Author: kannadanewsnow09

ಬೆಂಗಳೂರು: ಅಕ್ಟೋಬರ್.9ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಈ ಕುರಿತು ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಅಕ್ಟೋಬರ್ 9ರವರೆಗೆ ಕಾರವಾಳಿಯ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಅಕ್ಟೋಬರ್ 4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳಊರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/yellow-board-taxi-auto-drivers-in-the-state-applications-invited-for-vidyanidhi-scheme/ https://kannadanewsnow.com/kannada/fir-filed-against-union-minister-hd-kumaraswamy/

Read More

ಬೆಂಗಳೂರು: ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು http://shp.karnataka.gov.in/bcwd ವೆಬ್‍ಸೈಟ್ ಮೂಲಕ ಅಕ್ಟೋಬರ್ 30, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ಅವರ ವಿರುದ್ಧ ಉದ್ಯಮಿಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಗೆ ತೇರಳಿದ್ದಂತ ಉದ್ಯಮಿ ವಿಜಯ್ ತಾತ ಎಂಬುವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. https://kannadanewsnow.com/kannada/officials-should-respond-to-peoples-aspirations-minister-madhu-s-bangarappa/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/

Read More

ಶಿವಮೊಗ್ಗ : ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಮಾನ ದೃಷ್ಟಿಕೋನದಿಂದ ಗಮನಿಸುವುದಾಗಿ ತಿಳಿಸಿದ ಅವರು ತಾಳಗುಪ್ಪ ಹಾಗೂ ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ಬದ್ದವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಸ್ತಾನಗೊಳಿಸುತ್ತಿದೆ ಎಂದರು. ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯ ನೀಡುವ ಸಂದರ್ಭಗಳಿದ್ದಲ್ಲಿ ಜನಪ್ರತಿನಿದಿಗಳ ಸೂಚನೆಗಾಗಿ ಕಾಯದೆ ಸೌಲಭ್ಯ ಗಳನ್ನು ವಿತರಿಸಿವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಇನ್ನಷ್ಟು ವೇಗ ಹೆಚ್ಚಿಸುವಂತೆ ಅವರು ಸೂಚಿಸಿದರು. 94ಸಿ…

Read More

ಹಾವೇರಿ: ಚಲಿಸುತ್ತಿದ್ದಂತ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಕಾರಣ, ಭಾರೀ ಅನಾಹುತವೇ ಆಗಬೇಕಿದ್ದದ್ದು ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿರುವಂತ ಘಟನೆ ಹಾವೇರಿಯ ನಾಗನೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ನಾಗನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾರಿಗೆ ಬಸ್ಸಿನ ಎರಡು ಚಕ್ರಗಳು ದಿಢೀರ್ ಕಳಚಿ ಬಿದ್ದಿದ್ದಾವೆ. ಈ ಪರಿಣಾಮ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಕೂಡಲೇ ಸಮಯ ಪ್ರಜ್ಞೆಯನ್ನು ಮೆರೆದಂತ ಚಾಲಕ ಬಸ್ ನಿಲ್ಲಿಸಿ, ಮುಂದಾಗಲಿದ್ದಂತ ಭಾರೀ ಅನಾಹುತವನ್ನೇ ತಪ್ಪಿಸಿದ್ದಾರೆ. ಅಂದಹಾಗೇ ಹುಬ್ಬಳ್ಳಿ ಕಡೆಯಿಂದ ಹಾವೇರಿಗೆ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆಯಲ್ಲಿ ನಾಗನೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾರಿಗೆ ಬಸ್ಸಿನ 2 ಚಕ್ರಗಳು ಕಳಚಿ ಬಿದ್ದಿದ್ದವು. ಇದರಲ್ಲಿ 40 ಪ್ರಯಾಣಿಕರಿದ್ದರು. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಈ ಸಂಬಂಧ ಹಾವೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/fir-filed-against-union-minister-hd-kumaraswamy/ https://kannadanewsnow.com/kannada/breaking-jailed-actor-darshan-has-swelling-in-the-back-of-his-back-doctors-instruct-him-to-undergo-a-scan/

