Author: kannadanewsnow09

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 220/66/11ಕೆವಿ ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 22.12.2024 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೀಣ್ಯ 10 ನೇ ಮುಖ್ಯ ರಸ್ತೆ, 11ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿಸಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ನೆಲಗೇದರನಹಳ್ಲಿ ಉಪಕೇಂದ್ರ: ದಿನಾಂಕ: 22.12.2024 (ಭಾನುವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ…

Read More

ಬೆಂಗಳೂರು: ಮುಂದಿನ ತಿಂಗಳು ಬೆಂಗಳೂರಿನಲ್ಲಿ‌ ಅಮೇರಿಕಾ ಕಾನ್ಸುಲೇಟ್ ಕಚೇರಿ ಆರಂಭಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಇದೇ ಜನವರಿಯಲ್ಲಿ ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್ ತನ್ನ ಕಚೇರಿಯನ್ನು ತೆರೆಯುತ್ತಿದೆ. ಇದು ಕರ್ನಾಟಕದ ಪ್ರಗತಿಗೆ ಬಹುದೊಡ್ಡ ಕೊಡುಗೆ ನೀಡಲಿದ್ದು ರಾಜ್ಯದ ಆರ್ಥಿಕತೆಗೆ ಇನ್ನಷ್ಟು ಶಕ್ತಿ ತುಂಬಲಿದೆ. ಇದು ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ರಾಜತಾಂತ್ರಿಕ, ತಾಂತ್ರಿಕ ಮತ್ತು ಆರ್ಥಿಕ ಸಹಯೋಗವನ್ನು ಉತ್ತೇಜಿಸುತ್ತದೆ ಎಂದು ಸಚಿವರು ಹೇಳಿದ್ದಾರೆ. ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿರುವ ಯುನೈಟೆಡ್‌ ಸ್ಟೇಟ್ಸ್‌ ರಾಯಭಾರಿ ಎರಿಕ್‌ ಗರ್ಸೆಟ್ಟಿ ಅವರಿಗೆ ಪತ್ರ ಬರೆದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಜನರಲ್‌ ಕಚೇರಿ ಆರಂಭಿಸುವಂತೆ ಕೋರಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ನವದೆಹಲಿಯಲ್ಲಿ ಯುನೈಟೆಡ್‌ ಸ್ಟೇಟ್ಸ್‌ ರಾಯಭಾರಿ ಎರಿಕ್‌ ಗರ್ಸೆಟ್ಟಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪತ್ರವನ್ನು…

Read More

ಬೆಂಗಳೂರು: ರಾಜ್ಯಾದ್ಯಂತ ತುಘಲಕ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ನನ್ನ ಕಾರ್ಯಕರ್ತ ಬಂಧುಗಳೆ, ನಿಮ್ಮೆಲ್ಲರ ಬೆಂಬಲ ನನ್ನ ಶಕ್ತಿಯನ್ನು ಮತ್ತಷ್ಟು ಇಮ್ಮುಡಿಗೊಳಿಸಿದೆ, ದುಷ್ಟ ಶಕ್ತಿಗಳ ವಿರುದ್ಧ ಇನ್ನೂ ಹೆಚ್ಚಾಗಿ ಹೋರಾಡಲು ಶಕ್ತಿ ತುಂಬಿದೆ. ಭಾರತೀಯ ಜನತಾ ಪಾರ್ಟಿಯ ನಾವೆಲ್ಲರೂ ಒಂದಾಗಿ ಕರ್ನಾಟಕವನ್ನು “ಗೂಂಡಾ ರಿಪಬ್ಲಿಕ್” ಮಾಡಲು ಅವಕಾಶ ಕೊಡುವುದಿಲ್ಲ ಎಂಬುದಾಗಿ ಬಂಧನದ ಬಳಿಕ ಪರಿಷತ್ ಸದಸ್ಯ ಸಿ.ಟಿ ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು,ಇಂದು ನನ್ನ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಧೈರ್ಯ ತುಂಬಿದ ನನ್ನ ನೆಚ್ಚಿನ ಬಿಜೆಪಿ ಕಾರ್ಯಕರ್ತ ಕಾರ್ಯಕರ್ತ ಬಂಧುಗಳಿಗೆ, ಜೊತೆಗೆ ನಿಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ, ಭಾರತೀಯ ಜನತಾ ಪಕ್ಷದ  ಎಲ್ಲಾ ರಾಷ್ಟೀಯ ನಾಯಕರು, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಶಾಸಕರು ವಿಧಾನ ಪರಿಷತ್ತ್ , ವಿಧಾನಸಭೆ ಶಾಸಕರು, ಸಂಸದರು, ಮಾಜಿ ಸಚಿವರು, ಹಿರಿಯ ನಾಯಕರು, ಸ್ನೇಹಿತರು, ಮಾಧ್ಯಮದ ಮಿತ್ರರಿಗೆ ಧನ್ಯವಾದಗಳು ಅಂತ…

