Author: kannadanewsnow09

ಬೆಂಗಳೂರು: “ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ಕಾಗಿ ಹೇಳಿದ್ದಾರೆ. ವಿಧಾ‌ನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, “ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು. ಆರ್ ಎಸ್ ಎಸ್ ನಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಹಣ ಹೂಡಿಕೆ “ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ…

Read More

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿಸಿದರು.

Read More

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಮೂಲಕ ಆಸ್ತಿ ನಷ್ಟ, ಶಾಂತಿಭಂಗವನ್ನು ಉಂಟು ಮಾಡಿದರೇ ಮೂರು ವರ್ಷ ಜೈಲು, 50,000 ವರೆಗೆ ದಂಡವನ್ನು ವಿಧಿಸಲಾಗುತ್ತದೆ. ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ ನಿರ್ದೇಶನ ಉಲ್ಲಂಘಿಸಿದರೆ ಒಂದು ತಿಂಗಳ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗುವುದು ಎಂದಿದ್ದಾರೆ. ಜೊತೆಗೆ ಸ್ವತ್ತಿಗೆ ಉಂಟಾದ ನಷ್ಟವನ್ನು ಆಯೋಜಕರು ಭರಿಸಬೇಕು. ಜೀವಹಾನಿ ಜವಾಬ್ದಾರಿಯನ್ನೂ ಹೊರಬೇಕು. 50 ಸಾವಿರ ಜನರಿಗಿಂತ ಹೆಚ್ಚಿದ್ದಾಗ ₹1 ಕೋಟಿ ಮೊತ್ತದ ನಷ್ಟ ಭರ್ತಿ ಬಾಂಡ್ ನೀಡಬೇಕು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1958818199824474324 https://kannadanewsnow.com/kannada/the-public-welcomes-the-sit-decision-but-the-bjp-is-creating-a-ruckus-cm-siddaramaiah/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/…

Read More

ಬೆಂಗಳೂರು: ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ) ತಿದ್ದುಪಡಿ 2025ರ ವಿಧೇಯಕವು ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದೆ. ಈ ವಿಧೇಯಕದನ್ವಯ ಕೈಗಾರಿಕೆ, ಗಣಿಗಾರಿಕೆ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಅಂತರ್ಜಲ ಬಳಕೆ ಮಾಡುವವರು, ಟ್ಯಾಂಕರ್ ನೀರು ಸರಬರಾಜು ಮಾಡುವವರು ಕಡ್ಡಾಯವಾಗಿ ನೀರಾಪೇಕ್ಷಣ ಪತ್ರ ಪಡೆಯಬೇಕು. https://twitter.com/KarnatakaVarthe/status/1958826506668658804 ಕುಡಿಯುವ ನೀರು, ಗೃಹಬಳಕೆಗೆ, ರೈತರ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸುವುದಕ್ಕೆ ಅನುಮತಿ ಪಡೆಯುವುದರಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಅಂತರ್ಜಲ ಸಂರಕ್ಷಿಸುವ ನಿಟ್ಟಿನಲ್ಲಿ, ಕಾನೂನು ಉಲ್ಲಂಘನೆಯಾದರೆ ಕಠಿಣ ಶಿಕ್ಷೆವಿಧಿಸುವ ಅವಕಾಶವನ್ನೂ ಈ ವಿಧೇಯಕದಲ್ಲಿ ಕಲ್ಪಿಸಲಾಗಿದೆ ಎಂಬುದಾಗಿ ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ. https://kannadanewsnow.com/kannada/be-careful-from-now-on-if-this-happens-in-the-state-its-a-fixed-3-years-of-jail-and-a-fine-of-50000/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/

Read More

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಮೂಲಕ ಆಸ್ತಿ ನಷ್ಟ, ಶಾಂತಿಭಂಗವನ್ನು ಉಂಟು ಮಾಡಿದರೇ ಮೂರು ವರ್ಷ ಜೈಲು, 50,000 ವರೆಗೆ ದಂಡವನ್ನು ವಿಧಿಸಲಾಗುತ್ತದೆ. ಈ ಬಗ್ಗೆ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಸುಳ್ಳು ಸುದ್ದಿ, ಆಸ್ತಿ ನಷ್ಟ, ಶಾಂತಿಭಂಗಕ್ಕೆ ಪ್ರಚೋದಿಸಿದರೆ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು, ₹50 ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಪೊಲೀಸರ ನಿರ್ದೇಶನ ಉಲ್ಲಂಘಿಸಿದರೆ ಒಂದು ತಿಂಗಳ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗುವುದು ಎಂದಿದ್ದಾರೆ. ಜೊತೆಗೆ ಸ್ವತ್ತಿಗೆ ಉಂಟಾದ ನಷ್ಟವನ್ನು ಆಯೋಜಕರು ಭರಿಸಬೇಕು. ಜೀವಹಾನಿ ಜವಾಬ್ದಾರಿಯನ್ನೂ ಹೊರಬೇಕು. 50 ಸಾವಿರ ಜನರಿಗಿಂತ ಹೆಚ್ಚಿದ್ದಾಗ ₹1 ಕೋಟಿ ಮೊತ್ತದ ನಷ್ಟ ಭರ್ತಿ ಬಾಂಡ್ ನೀಡಬೇಕು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1958818199824474324 https://kannadanewsnow.com/kannada/the-public-welcomes-the-sit-decision-but-the-bjp-is-creating-a-ruckus-cm-siddaramaiah/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರೇ ಎಸ್ಐಟಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೇ ಬಿಜೆಪಿಗರು ಮಾತ್ರ ಧರ್ಮಸ್ಥಳ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಧರ್ಮಸ್ಥಳದ ಹೆಗಡೆಯವರೇ ಎಸ್ಐಟಿ ನಿರ್ಧಾರ ಸ್ವಾಗತಿಸಿದ್ದಾರೆ. ಇವರು ಹಿಡ್ಕೊಂಡು ಅಲ್ಲಾಡಿಸುತ್ತಿದ್ದಾರೆ. ಎಸ್ಐಟಿ ರಚನೆ ಮಾಡಿದಾಗ ಬಿಜೆಪಿಯವರು ಮಾತಾಡೇ ಇರಲಿಲ್ಲ ಎಂದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ವೇಳೆ ಒಂದು ಕಡೆ ಅಸ್ಥಿಪಂಜರ, ಮೂಳೆ ಪತ್ತೆಯಾಯ್ತು. ಅದಾದ ಮೇಲೆ ಗುಂಡಿಗಳಲ್ಲಿ ಏನೂ ಸಿಗದಿದ್ದಾಗ ಇವರು ಶುರು ಮಾಡ್ತಾರೆ ಎಂಬುದಾಗಿ ಬಿಜೆಪಿಯ ಧರ್ಮಸ್ಥಳ ಚಳುವಳಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದರು. https://kannadanewsnow.com/kannada/an-8th-grade-student-injured-a-classmate-with-a-knife/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/