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಅಮೃತಹಳ್ಳಿ ಠಾಣೆಯಲ್ಲಿ ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತ ಅವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಸ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ.? ಆಗಸ್ಟ್.24, 2024ರಂದು ರಾತ್ರಿ ನನ್ನ ಮನೆಗೆ ರಮೇಶ್ ಗೌಡ ಆಗಮಿಸಿದ್ರು. ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ರು. ಊಟ ಕೂಡ ಮಾಡಿದ್ರು. ಈ ವೇಳೆ ಹೆಚ್.ಡಿ ಕುಮಾರಸ್ವಾಮಿಗೆ ಕರೆ ಮಾಡಿ, ತಾನು ವಿಜಯ್ ತಾತ ಮನೆಯಲ್ಲಿ ಇರುವ ಬಗ್ಗೆ ತಿಳಿಸಿ ನನಗೆ ಪೋನ್ ಕೊಟ್ಟರು. ಅವರು ಕುಶಲೋಪರಿ ವಿಚಾರಿಸಿ, ಆ ಬಳಿಕ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಬಗ್ಗೆ ಮಾತನಾಡಿದರು.…

Read More

ಹರಿಯಾಣ: ಜನವರಿಯಲ್ಲಿ ಬಿಜೆಪಿಗೆ ಸೇರಿದ್ದ ಮಾಜಿ ಲೋಕಸಭಾ ಸಂಸದ ಅಶೋಕ್ ತನ್ವರ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ‘ಕಮಲ’ ಚಿಹ್ನೆಯ ಮೇಲೆ ಸ್ಪರ್ಧಿಸಿ ವಿಫಲರಾಗಿದ್ದರು. ಹರಿಯಾಣದ ಮಹೇಂದ್ರಗಢದಲ್ಲಿ ಇಂದು ನಡೆದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರ್ಯಾಲಿಯಲ್ಲಿ ತನ್ವರ್ ಮತ್ತೆ ಕಾಂಗ್ರೆಸ್ಗೆ ಸೇರಿದರು. ಸಿರ್ಸಾದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ತನ್ವರ್ ಅವರು ಪಕ್ಷವನ್ನು ತೊರೆದಾಗ 2014 ರಿಂದ 2019 ರವರೆಗೆ ಹರಿಯಾಣ ಕಾಂಗ್ರೆಸ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. 2021 ರಲ್ಲಿ, ಅವರು ತೃಣಮೂಲ ಕಾಂಗ್ರೆಸ್ಗೆ ಸೇರಿದರು ಮತ್ತು ಮುಂದಿನ ವರ್ಷ ಎಎಪಿಗೆ ಸೇರಿದರು. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರವನ್ನು ವಿರೋಧಿಸಿ ತನ್ವರ್ ಅವರು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಎಎಪಿಯನ್ನು ತೊರೆದರು. ಎಎಪಿಯಿಂದ ಹೊರಬಂದ ನಂತರ, ಅವರು ಬಿಜೆಪಿಗೆ ಸೇರಿದರು ಮತ್ತು ಶಿರಾದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದರು ಆದರೆ ಕಾಂಗ್ರೆಸ್ನ ಕುಮಾರಿ ಸೆಲ್ಜಾ ವಿರುದ್ಧ ಸೋತರು. “ಕಾಂಗ್ರೆಸ್ ಯಾವಾಗಲೂ ಸಮಾಜದ ತುಳಿತಕ್ಕೊಳಗಾದ ಮತ್ತು ವಂಚಿತ ವರ್ಗಗಳ ಪರವಾಗಿ…