Read More

ಬೆಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದಿಂದ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಎ6 ಆರೋಪಿಯಾಗಿ, ಕೊಲೆ ಸಂಚು ರೂಪಿಸಿದ್ದಂತ ತಂಡದಲ್ಲಿ ಬಂಧಿತ ಆರೋಪಿಯಿದ್ದನು. ವಿದೇಶದಿಂದ ಹಿಂದಿರುಗುತ್ತಿದ್ದಂತ ಸಂದರ್ಭದಲ್ಲಿ ಇಂದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಎ6 ಆರೋಪಿ ಮೊಹಮ್ಮದ್ ಷರೀಫ್ ಎಂಬಾತನನ್ನು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದ ತಂಡದಲ್ಲಿ ಬಂಧಿತ ಷರೀಫ್ ಗುರುತಿಸಿಕೊಂಡಿದ್ದನು. ಕೊಲೆ ನಂತ್ರ ವಿದೇಶಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದನು. ಈತನ ಪತ್ತೆಗೆ ಎನ್ಐಎಯಿಂದ 5 ಲಕ್ಷ ಬಹುಮಾನ ಕೂಡ ಘೋಷಿಸಲಾಗಿತ್ತು. ಮೊಹಮ್ಮದ್ ಷರೀಫ್ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದಾನೆ. ಈತನ ಮನೆಯ ಮೇಲೆ 2 ಬಾರಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಇಂತಹ ಆರೋಪಿಯನ್ನು ಇಂದು ಎನ್ಐಎ ಬಂಧಿಸಿದ್ದಾರೆ. https://kannadanewsnow.com/kannada/is-there-a-desire-for-new-year-celebrations-in-malnad-heres-a-golden-opportunity/ https://kannadanewsnow.com/kannada/girl-who-should-have-studied-and-done-well-falls-ill-appeals-for-your-help-cooperation/

Read More

ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಕ್ಕಿವೆ. ಕಲಬುರಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ‌ ಕೆಲ ಮಿತ್ರರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ‌ ಮಾತುಗಳನ್ನಾಡಿದ್ದರು. ಕೆಲ ಲೋಪಗಳನ್ನು ಸರಿಪಡಿಸಿಕೊಂಡು‌,‌ ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ ” 2016 ರಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ…

Read More

ಬೆಳಗಾವಿ: ಸರ್ವಾಧಿಕಾರತ್ವ ಹೆಚ್ಚು ದಿನ ಉಳಿಯೋದಿಲ್ಲ. ಕೊನೆಯಾಗಲೇಬೇಕು. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಎಂಬುದಾಗಿ ಕೋರ್ಟ್ ನಿಂದ ಹೊರ ಬರುವ ವೇಳೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಇಂದು ಬೆಳಗಾವಿಯ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಅವರನ್ನು ಹಾಜರುಪಡಿಸಿದರು. ಕೋರ್ಟ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ ಮಾಡಿದ ನಂತ್ರ, ಕೋರ್ಟ್ ನಿಂದ ಹೊರ ಬಂದಾಗ ಸಿ.ಟಿ ರವಿ ಸುದ್ದಿಗಾರರೊಂದಿಗೆ ಮಾತನಾಡಿದರು. ನೋಟಿಸ್ ಕೊಡದೇ ಅಕ್ರಮ ಬಂಧನದಲ್ಲಿಟ್ಟಿದ್ದಾರೆ. ಇಡೀ ರಾತ್ರಿ ಮೂರು ಜಿಲ್ಲೆಯಲ್ಲಿ ಸುತ್ತಾಡಿಸಿದ್ದಾರೆ. ಪೊಲೀಸರು ಸರ್ವಾಧಿಕಾರ ಮೆರಿದ್ದಾರೆ. ಎಲ್ಲದಕ್ಕೂ ಒಂದು ಪುಲ್ ಸ್ಟಾಪ್ ಬೀಳಲೇಬೇಕು. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಎಂದರು. ಸರ್ವಾಧಿಕಾರ ಕೊನೆಯಾಗಲೇಬೇಕು. ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ. ನಮ್ಮ ಕಾಲವೂ ಬರುತ್ತದೆ. ಆಗ ಹೇಳ್ತೀವಿ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/is-there-a-desire-for-new-year-celebrations-in-malnad-heres-a-golden-opportunity/ https://kannadanewsnow.com/kannada/girl-who-should-have-studied-and-done-well-falls-ill-appeals-for-your-help-cooperation/

Read More

ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆ ತಾರಕ್ಕೇರಿದಂತ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. https://kannadanewsnow.com/kannada/is-there-a-desire-for-new-year-celebrations-in-malnad-heres-a-golden-opportunity/…

Read More

ಯೂಟ್ಯೂಬ್ ಇಂಡಿಯಾದ ಇತ್ತೀಚಿನ ಅಧಿಕೃತ ಪ್ರಕಟಣೆಯು ತಮ್ಮ ವೀಡಿಯೊಗಳನ್ನು ಹೆಚ್ಚು ಆಕರ್ಷಕವಾಗಿ ಕಾಣುವಂತೆ ಮಾಡಲು ಕ್ಲಿಕ್ಬೈಟ್ ಶೀರ್ಷಿಕೆಗಳು ಅಥವಾ ಕಿರುಚಿತ್ರಗಳನ್ನು ಬಳಸುವ ಕೆಲವು ಸೃಷ್ಟಿಕರ್ತರಿಗೆ ಎಚ್ಚರಿಕೆಯಾಗಿ ಕಾರ್ಯನಿರ್ವಹಿಸಬಹುದು. ಇನ್ಮುಂದೆ ಕ್ಲಿಕ್ ಮಾಡಿ, ಇಲ್ಲಿ ನೋಡಿ ಎನ್ನುವಂತೆ ಟೈಟಲ್ ಹಾಕಿ ಬಿಟ್ರೆ ಅಂತಹ ವೀಡಿಯೋಗಳನ್ನು ಡಿಲಿಟ್ ಮಾಡುವುದಾಗಿಯೂ ಎಚ್ಚರಿಸಿದೆ. ಕ್ಲಿಕ್ಬೈಟ್ ಹೆಸರುಗಳು ಅಥವಾ ಕಿರುಚಿತ್ರಗಳನ್ನು ಹೊಂದಿರುವ ವೀಡಿಯೊಗಳನ್ನು ತೆಗೆದುಹಾಕುವುದಾಗಿ ಗೂಗಲ್ ತನ್ನ ಬ್ಲಾಗ್ ಪೋಸ್ಟ್ನಲ್ಲಿ ಘೋಷಿಸಿದೆ. ವಿಶೇಷವಾಗಿ ಬ್ರೇಕಿಂಗ್ ನ್ಯೂಸ್ ಅಥವಾ ಪ್ರಸ್ತುತ ವಿದ್ಯಮಾನಗಳೊಂದಿಗೆ ವ್ಯವಹರಿಸುವ ವೀಡಿಯೊಗಳನ್ನು ತೆಗೆದುಹಾಕುವುದಾಗಿ ಘೋಷಿಸಿದೆ. ಟೆಕ್ ದೈತ್ಯ ಪ್ರಕಾರ, ಬಹಳಷ್ಟು ವಿಷಯ ಸೃಷ್ಟಿಕರ್ತರು ‘ಬ್ರೇಕಿಂಗ್ ನ್ಯೂಸ್’ ಅಥವಾ ‘ದಿ ಪ್ರೆಸಿಡೆಂಟ್ ಸ್ಟೆಪ್ಸ್ ಡೌನ್’ ನಂತಹ ಹೊಳೆಯುವ ಮತ್ತು ಮೋಸಗೊಳಿಸುವ ಶೀರ್ಷಿಕೆಗಳನ್ನು ಬಳಸುತ್ತಾರೆ. ಇದು ಆಗಾಗ್ಗೆ ತಪ್ಪು ತಿಳುವಳಿಕೆಗಳಿಗೆ ಕಾರಣವಾಗುತ್ತದೆ ಮತ್ತು ಅಂತಿಮವಾಗಿ ತಪ್ಪಾದ ವಿಷಯಕ್ಕೆ ಕಾರಣವಾಗುತ್ತದೆ. ಈ ರೀತಿಯ ಶೀರ್ಷಿಕೆಗಳು ವೀಕ್ಷಕರನ್ನು, ವಿಶೇಷವಾಗಿ ಪ್ರಮುಖ ಮಾಹಿತಿಯನ್ನು ಹುಡುಕುವವರನ್ನು ಮೋಸಗೊಳಿಸುವ ಮತ್ತು ಕಿರಿಕಿರಿಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಯೂಟ್ಯೂಬ್…

Read More

ಶಿವಮೊಗ್ಗ : ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಪಂಚಾಯಿತಿ ಎದುರು ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿಯAತಾಗಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ನನಗಿರುವುದಾಗಿ ಅವರು ತಿಳಿಸಿದರು. ಈ ಎಲ್ಲಾ ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಾದ ಎಲ್ಲಾ ಪಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಲುಪುತ್ತಿರುವುದು ಹರ್ಷವೆನಿಸಿದೆ. ರಾಜ್ಯದ ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು 9 ಕೋಟಿಗೂ ಅಧಿಕ ಮೊತ್ತ ನೇರವಾಗಿ ತಲುಪುತ್ತಿದೆ. ಈ ಎಲ್ಲಾ ಯೋಜನೆಗಳು ಶೇ. 99ರಷ್ಟು ಯಶಸ್ವಿಯಾಗಿರುವುದು ಪ್ರಸ್ತುತ ಸರ್ಕಾರದ ಹೆಗ್ಗಳಿಕೆ ಎಂದವರು ನುಡಿದರು. ಈ ಎಲ್ಲಾ ಗ್ಯಾರಂಟಿ ಯೋಜನೆಗಳ…

Read More

ಶಿವಮೊಗ್ಗ: ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರ ನಕಲುಗಳೊಂದಿಗೆ ದಿ: 07-01-2025 ಮತ್ತು 08-01-2025 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಟ 18 ವರ್ಷ ಮತ್ತು ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು…

Read More