Author: kannadanewsnow09

ಬೆಂಗಳೂರು: ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸೋರ ವಿರುದ್ಧ ಕಠಿಣ ನಿಲುವನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ. ಒಂದು ವೇಳೆ ವ್ಹೀಲಿಂಗ್, ಮದ್ಯ ಸೇವನೆ ಮಾಡಿ ವಾಹನ ಓಡಿಸಿದ್ರೇ ಡಿಎಲ್ ರದ್ದುಗೊಳಿಸೋದಾಗಿ ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಅಲ್ಲದೇ ಈಗಾಗಲೇ 711 ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2023 ನೇ ಸಾಲಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಮಾರಣಾಂತಿಕ ಅಪಘಾತ ಹಾಗೂ ಸಂಚಾರ ನಿಯಮ ಉಲ್ಲಂಘನಾ ಪ್ರಕರಣಗಳಲ್ಲಿ ಭಾಗಿಯಾದ ಚಾಲಕರ/ಸವಾರರ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಜಪ್ತಿಪಡಿಸಿಕೊಂಡು, ಸದರಿ ಡ್ರೈವಿಂಗ್ ಲೈಸೆನ್ಸ್‌ಗಳನ್ನು ಬೆಂಗಳೂರು ನಗರ ಸೇರಿದಂತೆ, ಕರ್ನಾಟಕದ ಇತರೆ ಜಿಲ್ಲೆ ಹಾಗೂ ಹೊರರಾಜ್ಯಗಳ ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಛೇರಿಗಳಿಗೆ ಒಟ್ಟು 2974 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ. ಈ ರೀತಿ ಅಮಾನತ್ತುಪಡಿಸಲು ಪ್ರಾದೇಶಿಕ ಸಾರಿಗೆ ಕಛೇರಿಗಳಿಗೆ ಕಳುಹಿಸಿಕೊಟ್ಟ 2974 ಡ್ರೈವಿಂಗ್ ಲೈಸೆನ್ಸ್‌ಗಳಲ್ಲಿ 711 ಡ್ರೈವಿಂಗ್ ಲೈಸೆನ್ಸ್‌ಗಳನ್ನು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಛೇರಿಯ…

Read More

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದು, ತಲೆ ಮರೆಸಿಕೊಂಡು ಓಡಾಡುತ್ತಿದ್ದಂತ ನಟೋರಿಯಸ್ ರೌಡಿ ಶೀಟ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ, ಬಂಧಿಸಿದ್ದಾರೆ. ಮಂಗಳೂರು ಹೊರ ವಲಯದಲ್ಲಿ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಎಂಬಾತ ತಲೆ ಮರೆಸಿಕೊಂಡಿರೋ ಮಾಹಿತಿ ಮೇರೆಗೆ, ಸ್ಥಳಕ್ಕೆ ಪೊಲೀಸರು ಬಂಧಿಸೋದಕ್ಕೆ ತೆರಳಿದ್ದಾರೆ. ಪೊಲೀಸರು ಬಂಧಿರೋ ವಿಷಯ ತಿಳಿದಂತ ಆತ, ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗೋದಕ್ಕೆ ಯತ್ನಿಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ನಡೆಸಿದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ನನ್ನು ಶರಣಾಗುವಂತೆ ಸೂಚಿಸಲಾಗಿದೆ. ಆದರೂ ಕೇಳದೇ ಅಲ್ಲಿಂದ ಪರಾರಿಯಾಗೋದಕ್ಕೆ ಯತ್ನಿಸಿದಾಗ ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಗಂಡೇಟಿನಿಂದ ಗಾಯಗೊಂಡಿದ್ದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಅನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ceo-suchana-sent-to-6-day-police-custody-for-killing-her-own-child/ https://kannadanewsnow.com/kannada/good-news-for-devotees-of-savadatti-yellamma-minister-ramalinga-reddys-master-plan-for-holistic-development/

Read More

ಬೆಳಗಾವಿ: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟ‌ರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದರು. ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಾಲೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ದೇವಸ್ಥಾನವು ಪ್ರತಿವರ್ಷ ಅಂದಾಜು ರೂ. 20…

Read More

ಬೆಂಗಳೂರು : ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ ಎಂದರು. ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ ಎಂದು…

