Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಗಳಿಕೆ, ಮೂಲಸೌಕರ್ಯ ಮತ್ತು ಸುರಕ್ಷತೆಯ ಆದ್ಯತೆಗಳೊಂದಿಗೆ 78 ನೆಯ ಸ್ವಾತಂತ್ರ್ಯ ದಿನದ ಆಚರಣೆ ಮಾಡಲಾಯಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೈಸೂರಿನ ಯಾದವಗಿರಿಯ ರೈಲ್ವೆ ಕ್ರೀಡಾ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರು ಆಚರಣೆಯ ನೇತೃತ್ವ ವಹಿಸಿದ್ದು, ವಿವಿಧ ಇಲಾಖೆಗಳ ಹಿರಿಯ ಶಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಗರ್ವಾಲ್ ರವರು ತಮ್ಮ ಭಾಷಣದಲ್ಲಿ ಮೈಸೂರು ರೈಲ್ವೆ ಪರಿವಾರ, ಪ್ರಯಾಣಿಕರು, ಗ್ರಾಹಕರು, ನೈಋತ್ಯ ರೈಲ್ವೆ ಮಜ್ದೂರ್ ಯೂನಿಯನ್ ಸದಸ್ಯರಿಗೆ ಮತ್ತು ಇತರ ಸಂಘಗಳು ಹಾಗು ಮಾಧ್ಯಮಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಮ್ಮ ಪೂರ್ವಜರು ಮಾಡಿದ ತ್ಯಾಗವನ್ನು ಸ್ಮರಿಸುವುದರ ಮಹತ್ವವನ್ನು ಅವರು ಒತ್ತಿ ಹೇಳಿದರು. ತಮ್ಮ ಭಾಷಣದ ಸಮಯದಲ್ಲಿ ಶ್ರೀಮತಿ ಅಗರ್ವಾಲ್ ರವರು ಗಳಿಕೆ ಮತ್ತು ಸರಕು ಸಾಗಣೆಯಲ್ಲಿ ವಿಭಾಗದ ಗಮನಾರ್ಹ ಸಾಧನೆಗಳನ್ನು ಎತ್ತಿ ತೋರಿಸಿದರು. ಮೈಸೂರು ವಿಭಾಗವು 6.7…
ಬೆಂಗಳೂರು : ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸಂಗೊಳ್ಳಿ ರಾಯಣ್ಣ ನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣ ನವರ ಬದುಕು ನಮಗೆಲ್ಲರಿಗೂ ಸ್ಪೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. https://kannadanewsnow.com/kannada/india-ready-for-2036-olympics-pm-modi-from-red-fort/ https://kannadanewsnow.com/kannada/good-news-home-minister-g-parameshwara-clarifies-that-appointment-orders-will-be-issued-to-545-psi-candidates-soon/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ವರ್ಗಾವಣೆ ದಂಧೆಯಲ್ಲಿ ಸರ್ಕಾರ ತೊಡಗಿರುವಂತ ಗಂಭೀರ ಆರೋಪ ಮಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಟಿಸಿಎಲ್ ನಿಂದ 226 ಕಿರಿಯ ಇಂಜಿನಿಯರ್ ವರ್ಗಾವಣೆಯಲ್ಲೂ ಕಾಸಿಗಾಗಿ ಪೋಸ್ಟಿಂಗ್ ವಾಸನೆ ಎದ್ದು ಕಾಣುತ್ತಿದೆ. ಪ್ರತಿ ಹುದ್ದೆಗೂ ಪುಲ್ ಡೀಲ್ ಮಗಾ ಡೀಲ್ ನಡೆಸಲಾಗಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. 226 ಜೆಇ ಅಲ್ಲ, ಡಬಲ್ ವರ್ಗಾವಣೆ ದಿನಾಂಕ 31-07-2024ರಂದು ಕೆಪಿಟಿಸಿಎಲ್ ನಿಂದ ಕಿರಿಯ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಗ್ರೂಪ್-ಸಿ ಹಾಗೂ ಡಿ ಪದವೃಂದದ 226 ನೌಕರರನ್ನು ವರ್ಗಾವಣೆ ಮಾಡಲಾಗಿದೆ. ಇದು ಕೇವಲ ಮೇಲ್ನೋಟಕ್ಕೆ 226 ವರ್ಗಾವಣೆಯಾದರೂ, ಆಂತರಿಕವಾಗಿ ಮಾಡಿರುವ ವರ್ಗಾವಣೆ ದಂಧೆ ಮಾತ್ರ ಡಬಲ್. ಅಂದರೆ ವರ್ಗಾವಣೆ ಮಾಡಿರುವುದು 226 ಜೆಇ ಆದರೇ, ಅವರನ್ನು ವರ್ಗಾವಣೆ ಮಾಡಿರುವಂತ ಸ್ಥಳದಲ್ಲಿದ್ದಂತ ಜೆಇಗಳನ್ನು ಆಂತರಿಕ ಆದೇಶದ ಮೂಲಕ ಬೇರೆಡೆಗೆ ವರ್ಗಾವಣೆ ಮಾಡಿ, ಚಾಲನಾದೇಶ ನೀಡಿರುವುದು ಕಂಡು ಬಂದಿದೆ. ದಿನಾಂಕ 31-07-2024ರಂದು 226 ಜೆಇ ವರ್ಗಾವಣೆ…
