Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್ ಜೀವನ್ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ಹೊಸ ಸ್ವರೂಪಕ್ಕೆ ತಿರುಗಿದೆ. “ಜನರ ಸಲಹೆಗಳಿಗೆ ಬೆಲೆ ನೀಡದೆ, ಜನಾಭಿಪ್ರಾಯಯವನ್ನು ಪೊಲೀಸರ ಮೂಲಕ ಹತ್ತಿಕ್ಕಿದ ಸರಕಾರ ನೀರಿನ ಶುದ್ಧೀಕರಣ ಘಟಕದ ಕಾಮಗಾರಿಗೆ ಚಾಲನೆ ನೀಡಿ 11 ದಿನಗಳ ತುಂಬಿದೆ. ಹೀಗಾಗಿ, ಶಿವರಾತ್ರಿಯ ಮುನ್ನಾದಿನಾಗಿರುವ ಇವತ್ತು ಜನರ ಆಶಯಗಳ ಸಾವಿನ ಸಾಂಕೇತಿಕವಾಗಿ ಪ್ರತಿಭಟನಾ ಸ್ಥಳದಲ್ಲಿ ತಿಥಿಯನ್ನು ಆಚರಿಸಲಾಯಿತು,’’ ಎಂದು ಪ್ರತಿಭಟನೆಯ ಹೊಣೆ ಹೊತ್ತಿರುವ ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿ ಹಾಗೂ ತಾಲೂಕು ರೈತ ಸಂಘ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ. ತೀರ್ಥಹಳ್ಳಿ- ಶೃಂಗೇರಿ ಸಂಪರ್ಕಿಸುವ ಹೆದ್ದಾರಿಯಲ್ಲಿ ಬರುವ ಕೋಡ್ಲು ಗ್ರಾಮದಲ್ಲಿ ಗ್ರಾಮಸ್ಥರು ತಮಗೆ ತೋಚಿದ ರೀತಿಯಲ್ಲಿ ಸರಕಾರದ ಕಾಮಗಾರಿಗೆ ಅಪರ ಕರ್ಮಗಳನ್ನು ನೆರವೇರಿಸಿದ್ದಾರೆ. ಬಾಳೆ ಎಲೆಯ ಮೇಲೆ ಕಾಮಗಾರಿಯ ಲಂಚದ ಸಂಕೇತವಾಗಿ ಹಣದ ನೋಟುಗಳು, ಜತೆಗೆ, ಮೊಟ್ಟೆ, ಮಾಂಸ,…
ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಘಟನೆಯ ನಂತ್ರ, ಕೆಫೆಯನ್ನು ಮುಚ್ಚಲಾಗಿತ್ತು. ಈ ಕೆಫೆಯನ್ನು ರೀ-ಓಪನ್ ಮಾಡುವುದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅದೇ ಶಿವರಾತ್ರಿ ಹಬ್ಬದ ನಾಳೆಯ ದಿನದಂದೇ ರೀ-ಓಪನ್ ಆಗಲಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಘಟನೆಯ ನಂತ್ರ, ಕೆಫೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಚ್ಚಲಾಗಿತ್ತು. ಇಂತಹ ಕೆಫೆಯನ್ನು ರೀ-ಓಪನ್ ಮಾಡೋದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಅನುಮತಿಯ ಬೆನ್ನಲ್ಲೇ ನಾಳೆಯ ಶಿವರಾತ್ರಿ ಹಬ್ಬದ ದಿನದಂದು ರಾಮೇಶ್ವರಂ ಕೆಫೆ ರೀ-ಓಪನ್ ಮಾಡಲಾಗುತ್ತಿದೆ. ಈ ರೀ-ಓಪನ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಕೂಡ ಭಾಗಿಯಾಗಲಿದ್ದಾರೆ. ಅಂದಹಾಗೇ ಮಾರ್ಚ್.1ರಂದು ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಕೇವಲ 10 ಸೆಕೆಂಡ್ ಅಂತರದಲ್ಲಿ 2 ಬಾರಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಜನರು ಗಾಯಗೊಂಡಿದ್ದರು. ಈ ಪ್ರಕರಣವನ್ನು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ…
ಬೆಂಗಳೂರು: ನಿನ್ನೆ ಸಾಕಷ್ಟು ವಿರೋಧಗಳ ಮಧ್ಯೆಯೇ 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿತ್ತು. ಇಂದು ವಿಭಾಗಿಯ ಹೈಕೋರ್ಟ್ ನ್ಯಾಯಪೀಠವು ಈ ಆದೇಶಕ್ಕೆ ತಡೆಯಾಜ್ಞೆ ನೀಡಿ, ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ರವಿ ಹೊಸಮನಜ ಅವರು 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದರು. ಇಂದು…
ಬೆಂಗಳೂರು: ನಿನ್ನೆ ಹೈಕೋರ್ಟ್ ನಿಂದ ರಾಜ್ಯ ಸರ್ಕಾರದಿಂದ ನಡೆಸಲು ಉದ್ದೇಶಿಸಲಾಗಿದ್ದಂತ 5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಇಂದು ರಾಜ್ಯ ಸರ್ಕಾರವು ವಿಭಾಗಿಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಮನವಿ ಪರಿಶೀಲಿಸಿದಂತ ಹೈಕೋರ್ಟ್ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಅನುಮತಿ ನೀಡಿದೆ. ಈ ಕುರಿತಂತೆ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮೇಲ್ಮನವಿಯನ್ನು ರಾಜ್ಯ ಸರ್ಕಾರದ ಪರ ಎಎಜೆ ಅವರು, 53,682 ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಯಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಖಾಸಗಿ ಶಾಲೆಗಳು ಇಂತಹ ಬೋರ್ಡ್ ಪರೀಕ್ಷೆಯನ್ನು ವಿರೋಧಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಹೈಕೋರ್ಟ್ ವಿಭಾಗೀಯ ಪೀಠದ ತಡೆಜ್ಞೆಯಾಜ್ಞೆಯಿಂದ ಸೋಮವಾರ ನಡೆಯಬೇಕಿದ್ದಂತ 5, 8, 9 ಹಾಗೂ 11ನೇ ತರಗತಿಯ ಬೋರ್ಡ್ ಪರೀಕ್ಷೆ ಅಡ್ಡಕತ್ತರಿಯಲ್ಲಿ ಸಿಲುಕಿದಂತೆ ಮಕ್ಕಳು ಇದ್ದಾರೆ. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಕೋರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು…
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇದೇ ಮಾದರಿಯಲ್ಲೇ ದೇಶದಲ್ಲೂ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ್ರೆ ಗ್ಯಾರಂಟಿ ಸ್ಕೀಂ ಜಾರಿಗೊಳಿಸೋದಾಗಿ ಘೋಷಣೆ ಮಾಡಿದೆ. ಇಂದು ತನ್ನ 3ನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದು, ದೇಶದ ಯುವಜನತೆಗೆ ನೌಕರಿ ಖಾತ್ರಿ ನೀಡುವಂತ ಯುವ ನ್ಯಾಯ ಯೋಜನೆಯನ್ನು ಜಾರಿಗೊಳಿಸೋದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ದೇಶದಲ್ಲಿ 2024 ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಕೂಡಲೇ, ದೇಶದ ಯುವಕರಿಗೆ ಉದ್ಯೋಗ ಖಾತರಿಯನ್ನು ಒದಗಿಸುವ ಮೂಲಕ ಹೊಸ ರೋಜ್ಗಾರ್ ಕ್ರಾಂತಿ ಪ್ರಾರಂಭವಾಗಲಿದೆ. ಇಂದು ಕಾಂಗ್ರೆಸ್ ಪಕ್ಷವು ಈ ದೇಶದ ಕೋಟ್ಯಂತರ ಯುವಕರಿಗಾಗಿ ದೊಡ್ಡ ಘೋಷಣೆ ಮಾಡುತ್ತಿದೆ ಎಂದಿದ್ದಾರೆ. ಯುವ ನ್ಯಾಯ ಗ್ಯಾರಂಟಿ ಸ್ಕೀಂ 5 ಪ್ರಮುಖ ಅಂಶಗಳು ಭಾರತಿ ಭರೋಸಾ ನಾವು ದೇಶದ ಎಲ್ಲಾ ಯುವಕರಿಗೆ ಭಾರತಿ ಭರೋಸಾವನ್ನು ಖಾತರಿಪಡಿಸುತ್ತೇವೆ. ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 30 ಲಕ್ಷ ಹುದ್ದೆಗಳನ್ನು…
ಬೆಂಗಳೂರು: ನಗರದ ಜನಪ್ರಿಯ ಉಪಾಹಾರ ಗೃಹ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ಸಂಭವಿಸಿದ ಸ್ಫೋಟದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಕೆಲವು ಮಹತ್ವದ ಸುಳಿವುಗಳು ಸಿಕ್ಕಿದ್ದಾವೆ. ಬೆಂಗಳೂರು ಸ್ಪೋಟಕದ ಆರೋಪಿ ಬಟ್ಟೆ ಬದಲಿಸಿ, ಬಸ್ ನಲ್ಲಿ ಪ್ರಯಾಣ ಮಾಡಿರೋ ಮಾಹಿತಿಯನ್ನು ಪತ್ತೆ ಹಚ್ಚಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸ್ಫೋಟದ ನಂತರ ಶಂಕಿತನು ಜಿಲ್ಲಾ ಕೇಂದ್ರ ಪಟ್ಟಣವಾದ ತುಮಕೂರು ಕಡೆಗೆ ಬಸ್ ನಲ್ಲಿ ಪ್ರಯಾಣಿಸಿದ್ದಾನೆ ಎಂದು ಹೇಳಲಾಗಿದ್ದು, ಅಧಿಕಾರಿಗಳು ಸುಳಿವುಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಬಳ್ಳಾರಿಯವರೆಗೆ ಅವನ ಚಲನವಲನಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಪೂರ್ವ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಾರಿಡಾರ್ನ ಬ್ರೂಕ್ಫೀಲ್ಡ್ ಪ್ರದೇಶದ ತ್ವರಿತ ಸೇವಾ ಉಪಾಹಾರ ಗೃಹದಲ್ಲಿ ಮಾರ್ಚ್ 1 ರಂದು ಸುಧಾರಿತ ಸ್ಫೋಟಕ ಸಾಧನದಿಂದ ಉಂಟಾದ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸುತ್ತಿದೆ. ಇದಕ್ಕೆ ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗವು ಸಹಾಯ ಮಾಡುತ್ತಿದೆ. ಶಂಕಿತ ಬಾಂಬರ್ ಯಾವ ದಿಕ್ಕಿನಲ್ಲಿ ಹೋಗಿದ್ದಾನೆ. ಅವನು ತನ್ನ ಬಟ್ಟೆಗಳನ್ನು…