Read More

ಬಾಲಸಿನೋರ್: ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಶಾಲೆಯೊಂದರ ಹೊರಗೆ ನಡೆದ ವಿವಾದವೊಂದರಲ್ಲಿ 8 ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಇರಿದು ಗಾಯಗೊಳಿಸಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಅಹಮದಾಬಾದ್‌ನ ಖಾಸಗಿ ಶಾಲೆಯ ಹೊರಗೆ ಇದೇ ರೀತಿಯ ದಾಳಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಬಾಲಸಿನೋರ್ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯ ಗೇಟ್ ಬಳಿ ಗುರುವಾರ ಶಾಲಾ ಸಮಯದ ನಂತರ 8 ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯ ಮೇಲೆ ಹರಿತವಾದ ವಸ್ತುವನ್ನು ಬಳಸಿ ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಜಯದೀಪ್‌ಸಿನ್ಹ ಜಡೇಜಾ ಮಾತನಾಡಿ, “ಸಂತ್ರಸ್ತನ ತಂದೆ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಬಾಲಾಪರಾಧಿ ವಿರುದ್ಧ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಸಂತ್ರಸ್ತ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಮತ್ತು ಅವನ ಸ್ಥಿತಿ ಸ್ಥಿರವಾಗಿದೆ.” ಬಾಲಸಿನೋರ್ ಪೊಲೀಸರು ಶುಕ್ರವಾರ ಆರೋಪಿ ಹದಿಹರೆಯದವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 115…

Read More

ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025 ಕ್ಕೆ ಅನುಮೋದನೆ ಸಿಕ್ಕಿದೆ. ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇಂದು ಸಭಾಪತಿಗಳಿಗೆ ಕೊಟ್ಟ ಮಾತಿನಂತೆ ಸಚಿವ ಕೃಷ್ಣ ಬೈರೇಗೌಡ ಅವರು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ತಂಡದಲ್ಲಿ ಪರಿಷತ್ ಸದಸ್ಯರಿಗೂ ಸಹ ಸ್ಥಾನ ಕಲ್ಪಿಸುವ ತಿದ್ದುಪಡಿಯನ್ನು ತಂದಿದ್ದಾರೆ. ಇಂದು ಆ ತಿದ್ದುಪಡಿ ಪರಿಷತ್ನಲ್ಲಿ ಮಂಡಿಸಲ್ಪಟ್ಟು ಅಂಗೀಕಾರಗೊಂಡಿದೆ. https://kannadanewsnow.com/kannada/sri-lankas-ex-president-ranil-wickremesinghe-arrested/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/

Read More

ಶ್ರೀಲಂಕಾ:  ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧಿಸಲಾಗಿದೆ. ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ “ಸರ್ಕಾರಿ ನಿಧಿಯನ್ನು ದುರುಪಯೋಗಪಡಿಸಿಕೊಂಡ” ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಪತ್ತೇದಾರಿಯೊಬ್ಬರು AFP ಗೆ ತಿಳಿಸಿದ್ದಾರೆ. NDTV, ಎಕನಾಮಿಕ್ ಟೈಮ್ಸ್ ಮತ್ತು ಇತರ ಮೂಲಗಳ ವರದಿಗಳ ಪ್ರಕಾರ, ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಇಂದು ಲಂಡನ್‌ಗೆ ಖಾಸಗಿ ಭೇಟಿಯ ಸಮಯದಲ್ಲಿ ಖರ್ಚುಗಳನ್ನು ಭರಿಸಿದ್ದಕ್ಕಾಗಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ.

Read More

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಕಳುಹಿಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳವು ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bcci-invites-applications-for-changes-in-ajit-agarkar-led-indian-mens-selection-pane/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/

Read More