Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಸ್ವಚ್ಥತಾ ಅಭಿಯಾನವನ್ನು ನಡೆಸಲಾಯಿತು. ಆರೋಗ್ಯ ಇಲಾಖೆ ಹಾಗೂ ದೂಗೂರು ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳು ಜೊತೆಗೂಡಿ ಆಸ್ಪತ್ರೆ ಆವರಣವನ್ನು ಸ್ವಚ್ಚಗೊಳಿಸಿದರು. ಇಂದು ಅಕ್ರೋಬರ್.2ರ ಗಾಂಧಿ ಜಯಂತಿಯ ಹಿನ್ನಲೆಯಲ್ಲಿ ದೇಶ, ರಾಜ್ಯದ ವಿವಿಧೆಡೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೂಗೂರು ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜೊತೆಗೂಡಿ ಸ್ವಚ್ಛತಾ ಅಭಿಯಾನ ನಡೆಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ಡಾ.ಜಯರಾಂ ಮಹದೇವ್ ಪವಾರ್, ಹಿರಿಯ ಲ್ಯಾಬ್ ಟೆಕ್ನೀಷಿಯನ್ ಚಂದ್ರ ನಾಯ್ಕ್, ಆರೋಗ್ಯ ನಿರೀಕ್ಷಣಾಧಿಕಾರಿ ಶಶಿಧರ್, ಪಿ ಹೆಚ್ ಸಿ ಓ ನಿರ್ಮಲಾ, ಸಿಹೆಚ್ಓ ಉಮಾ ಶರಾವತ್, ಗುರುಕಿರಣ್ ಭಾಗಿಯಾಗಿದ್ದರು. ದೂಗೂರು ಗ್ರಾಮ ಪಂಚಾಯತಿ ಪಿಡಿಓ ಸಿ.ಕೆ ನಾಗರಾಜ್, ಕಾರ್ಯದರ್ಶಿ ನಂದಿನಿ, ಉಪಾಧ್ಯಕ್ಷರಾದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್…
ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನಗಳು ಎಷ್ಟು ರಸ್ತೆಗೆ ಇಳಿಯುತ್ತಿವೆಯೋ ಅಷ್ಟೇ ಪ್ರಮಾಣದಲ್ಲಿ ಅವುಗಳ ಕಳ್ಳತನ ಕೂಡ ನಡೆಯುತ್ತಿದೆ. ಈ ಕಳ್ಳತನಕ್ಕೆ ಬಹುಮುಖ್ಯ ಕಾರಣ, ದ್ವಿ-ಚಕ್ರ ವಾಹನಗಳನ್ನು ಸುರಕ್ಷಿತವಾಗಿ ಇಡುವುದಕ್ಕೆ ರಕ್ಷಣಾ ತಂತ್ರಗಳನ್ನು ಅಳವಡಿಸಿಕೊಳ್ಳದೇ ಇರುವುದಾಗಿದೆ. ಹಾಗಾದ್ರೆ ದ್ವಿ-ಚಕ್ರ ವಾಹನಗಳ ಕಳ್ಳತನ ತಡೆಗಟ್ಟುವುದು ಹೇಗೆ ಎನ್ನುವ ಬಗ್ಗೆ ಮುಂದಿದೆ ಮಾಹಿತಿ. ಬೆಂಗಳೂರು ನಗರ ಪೊಲೀಸ್ ಇಲಾಖೆಯು ಸಾರ್ವಜನಿಕ ಪ್ರಕಟಣೆಯಲ್ಲಿ ಈ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ನಗರದಲ್ಲಿ ಒಟ್ಟು ಸುಮಾರು 80 ಲಕ್ಷ ದ್ವಿ-ಚಕ್ರ ವಾಹನಗಳಿದ್ದು, ಪ್ರತಿದಿನ ಸುಮಾರು ಒಂದೂವರೆಯಿಂದ ಎರಡು ಸಾವಿರ ವಾಹನಗಳು ಹೊಸದಾಗಿ ನೋಂದಣಿಯಾಗುತ್ತಿದ್ದು, ಇವುಗಳಲ್ಲಿ ಕಳೆದ ಮೂರು ವರ್ಷಗಳಿಂದ ಪ್ರತಿನಿತ್ಯ ಸರಾಸರಿ ಅಂದಾಜು 14 ರಿಂದ 16 ವಾಹನಗಳು ಕಳ್ಳತನವಾಗುತ್ತಿರುತ್ತವೆ ಎಂದು ಹೇಳಿದೆ. ಬೆಂಗಳೂರು ನಗರದ ಸಾರ್ವಜನಿಕರಿಗೆ ನಗರದಲ್ಲಿ ಆಗುತ್ತಿರುವ ಈ ದ್ವಿ-ಚಕ್ರ ವಾಹನಗಳ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ನಗರ ಪೊಲೀಸ್ ವತಿಯಿಂದ ಈ ಕೆಳಕಂಡ ಸೂಚನೆಗಳನ್ನು ನೀಡಲಾಗುತ್ತಿದೆ. ದ್ವಿ-ಚಕ್ರ ವಾಹನಗಳ ಕಳ್ಳತನಕ್ಕೆ ಕಾರಣಗಳು: 1.…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ನದಿಗೂ ಅಕ್ಟೋಬರ್.3ರ ನಾಳೆಯಿಂದ 7ರವರೆಗೆ ಐದು ದಿನಗಳ ಕಾಲ ಪ್ರಾಯೋಗಿಕವಾಗಿ ಆರತಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ ಮಾಹಿತಿ ಹಂಚಿಕೊಂಡಿದ್ದು, ದಸರೆ ನಿಮಿತ್ತ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ನಿಗದಿತ ಸ್ಥಳ ಗುರುತಿಸಿ, ನಿರಂತರವಾಗಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುವುದು ಎಂದರು. ಅಂದಹಾಗೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಬಳಿ ಇರುವ ಕಾವೇರಿ ನದಿ ಸ್ನಾನಘಟ್ಟ ಸ್ಥಳವನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ, ಅದ್ವೈತ ವಾಚಸ್ಪತಿ ಡಾ ಭಾನುಪ್ರಕಾಶ್ ಶರ್ಮ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು. ಮುಂದಿನ ಸ್ಥಳ ಗುರುತಿಸವವರೆಗೂ ಅದೇ ಸ್ಥಳದಲ್ಲಿ ವಾರದಲ್ಲಿ ಎರಡು ದಿನ ಶ್ರೀರಂಗಪಟ್ಟಣ ದಸರಾ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಆ.3ರಿಂದ ಕಾವೇರಿ ಆರತಿ ನಡೆಸುವಂತೆ ಸೂಚಿಸಿದ್ದಾರೆ. ಈಗಾಗಲೇ ಹರಿದ್ವಾರ ಹಾಗೂ ಕಾಶಿ ಮಾದರಿಯಲ್ಲೇ…
