Author: kannadanewsnow09

ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಡೆಮು ರೈಲುಗಳು ಮೆಮು ರೈಲುಗಳಾಗಿ ಪರಿವರ್ತನೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06511/06512 ಬಾಣಸವಾಡಿ-ತುಮಕೂರು-ಬಾಣಸವಾಡಿ ಕಾಯ್ದಿರಿಸದ ಡೆಮು ಎಕ್ಸ್ಪ್ರೆಸ್ ವಿಶೇಷ ಮತ್ತು ರೈಲು ಸಂಖ್ಯೆ 06513/06514 ತುಮಕೂರು-ಶಿವಮೊಗ್ಗ ಟೌನ್ ಕಾಯ್ದಿರಿಸದ ಡೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳನ್ನು ಮೆಮು (ಮೇನ್ ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಈ ಪರಿವರ್ತನೆಯು ಜನವರಿ 15, 2024 ರಿಂದ ಜಾರಿಗೆ ಬರಲಿದೆ ಮತ್ತು ಈ ರೈಲುಗಳು ಮೆಮು ವಿಶೇಷ ಎಕ್ಸ್ ಪ್ರೆಸ್ ಎಂದು ಕಾರ್ಯನಿರ್ವಹಿ ಸಲಿವೆ ಎಂದಿದೆ. ಈ ಮೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಪರಿಷ್ಕೃತ ಸಂಯೋಜನೆಯು 6 ಟ್ರೈಲರ್ ಕಾರುಗಳು (ಟಿಸಿ) ಮತ್ತು 2 ಮೋಟಾರು ಕಾರುಗಳು (ಎಂಸಿ) ಅನ್ನು ಒಳಗೊಂಡಿರುತ್ತದೆ, ಒಟ್ಟು 8 ಮೆಮು ಕಾರುಗಳು ಹೊಂದಿರುತ್ತವೆ. ರೈಲುಗಳ ಸೇವೆಯಲ್ಲಿ ಬದಲಾವಣೆ ಯಲವಿಗಿ, ಸವಣೂರು…

Read More

ಬೆಂಗಳೂರು: ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾಡುಗೊಲ್ಲ ನಿಗಮಕ್ಕೆ 20 ಕೋಟಿ ಹಣ ನೀಡಲಾಗಿದ್ದು, ಆ ಹಣವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಉಪಯೋಗಪಡಿಸಿಕೊಳ್ಳುವಂತೆ ಕರೆನೀಡಿದ್ದಾರೆ. ಕಾಡುಗೊಲ್ಲ ನಿಗಮದಡಿ ದೊರೆಯುವ ಸವಲತ್ತುಗಳನ್ನು ಬಳಸಿಕೊಳ್ಳುವ ಸಂಬಂಧ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರ ಜೊತೆ ಟಿ.ಬಿ.ಜಯಚಂದ್ರ ಅವರು ವಿಧಾನಸೌಧದಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರು ಸದ್ಯಕ್ಕೆ ಕಾಡುಗೊಲ್ಲ ನಿಗಮದಲ್ಲಿ 20 ಕೋಟಿ ಹಣವಿದ್ದು ಮೇಕೆ ಕುರಿ ಸಾಕಾಣಿಕೆ ಸೇರಿದಂತೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವವರಿಗೆ, ಕೊಳವೆ ಬಾವಿ ಹಾಕಿಸಲು ಹಾಗೂ ಶೈಕ್ಷಣಿಕ ಸಾಲ ನೀಡಲು ಹಣವನ್ನ ನೀಡಲಾಗುವುದು‌. ಮುಂದಿನ ತಿಂಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ರಾಜ್ಯದ ಎಲ್ಲಾ ಗ್ರಾಮ…

Read More

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವಂತ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇ ಯಶವಂತಪುರ-ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಮಾಡಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ ಯಶವಂತಪುರ ಮತ್ತು ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06235/06236 ಯಶವಂತಪುರ-ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಒಂದು ಟ್ರಿಪ್ ಸಂಚರಿಸಲಿದೆ. ರೈಲು ಸಂಖ್ಯೆ 06235 ಯಶವಂತಪುರ-ಕೊಚುವೇಲಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 13, 2024 ರಂದು ರಾತ್ರಿ 11.55 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07.10 ಕ್ಕೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ. ರೈಲು ಸಂಖ್ಯೆ 06236 ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 14,…

Read More

ಬೆಂಗಳೂರು: ರಾಜ್ಯದಲ್ಲಿ ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ’ ಎಂದರು. ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ…

