Author: kannadanewsnow09

ಬೀದರ್ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು. ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ…

Read More

ಬೆಂಗಳೂರು: ರಾಜ್ಯದ ಬರಗಾಲ ಪರಿಸ್ಥಿತಿ ನಿರ್ವಹಣೆಯ ಕುರಿತಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ಸಿಎಂ ಸಿದ್ಧರಾಮಯ್ಯ ನಡೆಸಿದ್ದರು. ಈ ಬೆನ್ನಲ್ಲೇ ಅದಕ್ಕೆ ಅನುದಾನ ಸೇರಿದಂತೆ ವಿವಿಧ ಅನುಮೋದನೆಗಳನ್ನು ನೀಡೋ ಸಂಬಂಧ ಮಾರ್ಚ್.11ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 11-03-2024ರ ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 8ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಮಾರ್ಚ್.11ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತ ವಿವಿಧ ಕಾಮಗಾರಿಗಳಿಗೆ ಅನುಮೋದನೆ ಕೂಡ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/hridaya-jyothi-scheme-to-be-launched-in-the-name-of-puneeth-rajkumar-minister-dinesh-gundu-rao/ https://kannadanewsnow.com/kannada/pro-pakistan-sloganeering-case-mohammad-shafi-nashapudi-produced-before-court/

Read More

ಶಿವಮೊಗ್ಗ: ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಡಾ. ತಾವರ್ ಚಂದ್ ಗೆಹ್ಲೋಟ್ ಅವರು ಫೆಬ್ರವರಿ 05ರಂದು ಡಾ. ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು. ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಡಾ. ಯು ಆರ್ ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ. ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಹೆಚ್. ಡಿ. ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು. ಅವರು 35ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ಜರ್ನಲ್ ಗಳಲ್ಲಿ ಪ್ರಕಟಿಸಿದ್ದಾರೆ. ಇವರ ಲೇಖನಗಳು 350ಕ್ಕೂ ಹೆಚ್ಚು ಸಂಶೋಧನಾ ಮರು ಉಲ್ಲೇಖಗಳನ್ನು ಪಡೆದುಕೊಂಡಿವೆ. 2006ರಲ್ಲಿ ಇವರ ಶೈಕ್ಷಣಿಕ…

Read More

ಬೆಂಗಳೂರು: ಅನಧಿಕೃತವಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೀಗಿದ್ದೂ ನಿಯಮ ಮೀರಿ 74 ಗರ್ಭಪಾತ ಮಾಡಿದಂತ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಆಸ್ಪತ್ರೆಗೆ ಬಂದ್ ಮಾಡಿಸಿ ಬೀಗ ಜಡಿದಿದ್ದಾರೆ. ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಪಡೆದಂತ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮತ್ತೊಂದೆಡೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿದ್ದಂತ ಶಸ್ತ್ರಚಿಕಿತ್ಸಾ ಕಡತವನ್ನು ಆರೋಗ್ಯ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ನೆಲಮಂಗಲದ ಬಿ.ಎಚ್‌. ರಸ್ತೆಯಲ್ಲಿರುವ ಆಸರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ನಡೆಸಿರುವುದು ಗೊತ್ತಾಯಿತು. 2021ರ ಸೆಪ್ಟೆಂಬರ್‌ 17ರಿಂದ 2026ರ ಸೆಪ್ಟೆಂಬರ್‌ 16ರವರೆಗೆ ಕೆಪಿಎಂಇ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡು ಆಸ್ಪತ್ರೆ ನಡೆಸಲಾಗುತ್ತಿದೆ. ಎಂಟಿಪಿ ಕಾಯ್ದೆ ಅಡಿಯಲ್ಲಿ ಪರವಾನಗಿ ಪಡೆಯದೆ ಗರ್ಭಪಾತ ನಡೆಸಲಾಗಿದೆ. ಇದು ವೈದ್ಯಕೀಯ ಗರ್ಭಪಾತ ಕಾಯ್ದೆ–1971 ಅನ್ನು ಉಲ್ಲಂಘಿಸಲಾಗಿದೆ ಎಂದು ದೂರು ನೀಡಿದ್ದರಿಂದ ಆಸರೆ ಆಸ್ಪತ್ರೆ ವೈದ್ಯ…

Read More

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್‌ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್‌.9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು. “ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್‌ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್‌ಸೆಟ್‌ಗಳ…