Read More

ಬೆಂಗಳೂರು: ದಿನೇಶ್ ಗುಂಡೂರಾವ್ ಅವರು ಯಾವುದನ್ನು ಪ್ರಮೋಟ್ ಮಾಡಲು ಹೊರಟಿದ್ದಾರೆ? ಯಾವುದಾದರೂ ಹೊಸ ದಂಧೆ ಶುರು ಮಾಡಿದ್ದಾರಾ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬ್ರಾಹ್ಮಣರಾದ ವೀರ ಸಾವರ್ಕರ್ ಅವರು ದನದ ಮಾಂಸ ತಿನ್ನುತ್ತಿದ್ದರು ಎಂಬ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ತಮ್ಮ ದಂಧೆಗೆ ಬೆಂಬಲ ಸಿಗಲೆಂದು ಆ ರೀತಿ ಮಾತನಾಡುತ್ತಿದ್ದಾರಾ? ಎಂದು ಪ್ರಶ್ನಿಸಿದರು. ಅವರು ಗೋಹತ್ಯೆಯನ್ನು ಬೆಂಬಲಿಸಿ ಮಾತನಾಡಿದ್ದಾರಾ? ಅಥವಾ ಗೋಮಾಂಸ ತಿನ್ನುವುದನ್ನು ಸಮರ್ಥಿಸಿ ಮಾತನಾಡಿದ್ದಾರಾ ಎಂದು ಕೇಳಿದರು. ಮೂಲಭೂತವಾದ ಮತ್ತು ರಾಷ್ಟ್ರವಾದದ ನಡುವೆ ಅಗಾಧ ಅಂತರವಿದೆ. ಮೂಲಭೂತವಾದವು ದೇಶ ಒಡೆದು ಅಖಂಡ ಭಾರತದ ವಿಭಜನೆಗೆ ಕಾರಣವಾಯಿತು. ಪಾಕಿಸ್ತಾನ ನಿರ್ಮಾಣ, ಲಕ್ಷಾಂತರ ಜನರ ಮಾರಣಹೋಮಕ್ಕೆ ಕಾರಣವಾಗಿತ್ತು. ರಾಷ್ಟ್ರವಾದವು ದೇಶಭಕ್ತಿಯಿಂದ ಕೂಡಿದೆ. ಅದರಿಂದ ದೇಶ ಉಳಿಸಬಹುದು. ಮೂಲಭೂತವಾದದಿಂದ ಪಾಕಿಸ್ತಾನ ನಿರ್ಮಾಣವಾಗುತ್ತದೆ. ದಿನೇಶ್ ಗುಂಡೂರಾವ್ ಮತ್ತವರ ಪಕ್ಷವು ಯಾವುದನ್ನು ಸಮರ್ಥಿಸುತ್ತದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮೂಲಭೂತವಾದ…

Read More

ಬೆಂಗಳೂರು: ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ. ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು. ಈಗ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕಾತಿ ಸಂಬಂಧ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನದ ಪೀಠಾಧಿಕಾರಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 7 ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ: CMW:69:CLM: 2001, ದಿನಾಂಕ: 21/11/2001 ರಲ್ಲಿ ಪುದತ್ತವಾದ ಅಧಿಕಾರ ಚಲಾಯಿಸಿ, ಎಂ.ಡಿ. ಮಠಪತಿ, ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು, ಗುಲಬರ್ಗಾ ಪ್ರಾಂತ್, ರಾಯಚೂರು ಇವರು ಬೀದರ್ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ನಿ) ಬೀದರ್ ಇದನ್ನು ನೋಂದಣಿ ಮಾಡಿದ್ದು, ನೋಂದಣಿ ಸಂಖ್ಯೆ: ಸಂನಿರಾ:ವಿ-1:ಎಓಟಿ:346991/2007-08, ದಿನಾಂಕ: 16.01.2008 ರಂದು ಸಂಘಕ್ಕೆ ದಾಖಲು ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಅವುಗಳ ಅಧೀನದಲ್ಲಿ ಬರುವ ನಿಗಮ/ಮಂಡಳಿಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ಒದಗಿಸುತ್ತಿರುವ…

Read More