Read More

ಗದಗ: ಜಿಲ್ಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ ಹುಟ್ಟುಹಬ್ಬದ ಶುಭ ಕೋರಿ ಬ್ಯಾನರ್ ಕಟ್ಟುವಾಗಿ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ತಲಾ 2 ಲಕ್ಷ ಪರಿಹಾರದ ಚೆಕ್ ಅನ್ನು ಇಂದು ವಿತರಣೆ ಮಾಡಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಟ ಯಶ್ ಗೆ ಹುಟ್ಟುಹಬ್ಬದ ಶುಭ ಕೋರಿ ಬ್ಯಾನರ್ ಕಟ್ಟುವಾಗಿ ವಿದ್ಯುತ್ ಸ್ಪರ್ಶಿಸಿ ಮುರಳಿ, ನವೀನ್, ಹನುಮಂತು ಸಾವನ್ನಪ್ಪಿದ್ದರು. ಇಂತಹ ಮೃತರಿಗೆ ಸಿಎಂ ಸಿದ್ಧರಾಮಯ್ಯ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಇಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಅವರು ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು. ಘಟನೇ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು…

Read More

ಬೆಂಗಳೂರು: ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 162 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 6396 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಲ್ಲಿ 50, ಬೆಂಗಳೂರು ಗ್ರಾಮಾಂತರ 08, ಹಾಸನ 10, ಮಂಡ್ಯ 8, ಮೈಸೂರು 27 ಸೇರಿದಂತೆ 163 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 162 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 994 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. https://kannadanewsnow.com/kannada/our-government-has-set-an-example-for-the-entire-country-deputy-cm-dk-shivakumar-shivakumar/ https://kannadanewsnow.com/kannada/pm-modi-inaugurate-mumbai-trans-harbour-link/

Read More

ಬೆಂಗಳೂರು: ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದಿದ್ದರು. ಆದ್ರೇ ಅದನ್ನು ಮರು ಪಾವತಿಸಿರಲಿಲ್ಲ. ಈ ಸಂಬಂಧ ಅಪೆಕ್ಸ್ ಬ್ಯಾಂಕ್ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬ್ಯಾಂಕ್ ನ ಪರವಾಗಿ ಸಾಲಕ್ಕೆ ಗ್ಯಾರಂಟರ್ ಆಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿ ಎಲ್ ಸಿ ಎಲ್ ಟಿ ಯಲ್ಲಿ ವಾಚರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಈ ಕ್ರಿಮಿನಲ್ ಪ್ರಕರಣ ರದ್ದುಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. https://kannadanewsnow.com/kannada/basavaraj-bommai-demands-formation-of-special-team-to-probe-haveri-moral-policing/ https://kannadanewsnow.com/kannada/our-government-has-set-an-example-for-the-entire-country-deputy-cm-dk-shivakumar-shivakumar/

Read More

ಶಿವಮೊಗ್ಗ: ನಾನು ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಇಂದು ಆ ಐದು ಗ್ಯಾರಂಟಿಗಳನ್ನೂ ಸಮರ್ಪಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ಕುವೆಂಪು ಅವರ ಈ ಪವಿತ್ರವಾದ ಭೂಮಿಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿರುವುದು ನಮ್ಮ ಭಾಗ್ಯ. ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಈ ಯೋಜನೆಗಳನ್ನು ನಿಮ್ಮ ಜೇಬು ತುಂಬಿಸಲು ಮಾತ್ರವಲ್ಲ ನಿಮಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ, ಕುಟುಂಬದ ಆತ್ಮವಿಶ್ವಾಸ ಹೆಚ್ಚಿಸಲು, ಮಾನಸಿಕವಾಗಿ ಧೈರ್ಯ ತುಂಬಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಜಾರಿಗೆ ತಂದಿದ್ದೇವೆ ಎಂದರು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಆತ ಕೊಟ್ಟಿರುವ ಅವಕಾಶದಲ್ಲಿ…

Read More

ಬೆಂಗಳೂರು: ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಯಾವುದೇ ಮಾತನಾಡುತ್ತಿಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಲ್ಪ ಸಂಖ್ಯಾತ ಮಹಿಳೆ ಅವಳಿಗೂ ರಕ್ಷಣೆ ನೀಡದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ ಪೊಲಿಸರು ಅದನ್ನು ತಳ್ಳಿ ಹಾಕುವ ಪ್ರಯತ್ನ ‌ನಡೆಸಿದರು. ಆರೋಪಿಗಳಿಗೆ ಜಾಮೀನು ಸಿಗುವಂತ ಪ್ರಕರಣ ದಾಖಲಿಸಿದರು. ಯುವತಿ ದೈರ್ಯವಾಗಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ. ಇದರಿಂದ ಪ್ರಕರಣ ಗಂಭೀರವಾಗಿದೆ. ಮತ್ತೊಂದು ಬಾರಿ ಯುವತಿಯ ಮೆಡಿಕೆಲ್ ಟೆಸ್ಟ್ ಆಗಬೇಕು. ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ಚಾಂಪಿಯನ್. ಇಲ್ಲಿ ಅಲ್ಪ ಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿದೆ. ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅದರಲ್ಲೂ ಈ ಯುವನಿಧಿ ಯೋಜನೆಯೂ ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿದೆ. ಇದು ರಾಜ್ಯದ ಜನತೆಗೆ ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಇದರ ಉಪಯೋಗವನ್ನು ರಾಜ್ಯದ ಯುವ ಸಮುದಾಯ…

Read More