Read More

ನಾಳೆ ಮಹಾ ಶಿವರಾತ್ರಿಯಂದು (8.3.24) ಬ್ರಹ್ಮ ಮೂರ್ಹತ ಸಮಯದಲ್ಲಿ, ಶಿವನ ಈ ಒಂದು ಸಾಲಿನ ಮಂತ್ರವನ್ನು ಜಪಿಸಿದರೆ ಸಾಕು, ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳು ಸಿಗುತ್ತವೆ. ಮಹಾ ಶಿವರಾತ್ರಿ ದಿನವನ್ನು ಈ ತಿಂಗಳಲ್ಲಿ 8 .3 .2024 ರಂದು ಆಚರಿಸಲಾಗುತ್ತದೆ. ಶಿವನಿಗೆ ಅನೇಕ ವಿಶೇಷ ದಿನಗಳು ಮತ್ತು ಉಪವಾಸ ದಿನಗಳು ಇದ್ದರೂ, ಈ ಮಹಾ ಶಿವರಾತ್ರಿಯು ಬಹಳ ಮುಖ್ಯವಾದ ಉಪವಾಸ ದಿನವಾಗಿದೆ. ಈ ದಿನ ಶಿವನನ್ನು ಪ್ರಾರ್ಥಿಸಿದರೆ ನಾವು ಕೇಳಿದ್ದೆಲ್ಲ ಸಿಗುತ್ತದೆ ಎಂಬ ನಂಬಿಕೆ ಇದೆ. ಈ ಮಹತ್ವದ ದಿನದಂದು ನಾವು ಶಿವನನ್ನು ಪ್ರಾರ್ಥಿಸಬೇಕು ಮತ್ತು ದಿನದ ಆರಂಭದಲ್ಲಿ ಶಿವನ ಈ ಒಂದು ಮಂತ್ರವನ್ನು ಹೇಳಬೇಕು. ಈ ಮೂಲಕ ನಾವು ನಮ್ಮ ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಆಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕು ಎಂಬುದನ್ನು ನೀವು ಕಂಡುಹಿಡಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ…

Read More

ಶಿವಮೊಗ್ಗ: ವಿದ್ಯುತ್ ಮತ್ತು ರಸ್ತೆ ಸಂಪರ್ಕ ಇಲ್ಲದ ಕಗ್ಗತಲ ಗ್ರಾಮ ಉರುಳುಗಲ್ಲು ಮತ್ತಿತರ ಗ್ರಾಮಗಳನ್ನು ಹೊಂದಿರುವ ಬಾನುಕುಳಿ ಗ್ರಾಮ ಪಂಚಾಯಿತಿಯಲ್ಲಿ ಅರಣ್ಯ ಕಾರ್ಖಾನೆ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಸಾಗರ ಶಾಸಕಾರಾದ ಬೇಳೂರು ಗೋಪಾಲಕೃಷ್ಣರವರು ಮತ್ತು ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಹೆಗಡೆ ಜಂಟಿಯಾಗಿ ಜನಸ್ಪಂದನ ಸಭೆ ನಡೆಸಿ ಜನರ ಅಹವಾಲು ಆಲಿಸಿದರು. ಉರುಳುಗಲ್ಲು ಕತ್ತಲು ಕಳೆಯಬೇಕು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆ ಅನಗತ್ಯ ತಡೆ ಒಡ್ಡುವುದು ನಿಲ್ಲಬೇಕು ಎಂದು ಪ್ರಾಸ್ತಾವಿಕ ಮಾತಲ್ಲಿ ಗಟ್ಟಿಯಾಗಿ ದ್ವನಿಸಿದ ಬೇಳೂರು ಸಭೆಯ ಕೊನೆಯಲ್ಲಿ ಜಿಲ್ಲಾಧಿಕಾರಿ ಮತ್ತೂ ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿಯ ಎದುರೇ ಅರಣ್ಯ ಅಧಿಕಾರಿಗಳಿಗೆ ಸರಣಿ ಪ್ರಶ್ನೆಗಳ ಜತೆ ಅಂತಿಮವಾಗಿ ಅತಿರೇಕ ಮಾಡಬೇಡಿ ಎಂದು ಸಾರ್ವಜನಿಕರ ಎದುರೇ ಕ್ಲಾಸ್ ತೆಗೆದುಕೊಂಡರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜನರ ಅಹವಾಲು ಆಲಿಸುವ ಜತೆ ಉರುಲುಗಲ್ಲು ವಿದ್ಯುತ್ ಸಮಸ್ಯೆ ಬಗ್ಗೆ ಫಾರೆಸ್ಟ್ ಕ್ಲಿಯರೆನ್ಸ್ ಬಗ್ಗೆ ವಿಶೇಷ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಂಟಿ ಸರ್ವೆ ಪ್ರಕ್ರಿಯೆ…

Read More

ಬೆಂಗಳೂರು: ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಹಾಗೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಭೆಯ ನಂತರ ತಮ್ಮ ನಿವಾಸದಲ್ಲಿ ಮಂಡ್ಯ ನಾಯಕರ ಸಭೆ ನಡೆಸಿದ ಕುಮಾರಸ್ವಾಮಿ ಅವರು; ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಮುಖಂಡರಿಗೆ ತಿಳಿಸಿದರು. ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರಮೇಶ್ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ಸ್ಥಿತಿಗತಿಗಳನ್ನು ವಿಸ್ತೃತವಾಗಿ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ನಾಯಕರಿಂದ ಮಾಹಿತಿ ಸಂಗ್ರಹ ಮಾಡಿದರಲ್ಲದೆ; ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ…

Read More

ಬೆಳಗಾವಿ: ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಪ್ರಕರಣವನ್ನು ಈ ಹಿಂದಿನ ಬಿಜೆಪಿ ಸರ್ಕಾರ ಮುಚ್ಚಿಹಾಕಿತ್ತು. ಈ ಪ್ರಕರಣವನ್ನು ರೀ ಓಪನ್ ಮಾಡಲಾಗುತ್ತದೆ. ಪಾಕಿಸ್ತಾನ ಪರ ಘೋಷಣೆ ಕೂಗಿದಂತವನನ್ನು ಸಹ ಬಂಧನ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಅಥಣಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನು. ಆ ಕೇಸನ್ನು ಬಿಜೆಪಿಯವರು ಮುಚ್ಚಿಹಾಕಿದ್ದಾರೆ. ಆದರೇ ನಾವು ಆ ಪ್ರಕರಣವನ್ನು ಮರು ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಪ್ರಕರಣವನ್ನು ರೀ ಓಪನ್ ಮಾಡಿಸಿ, ಆರೋಪಿಯನ್ನು ಬಂಧಿಸೋದಾಗಿ ತಿಳಿಸಿದರು. ಎರಡು ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂಬರುವಂತ ಲೋಕಸಭಾ ಚುನಾವಣೆಗೆ 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತದೆ. ನಿಮ್ಮ ಕೆಲಸ ಮಾಡಿದ್ದೇವೆ, ನಮಗೆ ಕೂಲಿ ರೂಪದಲ್ಲಿ…

Read More

ಬೆಂಗಳೂರು: ಅನಧಿಕೃತವಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೀಗಿದ್ದೂ ನಿಯಮ ಮೀರಿ 74 ಗರ್ಭಪಾತ ಮಾಡಿದಂತ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಪಡೆದಂತ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮತ್ತೊಂದೆಡೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿದ್ದಂತ ಶಸ್ತ್ರಚಿಕಿತ್ಸಾ ಕಡತವನ್ನು ಆರೋಗ್ಯ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ನೆಲಮಂಗಲದ ಬಿ.ಎಚ್‌. ರಸ್ತೆಯಲ್ಲಿರುವ ಆಸರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ನಡೆಸಿರುವುದು ಗೊತ್ತಾಯಿತು. 2021ರ ಸೆಪ್ಟೆಂಬರ್‌ 17ರಿಂದ 2026ರ ಸೆಪ್ಟೆಂಬರ್‌ 16ರವರೆಗೆ ಕೆಪಿಎಂಇ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡು ಆಸ್ಪತ್ರೆ ನಡೆಸಲಾಗುತ್ತಿದೆ. ಎಂಟಿಪಿ ಕಾಯ್ದೆ ಅಡಿಯಲ್ಲಿ ಪರವಾನಗಿ ಪಡೆಯದೆ ಗರ್ಭಪಾತ ನಡೆಸಲಾಗಿದೆ. ಇದು ವೈದ್ಯಕೀಯ ಗರ್ಭಪಾತ ಕಾಯ್ದೆ–1971 ಅನ್ನು ಉಲ್ಲಂಘಿಸಲಾಗಿದೆ ಎಂದು ದೂರು ನೀಡಿದ್ದರಿಂದ ಆಸರೆ ಆಸ್ಪತ್ರೆ ವೈದ್ಯ ಹಾಗೂ ಮಾಲೀಕ ಡಾ.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/rythu-solar-shakti-mela-to-be-organised-at-gkvk-premises-in-bengaluru-on-march-9-cm-siddaramaiah/ https://kannadanewsnow.com/kannada/draft-manifesto-was-presented-to-the-congress-president-by-the-manifesto-committee/

Read More