ಇಂದು ಮಹಾಲಯ ಅಮಾವಾಸ್ಯೆ. ಈ ಬೇರು ನಿಮ್ಮ ಮನೆಗೆ ಬಂದರೆ ನಿಮ್ಮ ಬಡತನ ನಿವಾರಣೆಯಾಗುತ್ತದೆ. ಮಿಲಿಯನೇರ್ ಯೋಗವು ಅನೇಕ ತಲೆಮಾರುಗಳಿಗೆ ಲಭ್ಯವಿರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಇಂದು ಮಹಾಲಯ ಅಮವಾಸ. ಪುರಟಾಸಿ ಮಾಸದ ಈ ಅಮಾವಾಸ್ಯೆಯ ತಿಥಿಯಂದು ಪೂರ್ವಜರನ್ನು ಪೂಜಿಸುವುದರಿಂದ ವಿಶೇಷ ಫಲ ಸಿಗುತ್ತದೆ. ಪೂರ್ವಜರ ಶಾಪವನ್ನು ಹೋಗಲಾಡಿಸುತ್ತದೆ. ಇದರಿಂದ ನಮ್ಮ ಪೂರ್ವಜರ ಆಶೀರ್ವಾದವೂ ಸಿಗುತ್ತದೆ. ಈ ದಿನವು ವಿಶ್ವಾದ್ಯಂತ ಉತ್ತಮ ಶಕ್ತಿಯಿಂದ ತುಂಬಿರುತ್ತದೆ. ಪೂರ್ವಜರ ಆರಾಧನೆಗೆ ಈ ದಿನ ಎಷ್ಟು ಪ್ರಾಮುಖ್ಯವೋ, ನಾವು ಈ ದಿನವನ್ನು ಕೆಲವು ತಾಂತ್ರಿಕ ಪರಿಹಾರಗಳನ್ನು…
ಬೆಂಗಳೂರು: ನೀಟ್ ಪರೀಕ್ಷೆ ಬರೆದು, ಅರ್ಹತೆ ಪಡೆದಿದ್ದಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2024-25ನೇ ಸಾಲಿನ PG/ Diploma ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ KEA ಅರ್ಜಿ ಆಹ್ವಾನಿಸಿದೆ. ಅ.5ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು NEET-PG 2024 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗು ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ / ಡಿಪ್ಲೊಮ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಅಂದರೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸೀಟುಗಳು, ಖಾಸಗಿ ಮತ್ತು ಅಲ್ಪ ಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟದ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪ ಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಖಾಸಗಿ ಸೀಟುಗಳ (KPCF, KRLMPCA, AMPCK and Private Universities) ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಎಂದು ತಿಳಿಸಿದೆ. ಸರ್ಕಾರದ…
ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. 2023-24ನೇ ಸಾಲಿನ ಗೆಜ಼ೆಟೆಡ್ ಪ್ರೊಬೆಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕೆಪಿಎಸ್ಸಿ ತಿಳಿಸಿದೆ. https://twitter.com/secretarykpsc/status/1841119936242204705 ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎನ್ನುವಂತೆ ಇವರಿಗೆ ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಿಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಶಾಲಾ ಮುಖ್ಯೋಪಾಧ್ಯಾಯರಿಗೆ ಮಹತ್ವದ ಸೂಚನೆಯನ್ನು ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್ನಲ್ಲಿ ದಾಖಲಿಸಬೇಕಾಗಿದೆ ಎಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆಗೆ ಒಳಪಡುವ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಶಾಲಾ ಶಿಕ್ಷಣ ಇಲಾಖೆಯ ಜಾಲತಾಣವಾದ schooleducation.karnataka.gov.in ನಲ್ಲಿ “…
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ. ಈ ಕುರಿತು ಪ್ರಕಟಣೆ ನೀಡಿದ್ದು, ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ. ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ…