ್ಯೆಯಲ್ಲಿ ಶೇಕಡಾ 270 ರಷ್ಟು ಏರಿಕೆ ಕಂಡಿದೆ ಎಂದು ಗ್ಲೀಡೆನ್ ಹೇಳಿಕೆಯಲ್ಲಿ ಹಂಚಿಕೊಂಡಿದೆ. ಇದು ಮಹಿಳಾ ಬಳಕೆದಾರರಲ್ಲಿ ಶೇಕಡಾ 128 ರಷ್ಟು ಹೆಚ್ಚಳವನ್ನು ಕಂಡಿದೆ. ಗ್ಲೀಡೆನ್ ಬಳಕೆದಾರರಲ್ಲಿ ಮಹಿಳೆಯರು ಈಗ ಶೇಕಡಾ 58 ರಷ್ಟಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ. ಅವರಲ್ಲಿ 40 ಪ್ರತಿಶತದಷ್ಟು ಜನರು ಪ್ರತಿದಿನ 45 ನಿಮಿಷಗಳವರೆಗೆ ಅಪ್ಲಿಕೇಶನ್ನಲ್ಲಿ ಕಳೆಯುತ್ತಾರೆ.…

Read More

ಬೆಂಗಳೂರು: ಮುಡಾ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದೆ. ಈ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಚಿವ ಬೈರತಿ ಸುರೇಶ್ ಗೆ ನೋಟಿಸ್ ಜಾರಿಗೊಳಿಸಿ ಶಾಕ್ ನೀಡಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ಹಗರಣದ ಸಂಬಂಧ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನೋಟಿಸ ನೀಡಲಾಗಿತ್ತು. ಈ ಬೆನ್ನಲ್ಲೇ ಸಚಿವ ಬೈರತಿ ಸುರೇಶ್ ಅವರಿಗೂ ಇಡಿ ನೋಟಿಸ್ ನೀಡಿದೆ. ಇಡಿ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದಂತ ನೋಟಿಸ್ ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಹೀಗಾಗಿ ಸಚಿವ ಬೈರತಿ ಸುರೇಶ್ ಅವರಿಗೂ ಮುಡಾ ಕೇಸಲ್ಲಿ ಸಂಕಷ್ಟ ಶುರುವಾದಂತೆ ಆಗಿದೆ. https://kannadanewsnow.com/kannada/uniform-civil-code-to-be-implemented-in-uttarakhand-rules-released-portal-launched/ https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/

Read More

ನವದೆಹಲಿ: ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಸೋಮವಾರ ಪಾತ್ರವಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯುಸಿಸಿ ಪೋರ್ಟಲ್ ಅನ್ನು ಪ್ರಾರಂಭಿಸಿದರು ಮತ್ತು ನಾಗರಿಕ ಸಂಹಿತೆಯನ್ನು ಅಳವಡಿಸಿಕೊಳ್ಳುವುದನ್ನು ಗುರುತಿಸುವ ಅಧಿಸೂಚನೆಯನ್ನು ಹೊರಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಧಾಮಿ, “ಏಕರೂಪ ನಾಗರಿಕ ಸಂಹಿತೆಯು ತಾರತಮ್ಯವನ್ನು ಕೊನೆಗೊಳಿಸುವ ಸಾಂವಿಧಾನಿಕ ಕ್ರಮವಾಗಿದೆ. ಈ ಮೂಲಕ ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುವ ಪ್ರಯತ್ನ ಮಾಡಲಾಗಿದೆ. ಇದರ ಅನುಷ್ಠಾನದೊಂದಿಗೆ, ಮಹಿಳಾ ಸಬಲೀಕರಣವನ್ನು ನಿಜವಾದ ಅರ್ಥದಲ್ಲಿ ಖಚಿತಪಡಿಸಲಾಗುವುದು. ಈ ಮೂಲಕ ಹಲಾಲಾ, ಬಹುಪತ್ನಿತ್ವ, ಬಾಲ್ಯವಿವಾಹ, ತ್ರಿವಳಿ ತಲಾಖ್ ಮುಂತಾದ ಪಿಡುಗುಗಳನ್ನು ಸಂಪೂರ್ಣವಾಗಿ ನಿಲ್ಲಿಸಬಹುದು ಎಂದರು. ಸಂವಿಧಾನದ 342 ನೇ ವಿಧಿಯ ಅಡಿಯಲ್ಲಿ ಉಲ್ಲೇಖಿಸಲಾದ ನಮ್ಮ ಪರಿಶಿಷ್ಟ ಪಂಗಡಗಳನ್ನು ನಾವು ಈ ಸಂಹಿತೆಯಿಂದ ಹೊರಗಿಟ್ಟಿದ್ದೇವೆ, ಇದರಿಂದ ಆ ಬುಡಕಟ್ಟುಗಳು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬಹುದು. ಇಂದು ಈ ಸಂದರ್ಭದಲ್ಲಿ, ಏಕರೂಪ ನಾಗರಿಕ ಸಂಹಿತೆ ಯಾವುದೇ ಧರ್ಮ ಅಥವಾ ಪಂಥದ ವಿರುದ್ಧವಲ್ಲ, ಯಾರನ್ನೂ…