Read More

ಮೈಸೂರು: ನಾನು ನ್ಯಾಷನಲ್ ಲೀಡರ್ ಅಂತ ಹೇಳಿಲ್ಲ. ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ಸಿಎಂ ಮೇಲೆ ಒತ್ತಡ ತರೋರು ನ್ಯಾಷನಲ್ ಲೀಡರ್ ಅಂತ ಡಾ.ಯತೀಂದ್ರ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ಅಲ್ಲದೇ ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವಂತವರು ನ್ಯಾಷನಲ್ ಲೀಡರ್ ಎಂದು ಗುಡುಗಿದರು. ಅಪ್ಪನ ನೆಲೆ ಬಿಡಿಸಿ ಬದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್ ಆಗಿದ್ದಾರೆ. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್ ಎಂಬುದಾಗಿ ವಾಗ್ಧಾಳಿ ನಡೆಸಿದರು.…

Read More

ಮೈಸೂರು: ರಾಮನ ಪೇಟೆಂಟ್ ಅನ್ನು ಬಿಜೆಪಿ ಗೆ ಕೊಟ್ಟಿದ್ದೆ ಕಾಂಗ್ರೆಸ್. ರಾಮನನ್ನು ಕಾಂಗ್ರೆಸಿಗರೆ ಭಕ್ತಿ ಭಾವದಿಂದ ಪೂಜಿಸಿದ್ದರೆ. ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು ? ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟ್ ಹಾ ಎಂದು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ ? ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು. ಅಯೋಧ್ಯೆ ಮಂತ್ರಾಕ್ಷತೆ ಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪ ವಿಚಾರವಾಗಿ ಮಾತನಾಡಿದಂತ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆ ಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ…

Read More

ಬೆಂಗಳೂರು: ರಾಜ್ಯದಲ್ಲಿ ಸಂಚಾರ ಪೊಲೀಸರು ನಿಯಮ ಉಲ್ಲಂಘಿಸೋ ಸವಾರರ ವಿರುದ್ಧ ಕಾನೂನು ಕ್ರಮ ಕಟ್ಟು ನಿಟ್ಟಾಗಿ ಜರುಗಿಸೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ್ರೇ ಅಂಥವರ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ನಿಯಮ ಉಲ್ಲಂಘಿಸಿದ 711 ಸವಾರರ ಡಿಎಲ್ ಅನ್ನು ಅಮಾನತುಗೊಳಿಸೋದಕ್ಕೆ ಸಾರಿಗೆ ಇಲಾಖೆಗೆ ಕಳುಹಿಸಿದ್ದಾರೆ. ಈ ಮೂಲಕ ಪದೇ ಪದೇ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ. ರಾಜ್ಯಾಧ್ಯಂತ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡೋದಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರ ಸವಾರರ ವಿರುದ್ಧ ಕೇಸ್ ಹಾಕಿ, ದಂಡವನ್ನು ವಸೂಲಿ ಮಾಡಲಾಗುತ್ತಿದೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗೆ ದಂಡವನ್ನು ವಿಧಿಸಲಾಗುತ್ತಿದೆ. ಇದೀಗ ಇದಷ್ಟೇ ಅಲ್ಲದೇ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸೋ ಸವಾರರನ್ನು ಪತ್ತೆ ಹಚ್ಚುತ್ತಿರೋ ಸಂಚಾರ ಪೊಲೀಸರು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕೆ…

Read More

ಕೊಲ್ಕತ್ತಾ ಮೂಲದ ಆಸ್ಪತ್ರೆಯಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ( Renowned music maestro Ustad Rashid Khan ) ಇನ್ನಿಲ್ಲ. 55 ವರ್ಷದ ಕಲಾವಿದ ವಾತಾಯನ ಮತ್ತು ಆಮ್ಲಜನಕದ ಬೆಂಬಲವನ್ನು ಪಡೆಯುತ್ತಿದ್ದರು. ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ಅನುಭವಿಸಿದ ನಂತರ ಸಂಗೀತಗಾರನ ಆರೋಗ್ಯವು ಕುಸಿಯಿತು. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಅವರು ಆರಂಭದಲ್ಲಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದಾಗ್ಯೂ, ನಂತರದ ಹಂತದಲ್ಲಿ, ಅವರು ಕೋಲ್ಕತ್ತಾದಲ್ಲಿ ಪ್ರತ್ಯೇಕವಾಗಿ ತಮ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದರು. ಅವರ ಆಪ್ತ ಮೂಲಗಳ ಪ್ರಕಾರ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗೆ ದಾಖಲಾದಾಗಿನಿಂದ, ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಜರಾದ ವೈದ್ಯರ ತಂಡವು ಅವರ ವೈದ್ಯಕೀಯ ಸ್ಥಿತಿಯ ಸುಧಾರಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ…