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಾ.10ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ. https://kannadanewsnow.com/kannada/the-state-government-has-filed-an-appeal-in-the-high-court-challenging-the-cancellation-of-class-5-8-9-and-11-board-exams/ https://kannadanewsnow.com/kannada/state-govt-orders-regularisation-of-11307-pourakarmikas/
ಬೆಂಗಳೂರು: ನಿನ್ನೆ ಹೈಕೋರ್ಟ್ ನಿಂದ ರಾಜ್ಯ ಸರ್ಕಾರದಿಂದ ನಡೆಸಲು ಉದ್ದೇಶಿಸಲಾಗಿದ್ದಂತ 5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಇಂದು ರಾಜ್ಯ ಸರ್ಕಾರವು ವಿಭಾಗಿಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಈ ಕುರಿತಂತೆ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮೇಲ್ಮನವಿಯನ್ನು ರಾಜ್ಯ ಸರ್ಕಾರದ ಪರ ಎಎಜೆ ಅವರು, 53,682 ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಯಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಖಾಸಗಿ ಶಾಲೆಗಳು ಇಂತಹ ಬೋರ್ಡ್ ಪರೀಕ್ಷೆಯನ್ನು ವಿರೋಧಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಹೈಕೋರ್ಟ್ ವಿಭಾಗೀಯ ಪೀಠದ ತಡೆಜ್ಞೆಯಾಜ್ಞೆಯಿಂದ ಸೋಮವಾರ ನಡೆಯಬೇಕಿದ್ದಂತ 5, 8, 9 ಹಾಗೂ 11ನೇ ತರಗತಿಯ ಬೋರ್ಡ್ ಪರೀಕ್ಷೆ ಅಡ್ಡಕತ್ತರಿಯಲ್ಲಿ ಸಿಲುಕಿದಂತೆ ಮಕ್ಕಳು ಇದ್ದಾರೆ. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಕೋರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಭಯೋಗದಲ್ಲಿ ನಡೆಯುತ್ತಿರುವ ಫ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21 ಈ ವಿದ್ಯಾಸಂಸ್ಥೆಯಲ್ಲಿ ಫ್ರೀ ನರ್ಸರಿ ತರಗತಿಗೆ ದಿನಾಂಕ: 11-03-2024 ರಿಂದ 25-03-2024 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. • ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26-03-2024 ರಿಂದ 10-04-2024 ರವರೆಗೆ • ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. • 20-05-2024 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು: 1 . ಮಗುವಿನ ಪಾಸ್ ಪೋರ್ಟ್ ಸೈಜ್ ಫೋಟೋ -…
ಬೆಂಗಳೂರು: ರಾಜ್ಯ ಸರ್ಕಾರದಿಂದ 11,307 ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಸಂಬಂಧ ಆದೇಶ ಹೊರಡಿಸಿತ್ತು. ಈ ನಂತ್ರ ಈಗ 11 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಸಂಬಂಧ ಮತ್ತೊಂದು ಸೇರ್ಪಡೆ ಆದೇಶವನ್ನು ಹೊರಡಿಸಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿ-2 ಮತ್ತು ಸಮನ್ವಯ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದು, ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಭರ್ತಿಗಾಗಿ 11,307 ಪೌರ ಕಾರ್ಮಿಕರ ಹುದ್ದೆಗಳನ್ನು ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ, ರೋಸ್ಟರ್ ಮೀಸಲಾತಿ ನಿಯಮಗಳನ್ವಯ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು ಎಂದಿದ್ದಾರೆ. ದಿನಾಂಕ 28-03-2023ರ ಸೇರ್ಪಡೆ ಆದೇಶದಲ್ಲಿ ಸಮಸಂಖ್ಯೆಯ ದಿನಾಂಕ 02-03-2023ರ ಆದೇಶಕ್ಕೆ ಕೆಲವೊಂದು ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿರುತ್ತದೆ. ಅದೇ 11,307 ಸಂಖ್ಯಾತಿರಿಕ್ತ ಹುದ್ದೆಗಳಿಗೆ ಪೌರ ಕಾರ್ಮಿಕರುಗಳ ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದಲ್ಲಿ, ಇತರೆ ಯಾವುದೇ ವರ್ಗದ ಅರ್ಹ…