Read More

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜನವರಿ 27 ರಂದು ಅವಿಯೋಮ್ ಇಂಡಿಯಾ ಹೌಸಿಂಗ್ನ ನಿರ್ದೇಶಕರ ಮಂಡಳಿಯನ್ನು ಸೂಪರ್ ಸೀಡ್ ಮಾಡಿರುವುದಾಗಿ ತಿಳಿಸಿದೆ. ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ “ಆಡಳಿತದ ಕಾಳಜಿಗಳು ಮತ್ತು ವಿವಿಧ ಪಾವತಿ ಬಾಧ್ಯತೆಗಳನ್ನು ಪೂರೈಸುವಲ್ಲಿನ ಡೀಫಾಲ್ಟ್ ಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮಾಜಿ ಸಿಜಿಎಂ ರಾಮ್ ಕುಮಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ದಿವಾಳಿತನ ಮತ್ತು ದಿವಾಳಿತನ ಸಂಹಿತೆಯಡಿ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಿದೆ ಎಂದು ಆರ್ಬಿಐ ಹೇಳಿದೆ. “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, 1934 ರ ಸೆಕ್ಷನ್ 45-ಐಇ (1) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಮತ್ತು ರಾಷ್ಟ್ರೀಯ ಹೌಸಿಂಗ್ ಬ್ಯಾಂಕ್ (ಎನ್ಎಚ್ಬಿ) ಶಿಫಾರಸಿನ ಪ್ರಕಾರ, ಆಡಳಿತದ ಕಾಳಜಿಗಳು ಮತ್ತು ವಿವಿಧ ಪಾವತಿ ಬಾಧ್ಯತೆಗಳನ್ನು ಪೂರೈಸುವಲ್ಲಿ ವಿಫಲವಾದ ಕಾರಣ ರಿಸರ್ವ್ ಬ್ಯಾಂಕ್ ಇಂದು ಅವಿಯೋಮ್ ಇಂಡಿಯಾ ಹೌಸಿಂಗ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರ ಮಂಡಳಿಯನ್ನು ಸೂಪರ್ ಸೀಡ್ ಮಾಡಲಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿನ…

Read More

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಉದ್ದಿಮೆ ಪರವಾನಿಗೆಯ ನವೀಕರಣದ ಕುರಿತು ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಆ ಮೂಲಕ ಬಿಬಿಎಂಪಿಯಿಂದ ಉದ್ದಿಮೆದಾರರಿಗೆ ಪರವಾನಿಗೆ ನವೀಕರಣಕ್ಕೆ ಸೂಚನೆ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 2025-26 ನೇ ಸಾಲಿನ ಉದ್ದಿಮೆ ಪರವಾನಿಗೆ ನವೀಕರಣ ಕಾರ್ಯವನ್ನು ಈ ಕೆಳಕಂಡಂತೆ ಹಮ್ಮಿಕೊಳ್ಳಲು ಸೂಚಿಸಿದೆ. 1. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ (ಏಪ್ರಿಲ್ ನಿಂದ ಮಾರ್ಚ್) ನವೀಕರಣ ಮಾಡಲು ಸೂಚಿಸಿದೆ. 2. ನವೀಕರಣ ಶುಲ್ಕವನ್ನು ಉದ್ದಿಮೆದಾರರು ಕೋರುವ ಆರ್ಥಿಕ ವರ್ಷಕ್ಕೆ ಮಿತಿಗೊಳಿಸಿ ಪಾವತಿಸಿಕೊಳ್ಳಲು ಸೂಚಿಸಿದೆ. 3. ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್‌ಲೈನ್ ಮುಖಾಂತರ ಹಾಗೂ ಬ್ಯಾಂಕ್ ಚಲನ್ ಮೂಲಕ ಕೆನರಾ ಬ್ಯಾಂಕಿನಲ್ಲಿ ಪಾವತಿಸಿಕೊಳ್ಳಬೇಕಿರುತ್ತದೆ. 4. ದಿನಾಂಕ : 01-02-2025 ರಿಂದ 28-02-2025 ರವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ. 5. ದಿನಾಂಕ : 01-03-2025 ರಿಂದ 31-03-2025 ರವರೆಗೆ ಪರವಾನಿಗೆ ನವೀಕರಣ ಶುಲ್ಕದ ಶೇಕಡಾ 25%…

Read More