Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು. ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು…

Read More

ಬಳ್ಳಾರಿ : ನಮ್ಮ ಸಂವಿಧಾನ ಪ್ರತ್ಯೇಕವಾಗಿ “ಪತ್ರಿಕಾ ಸ್ವಾತಂತ್ರ್ಯ” ಕೊಟ್ಟಿಲ್ಲ. ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವಾಗಿದೆ. ಹೀಗಾಗಿ ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಪತ್ರಿಕಾ ದಿನವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ಮಾಧ್ಯಮಗಳ ನೆತ್ತಿ ಮೇಲೆ ತೂಗುತ್ತಿರುವ ಕತ್ತಿಯ ಬಗ್ಗೆಯೂ ನಾವು ಗಂಭೀರವಾಗಿ ಯೋಚಿಸಬೇಕಿದೆ. ಮಾಧ್ಯಮಗಳ ಅಸ್ತಿತ್ವ ಉಳಿದಿರುವುದೇ ಪತ್ರಿಕಾ ಸ್ವಾತಂತ್ರ್ಯದಿಂದ. ಈಗ ಪತ್ರಿಕಾ ಸ್ವಾತಂತ್ರ್ಯ ಬಹಳ ಅಪಾಯದಲ್ಲಿದೆ. 2024ರ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತ 181 ದೇಶಗಳ ಪೈಕಿ 151 ನೇ ಸ್ಥಾನದಲ್ಲಿದೆ ಎಂದು ನೆನ್ನೆಯೇ ಹೇಳಿದ್ದೆ. ಆದರೆ, ನಾವು ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ ಪತ್ರಿಕಾ ಸ್ವಾತಂತ್ರ್ಯದ ಕುಸಿತದ ಜೊತೆಗೇ ವಾಕ್ ಸ್ವಾತಂತ್ರ್ಯದ ಸೂಚ್ಯಂಕದಲ್ಲೂ ಭಾರತ 109ನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ…

Read More

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆ ಎರಡೂವರೆ ವರ್ಷ ಪೂರೈಸಿದೆ. ಇಂತಹ ಶಕ್ತಿ ಯೋಜನೆಯನ್ನು ಆರ್ಥಿಕ ಯೋಜನೆ ಸುಧಾರಣೆಯಾದ್ರೆ ಗಂಡಸರಿಗೂ ಸಾರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾವು ಗ್ಯಾರಂಟಿಗೆ ವಿರೋಧ ಮಾಡ್ತಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡಿದರೇ ಏನೇನೋ ಹೇಳ್ತಾರೆ. ಹಣ ಕಡಿಮೆ ಇದೆ ಎಂದು ಯಾರು ಹೇಳಿದರು? ಹೆಣ್ಣುಮಕ್ಕಳಿಗೆ 2 ಸಾವಿರ ಕೊಡ್ತೀರಿ. ನಮಗ್ಯಾಕೆ ಇಲ್ಲ ಅಂದ್ರು ಎಂದರು. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ನಾನು ತಮಾಷೆಯಾಗಿ ಮಾತನಾಡಿದೆ. ನಾನು ಹಣಕಾಸು ಮಂತ್ರಿಯಾದ್ರೆ ಹೆಚ್ಚಿನ ಗ್ಯಾರಂಟಿ ನೀಡುತ್ತೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/in-kalaburagi-a-murder-in-the-style-of-renukasaami-the-brutal-killing-of-raghavendra-nayak/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/