Read More

ಪಣಜಿ: ಮೈಂಡ್ಫುಲ್ ಎಐ ಲ್ಯಾಬ್ನ ಸ್ಥಾಪಕಿ ಮತ್ತು ಸಿಇಒ ಮತ್ತು ಬೆಂಗಳೂರು ನಿವಾಸಿ ಸುಚನಾ ಸೇಠ್ (39) ಉತ್ತರ ಗೋವಾದ ಕರಾವಳಿ ಪ್ರದೇಶದಲ್ಲಿರುವ ಕ್ಯಾಂಡೋಲಿಮ್ನ ಹೋಟೆಲ್ನಲ್ಲಿ ತನ್ನ 4 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಇಬ್ಬರೂ ಮಗುವಿನ ವಶಕ್ಕಾಗಿ ಹೋರಾಡುತ್ತಿದ್ದರು. ಹುಡುಗನನ್ನು ಉಸಿರುಗಟ್ಟಿಸಿ ಮತ್ತು ಕೆಲವು ಚೂಪಾದ ವಸ್ತುವನ್ನು ಬಳಸಿ ಕೊಲ್ಲಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಪ್ರಕರಣದಲ್ಲಿ ಇದೀಗ ಕೋರ್ಟ್ ಬಂಧಿತ ಆರೋಪಿ ಸುಚನಾಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಚಿತ್ರದುರ್ಗದ ಐಮಂಗಳ ಪೊಲೀಸರಿಂದ ಸ್ವಂತ ಮಗನನ್ನೇ ಕೊಂದಂತ ಮೈಂಡ್ಬುಲ್ ಎಐ ಲ್ಯಾಬ್ ನ ಸಿಇಓ ಸುಚನಾ ಸೇಠ್ ಅನ್ನು ಬಂಧಿಸಲಾಗಿತ್ತು. ಆ ಬಳಿಕ ಗೋವಾ ಪೊಲೀಸರಿಗೆ ಆಕೆಯನ್ನು ಹಸ್ತಾಂತರಿಸಲಾಗಿತ್ತು. ಇಂದು ಗೋವಾ ಪೊಲೀಸರು ಸುಚನಾ ಅವರನ್ನು ಮಾಪುಸಾ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದಂತ ಕೋರ್ಟ್ ಮುಂದೆ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಸ್ವಂತ ಮಗನನ್ನೇ ಕೊಂದ ಸಿಇಓ ಸುಚನಾ…

Read More

ಬೆಂಗಳೂರು: ರಾಜ್ಯ ಜೆಡಿಎಸ್ ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಗರಿಗೆದರಿದೆ. ಲೋಕಸಭಾ ಚುನಾವಣೆ ಸಂಬಂಧ ಈಗಾಗಲೇ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವಂತ ಜೆಡಿಎಸ್, ಕ್ಷೇತ್ರಗಳಲ್ಲಿ ಈಗಿನಿಂದಲೇ ಗೆಲ್ಲೋದಕ್ಕೆ ಪ್ಲಾನ್ ಮಾಡುತ್ತಿದೆ. ಇದಕ್ಕಾಗಿ ಇಂದಿನಿಂದ 2 ದಿನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವಂತ ರೆಸಾರ್ಟ್ ಒಂದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಂಡರ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದಿನಿಂದ ಎರಡು ದಿನ ಮಾಡುತ್ತಿದ್ದಾರೆ. ಇಂದು ಸಂಜೆಯ ವೇಳೆಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರೊಂದಿಗೆ ರೆಸಾರ್ಟ್ ಗೆ ತೆರಳುತ್ತಿರೋ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಅಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವ ರೀತಿಯಾಗಿ ಚುನಾವಣೆ ಎದುರಿಸಬೇಕು. ಕಾಂಗ್ರೆಸ್ ಪೈಪೋಟಿಯ ನಡುವೆ ಕ್ಷೇತ್ರವನ್ನು ಹೇಗೆ ಕೆದ್ದುಕೊಳ್ಳಬೇಕು ಎನ್ನುವ ಬಗ್ಗೆ ಎರಡು ದಿನ…

Read More