Author: kannadanewsnow09

ಬಳ್ಳಾರಿ : ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಯೋಜನೆ) ಹಾಗೂ ನಿರಾಶ್ರಿತರಿಗೆ ಆಶ್ರಯ ಕೇಂದ್ರದ ಸೌಲಭ್ಯ (Night Shelter) ಈ ಎರಡು ಯೋಜನೆಯಲ್ಲಿ ಅತ್ಯುತ್ತಮ ಗುರಿ ಸಾಧನೆಗೆ ಬಳ್ಳಾರಿ ಮಹಾನಗರ ಪಾಲಿಕೆಗೆ 2 ರಾಜ್ಯ ಪ್ರಶಸ್ತಿಗಳು ಲಭಿಸಿವೆ. ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಯೋಜನೆಯಡಿ ಸಮರ್ಪಕ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದ ಬಳ್ಳಾರಿ ಮಹಾನಗರ ಪಾಲಿಕೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅದೇರೀತಿಯಾಗಿ ಡೇ ನಲ್ಮ್ ಯೋಜನೆಯಡಿ ನಿರಾಶ್ರಿತರ ಕೇಂದ್ರದ ಉತ್ತಮ ನಿರ್ವಹಣೆಗಾಗಿ ಬಳ್ಳಾರಿ ಮಹಾನಗರ ಪಾಲಿಕೆಗೆ ಇನ್ನೊಂದು ಪ್ರಶಸ್ತಿಯನ್ನು ನೀಡಲಾಯಿತು. ಎರಡು ಪ್ರಶಸ್ತಿಗಳನ್ನು ಕೌಶಲ್ಯಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ನಲ್ಮ್ ಅಭಿಯಾನ ನಿರ್ದೇಶಕರಾದ…

Read More

ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯಿಂದ ಮಂಜೂರಾದ 119 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್‍ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/applications-invited-for-skill-development-training/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆÉ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಯುವಕ, ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷಗಳ ಸಹಾಯಧನವನ್ನು ಪಡೆಯಬಹುದು. ಅರ್ಜಿಗಳನ್ನು ಆಫ್‍ಲೈನ್ ಮೂಲಕ ಮಾ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿಗೆ ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಗ್ಲಾಸ್‍ಹೌಸ್ ಹತ್ತಿರ ದೂ.ಸಂ.08192-233309 ಗೆ ಸಂರ್ಪಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಹಾವೀರ್ ತಿಳಿಸಿದ್ದಾರೆ. https://kannadanewsnow.com/kannada/davanagere-district-child-labour-planning-society-invites-nominations/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More

ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ. ಇಬ್ಬರು ಸಮಾಜ ಸೇವಕರು, ತಲಾ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಬ್ಬರು ಮಹಿಳಾ ಪ್ರತಿನಿಧಿಗಳು ಒಬ್ಬರು ಅಲ್ಪಸಂಖ್ಯಾತರ ಪ್ರತಿನಿಧಿಗಳನ್ನು ಗುರುತಿಸಿ ನಾಮನಿರ್ದೇಶನ ಮಾಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಮಾ. 19 ಕ್ಕೆ ಸಂಜೆ 5.30 ಗಂಟೆಯೊಳಗೆ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬಿಎಸ್‍ಎನ್‍ಎಲ್ ಕಟ್ಟಡ, ದೇವರಾಜ ಅರಸ್ ಬಡಾವಣೆ, ಹರಿಹರ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಸಹಾಯಕ ಕಾರ್ಮಿಕ ಆಯುಕ್ತರಾದ ಇಬ್ರಾಹಿಂ ತಿಳಿಸಿದ್ದಾರೆ. https://kannadanewsnow.com/kannada/names-of-more-congress-candidates-to-be-finalised-after-screening-committee-meeting-dk-shivakumar/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More

ಬೆಂಗಳೂರು : “ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನ ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು. 17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದೀರಿ ಎಂದು ಕೇಳಿದಾಗ, “ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು…

Read More

ಮಂಡ್ಯ: ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ ಅಂದರೆ ಸ್ಟಾರ್ ಚಂದ್ರು ಎಂಬುವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಗಾದ್ರೇ ಸ್ಟಾರ್ ಚಂದ್ರು ಎಂದೇ ಕರೆಯಲ್ಪಡುವ ವೆಂಕಟರಮಣೇಗೌಡ ಬಗ್ಗೆ ಇಲ್ಲಿದೆ ಪರಿಚಯ.  ಜನಸಮೂಹದಲ್ಲಿ ’ಸ್ಟಾರ್ ಚಂದ್ರು’ ಎಂದೇ ಜನಪ್ರಿಯರಾಗಿರುವ ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ಸಾಮಾನ್ಯ ರೈತಕುಟುಂಬದಲ್ಲಿ ಜನಿಸಿ ಸ್ವಂತ ದುಡಿಮೆಯಿಂದ ಉದ್ಯಮಿಯಾಗಿ ಬೆಳೆದ ಕ್ರಿಯಾಶೀಲ ಸಾಹಸಿ. ಹಳ್ಳಿಗಾಡಿನಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡು ಸಾವಿರಾರು ಜನರಿಗೆ ಉದ್ಯೋಗಕಲ್ಪಿಸಿದ ಅವರ ಬದುಕು ಆಧುನಿಕ ಕಾಲದ ಉದ್ಯಮಿಗಳ ಯಶಸ್ಸಿನ ಕತೆ. ಉದ್ಯೋಗ ನಿಮಿತ್ತ ರಾಜಧಾನಿಗೆ ಬಂದರೂ ತಮ್ಮ ಹುಟ್ಟಿದೂರಿನ ’ಕಳ್ಳುಬಳ್ಳಿ’ ಸಂಬಂಧವನ್ನು ಉಳಿಸಿಕೊಂಡಿರುವ ಅಪರೂಪದ ವ್ಯಕ್ತಿ. ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಜನಿಸಿದ್ದು ದಿನಾಂಕ 24-06-1965ರಂದು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು, ಬೆಳ್ಳೂರು ಹೋಬಳಿಗೆ ಸೇರಿದ ಕನ್ನಾಘಟ್ಟ ಗ್ರಾಮದ ರೈತಕುಟುಂಬದಲ್ಲಿ. ತಂದೆ ಲೇಟ್ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮ. ಈ ದಂಪತಿಯ ಮೂವರು ಗಂಡು ಮಕ್ಕಳಲ್ಲಿ ಮೊದಲನೆಯವರು ಕೆ.ಎಚ್ ಪುಟ್ಟಸ್ವಾಮಿಗೌಡ.…

Read More

ನವದೆಹಲಿ: ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ಒಂದು ವಾರದೊಳಗೆ, ಕಾಂಗ್ರೆಸ್ ರಾಹುಲ್ ಗಾಂಧಿ, ಶಶಿ ತರೂರ್ ಮತ್ತು ಭೂಪೇಶ್ ಬಘೇಲ್ ಸೇರಿದಂತೆ 39 ಹೆಸರುಗಳ ರೂಪದಲ್ಲಿ ತನ್ನ ಉತ್ತರವನ್ನು ನೀಡಿದೆ. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ. ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದ ಸ್ಪರ್ಧಿಸಲಿದ್ದಾರೆ. ಆದರೆ 2019 ರಂತೆಯೇ ಅವರನ್ನು ಅಮೇಥಿಯಿಂದ ಕಣಕ್ಕಿಳಿಸಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಶಶಿ ತರೂರ್ ಅವರು ಮೂರು ಅವಧಿಗೆ ಪ್ರತಿನಿಧಿಸಿರುವ ತಿರುವನಂತಪುರಂನಿಂದ ಸ್ಪರ್ಧಿಸಲಿದ್ದು, ಬಘೇಲ್ ಅವರು ಛತ್ತೀಸ್ ಗಢದ ರಾಜನಂದಗಾಂವ್ ನಿಂದ ಲೋಕಸಭಾ ಚುನಾವಣೆಗೆ ಪಾದಾರ್ಪಣೆ ಮಾಡಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು 2009ರಲ್ಲಿ ಗೆದ್ದಿದ್ದ ಕೇರಳದ ಅಲಪುಳ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರ ಹೆಸರುಗಳು ಪಟ್ಟಿಯಲ್ಲಿವೆ. ಮುಖ್ಯವಾಗಿ ಕೆಲವು ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಿಗೆ ಹೆಸರುಗಳನ್ನು ಘೋಷಿಸಲಾಗಿದೆ. ಛತ್ತೀಸ್ಗಢ ಮತ್ತು ಕೇಂದ್ರಾಡಳಿತ ಪ್ರದೇಶ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತೀಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ. ಕುಟುಂಬವೊಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕಾದರೆ ಅಲ್ಲಿ ಪುರುಷರಷ್ಟೇ ಮಹಿಳೆಯರ ಪಾತ್ರವೂ ಮುಖ್ಯ. ರಾಜ್ಯ ಸರ್ಕಾರ ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಕೋಟ್ಯಂತರ ತಾಯಂದಿರ ಕೈಗಳಿಗೆ “ಗೃಹಲಕ್ಷ್ಮಿ”ಯ ಬಲ ನೀಡಿದೆ, ಶಿಕ್ಷಣ ಮತ್ತು ಉದ್ಯೋಗ ನಿಮಿತ್ತ ನಿತ್ಯ ಪ್ರಯಾಣಿಸುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪ್ರಯಾಣದ “ಶಕ್ತಿ” ತುಂಬಿದೆ, ಸ್ವಂತ ಉದ್ಯೋಗ ಆರಂಭಿಸುವ ಅಕ್ಕ ತಂಗಿಯರ ಪ್ರಯತ್ನಕ್ಕೆ ಆರ್ಥಿಕ ನೆರವು ನೀಡಿದೆ, ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹಧನ ಹೆಚ್ಚಿಸಿ ಅವರ ಜೀವನಮಟ್ಟ ಸುಧಾರಿಸಿದೆ, ದೇವದಾಸಿ ವೃತ್ತಿ ತೊರೆದವರು, ಲಿಂಗತ್ವ ಅಲ್ಪಸಂಖ್ಯಾತರ ಘನತೆಯ ಬದುಕಿಗೆ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದೆ.…

Read More

ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ಪಟ್ಟಿಯಲ್ಲೇ ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ನಿನ್ನೆಯ ದಿನದಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಯುವ ನ್ಯಾಯ ಗ್ಯಾರಂಟಿಯನ್ನು ಘೋಷಣೆ ಮಾಡಲಾಯಿತು. ದೇಶದ ಯುವ ಜನತೆಗೆ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ನಾವು ನೆರವಾಗಲಿದ್ದೇವೆ. 30 ಲಕ್ಷ ಉದ್ಯೋಗವನ್ನು ಯುವ ನ್ಯಾಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನೀಡಲಾಗುತ್ತದೆ ಎಂದರು. ಯುವ ಜನತೆ ನಿರುದ್ಯೋಗದಿಂದ ದೇಶದಲ್ಲಿ ಬಳಲುತ್ತಿದ್ದಾರೆ. ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರೇಸುತ್ತಿದೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ಧರಿದ್ದೇವೆ. ತೆಲಂಗಾಣ, ಕರ್ನಾಟಕದಲ್ಲಿ ಏನಾಯ್ತು ಅಂತ ಜನರು ನೋಡಿದ್ದಾರೆ.  ಕಳೆದ ನಿನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ 39…

Read More

ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ಪಟ್ಟಿಯಲ್ಲೇ ಕರ್ನಾಟಕದ 7 ಲೋಕಸಭಾ ಕ್ಷೇತ್ರ ಸೇರಿದಂತೆ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ನಿನ್ನೆಯ ದಿನದಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಯುವ ನ್ಯಾಯ ಗ್ಯಾರಂಟಿಯನ್ನು ಘೋಷಣೆ ಮಾಡಲಾಯಿತು. ದೇಶದ ಯುವ ಜನತೆಗೆ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ನಾವು ನೆರವಾಗಲಿದ್ದೇವೆ. 30 ಲಕ್ಷ ಉದ್ಯೋಗವನ್ನು ಯುವ ನ್ಯಾಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನೀಡಲಾಗುತ್ತದೆ ಎಂದರು. ಯುವ ಜನತೆ ನಿರುದ್ಯೋಗದಿಂದ ದೇಶದಲ್ಲಿ ಬಳಲುತ್ತಿದ್ದಾರೆ. ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರೇಸುತ್ತಿದೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ಧರಿದ್ದೇವೆ. ತೆಲಂಗಾಣ, ಕರ್ನಾಟಕದಲ್ಲಿ ಏನಾಯ್ತು ಅಂತ ಜನರು ನೋಡಿದ್ದಾರೆ.  ಕಳೆದ ನಿನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು.…

Read More