Read More

ಕಲಬುರ್ಗಿ: ಜಿಲ್ಲೆಯಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಡಿ ಬಾಸ್ ಅಂಡ್ ಗ್ಯಾಂಗ್ ಹತ್ಯೆ ಮಾಡಿದ ರೀತಿಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿಯಲ್ಲಿ ರೇಣುಕಾಸ್ವಾಮಿ ರೀತಿಯಲ್ಲೇ 39 ವರ್ಷದ ರಾಘವೇಂದ್ರ ನಾಯಕ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಾರ್ಚ್ 12ರಂದು ನಡೆದಿದ್ದಂತ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಶ್ವಿನಿ ಎಂಬಾಕೆಗೆ ರಾಘವೇಂದ್ರ ಎಂಬಾತ ಕಿರುಕುಳ ನೀಡುತ್ತಿದ್ದನು. ರಾಘವೇಂದ್ರ ಕಿರುಕುಳ ನೀಡುತ್ತಿರುವ ಬಗ್ಗೆ ಪ್ರಿಯಕರ ಗುರುರಾಜ್ ಗೆ ಅಶ್ವಿನಿ ತಿಳಿಸಿದ್ದರು. ಹೀಗಾಗಿ ರಾಘವೇಂದ್ರನನ್ನು ಗುರುರಾಜ್ ಮತ್ತು ಗ್ಯಾಂಗ್ ಕಿಡ್ನಾಪ್ ಮಾಡಿದೆ. ರಾಘವೇಂದ್ರನನ್ನು ಕಿಡ್ನಪ್ ಮಾಡಿಕೊಂಡು ಸ್ಮಶಾನಕ್ಕೆ ಕರೆದೊಯ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ರಾಘವೇಂದ್ರ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಕಲಬುರ್ಗಿಯಲ್ಲಿ ರೇಣುಕಾಸ್ವಾಮಿ ಮಾದರಿಯಲ್ಲೇ ಬರ್ಬರವಾಗಿ ವ್ಯಕ್ತಿಯನ್ನು ಹತ್ಯೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. https://kannadanewsnow.com/kannada/breaking-icc-ceo/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/

Read More

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಜು.8ರಂದು ಬೆಳಿಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ ಇರುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬೇಕೆನ್ನುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್ ರೋಲ್ ನಂಬರ್ ದಾಖಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಅನ್ನು ಎನ್ ಟಿಎ ಡಾಟಾದೊಂದಿಗೆ ತಾಳೆ ಮಾಡಿ ಯುಜಿನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೆರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು. ಜುಲೈ 7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಟ್ ಪರೀಕ್ಷೆ ಯಲ್ಲಿ ಅರ್ಹತೆ ಪಡೆದಿರುವವರು ಹಾಗೂ ಇದುವರೆಗೂ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದಿರುವುದು ಅಲ್ಲದೇ, ಗಣೇಶ ಮೂರ್ತಿಗೆ ಒದ್ದು ಅವಮಾನವನ್ನು ದುರುಳ ಮಾಡಿದ್ದಾನೆ. ನಾಗರ ವಿಗ್ರವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-ias-ips-aspirants-upsc-invites-applications-for-free-training/ https://kannadanewsnow.com/kannada/invitation-to-apply-for-professional-training/