ವಿಶ್ವ ಆರೋಗ್ಯ ಸಂಸ್ಥೆ ಬುಧವಾರ (ಆಗಸ್ಟ್ 14) ಆಫ್ರಿಕಾದಲ್ಲಿ ಎಂಪಾಕ್ಸ್ ಉಲ್ಬಣವು ಈಗ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿತು, ಇದು ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ತನ್ನ ಗರಿಷ್ಠ ಎಚ್ಚರಿಕೆಯನ್ನು ನೀಡಿದೆ. ಇಂದು, ತುರ್ತು ಸಮಿತಿಯು ಸಭೆ ಸೇರಿ, ಅದರ ದೃಷ್ಟಿಯಲ್ಲಿ, ಪರಿಸ್ಥಿತಿಯು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ರೂಪಿಸುತ್ತದೆ ಎಂದು ನನಗೆ ಸಲಹೆ ನೀಡಿತು. ನಾನು ಆ ಸಲಹೆಯನ್ನು ಸ್ವೀಕರಿಸಿದ್ದೇನೆ ಎಂದು ಡಬ್ಲ್ಯುಎಚ್ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವಂತ ಮುಖ್ಯಮಂತ್ರಿ ಪದಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 2023ನೇ ಸಾಲಿನ ಮುಖ್ಯಮಂತ್ರಿಯವರ ಪದಕಗಳ ಪ್ರಕಟಿತ ಪಟ್ಟಿಯಲ್ಲಿ 126 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಪದಕವನ್ನು ನೀಡಲಾಗಿದೆ. ಹೀಗಿದೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರ ಪಟ್ಟಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು. ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ…
ಒಬ್ಬ ವ್ಯಕ್ತಿಯು ಸಂತೋಷದಿಂದ ಮತ್ತು ಶಾಂತಿಯಿಂದ ಬದುಕಲು ಹಣ ಅತ್ಯಗತ್ಯ. ಹಣವಿಲ್ಲದೆ ಈ ಜಗತ್ತಿನಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ. ಅಂತಹ ಹಣವು ನಮಗೆ ಯಾವುದೇ ಪರಿಸ್ಥಿತಿಯಲ್ಲಿ ಲಭ್ಯವಿಲ್ಲದಿದ್ದರೆ, ನಾವು ಇತರರಿಂದ ಸಾಲ ಪಡೆಯುತ್ತೇವೆ ಅಥವಾ ಯಾರಾದರೂ ಕೇಳಿದಾಗ ನಾವು ಹಣವನ್ನು ಸಾಲವಾಗಿ ನೀಡುತ್ತೇವೆ. ನೀವು ಸಾಲ ಪಡೆದರೂ ಅಥವಾ ಕೊಟ್ಟರೂ ಅದು ಖಂಡಿತವಾಗಿಯೂ ಪರಿಣಾಮ ಬೀರುತ್ತದೆ. ಆ ಪರಿಣಾಮದಿಂದ ಹೊರಬರಲು ಮತ್ತು ಕೊಟ್ಟ ಸಾಲವನ್ನು ಮರಳಿ ಪಡೆಯಲು ಮತ್ತು ಪಡೆದ ಸಾಲವನ್ನು ತೀರಿಸಲು ಯಾವ ಮಂತ್ರವನ್ನು ಪಠಿಸಬೇಕು ಎಂಬುದನ್ನು ಈ ಮಂತ್ರದ ಆಧ್ಯಾತ್ಮಿಕ ದಾಖಲೆಯಲ್ಲಿ ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…
ಬೆಂಗಳೂರು: ರಿಲಯನ್ಸ್ ಫೌಂಡೇಷನ್ ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿ ಏನೆಂದರೆ, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಸಬಲಗೊಳಿಸುತ್ತದೆ. ರಿಲಯನ್ಸ್ ಫೌಂಡೇಷನ್ ಸ್ನಾತಕೋತ್ತರ ಸ್ಕಾಲರ್‌ಶಿಪ್‌ಗಳು ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ, ಭವಿಷ್ಯಕ್ಕೆ ಉಪಯುಕ್ತವಾದ ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಎಲ್ಲ ವಿದ್ಯಾರ್ಥಿವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ ಮತ್ತು ಪದವಿ ಕಾರ್ಯಕ್ರಮಗಳ…
‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್ | SHIMUL Election 2024
ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದಂತ ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ, ಇಂದು ಮತ ಏಣಿಕೆಯ ಬಳಿಕ ಪ್ರಕಟಗೊಂಡಿದೆ. ಇಂದು ಪ್ರಕಟಿತವಾದಂತ ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಯಾರೆಲ್ಲ ಗೆಲುವು ಸಾಧಿಸಿದ್ದಾರೆ ಎನ್ನುವ ಬಗ್ಗೆ ಮುಂದಿದೆ ಪಟ್ಟಿ. ಈ ಕುರಿತಂತೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ರಿಟರ್ನಿಂಗ್ ಅಧಿಕಾರಿಗಳ ಕಾರ್ಯಾಲಯದಿಂದ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಚುನಾವಣೆಯ ಅಂತಿಮ ಫಲಾತಂಶದಂತೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಿಂದ ಯಾರೆಲ್ಲ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಈ ಕೆಳಕಂಡಂತಿದೆ. ಶಿವಮೊಗ್ಗ ವಿಭಾಗ ಆನಂದ ಡಿ.ಬಿಎನ್ ಅವರು 131 ಮತಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಹೆಚ್.ಬಿ ದಿನೇಶ್ ಅವರು 115 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಆರ್.ಎಂ ಮಂಜುನಾಥಗೌಡ ಅವರು ಅವರೋಧವಾಗಿ ಆಯ್ಕೆಯಾಗಿದ್ದಾರೆ. ಸಾಗರ ವಿಭಾಗ ಟಿ ಶಿವಶಂಕರಪ್ಪ ಅವರು 162 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ದಯಾನಂದ ಗೌಡ್ರು ಟಿಎಸ್ ಅವರು 124 ಮತಗಳಿಂದ ಗೆಲುವು ವಿದ್ಯಾಧರ…
ನವದೆಹಲಿ: ಜಾರಿ ನಿರ್ದೇಶನಾಲಯದ (Enforcement Directorate – ED) ವಿಶೇಷ ನಿರ್ದೇಶಕ ರಾಹುಲ್ ನವೀನ್ ( Rahul Navin ) ಅವರನ್ನು ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಬುಧವಾರ ನೇಮಿಸಲಾಗಿದೆ. ಪ್ರಸ್ತುತ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ವಿಶೇಷ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ನವೀನ್ ಅವರು 1993 ರ ಬ್ಯಾಚ್ನ ಭಾರತೀಯ ಕಂದಾಯ ಸೇವೆಯ (IRS) ಅಧಿಕಾರಿಯಾಗಿದ್ದಾರೆ. ಐಆರ್ಎಸ್ ಅಧಿಕಾರಿ ರಾಹುಲ್ ನವೀನ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಉಸ್ತುವಾರಿ ನಿರ್ದೇಶಕರಾಗಿ ನೇಮಿಸಲಾಯಿತು. https://twitter.com/ANI/status/1823712022112149809 https://kannadanewsnow.com/kannada/breaking-team-india-announced-for-duleep-trophy-iyer-gill-gaikwad-named-captains-duleep-trophy/ https://kannadanewsnow.com/kannada/state-govt-orders-all-departments-to-close-sbi-pnb-bank-accounts-immediately/