Read More

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಪ್ರತಿಭಾನ್ವಿತ ಯುವತಿಯರಿಗಾಗಿ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ ನಡೆಸುತ್ತಿರುವ ರಾಹ್ ಅಕಾಡೆಮಿ ‘ರಾಹ್ ಸೂಪರ್‌ 30’, 2025-26ನೇ ಶೈಕ್ಷಣಿಕ ಸಾಲಿಗೆ ಅರ್ಹ ಮಹಿಳಾ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ವರ್ಷ ಕನಕಪುರ ರಸ್ತೆಯ ಮ್ಯಾಂಗೋ ಗಾರ್ಡನ್ ಲೇಔಟ್‌ನಲ್ಲಿ ಪ್ರಾರಂಭವಾದ ‘ರಾಹ್ ಸೂಪರ್‌ 30’ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ, ಅರ್ಹ ಮಹಿಳಾ ಪದವೀಧರರಿಗೆ ಯುಪಿಎಸ್‌ಸಿ (ಪೂರ್ವಭಾವಿ ಮತ್ತು ಮುಖ್ಯ) ಪರೀಕ್ಷೆಗೆ ತರಬೇತಿ, ಪರಿಣಿತರ ಮಾರ್ಗದರ್ಶನ, ಗ್ರಂಥಾಲಯ ಸೇರಿದಂತೆ ವಸತಿ ಸಹಿತ ಅಧ್ಯಯನಕ್ಕೆ ಅಗತ್ಯ ಸೌಕರ್ಯಗಳನ್ನು ಉಚಿತವಾಗಿ ಒದಗಿಸುತ್ತಿದೆ. ಮೊದಲ ಬ್ಯಾಚ್‌ನ ವಿದ್ಯಾರ್ಥಿನಿ ಡಾ. ಅಲ್ಮಾಸ್ ಫಾತಿಮಾ ಅವರು ನಾಗರಿಕ ಸೇವೆಗಳ ಇತ್ತೀಚಿನ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಮುಖ್ಯ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ. ಅಲ್ಲದೆ, ತೆಲಂಗಾಣ ರಾಜ್ಯ ಸೇವೆಗಳ ಪರೀಕ್ಷೆಯಲ್ಲಿ 99ನೇ ರ‍್ಯಾಂಕ್ ಗಳಿಸಿದ್ದಾರೆ ಮತ್ತು ತೆಲಂಗಾಣ ಪೊಲೀಸ್ ಸೇವೆಗಳಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಹುದ್ದೆಯನ್ನು ಪಡೆದಿದ್ದಾರೆ. ಇದು…

Read More

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್‍ ಪದವೀಧರರಿಗೆ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅಭ್ಯರ್ಥಿಯು ಇಂಜಿನಿಯರಿಂಗ್‍ ಪದವೀಧರರಾಗಿರಬೇಕು. ಆಸಕ್ತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್ -1), ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು -560 064 ಇಲ್ಲಿಗೆ ಜುಲೈ 04ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-28461351 ಅಥವಾ ಇ-ಮೇಲ್ tswdblr.north@gmail.com ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನೆರೆವೇರಿಸಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕ ಕೆ.ಎಂ.ಉದಯ್ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1200 ರೂ. ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು. ಸಾಧನ ಸಮಾವೇಶವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಶೀಘ್ರವಾಗಿ ಕಾರ್ಯಕ್ರಮದ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದು…

Read More

ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೂಲಸೌಕರ್ಯಗಳು, ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿಮರ್ಶೆ ನಡೆಸಿದರು. ಮಾಧ್ಯಮ ಮತ್ತು ರೈಲ್ವೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ನಾಲ್ಕು ರಿಂದ ಐದು ವರ್ಷಗಳಲ್ಲಿ ದೇಶಾದ್ಯಂತ ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ಮುಚ್ಚಲಾಗುವುದು, ಇದರ ಮೂಲಕ ರೈಲು ಸಂಚಾರದ ಸುರಕ್ಷತೆ ಹಾಗೂ ಕಾರ್ಯದಕ್ಷತೆ ಹೆಚ್ಚಾಗಲಿದೆ ಎಂದು ಹೇಳಿದರು. ಅವರು ಭಾರತೀಯ ರೈಲ್ವೆಗೂ ಸೇನೆಯಷ್ಟೇ ಮಹತ್ವವಿದೆ ಎಂಬುದನ್ನು ಉಲ್ಲೇಖಿಸಿ, ದೇಶದ ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯಲ್ಲಿ ರೈಲ್ವೆಯ ಪಾತ್ರ ಅಪಾರವಾಗಿದೆ ಎಂದರು. ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ಬೀರೂರು ರೈಲ್ವೆ ನಿಲ್ದಾಣದ ಬಳಿ ರಸ್ತೆ ಕಳಸೇತುವೆ (ರೋಡ್ ಅಂಡರ್ ಬ್ರಿಡ್ಜ್) ನಿರ್ಮಾಣಕ್ಕೆ ಅನುಮೋದನೆ ನೀಡಿದರು, ಇದು ವಾಹನ ಸಂಚಾರದ ದಟ್ಟಣೆಯನ್ನು ಕಡಿಮೆಮಾಡಿ ಸುರಕ್ಷತೆಯನ್ನು…

Read More